Breaking News

Laxminews 24x7

ವಿಧಾನ ಪರಿಷತ್‌ ಉಪ ಚುನಾವಣೆ. ಮತ ಎಣಿಕೆ ಪ್ರಕ್ರಿಯೆ ಆರಂಭ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್‌ ಉಪ ಚುನಾವಣೆಯ ಮತ ಎಣಿಕೆ ಗುರುವಾರ (ಅ.24)ರಂದು ಮಂಗಳೂರಿನ ಸಂತ ಅಲೋಶಿಯಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದೆ. ಅ.21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು.   ಈಗಾಗಲೇ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ ನಡೆಯಲಿದೆ, ಎರಡನೇ …

Read More »

ಇಂದು ಮಧ್ಯಾಹ್ನ 12 ಗಂಟೆಗೆ ಹಾಸನಾಂಬೆ ದೇಗುಲದ ಬಾಗಿಲು ಓಪನ್

ಹಾಸನ : ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ಮ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಿದೆ. ಅಲ್ಲದೆ ಮುಂದಿನ 9 ದಿನಗಳ ಕಾಲ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಗಳು ಮತ್ತು ದೇವಸ್ಥಾನದ ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ದಶಕಗಳಿಂದ ನಡೆದುಕೊಂಡು ಬಂದ ಸಂಪ್ರದಾಯದಂತೆ ಮುಖ್ಯ ಅರ್ಚಕರು ಬಾಗಿಲಿಗೆ ಪೂಜೆ ಸಲ್ಲಿಸಿದ ನಂತರ ಬಾಗಿಲು ತೆರೆಯುತ್ತಾರೆ.ಏತನ್ಮಧ್ಯೆ, ಒಂಬತ್ತು ದಿನಗಳ ಹಾಸನಾಂಬೆ ಉತ್ಸವಕ್ಕೆ ಜಿಲ್ಲಾಡಳಿತವು ಸೂಕ್ತ ವ್ಯವಸ್ಥೆ ಮಾಡಿದೆ.   …

Read More »

ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

ಬೆಳಗಾವಿ: ಉದ್ಯಮಿ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆ ಆಗಿದೆ. ಎಲ್ಲ ಆರೋಪಿಗಳಿಗೂ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಮಂಜುನಾಥ ತೇರ್ಕಲ್ ಎಂಬ ಆರೋಪಿಯನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಲಾಗಿದೆ. ಎಲ್ಲ ಆರೋಪಿಗಳನ್ನು ಮಂಗಳವಾರ ನಗರದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಎಲ್ಲರಿಗೂ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿ ನ್ಯಾಯಾಧೀಶರಾದ ಪಂಕಜಾ ಕೊಣ್ಣೂರ …

Read More »

ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

ಬೆಳಗಾವಿ: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶೈಕ್ಷಣಿಕ ವಲಯದ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಅ.23 ರಿಂದ 25 ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಶಾಲೆಗಳಿಗೆ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.   ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

Read More »

ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಸಿ.ಪಿ.ಯೋಗೇಶ್ವರ ಕಾಂಗ್ರೆಸ್ ಸೇರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಏನೆಲ್ಲಾ ಬೆಳವಣಿಗೆಗಳು ಆಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ. ಉಪ ಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಗೆಲ್ಲುವ ಅವಕಾಶಗಳಿವೆ ಎಂದರು. ಶಿಗ್ಗಾವಿಯಲ್ಲಿ ಅಲ್ಪಸಂಖ್ಯಾತ ಮತಗಳು ಹೆಚ್ಚಿನ ಪ್ರಮಾಣದಲ್ಲಿವೆ. ಈ ಹಿನ್ನೆಲೆಯಲ್ಲಿ ಟಿಕೆಟ್ ನೀಡುವ ವಿಷಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಬೇಡಿಕೆಯನ್ನು …

Read More »

ದುರಂತದಲ್ಲಿ ಸಾವು; ಮೃತದೇಹ ಸಿಗದಿದ್ದರೂ ಕುಟುಂಬಕ್ಕೆ ಪರಿಹಾರ: ಡಿಸಿ

ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಿರೂರು ಬಳಿ ನಡೆದ ದುರ್ಘ‌ಟನೆಯಲ್ಲಿ ಕಾಣೆಯಾಗಿರುವ ಶಿರೂರಿನ ಜಗನ್ನಾಥ ನಾಯ್ಕ, ಗಂಗೇಕೊಳ್ಳದ ಲೋಕೇಶ್‌ ನಾಯ್ಕ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸರಕಾರ ಸಮ್ಮತಿಸಿದೆ. ಶವ ಸಿಗದ್ದಿದ್ದರೂ ಪರಿಹಾರ ನೀಡಲು ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲು ಜಿಲ್ಲಾಡಳಿತದಿಂದ ಮುಖ್ಯ ಕಾರ್ಯ ದರ್ಶಿಗೆ ಪತ್ರ ಬರೆಯಲಾಗಿತ್ತು. ಕಾಣೆಯಾದ ಇಬ್ಬರು ದುರಂತ ನಡೆದ ಸ್ಥಳದಲ್ಲೇ ಇದ್ದರು. ಅವರು ಕಾಣೆಯಾಗಿರುವುದು ಖಚಿತ ಎಂದು ಪೊಲೀಸ್‌ …

Read More »

ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

ಬೆಂಗಳೂರು: ಜಾತಿ ಗಣತಿ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ವರದಿಯನ್ನು ಮುಂದಿನ ಸಚಿವ ಸಂಪುಟದಲ್ಲಿ ಕೈಗೆತ್ತಿಕೊಳ್ಳಲು ಸರಕಾರ ಉದ್ದೇಶಿಸಿರುವ ಬೆನ್ನಲ್ಲೇ ರಾಜ್ಯದ ಪ್ರಬಲ ಸಮುದಾಯ ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾ, ವರದಿಯೇ ಅವೈಜ್ಞಾನಿಕ ಮತ್ತು ಅಸಂವಿಧಾನಿಕವಾಗಿದ್ದು, ಹೊಸದಾಗಿ ಸಮೀಕ್ಷೆ ನಡೆಸುವಂತೆ ಸರಕಾರವನ್ನು ಒತ್ತಾಯಿಸಲು ನಿರ್ಣಯ ಕೈಗೊಂಡಿದೆ. ಅಷ್ಟೇ ಅಲ್ಲ, ಇದಕ್ಕೆ ಪರ್ಯಾಯವಾಗಿ ಶೀಘ್ರ ತನ್ನ ಸಮುದಾಯದ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಈ ಮಹತ್ವದ …

Read More »

ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ಹೋರಾಟ ರೈತ ಮಕ್ಕಳಿಗೆ ಮೀಸಲು ನ್ಯಾಯ ಒದಗಿಸುವ ಹೋರಾಟವಾಗಿದೆ. ಸಾಮಾಜಿಕ ನ್ಯಾಯ, ಮೀಸಲು ಬಗ್ಗೆ ಸಕಾರಾತ್ಮಕ ಚಿಂತನೆ ಹೊಂದಿದ ಮುಖ್ಯಮಂತ್ರಿಯವರು ಮೀಸಲು ಬೇಡಿಕೆಗೆ ಕಾಲಮಿತಿ ಕ್ರಮದ ಭರವಸೆ ನೀಡದಿರುವುದು ಬೇಸರ-ನೋವು ತರಿಸಿದೆ. ಸಮಾಜದ ಕೆಲವರು ಮೀಸಲು ಹೋರಾಟವನ್ನು ಟ್ರಂಪ್‌ಕಾರ್ಡ್‌ ಆಗಿಸಿಕೊಂಡು ಅಧಿಕಾರಕ್ಕೇರಿ, ಹೋರಾಟವನ್ನೇ ಮರೆತಿದ್ದಾರೆ, ಮೌನ ತಾಳಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಸರಕಾರ 2ಡಿ ಮೀಸಲು ನೀಡಲು ಮುಂದಾದರೂ, 2ಎ ಮೀಸಲು ಹೋರಾಟ ಜೀವಂತವಾಗಿರಿಸಿ 2ಡಿ …

Read More »

ಮಾತೃ ಪಕ್ಷಕ್ಕೆ ಮರಳಿ ಮತ್ತೊಂದು ಹೋರಾಟಕ್ಕೆ ಸಿದ್ದವಾದ ಸೈನಿಕ!

ರಾಜ್ಯದಲ್ಲಿ ಮೂರು ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದರೂ ಭಾರೀ ನಿರೀಕ್ಷೆ ಮೂಡಿಸಿರುವ ಕ್ಷೇತ್ರ ಮಾತ್ರ ಚನ್ನಪಟ್ಟಣ. ಈ ಕ್ಷೇತ್ರ ಬಿಜೆಪಿ-ಜೆಡಿಎಸ್ ಮೈತ್ರಿಯ ಉಳಿವಿನ ಅಸ್ತಿತ್ವದ ಪ್ರಶ್ನೆ ಹುಟ್ಟುಹಾಕಿದ ಕಾರಣದಿಂದಾಗಿಯೇ ಪಕ್ಷಾಂತರ ಪರ್ವ ನಡಯಲೇ ಬೇಕಾದ ಅನಿವಾರ್ಯ ಎದುರಾಯಿತು. ಸದ್ಯ ನೇರ ಹಣಾಹಣಿ ಕ್ಷೇತ್ರದಲ್ಲಿ ಕಂಡು ಬಂದಿದ್ದು ಕಾಂಗ್ರೆಸ್ ಕಾರ್ಯಕರ್ತರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಹುರಿದುಂಬಿಸಿ ಸೈನಿಕನ ಮೂಲಕ ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ. …

Read More »

200ನೇ ಕಿತ್ತೂರು ವಿಜಯೋತ್ಸವ: ಸಂಸತ್ ಆವರಣದಲ್ಲಿ ಚನ್ನಮ್ಮಳ ಪ್ರತಿಮೆಗೆ ಪುಷ್ಪನಮನ

ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್‌ ಆವರಣದಲ್ಲಿರುವ ರಾಣಿ ಚನ್ನಮ್ಮ ಪ್ರತಿಮೆಗೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಮತ್ತಿತರರು ಬುಧವಾರ ಪುಷ್ಪನಮನ ಸಲ್ಲಿಸಿದರು. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸವನಗೌಡ ಪಾಟೀಲ ಯತ್ನಾಳ ಇದ್ದರು.

Read More »