Breaking News

ಶಾಲೆಗಳ ಮೂಲಸೌಕರ್ಯಕ್ಕೆ ಶಾಸಕ ಆಸೀಫ್ ಸೇಠ್ ಕಾಯಕಲ್ಪ: ಮಾಲಿ ಗಲ್ಲಿಯ ಸರ್ಕಾರಿ ಶಾಲೆಗಳಿಗೆ ಭೇಟಿ

Spread the love

ಬೆಳಗಾವಿಯ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶಾಸಕ ಆಸೀಫ್ ಸೇಠ್ ಅವರು ವಿಶೇಷ ಆದ್ಯತೆ ನೀಡುತ್ತಿದ್ದಾರೆ. ಇಂದು ಮಾಲಿ ಗಲ್ಲಿಯ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಅವರು, ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸುವ ಮೂಲಕ ಶಿಕ್ಷಣದ ಗುಣಮಟ್ಟಕ್ಕೆ ಪೂರಕವಾದ ಪರಿಸರ ನಿರ್ಮಿಸುವ ಭರವಸೆ ನೀಡಿದರು.

ಬೆಳಗಾವಿಯ ಮಾಳಿ ಗಲ್ಲಿಯಲ್ಲಿರುವ ಸರ್ಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆ ನಂ. 4, ಉರ್ದು ಹಿರಿಯ ಪ್ರಾಥಮಿಕ ಶಾಲೆ ನಂ. 2 ಮತ್ತು ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಶಾಸಕ ಆಸೀಫ್ ಸೇಠ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಲೆಗಳಲ್ಲಿ ನಡೆಯುತ್ತಿರುವ ದುರಸ್ತಿ ಕಾರ್ಯಗಳನ್ನು ಖುದ್ದಾಗಿ ವೀಕ್ಷಿಸಿದ ಅವರು, ತರಗತಿ ಕೊಠಡಿಗಳು, ಚಾವಣಿ, ಶೌಚಾಲಯ ಮತ್ತು ಕುಡಿಯುವ ನೀರಿನ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಕೇವಲ ಪಠ್ಯಪುಸ್ತಕದ ಶಿಕ್ಷಣ ಮಾತ್ರವಲ್ಲದೆ, ಮಕ್ಕಳಿಗೆ ಸುಸಜ್ಜಿತ ಮತ್ತು ಸುರಕ್ಷಿತ ವಾತಾವರಣ ಒದಗಿಸುವುದು ನಮ್ಮ ಆದ್ಯತೆ ಎಂದು ಅವರು ತಿಳಿಸಿದರು.

ಶಾಲಾ ಆವರಣದ ಒಳಗಿನ ಸೌಲಭ್ಯಗಳ ಜೊತೆಗೆ ಹೊರಗಿನ ರಸ್ತೆ, ಚರಂಡಿ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆಯೂ ಶಾಸಕರು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಶಾಲೆಗಳ ಸುತ್ತಮುತ್ತಲಿನ ಮೂಲಸೌಕರ್ಯಗಳು ಉತ್ತಮವಾಗಿದ್ದರೆ ಮಾತ್ರ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದು ಅಭಿಪ್ರಾಯಪಟ್ಟ ಅವರು, ಬಾಕಿ ಇರುವ ದುರಸ್ತಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ಭೇಟಿಯು ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಮೂಲಸೌಕರ್ಯ ಕ್ರಾಂತಿಗೆ ನಾಂದಿ ಹಾಡಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ