Breaking News

ಬೇಕಾಬಿಟ್ಟಿ ಗ್ಯಾರಂಟಿ ಕೊಡೋದ್ರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತೆ: ನಿರ್ಮಲಾ ಸೀತಾರಾಮನ್‌

Spread the love

ಚಿಕ್ಕಬಳ್ಳಾಪುರ: ಬೇಕಾಬಿಟ್ಟಿ ಗ್ಯಾರಂಟಿಗಳನ್ನ  ಕೊಡುವುದರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ದೇವನಹಳ್ಳಿಗೆ ಆಗಮಿಸಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಗಳು ಗ್ಯಾರಂಟಿ ಯೋಜನೆಗಳನ್ನ ಕೊಡುತ್ತಿವೆ. ನಿಮ್ಮಿಂದ ಕೊಡಲು ಆಗದಿದ್ದರೆ ಸದನದಲ್ಲಿ ಚರ್ಚೆ ಮಾಡಿ, ಬಜೆಟ್‌ನಲ್ಲಿ ನಿಧಿ ಸಂಗ್ರಹದ ಬಗ್ಗೆ ಪ್ಲಾನ್ ಮಾಡಿ. ಅದನ್ನು ಬಿಟ್ಟು ಬೇಕಾಬಿಟ್ಟಿ ಗ್ಯಾರಂಟಿ ಕೊಡೋದ್ರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದ್ದಾರೆ.

ಅನುದಾನದ ವಿಚಾರದಲ್ಲಿ ತಾರತಮ್ಯ ವಿಚಾರಕ್ಕೆ ಪ್ರತಿಕ್ರಿಯಿಸಿ, ಹೆಚ್ಚು ತೆರಿಗೆ ಪಾಲು ಕೊಡ್ತಾ ಇದೀವಿ ಅಂದ ಮಾತ್ರಕ್ಕೆ ಹೆಚ್ಚು ಅನುದಾನ ಕೊಟ್ಟಿಲ್ಲ ಅನ್ನೋದು ಸರಿಯಲ್ಲ. ಕಲಬುರಗಿ, ಯಾದಗಿರಿ ಅಂತಹ ಪ್ರದೇಶಗಳಿಂದಲೂ ತೆರಿಗೆ ಸಂಗ್ರಹ ಆಗುತ್ತದೆ. ಆದ್ರೆ ಬೆಂಗಳೂರಿಗೆ ಅನುದಾನ ಹೆಚ್ಚು ಕೊಡೋದು ಏಕೆ ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನೂ ಚಿಕ್ಕಬಳ್ಳಾಪುರ ಭಾಗದಲ್ಲಿ ಅತಿ ಹೆಚ್ಚು ಹೂವು ಹಣ್ಣು ಬೆಳೆಯಲಾಗುತ್ತಿದ್ದು, ಕೋಲ್ಡ್‌ ಸ್ಟೋರೇಜ್‌ ಕೊರತೆ ಕಾಡುತ್ತಿರುವ ಬಗ್ಗೆ ಉತ್ತರಿಸಿ, ರಾಜ್ಯ ಸರ್ಕಾರದಿಂದ ಬೇಡಿಕೆಯೇ ಬಂದಿಲ್ಲ. ಬಜೆಟ್ ನಲ್ಲಿ ಹಣ ಇದೆ, ಆದರೆ ರಾಜ್ಯ ಸರ್ಕಾರ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ