Breaking News

Laxminews 24x7

ಹಾವೇರಿಯಲ್ಲಿ ಮಳೆರಾಯನ ಅವಕೃಪೆ – 11 ಎಕರೆಯಲ್ಲಿ ಬಿತ್ತನೆ ಮಾಡಿದ್ದ ಮೆಕ್ಕೆಜೋಳ ನಾಶಪಡಿಸಿದ ರೈತ

ಹಾವೇರಿ: ಮುಂಗಾರು ಮಳೆ ಸಮರ್ಪಕವಾಗಿ ಆಗದೇ ಇರುವುದರಿಂದ ಬಿತ್ತನೆ ಮಾಡಿದ ಮೆಕ್ಕೆಜೋಳದ  ಬೀಜ ಮೊಳಕೆ ಒಡೆಯದೆ ಹಾಳಾಗಿದ್ದಕ್ಕೆ ಬೇಸತ್ತು ರೈತನೋರ್ವ 11 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ ಬೆಳೆಯನ್ನು ನಾಶಪಡಿಸಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಶಿಡೇನೂರ ಗ್ರಾಮದ ರೈತ ಕಿರಣ ಗಡಿಗೋಳ, ತನ್ನ ಸ್ವಂತ ಜಮೀನಿನ ಜೊತೆಗೆ ಬೇರೆ ರೈತರಿಂದ ಎಕರೆಗೆ ಹತ್ತು ಸಾವಿರ ರೂಪಾಯಿಯಂತೆ ಹನ್ನೊಂದು ಎಕರೆ ಜಮೀನನ್ನು ಲಾವಣಿ ಹಾಕಿಕೊಂಡು ಮೆಕ್ಕೆಜೋಳ ಬಿತ್ತನೆ ಮಾಡಿದ್ದರು. ಮೆಕ್ಕೆಜೋಳ …

Read More »

ಸಮಾವೇಶದಿಂದ ನೀಟ್‌ ಪರೀಕ್ಷೆಯ ವಿದ್ಯಾರ್ಥಿಗಳಿಗೆ ತೊಂದರೆ| ವಿಷಾದ ವ್ಯಕ್ತಪಡಿಸಿ ಬಿಜೆಪಿ ವಿರುದ್ಧ ಬಿಕೆಹೆಚ್‌ ವಾಗ್ದಾಳಿ

ಬೆಂಗಳೂರು: ನಮ್ಮ ಕಾರ್ಯಕ್ರಮದಿಂದಾಗಿ ನೀಟ್ ಪರೀಕ್ಷೆಯ  ವಿದ್ಯಾರ್ಥಿಗಳಿಗೆ ಏನಾದರೂ ತೊಂದರೆಯಾಗಿದ್ದರೆ ನಾನು ವೈಯಕ್ತಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌  ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣದ ಸಮಾವೇಶದಿಂದಾಗಿ ನೀಟ್ ಪರೀಕ್ಷೆಯ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಆರೋಪಿಸುತ್ತಿರುವ ಬಿಜೆಪಿಹಾಗೂ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಕಠಿಣ ಪದಗಳಲ್ಲಿ ವಾಗ್ದಾಳಿ ನಡೆಸಿದರು. ಬಿಜೆಪಿಯವರು ಸರಣಿ ತಪ್ಪು ಮಾಹಿತಿ ನೀಡುವ ಸುಳ್ಳಿನ ಫ್ಯಾಕ್ಟರಿ ಇಟ್ಟುಕೊಂಡಿದ್ದಾರೆ. …

Read More »

ಯತ್ನಾಳ್‌ಗೆ ಹೈಕೋರ್ಟ್‌ನಿಂದ ದೊಡ್ಡ ಸಮಾಧಾನ: ನಾಲ್ಕು ಕ್ರಿಮಿನಲ್ ಪ್ರಕರಣ ರದ್ದು

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕೋರ್ಟ್‌ನಿಂದ ದೊಡ್ಡ ಸಮಾಧಾನ ದೊರೆತಿದೆ. ಸಚಿವ ದಿನೇಶ್ ಗುಂಡೂರಾವ್ ಅವರ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆ ಹಾಗೂ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ಹೈಕೋರ್ಟ್ ಶುಕ್ರವಾರ ರದ್ದುಪಡಿಸಿ ಆದೇಶ ಹೊರಡಿಸಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಹಾಗೂ ಕೆಳ ನ್ಯಾಯಾಲಯಗಳಲ್ಲಿ ನಡೆಯುತ್ತಿದ್ದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸುವಂತೆ ಕೋರಿ ಯತ್ನಾಳ್‌ ಸಲ್ಲಿಸಿದ್ದ ಅರ್ಜಿಗಳನ್ನುನ್ಯಾಯಮೂರ್ತಿ …

Read More »

ಚಿಕ್ಕೋಡಿಯ ಸ್ವಾತಿ ಜೋಶಿಗೆ ಪಿಎಚ್‌ಡಿ

ಚಿಕ್ಕೋಡಿ: ಪಟ್ಟಣದ ನಿವಾಸಿ ಸ್ವಾತಿ ಎಸ್ ಜೋಶಿಯವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಸ್ನಾತಕೋತ್ತರ ಗಣಿತಶಾಸ್ತ್ರ ಅಧ್ಯಯನ ವಿಭಾಗದಿಂದ ಪಿಎಚ್‌ ಡಿ ಪದವಿ ದೊರೆತಿದೆ. ವೆಬ್ಲೆಟ್ ಥಿಯರಿ ಆಂಡ್ ಇಟ್ಸ್ ಅಪ್ಲಿಕೇಶನ್ಸ್ ಟು ಸಾಲ್ಟ್ ಸಮ್ ಬೌಂಡರಿ ಲೇಯರ್ ಫ್ಲೋಯಿಡ್ ಪ್ರೋ ಇಶ್ವೇಶನ್ಸ್ ಎಂಬ ಮಹಾಪ್ರಬಂಧಕ್ಕೆ ಪಿಎಚ್ಚಿ ಲಭಿಸಿದೆ. ಕರ್ನಾಟಕ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೋ ಎಸ್ ಸಿ ಶಿರಾಳಶೆಟ್ಟಿ ಮಾರ್ಗದರ್ಶನ ಮಾಡಿದ್ದರು.

Read More »

ಚಿಕ್ಕೋಡಿಯ ಸಿಟಿಇ ಸಂಸ್ಥೆಯ ಡಿ.ಕೆ.ಶಹಾ ಪ್ರಾಥಮಿಕ ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಯಂತ್ರ ಕೊಡುಗೆ; ಗಣ್ಯರಿಂದ ಸತ್ಕಾರ

ಚಿಕ್ಕೋಡಿ:ಪಟ್ಟಣದ ಪ್ರಥಮ ದರ್ಜೆಯ ಗುತ್ತಿಗೆದಾರರು, ಸಮಾಜ ಹಿತಚಿಂತಕರು ಹಾಗೂ ಪ್ರತಿಷ್ಠಿತ ಸಿ.ಟಿ.ಇ. ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ವಿಜಯ ಎಸ್. ಮಾಂಜರೇಕರ ಅವರ ೭೮ನೇ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಗಸಿ.ಟಿ.ಇ. ಸಂಸ್ಥೆಯ ಅಂಗಸಂಸ್ಥೆಯಾದ ಶ್ರೀಮತಿ ಡಿ.ಕೆ. ಶಹಾ ಕನ್ನಡ ಮತ್ತು ಮರಾಠಿ ಪ್ರಾಥಮಿಕ ಶಾಲೆಯ ಮಕ್ಕಳಿಗಾಗಿ ದಾನವಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಮೊದಲು ಸಿ.ಟಿ.ಇ. ಸಂಸ್ಥೆಯ ಅಧ್ಯಕ್ಷರಾದ ಸಿ.ಬಿ. ಕುಲಕರ್ಣಿ, ನಿರ್ದೇಶಕರು ಮತ್ತು ಕಾರ್ಯದರ್ಶಿಗಳಾದ ಅರುಣ …

Read More »

ಜೂನ್ 20-21ಕ್ಕೆ ಮತ್ತೆ 6 ಜಿಲ್ಲೆಗಳಿಗೆ ಮುಂಗಾರು ಚುರುಕು – ಯೆಲ್ಲೋ ಅಲರ್ಟ್

ಜೂನ್ 20 ಹಾಗೂ 21 ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿಗೆ ಭಾರಿ ಮಳೆ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿ ಕಂಡುಬಂದಿದೆ. ಜೂನ್ 20 ಮತ್ತು 21 ರಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಸಾರ್ವಜನಿಕರು …

Read More »

ಗ್ಯಾರಂಟಿ ಪರಿಷ್ಕರಣೆ ಅನಿವಾರ್ಯ, ಆದರೆ ನಿಲ್ಲಿಸಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಅಥವಾ ಪುನರ್ ಪರಿಶೀಲನೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಸಮುದಾಯಅಭಿವೃದ್ಧಿ “ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣವಾಗಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಆದರೆ, ರಾಜ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಹಣದ ಕೊರತೆಯಾಗದಂತೆ ನೋಡಿಕೊಳ್ಳಲು ಯೋಜನೆಗಳಲ್ಲಿ ಕೆಲವು ಅಗತ್ಯ ಬದಲಾವಣೆ ಅಥವಾ ಪರಿಷ್ಕರಣೆ ಮಾಡುವುದು ಅನಿವಾರ್ಯ,” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …

Read More »

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಡೆದಿರುವ ಅಡ್ಡ ಮತದಾನದ  ವಿವಾದ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆಹಚ್ಚಲು ಪಕ್ಷದ ಎಲ್ಲಾ 63 ಶಾಸಕರಿಂದಲೂ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥ ಸ್ವಾಮಿಯ ಮುಂದೆ ಆಣೆ-ಪ್ರಮಾಣ ಮಾಡಿಸಲು ಕಮಲ ಪಾಳಯ ನಿರ್ಧರಿಸಿದೆ. ಈ ಹೈಡ್ರಾಮಾಕ್ಕೆ ವೇದಿಕೆಯಾಗಲಿರುವುದು ಇದೇ ವಾರ ಧರ್ಮಸ್ಥಳದಲ್ಲಿ ಆಯೋಜನೆಯಾಗಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಮಹತ್ವದ ಸಭೆ. ಇದೇ ಗುರುವಾರ ಅಥವಾ ಶುಕ್ರವಾರದಂದು …

Read More »

ಬೈಕ್ ಪಾರ್ಕಿಂಗ್ ವಿಚಾರಕ್ಕೆ ಜಗಳ – ಚಾಕು ಇರಿದು ಮಹಿಳೆ ಹತ್ಯೆ, ಪತಿಗೆ ಗಂಭೀರ ಗಾಯ

ನವದೆಹಲಿ: ಬೈಕ್ ಪಾರ್ಕಿಂಗ್  ವಿಚಾರಕ್ಕೆ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ  ನಡೆದಿದೆ. ನೆರೆಹೊರೆಯವರೊಂದಿಗೆ ಉಂಟಾದ ವಾಗ್ವಾದದ ವೇಳೆ ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆರ್ತಿ (32) ಮೃತ ಮಹಿಳೆ. ಆರ್ತಿ ಪತಿ ವಿಕ್ಕಿ ಕೂಡ ಗಂಭೀರ ಗಾಯಗೊಂಡಿದ್ದು, ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ಮಧ್ಯಾಹ್ನ ಸುಮಾರು 2:50ರ ವೇಳೆಗೆ ಬಿಂದಾಪುರ ಪೊಲೀಸ್ …

Read More »

ಬೆಳಗಾವಿಯ ಮರೆತುಹೋದ ಇತಿಹಾಸ ಅನಾವರಣಗೊಳಿಸಿದ ಪ್ಯಾಸ್ ಫೌಂಡೇಶನ್

ಬೆಳಗಾವಿ : ಪರಂಪರೆ ಸಂರಕ್ಷಣೆ ಮತ್ತು ಸಮಾಜಸೇವೆಯ ಅಪೂರ್ವ ಸಮನ್ವಯದ ಉದಾಹರಣೆಯಾಗಿ ಪ್ಯಾಸ್ ಫೌಂಡೇಶನ್  ಮುತಗಾ ಗ್ರಾಮದ ಕಂಚವೀರ ನಗರದಲ್ಲಿರುವ ಸುಮಾರು 300 ವರ್ಷಗಳಷ್ಟು ಹಳೆಯ ಐತಿಹಾಸಿಕ ಬಾವಿಯನ್ನು ಪುನರುಜ್ಜೀವನಗೊಳಿಸಿದ್ದು, ಬೆಳಗಾವಿಯ ಮರೆತುಹೋದ ಇತಿಹಾಸದ ಒಂದು ಮಹತ್ವದ ಅಧ್ಯಾಯವನ್ನು ಮತ್ತೆ ಬೆಳಕಿಗೆ ತಂದಿದೆ. ಡಾ. ನಿತಿನ್ ಖೋತ್ ಅವರ ಉದಾರ ಅನುದಾನದ ನೆರವಿನಿಂದ ಈ ಮಹತ್ವದ ಕಾರ್ಯ ಸಾಧ್ಯವಾಗಿದೆ. ಕಳೆದ ಸುಮಾರು ಮೂರು ದಶಕಗಳಿಂದ ಈ ಬಾವಿ ಹೂಳು, ಕೊಳಚೆ …

Read More »