ಅಥಣಿ: ಉತ್ತರ ಪ್ರದೇಶ ರಾಜ್ಯದಲ್ಲಿ ಕುಮಾರಿ ಮನೀಷಾ ವಾಲ್ಮೀಕಿ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಮೂಲಕ ರಾಷ್ಟ್ರಪತಿ ಅವರಿಗೇ ಅಥಣಿ ವಾಲ್ಮೀಕಿ ಸಮುದಾಯದಿಂದ ಮನವಿ ಪತ್ರ ಸಲ್ಲಿಸಿದರು.
ಇದೆ ಸಂದರ್ಭದಲ್ಲಿ ಭೀಮಗೌಡ ಪರಮಗೌಡರ್ ಮಾತನಾಡಿ, ಮನೀಷಾ ಹಿಂದುಳಿದ ವರ್ಗಗಳ ಸಮುದಾಯದಿಂದ ಬಂದಿದ್ದರಿಂದ ತನಿಖೆ ಇದುವರೆವಿಗೂ ವೇಗ ಪಡಿಕೊಂಡಿಲ್ಲ, ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ದೇಶದ ತುಂಬೆಲ್ಲ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಹಾಗೂ ರಾಮರಾಜ್ಯ ವೆಂದು ಹೆಸರಾದ ಉತ್ತರ ಪ್ರದೇಶ ರಾಜ್ಯದಲ್ಲಿ ಆ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಜಗತ್ತಿಗೆ ಪರಿಚಯಿಸಿದ ವಾಲ್ಮೀಕಿ ಸಮಾಜದ ಯುವತಿ ಮೇಲೆ ಅತ್ಯಾಚಾರವೆಸಗಿ ನಾಲಿಗೆ ಕತ್ತರಿಸಿ ಅತ್ಯಂತ ಕ್ರೂರವಾಗಿ ಕೊಂದಿರುವ ಘಟನೆ ಇಡೀ ಮನುಕುಲವನ್ನು ತಲೆ ತಗ್ಗಿಸುವಂತೆ ಮಾಡಿದೆ. ಈ ಪ್ರಕರಣದಲ್ಲಿ ಉತ್ತರ. ಪ್ರದೇಶ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಮತ್ತು ಸರ್ಕಾರದ ನಿರ್ಲಕ್ಷ್ಯ ಖಂಡನೀಯವಾಗಿದೆ. ಈ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸಬೇಕೆಂದು ಮತ್ತು ಆರೋಪಿಗಳನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.
ಬೈಟ್_ ಭೀಮಗೌಡ ಪರಮಗೌಡರ್, ವಕೀಲರು