ಬೆಂಗಳೂರು, ಏ.17- ಲಾಕ್‍ಡೌನ್ ಹಿನ್ನೆಲೆಯಲ್ಲಿ ಏ.20ರಿಂದ ಓಡಾಟಕ್ಕೆ ಪಾಸ್ ಅವಶ್ಯಕತೆ ಇರುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.
ಐಟಿ, ಬಿಟಿ ಉದ್ದಿಮೆಗಳ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಯಥಾ ಪ್ರಕಾರ ಇರುತ್ತದೆ. ಇದು ಎಷ್ಟು ದಿನ ಅನ್ನೋದು ಗೊತ್ತಿಲ್ಲ. ಹೀಗಾಗಿ ನಮ್ಮ ಎಚ್ಚರಿಕೆಯಲ್ಲಿ ನಾವು ಕೆಲಸ ಕಾರ್ಯ ಆರಂಭಿಸಬೇಕಿದೆ ಎಂದು ಹೇಳಿದ್ದಾರೆ.
ಐಟಿ ನೌಕರರ ಓಡಾಟಕ್ಕೆ ಪಾಸ್ ಅಗತ್ಯ ಉದ್ಭವ ಆಗೋದಿಲ್ಲ. ಶೇ.50ರಷ್ಟು ಐಟಿ ನೌಕರರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡಲಾಗಿದೆ. ಕಂಪನಿಗಳಲ್ಲಿ ಥರ್ಮಲï ಟೆಸ್ಟಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು. ಸ್ಯಾನಿಟೈಸರ್ ಮಾಡಿದ ಬಿಎಂಟಿಸಿಗಳನ್ನು ಐಟಿ ಕಂಪನಿಗೆ ನೀಡುತ್ತೇವೆ. ಐಟಿ ಕಂಪನಿ ಬಸ್ ವ್ಯವಸ್ಥೆ ಕೇಳಿದ್ರೆ ಮಾತ್ರ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.
ತ್ವರಿತ ಪರಿಕ್ಷಾ ಕಿಟ್ ಚೀನಾದಿಂದ ಬರಬೇಕಿದೆ. ಎರಡು ಲಕ್ಷ ಕಿಟ್ ಆರ್ಡರ್ ಮಾಡಿದ್ದೇವೆ. ಈ ತಿಂಗಳ ಅಂತ್ಯಕ್ಕೆ ಒಂದಿಷ್ಟು ಕಿಟ್ ಬರಲಿದೆ. ಬಳಿಕ ಬಾಕಿ ಉಳಿದ ಕಿಟ್ ಬರುತ್ತವೆ ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ.