ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯಕ್ಕೆ ಭಾರೀ ಒಳಹರಿವು ಬರುತ್ತಿದ್ದು 1804.80 ಅಡಿಗೆ ತಲುಪಿದೆ. ಜಲಾಶಯ ನೀರಿನ ಮಟ್ಟವು ಈಗಾಗಲೇ ಗೇಟ್ ಮಟ್ಟ ತಲುಪಿದ್ದು ಸಂಪ್ರದಾಯದಂತೆ ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಶುಕ್ರವಾರ ಗಂಗೆ ಪೂಜೆ ನೆರವೇರಿಸಿದರು. ನಂತರ ಕೆಲ ನಿಮಿಷಗಳ ಕಾಲ ಗೇಟ್ ಮೂಲಕ ನೀರು ಹೊರಬಿಡಲಾಯಿತು. ರಾಜ್ಯಕ್ಕೆ ಅತಿ ಕಡಿಮೆ ವೆಚ್ಚದಲ್ಲಿ ಜಲ ವಿದ್ಯುತ್ ಪೂರೈಸುವ ಏಕೈಕ ಜಲಾಶಯ ಇದಾಗಿದ್ದು ಶುಕ್ರವಾರ ಬೆಳಗ್ಗೆ 8 ಗಂಟೆ ಹೊತ್ತಿಗೆ 1804.40 ಅಡಿ ತಲುಪಿತ್ತು. …
Read More »ಮುಡಾ ಜಮೀನಿನಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ:C.M.
ಬೆಂಗಳೂರು, ಜುಲೈ 26: ಇಪ್ಪತ್ತು ವರ್ಷಗಳಿಂದ ಯಾವುದೇ ಆಕ್ಷೇಪ ಎತ್ತದ ವ್ಯಕ್ತಿಗಳನ್ನು ಎತ್ತಿ ಕಟ್ಟಿ ಹಕ್ಕುದಾರ ಎಂದು ಹೇಳಿ ರಾಜಕೀಯ ನಡೆಸುತ್ತಿರುವ ಬಿಜೆಪಿಯವರದು ಮನೆಮುರುಕ ರಾಜಕೀಯ. ಮುಡಾ ಜಮೀನು ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಜೆಡಿಎಸ್‌ಗಳೆರಡೂ ಸೇರಿಕೊಂಡು ನನ್ನ ಜೀವಮಾನದಲ್ಲೆ ಕಾಣದಷ್ಟು ಕೆಟ್ಟ ರಾಜಕಾರಣವನ್ನು ಮಾಡುತ್ತಿವೆ. ವಿಚಾರವೇ ಇಲ್ಲದೆ ವೈಯಕ್ತಿಕವಾಗಿ ತೇಜೋವಧೆ ಮಾಡುವ ಕೆಲಸವನ್ನು ಮಾಡುತ್ತಿವೆ. …
Read More »ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ
ಖಾನಾಪುರ: ಖಾನಾಪೂರದ ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ ನಡೆಸಲಾಗಿದೆ ಎಂದು ಶುಕ್ರವಾರ ಮಲಪ್ರಭಾ ಪ್ರವಾಹ ಪರಿಶೀಲನೆ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ತಾಲೂಕಿನ ಕಾಡಂಚಿನ 15 ಗ್ರಾಮಗಳನ್ನು ಪಟ್ಟಿ ಮಾಡಲಾಗಿದ್ದು, ಅವರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಇಲ್ಲವೇ ಅಲ್ಲಿನ ಜನರನ್ನು ಸ್ಥಳಾಂತರಿಸುವ ಕುರಿತು ಯೋಚಿಸಲಾಗುವುದು. ಹೊಸ ರಸ್ತೆ ನಿರ್ಮಿಸಲು ಅರಣ್ಯ ಇಲಾಖೆಯಿಂದ ಅನುಮತಿಯಿಲ್ಲ. ನೂರಾರು ವರ್ಷಗಳಿಂದ ಜನರು ಅಂತಹ ಪ್ರದೇಶದಲ್ಲಿ ವಾಸವಿದ್ದಾರೆ. ಈ …
Read More »KASʼ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್
ಬೆಂಗಳೂರು : ಕೆಎಎಸ್ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ ಮಾಡುವ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಈ ಕುರಿತು ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ಹಲವು ವರ್ಷಗಳಿಂದ ಖಾಲಿಯಿರುವ ಗೆಜೆಟೆಡ್ ಪ್ರೊಬೇಷನರಿ ಹುದ್ದೆ ಭರ್ತಿ ಆಗಿರಲಿಲ್ಲ. ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಂದ ನೇಮಕಾತಿ ವಿಳಂಬವಾಗಿತ್ತು. ಈಬಾರಿ 2023-24ನೇ …
Read More »ಘಟಪ್ರಭಾ ನದಿ ತೀರದ ಸಾರ್ವಜನಿಕರನ್ನು ಸುರಕ್ಷತಾ ದೃಷ್ಟಿಯಿಂದ ಸ್ಥಳಾಂತರಿಸಲು ಈಗಾಗಲೇ ಮೂಡಲಗಿ ಮತ್ತು ಗೋಕಾಕ ತಾಲ್ಲೂಕಾಡಳಿತಕ್ಕೆ ಸೂಚನೆ ನೀಡಲಾಗಿದೆ : ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಪಶ್ಚಿಮ ಘಟ್ಟ ಮತ್ತು ಹಿಡಕಲ್ ಡ್ಯಾಂ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಸುರಿಯುತ್ತಿರುವದರಿಂದ ಘಟಪ್ರಭಾ ನದಿ ತೀರದ ಸಾರ್ವಜನಿಕರನ್ನು ಸುರಕ್ಷತಾ ದೃಷ್ಟಿಯಿಂದ ಸ್ಥಳಾಂತರಿಸಲು ಈಗಾಗಲೇ ಮೂಡಲಗಿ ಮತ್ತು ಗೋಕಾಕ ತಾಲ್ಲೂಕಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಬಗ್ಗೆ ಶುಕ್ರವಾರದಂದು ಮಾಧ್ಯಮಗಳಿಗೆ ಹೇಳಿಕೆಯನ್ನು ನೀಡಿರುವ ಅವರು, ಸಂಭಾವ್ಯ ಪ್ರವಾಹವನ್ನು ಎದುರಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಹೆಚ್ಚುತ್ತಿರುವ ಧಾರಾಕಾರ …
Read More »ಪುಣೆಯಲ್ಲಿ ಭಾರಿ ಮಳೆ | ಅಗತ್ಯಬಿದ್ದರೆ ಜನರನ್ನು ಏರ್‌ಲಿಫ್ಟ್ ಮಾಡುತ್ತೇವೆ: ಶಿಂದೆ
ಪುಣೆ: ಅಗತ್ಯವೆನಿಸಿದರೆ ಪುಣೆಯಲ್ಲಿ ಮಳೆ ಸಂತ್ರಸ್ತರನ್ನು ವಾಯು ಮಾರ್ಗದ ಮೂಲಕ ಸ್ಥಳಾಂತರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಹೇಳಿದ್ದಾರೆ. ಪುಣೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನೂರಾರು ಮನೆಗಳಿಗೆ ನೀರು ನುಗ್ಗಿದೆ. ಮಳೆ ಸಂಬಂಧಿತ ಅವಘಡಗಳಿಂದಾಗಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ ಪುಣೆ ಜಿಲ್ಲಾಧಿಕಾರಿ, ಪಾಲಿಕೆ ಅಧಿಕಾರಿಗಳು ಹಾಗೂ ನೆರೆಯ ಪಿಂಪ್ರಿ ಚಿಂಚ್ವಾಡ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿರುವ ಶಿಂದೆ, ಸ್ಥಳಾಂತರ ಕಾರ್ಯಗಳಿಗೆ ನೆರವಾಗುವಂತೆ ಸೇನೆ ಹಾಗೂ ರಾಷ್ಟ್ರೀಯ …
Read More »ಮಹಾರಾಷ್ಟ್ರದ ಕೆಲವೆಡೆ ರೆಡ್ ಅಲರ್ಟ್ ಘೋಷಣೆ
ಮುಂಬೈ: ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇಂದು (ಗುರುವಾರ) ನಗರದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ. ಮುಂಬೈ ನಗರ, ಥಾಣೆ ಮತ್ತು ರಾಯಗಢ, ಪಾಲ್ಘರ್ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ( ಐಎಂಡಿ) ಗುರುವಾರ ರೆಡ್ ಅಲರ್ಟ್ ಘೋಷಿಸಿದೆ. ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಗೆ …
Read More »ಹದಗೆಟ್ಟ ಕೇಜ್ರಿವಾಲ್ ಆರೋಗ್ಯ
ನವದೆಹಲಿ: ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದ್ದು, ಇದನ್ನು ಪ್ರತಿಭಟಿಸಲು ‘ಇಂಡಿಯಾ’ ಮೈತ್ರಿಕೂಟವು ಜುಲೈ 30ರಂದು ಜಂತರ್ ಮಂತರ್‌ನಲ್ಲಿ ಬೃಹತ್ ರ‍್ಯಾಲಿ ಹಮ್ಮಿಕೊಂಡಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ತಿಳಿಸಿದೆ. ‘ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿ ಕೊಲ್ಲಲು ಬಿಜೆಪಿ ಸಂಚು ರೂಪಿಸುತ್ತಿದೆ. ಅಲ್ಲದೆ, ಕೇಜ್ರಿವಾಲ್ ಅವರ ಜೀವನದೊಂದಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಲೆಫ್ಟಿನಂಟ್ ಗವರ್ನರ್ ವಿ.ಕೆ. ಸಕ್ಸೇನಾ ಆಟವಾಡುತ್ತಿದ್ದಾರೆ’ ಎಂದು ಪಕ್ಷ …
Read More »17 ಪಿಎಸ್‌ಐಗಳ ವರ್ಗಾವಣೆ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 17 ಪೊಲೀಸ್ ಸಬ್ ಇನ್ಸಪೆಕ್ಟರ್‌ಗಳನ್ನು (ಪಿಎಸ್‌ಐ) ನಗರದ ವಿವಿಧ ಠಾಣೆಗಳಿಗೆ ಆಂತರಿಕ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ. ಇತ್ತೀಚೆಗೆ ಒಂದೇ ಠಾಣೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚು ಕಾಲ ಕರ್ತವ್ಯ ನಿರ್ವಹಿಸಿದ್ದ ಎಎಸ್‌ಐ, ಹೆಡ್ ಕಾನ್‌ಸ್ಟೆಬಲ್, ಕಾನ್‌ಸ್ಟೆಬಲ್‌ಗಳನ್ನು ಕೌನ್ಸ್‌ಲಿಂಗ್ ಮೂಲಕ ವಿವಿಧ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿತ್ತು.
Read More »ಐಶ್ವರ್ಯಗೆ ಚಿನ್ನ, ಸಿದ್ಧಾರ್ಥಗೆ ಬೆಳ್ಳಿ
ಹುಬ್ಬಳ್ಳಿ: ಬೆಂಗಳೂರಿನ ಸಾಯಿ ಶೂಟಿಂಗ್ ರೇಂಜ್‌ನಲ್ಲಿ ನಡೆದ 12ನೇ ಶೂಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಹುಬ್ಬಳ್ಳಿ ಶೂಟಿಂಗ್ ಅಕಾಡೆಮಿಯ ಐಶ್ವರ್ಯ ಬಾಲೆಹೊಸೂರು ಚಾಂಪಿಯನ್ ಆಗಿ ಹೊರಹೊಮ್ಮಿದರು. ಪಿಸ್ತೂಲ್ ಐಎಸ್‌ಎಸ್‌ಎಫ್‌ನ ಮಹಿಳೆಯರ ವಿಭಾಗದ ಫೈನಲ್ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಅವರು, ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಪುರುಷರ ವಿಭಾಗದಲ್ಲಿ (ಪಿಸ್ತೂಲ್) ಸಿದ್ಧಾರ್ಥ ದಿವಟೆ ಬೆಳ್ಳಿ ಪದಕ ಗೆದ್ದರು. ಪಿಸ್ತೂಲ್ ಮಾಸ್ಟರ್ ವಿಭಾಗದಲ್ಲಿ ಜಯಶ್ರೀ ಪಾಟೀಲ ಬೆಳ್ಳಿ, ಇದೇ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಪ್ರಶಾಂತ್ ಪಾವಸ್ಕರ್ …
Read More »
Laxmi News 24×7