ಅಥಣಿ: ಕೊರೊನಾ ವೈರಸ್ ಮೊದಲನೇ ಹಂತದ ಮಾನವನ ದೇಹದ ಉಷ್ಣತೆಯ ಚೆಕ್ಕಿಂಗ್ ಸ್ಕ್ರೀನಿಂಗ್ ಮಷಿನ್ ಕೈಕೊಟ್ಟಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ.
ಕೊರೊನಾ ಭೀತಿಯಿಂದ ಬೆಳಗಾವಿ ಜಿಲ್ಲೆಯು ತತ್ತರಿಸಿದೆ. ಈ ಮಧ್ಯೆ ಜಿಲ್ಲೆಯ ಅಥಣಿ ತಾಲೂಕಿನ ಗಡಿ ಹೊಂದಿರುವ ಗ್ರಾಮಗಳಿಗೆ ಮಹಾರಾಷ್ಟ್ರದಿಂದ, ಜನರು ಒಳ ರಸ್ತೆಯಿಂದ ನುಸುಳುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಆತಂಕ ಸೃಷ್ಟಿಸಿದೆ.
ಮಹಾರಾಷ್ಟ್ರ ಮೂಲದ ಇಬ್ಬರು ತಾಲೂಕಿನ ಕಕಮರಿ ಗ್ರಾಮದ ಸಂಬಂಧಿಕರ ಮನೆಗೆ ಬಂದಾಗ ಗ್ರಾಮಸ್ಥರು ಭಯಬೀತರಾಗಿದ್ದರು. ಇದನ್ನು ಅರಿತ ಸ್ಥಳೀಯರು ಕೂಡಲೇ ಆರೋಗ್ಯ ಇಲಾಖೆಗೆ ಕರೆ ಮಾಡಿದ್ದಾರೆ. ಆದರೆ ನಿಗದಿತ ಸಮಯಕ್ಕೆ ಬರೆದೆ ವಿಳಂಬ ಮಾಡಿದಕ್ಕೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರೂ ಆಕ್ರೋಶ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ಮೂಲದ ಶಂಕಿತರನ್ನು ಸ್ಕ್ರೀನಿಂಗ್ ಮಿಷಿನ್ ಮೂಲಕ ಚೆಕ್ ಮಾಡೋಕೆ ಹೋದ ಸಂದರ್ಭದಲ್ಲಿ ಸ್ಕ್ರೀನಿಂಗ್ ಮಿಷಿನ್ ಕೈಕೊಟ್ಟಿದೆ.
ಇದನ್ನರಿತ ಮಹಾರಾಷ್ಟ್ರ ಮೂಲದವರು ಗ್ರಾಮದಿಂದ ಕಾಲ್ಕಿತ್ತಿದ್ದಾರೆ.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಆರೋಗ್ಯ ಇಲಾಖೆಯ ವೈದ್ಯಕೀಯ ಉಪಕರಣಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಅಂತಾ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.