ಬೆಳಗಾವಿ: ವಾಲ್ಮೀಕಿ ನಿಗಮದ ಪ್ರಕರಣ ಸದ್ಯ ತನಿಖಾ ಹಂತದಲ್ಲಿದ್ದು, ಈ ಪ್ರಕರಣದಲ್ಲಿ ಮಂತ್ರಿಗಳು ಹಾಗೂ ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿ ಅದು ಕಳಂಕ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಶುಕ್ರವಾರ ಬೆಳಗಾವಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ವಾಲ್ಮೀಕಿ ಪ್ರಕರಣ ತನಿಖಾ ಹಂತದಲ್ಲಿದ್ದು, ದಾಖಲೇ ನೋಡಿದ ಮೇಲೆಯೇ ಈ ಪ್ರಕರಣ ಗೊತ್ತಾಗಲಿದೆ. ತಕ್ಷಣ ಈ ಪ್ರಕರಣ ಹೀಗೆ ಇದೆ ಎಂದು ಹೇಳಲು ಕಷ್ಟ ಎಂದು …
Read More »ಕೆಡಿಪಿ ಸಭೆಯಲ್ಲಿ ಕುಡುಕ ಶಿಕ್ಷಕರ ಕುರಿತು ಚರ್ಚೆ
ಬೆಳಗಾವಿ : ಕೆಲ ಶಾಲಾ ಶಿಕ್ಷಕರು ದಿನನಿತ್ಯ ಶಾಲೆಗೆ ಮಧ್ಯಪಾನ ಮಾಡಿ ಬರುತ್ತಿರುವ ಕುರಿತು ದೂರುಗಳು ಬಂದಿದ್ದು ಇಂತಹ ಶಿಕ್ಷಕರ ಮೇಲೆ ಕೂಡಲೇ ಕ್ರಮ ಜರುಗಿಸಬೇಕು ಎಂದು ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಶುಕ್ರವಾರ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಧ್ಯಪಾನ ಮಾಡಿ ಶಾಲೆಗೆ ಬರುವ ಶಿಕ್ಷಕರ ಕುರಿತು ಗಂಭೀರ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ …
Read More »ಮದ್ಯನೀತಿ ಹಗರಣ: ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್
ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಆ ಬಳಿಕ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 10ರಂದು 21 ದಿನಗಳ ಕಾಲ ಮಧ್ಯಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಲೋಕಸಭೆ ಚುನಾವಣೆ ಪ್ರಚಾರ ಮುಗಿದ ಬಳಿಕ ತಿಹಾರ್ …
Read More »ಕುರ್ಚಿ ಉಳಿಸಿಕೊಳ್ಳಲು ವಿಪಕ್ಷಗಳ ಹೋರಾಟ ಹತ್ತಿಕ್ಕುವ ಸರ್ವಾಧಿಕಾರಿ ಸಿದ್ದರಾಮಯ್ಯ: ಬಿಜೆಪಿ ವಾಗ್ದಾಳಿ
ಬೆಂಗಳೂರು, ಜುಲೈ 12: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಖಂಡಿಸಿ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಕಮಲ ಪಾಳೆಯ ಕಿಡಿ ಕಾರಿದೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಟೀಕಿಸಿದೆ. ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷರಾದ ಬಿವೈ …
Read More »ಸಿಎಂ ಸಿದ್ದರಾಮಯ್ಯ ಆಪ್ತನೆಂದು ಹೇಳಿಕೊಂಡು ಡಿಹೆಚ್ಓಗೆ 7 ಲಕ್ಷ ರೂ. ವಂಚನೆ
ಬಾಗಲಕೋಟೆ, ಜುಲೈ 12: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಪ್ತ ಅಂತ ಹೇಳಿಕೊಂಡು ಬಾಗಲಕೋಟೆ (Bagalkot) ಜಿಲ್ಲಾ ಆರೋಗ್ಯಾಧಿಕಾರಿ ಜಯಶ್ರೀಗೆ ಏಳು ಲಕ್ಷ ರೂ. ವಂಚಿಸಿದ್ದಾನೆ. ರಾಮಯ್ಯ ವಂಚಿಸಿದ ಆರೋಪಿ. 2023ರ ಸೆಪ್ಟೆಂಬರ್ ತಿಂಗಳಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗೆ ಕಿತ್ತಾಟ ನಡೆದಿತ್ತು. ಬಾಗಲಕೋಟೆ ಜಿಲ್ಲಾ ಆರೋಗ್ಯಾಧಿಕಾರಿ ಹುದ್ದೆಗಾಗಿ ಜಯಶ್ರೀ ಎಮ್ಮಿ ಹಾಗೂ ಶಾಸಕ ಹೆಚ್ವೈ ಮೇಟಿ ಅಳಿಯ ರಾಜ್ಕುಮಾರ್ ಮಧ್ಯೆ ಜಟಾಪಟಿ ನಡೆದಿತ್ತು. ಒಂದು ದಿನ ಬೆಳಗ್ಗೆ ರಾಜ್ಕುಮಾರ್ ಯರಗಲ್ ಡಿಹೆಚ್ಓ ಕುರ್ಚಿಯಲ್ಲಿ …
Read More »ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death
ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death
Read More »ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಬಸವ ಜಯಮೃತ್ಯುಂಜಯ ಶ್ರೀ ಭೇಟಿ
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಪತ್ರ ಚಳವಳಿ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಬಸವ ಜಯಮೃತ್ಯುಂಜಯ ಶ್ರೀ ಭೇಟಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ, ಬಸವ ಜಯಮೃತ್ಯುಂಜಯ ಶ್ರೀ, ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸಕ್ಕೆ ನೂರಕ್ಕೂ ಹೆಚ್ಚು ಪದಾಧಿಕಾರಿಗಳೊಂದಿಗೆ ಭೇಟಿ ನೀಡಿದರು. ಬಸವ ಜಯಮೃತ್ಯುಂಜಯ ಶ್ರೀ, ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪತ್ರ ನೀಡಿ, ಈ ವಿಷಯವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಮನವಿ …
Read More »ಕಿಚ್ಚ ಸುದೀಪ್ ರೆಸ್ಟೋರೆಂಟ್ ಮೇಲೆ ದಾಳಿ
ಸ್ಯಾಂಡಲ್ ವುಡ್ ಸ್ಟಾರ್ ಕಿಚ್ಚ ಸುದೀಪ್ ಒಡೆತನದ ತೆಲಂಗಾಣದಲ್ಲಿರುವ ರೆಸ್ಟೋರೆಂಟ್ ನಲ್ಲಿ ಆಹಾರ ಗುಣಮಟ್ಟ ಕಾಯ್ದುಕೊಳ್ಳದೇ ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ. ತೆಲಂಗಾಣದ ಆಹಾರ ಮತ್ತು ಸುರಕ್ಷತೆ ಆಯುಕ್ತರ ನೇತೃತ್ವದ ಕಾರ್ಯಪಡೆ ತೆಲಂಗಾಣದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಿದ್ದು, ಸಿಕಂದರಬಾದ್ ನಲ್ಲಿರುವ ಕಿಚ್ಚ ಸುದೀಪ್ ಒಡೆತನದ `ವಿವಾಹ ಭೋಜನಮುಡು’ ರೆಸ್ಟೋರೆಂಟ್ ನಲ್ಲಿ ಆಹಾರ ಗುಣಮಟ್ಟ ಕಾಯ್ದುಕೊಳ್ಳದೇ ಇರುವುದು ಪತ್ತೆಯಾಗಿದೆ. ಆರಂಭದಲ್ಲಿ ಇದು ಕನ್ನಡದ ಖ್ಯಾತ ನಟ ಕಿಚ್ಚ …
Read More »ಕರ್ನಾಟಕಕ್ಕೆ ಮತ್ತೆ ಶಾಕ್ ; ತಮಿಳುನಾಡಿಗೆ ಪ್ರತಿನಿತ್ಯ 1 TMC ಕಾವೇರಿ ನೀರು ಹರಿಸುವಂತೆ ‘CWRC’ ಆದೇಶ.!
ಕರ್ನಾಟಕಕ್ಕೆ ಮತ್ತೆ ಶಾಕ್ ; ತಮಿಳುನಾಡಿಗೆ ಪ್ರತಿನಿತ್ಯ 1 TMC ಕಾವೇರಿ ನೀರು ಹರಿಸುವಂತೆ ‘CWRC’ ಆದೇಶ.! ಬೆಂಗಳೂರು : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಆದೇಶ ಹೊರಡಿಸಿದೆ. ಹೌದು. ಜುಲೈ 12 ರಿಂದ 31 ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಆದೇಶ ಹೊರಡಿಸಿದೆ. ಈ ಮೂಲಕ …
Read More »ಬೆಂಗಳೂರಿನಲ್ಲಿ ಮನೆ ಬಾಡಿಗೆ ಇಳಿಕೆ ಆರಂಭ, ಹೊರ ವಲಯದಲ್ಲಿ ಬೇಡಿಕೆ
ಬೆಂಗಳೂರು, ಜುಲೈ 11: ಕಳೆದ ಎರಡು ವರ್ಷಗಳಿಂದ ಬಾಡಿಗೆ (rent) ಬೇಡಿಕೆಯ ಹೆಚ್ಚಳದ ನಂತರ ಬೆಂಗಳೂರಿನ ಟೆಕ್ ವೃತ್ತಿಪರರು ಈಗ ಐಟಿ ಕೇಂದ್ರಗಳಿಂದ ನಗರದ ಹೊರವಲಯಕ್ಕೆ ಹೆಚ್ಚು ಕೈಗೆಟುಕುವ ವಸತಿಗಾಗಿ ಸ್ಥಳಾಂತರಗೊಳ್ಳುತ್ತಿದ್ದಾರೆ. ವೈಟ್‌ಫೀಲ್ಡ್‌ನಂತಹ ಐಟಿ ಉಪನಗರಗಳಲ್ಲಿನ ಬಾಡಿಗೆಗಳು ವರ್ಷದಿಂದ ವರ್ಷಕ್ಕೆ 15-20% ರಷ್ಟು ಕಡಿಮೆಯಾಗಿದೆ ಎಂದು ಬ್ರೋಕರ್‌ಗಳು ತಿಳಿಸಿದ್ದಾರೆ. ಇತ್ತೀಚೆಗೆ, ಐಟಿಯಲ್ಲಿ ಕೆಲಸ ಮಾಡುವ ದಂಪತಿಗಳು ಸರ್ಜಾಪುರದಿಂದ ಸುಮಾರು 5 ಕಿಮೀ ದೂರದ ಹೊರವಲಯಕ್ಕೆ ಹೋಗಲು ನಿರ್ಧರಿಸಿದರು. ಅವರು 38,000 …
Read More »
Laxmi News 24×7