Breaking News

ತಲ್ವಾರ್ ನಿಂದ ಹಲ್ಲೆ: ಒಂದೇ ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

Spread the love

ಬೆಳಗಾವಿ:ನಗರದ ಅಮನ್ ನಗರದಲ್ಲಿ ಮೂವರು ಯುವಕರ ಮೇಲೆ ತಲ್ವಾರ್ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳಮಾರುತಿ ಠಾಣೆ ಪೊಲೀಸರು ಘಟನೆ ನಡೆದ ಒಂದೇ ಗಂಟೆಯೊಳಗೆ ಆರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳವಾರ ಹಳೇ ವೈಷಮ್ಯ ಹಿನ್ನೆಲೆ ಮೂವರು ಯುವಕರ ಮೇಲೆ ತಲ್ವಾರ್‌ನಿಂದ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಗಾಯಗೊಂಡ ಯುವಕರನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಘಟನೆಯ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಲು ಯತ್ನಿಸಿದರೂ,ಮಾಳಮಾರುತಿ ಠಾಣೆ ಪೊಲೀಸರು ಕಾರ್ಯಪ್ರವೃತ್ತರಾಗಿ,ಸೂಕ್ತ ಮಾಹಿತಿ ಸಂಗ್ರಹಿಸಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ನಡೆಸಿದರು.ಇದರ ಫಲವಾಗಿ,ಘಟನೆ ನಡೆದ ಒಂದೇ ಗಂಟೆಯೊಳಗೆ ಆರು ಮಂದಿಯನ್ನು ಬಂಧಿಸಲು ಸಾಧ್ಯವಾಗಿದೆ.

ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದ್ದು,ದಾಳಿಗೆ ನಿಖರ ಕಾರಣ ಏನು ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ವೈಷಮ್ಯಕ್ಕೆ ಕಾರಣವಾದ ಅಂಶಗಳು, ದಾಳಿಯ ಪೂರ್ವ ಯೋಜನೆ ಇದ್ದಿತ್ತೇ ಎಂಬುದು ಸೇರಿದಂತೆ ಹಲವು ಕೋನಗಳಲ್ಲಿ ತನಿಖೆ ಮುಂದುವರಿದಿದೆ.

ಇನ್ನೂ ಯಾರಾದರೂ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಸಹ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಅಗತ್ಯವಿದ್ದಲ್ಲಿ ಮತ್ತಷ್ಟು ಬಂಧನ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

LIC ದುಡ್ಡಿನ ಆಸೆಗಾಗಿ ತಮ್ಮನನ್ನೇ ಕೊಂದ ಅಣ್ಣ

Spread the loveತುಮಕೂರು: ಎಲ್‌ಐಸಿ ಪಾಲಿಸಿಯಿಂದ  ಸಿಗುವ 30 ಲಕ್ಷ ರೂ. ಆಸೆಗೆ ಸ್ವಂತ ತಮ್ಮನನ್ನೇ  ಅಣ್ಣ ಕೊಲೆ ಮಾಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ