Breaking News

ವೈದ್ಯಕೀಯ ನೀಟ್ ರೋಲ್ ನಂಬರ್ ದಾಖಲಿಸಲು ಆಗಸ್ಟ್ 3 ಕೊನೆ ದಿನ – ಕೆಇಎ

Spread the love

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ಸಿಇಟಿ ಅರ್ಜಿ ಜತೆ ಜೋಡಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತನ್ನ ವೆಬ್‌ಸೈಟ್‌ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ.

ನೀಟ್ ರೋಲ್ ನಂಬರ್ ದಾಖಲಿಸಿದ ನಂತರ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಮತ್ತು ವೆರಿಫಿಕೇಷನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ನಂತರ ಮುದ್ರಿತ ನೀಟ್ ನಂಬರ್ ಅನ್ನು ಕೂಡ ಒಮ್ಮೆ ಪರಿಶೀಲಿಸಿಕೊಳ್ಳಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಸಲಹೆ ನೀಡಿದ್ದಾರೆ.

ನೀಟ್ ರೋಲ್ ನಂಬರ್ ದಾಖಲಿಸಲು ಆಗಸ್ಟ್ 3 ರವರೆಗೆ ಅವಕಾಶ ನೀಡಲಾಗಿದೆ. ಮೊದಲ ದಿನವೇ 25 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ ಸಂಖ್ಯೆಯನ್ನು ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದವರ ಅಂಕಪಟ್ಟಿ ಪ್ರಕಟ
ಪ್ರಸಕ್ತ ಸಾಲಿನ ನೀಟ್ ಪರೀಕ್ಷೆಯಲ್ಲಿ ಅರ್ಹರಾದ ಹಾಗೂ ಎನ್‌ಟಿಎ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿದ್ದ ಅಭ್ಯರ್ಥಿಗಳ ಅಂಕಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಸನ್ನ ತಿಳಿಸಿದ್ದಾರೆ.

ಅಖಿಲ ಭಾರತ ಮಟ್ಟದಲ್ಲಿ 20ನೇ Rank ಪಡೆದಿರುವ ಅಭ್ಯರ್ಥಿ ರಾಜ್ಯದ ರಾಂಕ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇದ್ದಾನೆ. ಅರ್ಹರಾಗಿರುವ ಒಟ್ಟು 69,170 ಮಂದಿಯ ಅಂಕಪಟ್ಟಿಯನ್ನು ಆರೋಹಣ ಕ್ರಮದಲ್ಲಿ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.


Spread the love

About Laxminews 24x7

Check Also

ಇಂದು ಮೈಸೂರಿಗೆ ಮೋದಿ ಆಗಮನ – ವಿವೇಕ ಸ್ಮಾರಕ ಲೋಕಾರ್ಪಣೆ

Spread the loveಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ (ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ