Breaking News

Laxminews 24x7

ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಚಿಕ್ಕೋಡಿ:ಶಾಲೆಯಿಂದ ಮನೆಗೆ ಮರಳುತ್ತಿದ್ದ ಇಬ್ಬರು ಅಕ್ಕ-ತಂಗಿಯರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಮೇಖಳಿ ಗ್ರಾಮದ ಅನುದಾನಿತ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಾದ ಜಯಶ್ರೀ ಕೋಟರೆ ಮತ್ತು ಭಾಗ್ಯಶ್ರೀ ಕೋಟರೆ ಅವರು ಶಾಲೆ ಮುಗಿಸಿಕೊಂಡು ಮನೆಗೆ ನಡೆದುಕೊಂಡು ಬರುತ್ತಿದ್ದರು. ಈ ವೇಳೆ ನಾಗರಮುನ್ನೋಳಿ ಗ್ರಾಮದಿಂದ ರಾಯಬಾಗ ಪಟ್ಟಣದ ಕಡೆಗೆ …

Read More »

ಕ್ಲಾಸ್‌ ರೂಮಲ್ಲೇ ಚಾಕೊಲೇಟ್ ಕೊಟ್ಟು ವಿದ್ಯಾರ್ಥಿನಿಗೆ ಪ್ರಪೋಸ್‌ – ಚಪ್ಪಲಿ ಏಟು ತಿಂದ ಪ್ರೊಫೆಸರ್‌

ನೆಲಮಂಗಲ: ವಿದ್ಯಾರ್ಥಿನಿಗೆ ಪ್ರಪೋಸ್ ಮಾಡುವಾಗ ಆಕೆಯ ಗೌರವ, ಖಾಸಗಿತನ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡುವುದು ಮುಖ್ಯ. ಆದ್ರೆ ಪ್ರತಿಷ್ಠಿತ ಕಾಲೇಜಿನ ಪ್ರೊಫೆಸರ್‌ವೊಬ್ಬ  ಕ್ಲಾಸ್‌ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪ್ರೋಸ್‌ ಮಾಡಿದ ಘಟನೆ ನೆಲಮಂಗಲ ತಾಲೂಕಿನ ಮೆಡಿಕಲ್ ಕಾಲೇಜಿನಲ್ಲಿ   ನಡೆದಿದೆ. ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರೊಫೆಸರ್‌ ಅಬ್ದುಲ್‌ ಪ್ರಪೋಸ್‌ ಮಾಡಿದ್ದಾನೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿ ತರಗತಿಯಲ್ಲೇ ಪ್ರಶ್ನೆ ಮಾಡಿದ್ದಾರೆ. ಬಳಿಕ ಪ್ರೊಫೆಸರ್‌ಗೆ ಚಪ್ಪಲಿಯಿಂದ ಥಳಿಸಿದ್ದಾರೆ. ಅಲ್ಲದೇ ಪ್ರೊಫೆಸರ್‌ ಅಬ್ದುಲ್‌ ವರ್ತನೆಯಿಂದ …

Read More »

ಹುಬ್ಬಳ್ಳಿಯಲ್ಲಿ 3 ಯುದ್ಧ ವಿಮಾನಗಳ ಹಾರಾಟ – ಆತಂಕಕ್ಕೊಳಗಾದ ಜನ

ಹುಬ್ಬಳ್ಳಿ: ನಗರದಲ್ಲಿ  ಮೂರು ಯುದ್ಧ ವಿಮಾನಗಳು ಕೆಳಮಟ್ಟದಲ್ಲಿ ಹಾರಾಟ ನಡೆಸಿದ್ದು ಜನ ಆತಂಕಕ್ಕೊಳಗಾಗಿದ್ದಾರೆ. ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧ ನಡೆಯುತ್ತಿರುವ ಹೊತ್ತಲ್ಲೇ ವಿಮಾನಗಳು ಕೆಳಮಟ್ಟದಲ್ಲಿ ಹಾರಾಟ ನಡೆಸಿದ್ದು ಜನರ ಭಯಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯ ಕೇಶ್ವಾಪುರ, ಬೆಂಡಿಗೇರಿ, ದೇಶಪಾಂಡೆ ನಗರ, ರಾಮನಗರ, ವಿಜಯನಗರದಲ್ಲಿ ಏಕಾಏಕಿ ಫೈಟರ್ ಜೆಟ್‍ಗಳು ಕಾಣಿಸಿಕೊಂಡಿವೆ. ಅತಿ ಕೆಳಮಟ್ಟದ ಅಂತರದಲ್ಲಿ ಕರ್ಕಶ ಸದ್ದು ಮಾಡಿ ಹಾರಾಟ ನಡೆಸಿವೆ. ಇದರಿಂದ ಜನ ಗಾಬರಿಗೊಂಡಿದ್ದರು. ಈ ಬಗ್ಗೆ `ಪಬ್ಲಿಕ್ ಟಿವಿ’ಗೆ ಹುಬ್ಬಳ್ಳಿ ವಿಮಾನ …

Read More »

ಪೆಟ್ರೋಲ್‌ ದರ 5 ರೂ., ಡೀಸೆಲ್‌ ಬೆಲೆ 3 ರೂ. ಏರಿಕೆ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಪೆಟ್ರೋಲ್  ಅಭಾವದ ವದಂತಿ ಹಬ್ಬಿದ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳಲು ಜನ ಮುಗಿಬೀಳುತ್ತಿದ್ದಾರೆ. ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಈ ಮಧ್ಯೆ ಚಿಕ್ಕಬಳ್ಳಾಪುರದ ನಯಾರ ಪೆಟ್ರೋಲ್‌ ಬಂಕ್‌ಗಳಲ್ಲಿ  ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಮಾಡಲಾಗಿದೆ. ಪೆಟ್ರೋಲ್‌ ಪ್ರತಿ ಲೀಟರ್‌ ಮೇಲಿನ ದರ  5 ರೂಪಾಯಿ ಹಾಗೂ ಡೀಸೆಲ್‌ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಇದರಿಂದ 1 ಲೀಟರ್‌ ಪೆಟ್ರೋಲ್‌ ಬೆಲೆ …

Read More »

ಲೋಕಾ ದಾಳಿ ವೇಳೆ 10 ಕೋಟಿ ಭ್ರಷ್ಟಾಚಾರ ಬಯಲು – ಕೊಪ್ಪಳ ನಗರಸಭೆಯ ಜೆಇ ಸಸ್ಪೆಂಡ್

ಕೊಪ್ಪಳ: ಲೋಕಾಯುಕ್ತ ದಾಳಿ ವೇಳೆ 10 ಕೋಟಿ ರೂ. ಭ್ರಷ್ಟಾಚಾರ ಬಯಲಿಗೆ ಬಂದ ಹಿನ್ನೆಲೆ ಕೊಪ್ಪಳ  ನಗರಸಭೆಯ ಜೆಇ ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ. 2023-24 ಹಾಗೂ 24-25ನೇ ಸಾಲಿನಲ್ಲಿ ಕೆಲ ಕಾಮಗಾರಿಗಳಲ್ಲಿ ಸುಳ್ಳು ಬಿಲ್ ಹಾಕಿದ್ದು, ಒಟ್ಟು 366 ಕಾಮಗಾರಿಗಳಲ್ಲಿ 10 ಕೋಟಿ ರೂ. ಭ್ರಷ್ಟಾಚಾರ ಮಾಡಿದ್ದಾರೆ. ಈ ಹಿಂದೆ ಲೋಕಾಯುಕ್ತ ದಾಳಿ ನಡೆಸಿದಾಗ ವಿಚಾರ ಬಯಲಿಗೆ ಬಂದಿದೆ. ಸದ್ಯ ಪೌರಾಡಳಿತ ಇಲಾಖೆ ನಿರ್ದೇಶಕರು ಕೊಪ್ಪಳ ನಗರಸಭೆಯ ಜೆಇ …

Read More »

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

ಬೆಳಗಾವಿ: ಗಡಿಜಿಲ್ಲೆಯ ಮೂವರು ಘಟಾನುಘಟಿ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್  ಉಪಚುನಾವಣೆಯಲ್ಲಿ ಗೆಲ್ಲಿಸುವ ಟಾಸ್ಕ್ ನೀಡಿದೆ. ಸೂಚನೆ ಬೆನ್ನಲ್ಲೇ ಬೆಳಗಾವಿ ನಾಯಕರು ಅಖಾಡಕ್ಕಿಳಿದಿದ್ದಾರೆ. ಬಾಗಲಕೋಟೆ  ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಹೊಣೆಗಾರಿಕೆ ಸಚಿವ ಸತೀಶ್ ಜಾರಕಿಹೊಳಿ ಹೆಗಲಿಗೆ ಹಾಕಿದ್ದಾರೆ. ದಾವಣಗೆರೆಯಲ್ಲಿ  ಗೆಲ್ಲಿಸುವ ಜವಾಬ್ದಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆನೀಡಲಾಗಿದೆ. ಈ ಎರಡೂ ಕ್ಷೇತ್ರದಲ್ಲಿ ಸ್ಟಾರ್ ಪ್ರಚಾರಕರಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿಯವರನ್ನು  ಹೈಕಮಾಂಡ್ ನೇಮಕ ಮಾಡಿದೆ. ಸಂಘಟನಾ ಚತುರತೆ ಹಿನ್ನೆಲೆ ಮೂವರು ನಾಯಕರಿಗೆ …

Read More »

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಪರೀಕ್ಷಾ ಬೋರ್ಡ್‌  ಮಾಹಿತಿ ನೀಡಿದೆ ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಿಕೆ ಮಾಡಿದೆ.  ಈ ಮೊದಲು ಮಾ.31ಕ್ಕೆ ರಜೆಯಿದ್ದ ಹಿನ್ನೆಲೆ ಮಾ.30ಕ್ಕೆ ಹಿಂದಿ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಸರ್ಕಾರ ಪರಿಷ್ಕರಣೆ ಮಾಡಿ, ಮಾ.31ರ ರಜೆಯನ್ನು ಮಾ.30ಕ್ಕೆ ಘೋಷಿಸಿದೆ. ಹೀಗಾಗಿ ಪರೀಕ್ಷಾ ದಿನಾಂಕವನ್ನು …

Read More »

1ನೇ ತರಗತಿ ಪ್ರವೇಶ | 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

ಬೆಂಗಳೂರು: ಒಂದನೇ ತರಗತಿ ದಾಖಲಾತಿಗೆ ಆರು ವರ್ಷ (6 Years) ತುಂಬಿರಬೇಕೆಂಬ ಕಡ್ಡಾಯ ನಿಯಮದಲ್ಲಿ ಸರ್ಕಾರ ಈ ವರ್ಷವೂ 60 ದಿನಗಳ ವಿನಾಯಿತಿ ನೀಡಿ ಮಹತ್ವದ ತೀರ್ಮಾನ ಕೈಗೊಂಡಿದೆ. ವಿಧಾನಸಭೆಯಲ್ಲಿಂದು ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ  ಮಹತ್ವದ ಘೋಷಣೆ ಮಾಡಿದರು. ಒಂದನೇ ತರಗತಿಗೆ ದಾಖಲಾಗಲು ಆರು ವರ್ಷ ತುಂಬಿರಬೇಕೆಂಬ ನಿಯಮದಲ್ಲಿ 2026-27 ನೇ ವರ್ಷದ ಶೈಕ್ಷಣಿಕ ವರ್ಷದಲ್ಲಿ 60 ದಿನಗಳ ಸಡಿಲಿಕೆ ಕೊಡುವ ತೀರ್ಮಾನ ಮಾಡಲಾಗಿದೆ ಎಂದು …

Read More »

ತೈಲ ಅಭಾವ – ಬೀದರ್‌ನಲ್ಲಿ 7ಕ್ಕೂ ಅಧಿಕ ಪೆಟ್ರೋಲ್ ಬಂಕ್ ಕ್ಲೋಸ್

ಬೀದರ್: ಇರಾನ್ ಮತ್ತು ಇಸ್ರೆಲ್ ವಾರ್ ಯುದ್ಧದ ಪರಿಣಾಮ ಗಡಿ ಜಿಲ್ಲೆ ಬೀದರ್‌ನ  ಕೆಲವು ಬಂಕ್‌ಗಳಲ್ಲಿ ಪೆಟ್ರೋಲ್ ಅಭಾವ ಸೃಷ್ಟಿಯಾಗಿ ಬಂಕ್‌ಗಳು  ಕ್ಲೋಸ್ ಆಗಿವೆ. ತೈಲ ಕೊರತೆ ವದಂತಿ ಹಿನ್ನೆಲೆ ಜನ ಮುಗಿಬಿದ್ದು ಪೆಟ್ರೋಲ್, ಡಿಸೇಲ್ ಖರೀದಿಸಿದ್ದು, ಬೀದರ್ ನಗರದ ಬಸವೇಶ್ವರ ವೃತದ ಬಳಿ ಇರುವ ನಯಾರಾ ಪೆಟ್ರೋಲ್ ಬಂಕ್ ಸೇರಿದಂತೆ 7ಕ್ಕೂ ಅಧಿಕ ಬಂಕ್‌ಗಳಲ್ಲಿ ಪೆಟ್ರೋಲ್, ಡಿಸೇಲ್ ಖಾಲಿಯಾಗಿ ಬಂಕ್‌ಗಳನ್ನು ಬಂದ್ ಮಾಡಲಾಗಿದೆ. ಬುಧವಾರ ರಾತ್ರಿಯಿಂದಲೇ ಪೆಟ್ರೋಲ್, ಡಿಸೇಲ್ …

Read More »

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ, ತನಿಖೆಯಲ್ಲಿ ನಟಿಯೊಬ್ಬರು ಹನಿಟ್ರ್ಯಾಪ್ ಮಾಡಿರೋದು ಪತ್ತೆ..!!

ಉದ್ಯಮಿ ಸಿಜೆ ರಾಯ್ ಆತ್ಮ**ತ್ಯೆ ಪ್ರಕರಣ, ತನಿಖೆಯಲ್ಲಿ ನಟಿಯೊಬ್ಬರು ಹನಿಟ್ರ್ಯಾಪ್ ಮಾಡಿರೋದು ಪತ್ತೆಯಾಗಿದೆ. ಉದ್ಯಮಿ ಬಳಿಯಿಂದ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗ ಸಾಕ್ಷ್ಯಗಳು ಲಭ್ಯವಾಗಿದೆ. ಈ ಕುರಿತು ಸ್ಫೋಟಕ ವರದಿ ಇಲ್ಲಿದೆ. ಬೆಂಗಳೂರು (ಮಾ.25) ಉದ್ಯಮಿ ಸಿಜೆ ರಾಯ್ ದುರಂತ ಅಂತ್ಯ ಪ್ರಕರಣವನ್ನು ವಿಶೇಷ ತನಿಖಾ ದಳ ಪೊಲೀಸರು ನಡೆಸುತ್ತಿದ್ದಾರೆ. ಸಾವಿರಾರು ಕೋಟಿ ರೂಪಾಯಿ ವ್ಯವಹಾರ ನಡೆಸುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಕಚೇರಿಯಲ್ಲಿ …

Read More »