Breaking News

ತೀವ್ರ ಎದೆನೋವಿನಿಂದ ASI ಸಾವು

Spread the love

ತುಮಕೂರು: ತೀವ್ರ ಎದೆ ನೋವಿನಿಂದ ಎಎಸ್‌ಐ ಸಾವನ್ನಪ್ಪಿದ ಘಟನೆ ಕೊರಟಗೆರೆಯಲ್ಲಿ  ನಡೆದಿದೆ.

ಎನ್.ಜಿ ಪವಾರ್ (54) ಮೃತ ಎಎಸ್‌ಐ. ಕೆಎಸ್‌ಆರ್‌ಪಿ ಬೆಟಾಲಿಯನ್‌ನ ಸಿಬ್ಬಂದಿ ಬ್ಯಾರಕ್‌ನಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ವಿಶ್ರಾಂತಿಗೆ ತೆರಳಿದ್ದಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದರು. ಆದರೆ ಮಾರ್ಗ ಮಧ್ಯದಲ್ಲಿ ಅವರು ಕೊನೆ ಉಸಿರೆಳಿದಿದ್ದಾರೆ.

ಎನ್.ಜಿ ಪವಾರ್ ಅವರು ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದವರು. ಬಾಗಲಕೋಟೆಯಲ್ಲಿ ಪತ್ನಿ ಹೆಡ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ