Breaking News

ಮೋದಿ, ಚುನಾವಣಾ ಆಯುಕ್ತರ ಪ್ರತಿಕೃತಿ ದಹಿಸಲು ಯತ್ನ – ಮಂಡ್ಯದಲ್ಲಿ ʻಕೈʼ ಕಾರ್ಯಕರ್ತರ ಹೈಡ್ರಾಮಾ

Spread the love

ಮಂಡ್ಯ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನ ವಜಾ ಹಾಗೂ ಬಂಧನಕ್ಕೆ ಆಗ್ರಹಿಸಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರು  ಹಮ್ಮಿಕೊಂಡಿದ್ದ ಪ್ರತಿಭಟನೆ ನೂಕಾಟ-ತಳ್ಳಾಟಕ್ಕೆ ಸಾಕ್ಷಿಯಾಯಿತು.

ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ  ಅವರ ಭಾವಚಿತ್ರ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯನ್ನ ದಹಿಸಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಬೆಂಕಿ ಹಚ್ಚದಂತೆ ತಡೆದರು.

ಮೋದಿ ಅವರ ಪೋಸ್ಟರ್ ಹಾಗೂ ಪ್ರತಿಕೃತಿಯನ್ನ ಕಿತ್ತುಕೊಳ್ಳಲು ಮುಂದಾದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಮಾತಿನ ಚಕಮಕಿ ಹಾಗೂ ನೂಕಾಟ-ತಳ್ಳಾಟ ನಡೆಯಿತು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನ ತಕ್ಷಣವೇ ವಜಾಗೊಳಿಸಿ ಬಂಧಿಸಬೇಕು. ಸ್ವಾಯತ್ತ ಸಂಸ್ಥೆಯಾಗಿರುವ ಚುನಾವಣಾ ಆಯೋಗವನ್ನ ಬಿಜೆಪಿ ಕಚೇರಿಯಂತೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ಜ್ಞಾನೇಶ್ ಕುಮಾರ್ ವಿರುದ್ಧ ಉಗ್ರ ಘೋಷಣೆಗಳನ್ನು ಕೂಗಲಾಯಿತು.

ಪ್ರತಿಕೃತಿ ದಹನಕ್ಕೆ ಪೊಲೀಸರು ತಡೆ ಒಡ್ಡಿದಾಗ ಉಂಟಾದ ವಾಗ್ವಾದದಿಂದಾಗಿ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.


Spread the love

About Laxminews 24x7

Check Also

ಲವ್ವರ್‌ ಮದುವೆಯಾಗಲು 21 ವಯಸ್ಸಾಗುವವರೆಗೆ ಕಾಯುವಂತೆ ಹೇಳಿದ ತಂದೆಯನ್ನೇ ಗುಂಡಿಕ್ಕಿ ಕೊಂದ 18 ವರ್ಷದ ಪುತ್ರ

Spread the loveಚಂಡೀಗಢ: ನಿನಗಿನ್ನೂ 18 ವರ್ಷ. ನಿನ್ನ ಲವ್ವರ್‌ನ ಮದುವೆ ಆಗೋಕೆ 21 ವಯಸ್ಸಾಗುವವರೆಗೆ ಕಾಯಿ ಎಂದು ಬುದ್ದಿಮಾತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ