Breaking News

ಅಥಣಿ:ಡಯಾಬಿಟಿಸ್‌ಗೆ ಬಲಿಯಾದ 9ನೇ ತರಗತಿ ವಿದ್ಯಾರ್ಥಿನಿ

Spread the love

ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ತಡರಾತ್ರಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟ ದುರ್ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅಂಜಲಿ ಮಂಜುನಾಥ್ ಗುಜ್ಜರ್ (14) ಮೃತಪಟ್ಟ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ಕಳೆದ ನಾಲ್ಕು ವರ್ಷಗಳಿಂದ ಅಂಜಲಿ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದು, ಪ್ರತಿದಿನವೂ ಇನ್ಸುಲಿನ್ ಇಂಜೆಕ್ಷನ್ ತೆಗೆದುಕೊಳ್ಳುತ್ತಿದ್ದಳು ಎನ್ನಲಾಗಿದೆ. ನಿನ್ನೆ ಏಕಾಏಕಿ ಅಂಜಲಿ ಪ್ರಜ್ಞಾಹೀನ ಸ್ಥಿತಿಗೆ ಜಾರಿದ್ದಳು. ತಕ್ಷಣ ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ದುರಾದೃಷ್ಟವಶಾತ್ ಆಸ್ಪತ್ರೆಗೆ ಸಾಗಿಸುವ ರಸ್ತೆ ಮಾರ್ಗ ಮಧ್ಯೆಯೇ ಅವಳು ಕೊನೆಯುಸಿರೆಳೆದಳು.

ಚುರುಕು ಹಾಗೂ ವಿದ್ಯಾಭ್ಯಾಸದಲ್ಲಿ ಆಸಕ್ತಳಾಗಿದ್ದ ಅಂಜಲಿಯ ಅಕಾಲಿಕ ನಿಧನದಿಂದ ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ತಾಳ್ಮೆಯಿಂದ ಪರೀಕ್ಷೆ ಎದುರಿಸಬೇಕು

Spread the loveಅಥಣಿ: ಸತತ ಪರಿಶ್ರಮದೊಂದಿಗೆ ತಾಳ್ಮೆಯಿಂದ ಪರೀಕ್ಷೆ ಎದುರಿಸಬೇಕು ಎಂದು ಸ್ಥಳೀಯ ಕೆಎಲ್‌ಇ ಸಂಸ್ಥೆಯ ಸಿ.ಎಸ್.ಕಿತ್ತೂರ ಪ್ರೌಢಶಾಲೆ ಮುಖ್ಯಶಿಕ್ಷಕ ಎಸ್.ಜಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ