Breaking News

ತೈಲ ಬೆಲೆ ಏರಿಕೆ ಖಂಡಿಸಿ ಎತ್ತಿನ ಮೂಲಕ ಕೈ ಪ್ರತಿಭಟನೆ…..?

Spread the love

 

 

ಅಥಣಿ:
ಕೇಂದ್ರದಲ್ಲಿ ಅಂದು ಕಾಂಗ್ರೆಸ್ ಸರಕಾರದ ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಒಂದೆರಡು ರುಪಾಯಿ ತೈಲ ಬೆಲೆ ಹೆಚ್ಚಳ ಮಾಡಿದಾಗ ಬಿಜೆಪಿಯ ಸ್ಮೃತಿ ಇರಾಣಿ ಅವರು ಬಳೆಗಳನ್ನು ಕಳುಹಿಸಿಕೊಟ್ಟಿದ್ದರು. ಆದರೆ ಸುಮಾರು ೭-೪ ರುಪಾಯಿಗಳಷ್ಟು ತೈಲ ಬೆಲೆ ಏರಿಕೆಯಾಗಿದೆ. ಈಗೆಲ್ಲಿದ್ದಾರೆ ಎಂದು ಸ್ಮೃತಿ ಇರಾಣಿಗೆ ಕಾಂಗ್ರೆಸ್ ಮುಖಂಡ ಗಜಾನನ್ ಮಂಗಸೂಳೆ ಪ್ರಶ್ನೆ ಮಾಡಿದ್ದಾರೆ..


ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ತೈಲ ಬೆಲೆ ಖಂಡಿಸಿ ಚಕ್ಕಡಿ ಗಾಡಿಯಲ್ಲಿ ದ್ವೀಚಕ್ರವಾಹನ ಇಟ್ಟುಕೊಂಡು ವಿನೂತನ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದಕ್ಕೂ ಬಿಜೆಪಿ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಹೆಚ್ಚಳವಾಗಿದೆ. ಸ್ಮೃತಿ ಇರಾಣಿ ಅವರು ಇನ್ನೂ ಜೀವಂತವಾಗಿದ್ದಾರೆ. ಬೆಲೆ ಏರಿಕೆಯಾಗುತ್ತಿದ್ದರೂ ಏಕೆ ಬಾಯಿ ಮುಚ್ಚಿಕೊಂಡು ಕುಳುತ್ತಿದ್ದಾರೆ ಎಂದು ಪ್ರಶ್ನೆ ಮಾಡಬೇಕಿದೆ ಎಂದರು..

ತೈಲದಲ್ಲಿ ಹಗಲು ದರೋಡೆ ಕೇಂದ್ರ ಹಾಗೂ ರಾಜ್ಯ ಸರಕಾರ‌ ಮಾಡಿತ್ತಿದೆ. ಇದನ್ನು ಕಡಿಮೆ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಿರಂತರವಾಗಿ ಮಾಡುವವರು, ಇದು ಸಾಂಕೇತಿಕ ಹೋರಾಟ ಆರಂಭವಾಗಿದೆ. ಈ ಹೋರಾಟಕ್ಕೆ ಸರಕಾರಗಳು ಎಚ್ಚೆತ್ತುಕೊಳ್ಳದಿದ್ದರೆ.. ರಾಜ್ಯದ್ಯಂತ ಪ್ರತಿಭಟನೆಗಳು ಮುಂದುವರೆಯಲಿವೆ ಎಂದು ಎಚ್ಚರಿಕೆ ನೀಡಿದರು..
ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ  ಭಾಗವಹಿಸಿದರು.

 


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ