Breaking News

Laxminews 24x7

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಗೆ ಬೀಳುತ್ತಾ ಬ್ರೇಕ್? :‌ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು, ಜೂನ್‌ 15: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನು ಹಿಂದೆಗೆದುಕೊಳ್ಳಬೇಕು ಅಥವಾ ಪರಿಶೀಲಿಸಬೇಕು ಎಂದು ಕಾಂಗ್ರೆಸ್ ಮುಖಂಡರ ಒಂದು ವರ್ಗ ನೀಡಿದ ಹೇಳಿಕೆ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿತ್ತು. ಹೀಗಾಗಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ …

Read More »

D ಗ್ಯಾಂಗ ಗೆ ಜೈ ಲಾ ಬೆಲಾ.. ?

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನಟ ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಕಳೆದ ಆರು ದಿನಗಳಿಂದ ದರ್ಶನ್ ಮತ್ತು ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದರು. ಇದೀಗ ಇಂದು ಸಂಜೆ ಮತ್ತೆ ಪೊಲೀಸರು ದರ್ಶನ್ ಮತ್ತು ಅವರ ಸಹಚರರನ್ನು ಕೋರ್ಟಿಗೆ ಹಾಜರುಪಡಿಸುವ ಹಿನ್ನೆಲೆಯಲ್ಲಿ ಅದಕ್ಕೂ ಮುಂಚೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು ಕರೆದುಕೊಂಡು ಹೋಗಲಿದ್ದಾರೆ. …

Read More »

ರೈತರಿಗೆ ಗುಡ್ ನ್ಯೂಸ್: ಜೂ.18ರಂದು ‘ಪಿಎಂ ಕಿಸಾನ್ ಯೋಜನೆ’ಯ 17ನೇ ಕಂತಿನ ಹಣ ಪ್ರಧಾನಿ ಮೋದಿ ಬಿಡುಗಡೆ

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pradhan Mantri Kisan Samman Nidhi – PM-KISAN Nidhi) ಯೋಜನೆಯಡಿ 20,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಜೂನ್ 18 ರಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಬಿಡುಗಡೆಯ ನಂತರ ಪಿಎಂ ಮೋದಿ ಕೃಷಿ ಸಖಿಗಳು ಎಂದು ಗೊತ್ತುಪಡಿಸಿದ 30,000 ಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿಗೆ ಪ್ರಮಾಣಪತ್ರಗಳನ್ನು ನೀಡಲಿದ್ದಾರೆ …

Read More »

‘ವಾಹನ ಸವಾರ’ರಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ‘ತೆರಿಗೆ ದರ’ ಹಚ್ಚಳ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ದರಗಳನ್ನು ರೀಟೆಲ್ ದರಗಳನ್ನು ಹೆಚ್ಚಳ ಮಾಡಲಾಗಿದೆ. ಹೀಗಾಗಿ ವಾಹನ ಸವಾರರಿಗೆ ಶಾಕ್ ಎನ್ನುವಂತೆ ಪೆಟ್ರೋಲ್, ಡೀಸೆಲ್ ದರ ಕೂಡ ಹೆಚ್ಚಳ ಆಗುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಗೆ ಮುನ್ನಾ ಕೇಂದ್ರ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಲಾಗಿತ್ತು. ಈಗ ರಾಜ್ಯ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ (Retail Sales Tax) ದರವನ್ನು ಹೆಚ್ಚಳ ಮಾಡಿದೆ. …

Read More »

ಚಿತ್ರರಂಗದ ಪರವಾಗಿ ಕ್ಷಮೆ ಕೇಳ್ತೀವಿ; ರೇಣುಕಾಸ್ವಾಮಿ ಕುಟುಂಬಕ್ಕೆ ಫಿಲ್ಮ್ ಚೇಂಬರ್​ನಿಂದ ₹5 ಲಕ್ಷ ಪರಿಹಾರ

ಚಿತ್ರರಂಗದ ಪರವಾಗಿ ಕ್ಷಮೆ ಕೇಳ್ತೀವಿ; ರೇಣುಕಾಸ್ವಾಮಿ ಕುಟುಂಬಕ್ಕೆ ಫಿಲ್ಮ್ ಚೇಂಬರ್​ನಿಂದ ₹5 ಲಕ್ಷ ಪರಿಹಾರ ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ (Actor Darshan) ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಫಿಲ್ಮ್​ ಚೇಂಬರ್​ ಮೃತನ ಮನೆಗೆ ಇಂದು ಭೇಟಿ ನೀಡಿತು. ಚಿತ್ರದುರ್ಗದಲ್ಲಿರುವ ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ಅವರ ತಂದೆ-ತಾಯಿ, ಗರ್ಭಿಣಿ ಪತ್ನಿಗೆ ಫಿಲ್ಮ್​ ಚೇಂಬರ್​ ಅಧ್ಯಕ್ಷರು ಸೇರಿದಂತೆ ಪ್ರಮುಖರು ಸಾಂತ್ವಾನ ಹೇಳಿದರು. ಮೊದಲಿಗೆ ಕುಟುಂಬದ ಬಳಿ ಚಿತ್ರರಂಗದ …

Read More »

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಜೂನ್ 28ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದ್ದು, ಅಕ್ರಮವಾಗಿ ಹಣ ವರ್ಗಾವಣೆ ಮಡಲಾಗಿದೆ. ಹಗರಣವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ. ಈ ವೇಳೆ ಮಾತನಾಡಿದ ಮಾಜಿ ಸಚಿವ …

Read More »

ನಿಮ್ಮ ವಾಹನಗಳಿಗೆ VIP ನಂಬರ್ ಪಡೆಯುವುದು ಹೇಗೆ?

ಯುವ ಜನತೆಯಲ್ಲಿ ಫ್ಯಾಷನ್‌ ಕ್ರೇಜ್‌ ಹೆಚ್ಚಾಗಿದೆ. ತಾವು ಏನೇ ಮಾಡಿದರೂ ಡಿಫ್ರೆಂಟ್ ಆಗಿ ಇರಬೇಕು ಎಂಬ ಮನಸ್ಥಿತಿ ಬೆಳಸಿಕೊಂಡಿದ್ದಾರೆ. ಅಲ್ಲದೆ ತಮ್ಮ ಬಳಿ ಇರುವ ವಸ್ತುಗಳ ಸಹ ಹಾಗೇ ಕೂಡಿರಬೇಕು ಎಂಬುದು ಅವರ ಆಶಯ.. ಹೀಗಾಗಿ ಈಗಿನ ಯುವ ಜನ, ತಮ್ಮ ವಾಹನಗಳಿಗೆ ಹೆಚ್ಚಾಗಿ ಫ್ಯಾನ್ಸಿ ನಂಬರ್‌ ಬಗ್ಗೆ ಹೆಚ್ಚಿನ ಒತ್ತು ನೀಡುತ್ತಾರೆ.   ಹಾಗಿದ್ದರೆ ಈ ಫ್ಯಾನ್ಸಿ ನಂಬರ್ ಪಡೆಯುವುದು ಹೇಗೆ? ಇದಕ್ಕೆ ಎಷ್ಟು ಹಣವನ್ನು ಖರ್ಚು ಮಾಡಬೇಕು …

Read More »

ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಇಂದು ಓಪನ್,

ಬೆಂಗಳೂರು, ಜೂನ್. 15: ಬೆಂಗಳೂರಿನ ಬಹುನಿರೀಕ್ಷಿತ ಡಬಲ್ ಡೆಕ್ಕರ್ ಮೇಲ್ಸೇತುವೆ, ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (ಸಿಎಸ್‌ಬಿ) ಗೆ 3.3 ಕಿಲೋಮೀಟರ್ ದೂರವನ್ನು ಸಂಪರ್ಕಿಸುತ್ತದೆ. ಹಲವು ವಿಳಂಬಗಳ ನಂತರ ಜೂನ್ 15 ರಂದು ಸಾರ್ವಜನಿಕರಿಗೆ ಮುಕ್ತವಾಗಲಿದೆ ಸಿದ್ಧವಾಗಿದೆ. ಈ ಡಬಲ್ ಡೆಕ್ಕರ್ ಮೇಲ್ಸೇತುವೆ ಯೋಜನೆಯು ಎರಡು ಹಂತಗಳನ್ನು ಒಳಗೊಂಡಿದೆ. ಮೊದಲನೆಯದು ಕೆಳ ಹಂತ, ನೆಲದಿಂದ ಎಂಟು ಮೀಟರ್ ಎತ್ತರದಲ್ಲಿ, ವಾಹನಗಳಿಗಾಗಿ ವಿನ್ಯಾಸಗೊಳಿಸಲಾಗಿದೆ. ಎರಡನೇಯದು ಮೇಲಿನ ಹಂತವು 16 ಮೀಟರ್ ಎತ್ತರದಲ್ಲಿದೆ. …

Read More »

ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ‌ನಗದು ಭಸ್ಮ!

ಶಾರ್ಟ್ ಸರ್ಕ್ಯೂಟ್’ ನಿಂದ ಹೊತ್ತಿ ಉರಿದ ಮನೆಗಳು : ಮದುವೆಗೆಂದು ತಂದಿಟ್ಟಿದ್ದ 6 ಲಕ್ಷ ‌ನಗದು ಭಸ್ಮ!   ಬೆಳಗಾವಿ : ಶಾರ್ಟ್ ಸರ್ಕ್ಯೂಟ್ ನಿಂದ ಅಕ್ಕ ಪಕ್ಕದಲ್ಲಿ ಇದ್ದಂತಹ ಎರಡು ಮನೆಗಳು ಸುಟ್ಟು ಭಸ್ಮವಾಗಿದ್ದು ಮದುವೆಗೆ ಎಂದು ತಂದಿಟ್ಟದ 6 ಲಕ್ಷ ರೂಪಾಯಿ ನಗದು ಹಣ ಕೂಡ ಈ ವೇಳೆ ಸುಟ್ಟು ಬೂದಿಯಾಗಿರುವ ಘಟನೆ ಇಂದು ಬೆಳಗಾವಿಯ ಹೊಸೂರ ಹರಿಜನ ಗಲ್ಲಿಯಲ್ಲಿ ನಡೆದಿದೆ.   ಹೌದು ಬೆಳಗಾವಿಯ ಶಿವರಾಜ್ …

Read More »

ಎಷ್ಟೇ ದಿನವಾದ್ರೂ ಶವ ಎತ್ತಲ್ಲ’: ದರ್ಶನ್​ ಸಹಚರ ಅನು ತಂದೆ ನಿಧನಕ್ಕೆ ಕುಟುಂಬದವರ ಹೇಳಿಕೆ

ಎಷ್ಟೇ ದಿನವಾದ್ರೂ ಶವ ಎತ್ತಲ್ಲ’: ದರ್ಶನ್​ ಸಹಚರ ಅನು ತಂದೆ ನಿಧನಕ್ಕೆ ಕುಟುಂಬದವರ ಹೇಳಿಕೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಅನೇಕರು ಅರೆಸ್ಟ್​ ಆಗಿದ್ದಾರೆ. ಚಿತ್ರದುರ್ಗದ ಅನುಕುಮಾರ್​ ಅಲಿಯಾಸ್​ ಅನು ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.   ಇದರಿಂದ ಮನನೊಂದಿರುವ ಅನು ತಂದೆ ಚಂದ್ರಣ್ಣ ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಘಟನೆಯ ಕುರಿತಂತೆ ಅನು ಕುಟುಂಬದವರು ಪ್ರತಿಕ್ರಿಯೆ ನೀಡಿದ್ದಾರೆ. ‘ಮಗ ಅರೆಸ್ಟ್​ …

Read More »