Breaking News

Laxminews 24x7

ವಿಪಕ್ಷ ನಾಯಕರಿಗೆ ಈ ಸರ್ಕಾರ ಇನ್ನೂ ಸರ್ಕಾರಿ ನಿವಾಸ ಕೊಟ್ಟಿಲ್ಲ,

ಬೆಂಗಳೂರು: ಭೂ ಒತ್ತುವರಿ ಮಾಡುವವರಿಗೆ ಮನೆ ನಿರ್ಮಿಸಿಕೊಡುವ ಮೂಲಕ ಕಾಂಗ್ರೆಸ್ ಸರ್ಕಾರ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಈ ಮೂಲಕ ಭೂ ಮಾಫಿಯಾಗೆ ಪ್ರೋತ್ಸಾಹ ನೀಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋಗಿಲು ಕ್ರಾಸ್‌ನಲ್ಲಿರುವ ಸರ್ಕಾರಿ ಜಮೀನಿನಲ್ಲಾದ ಒತ್ತುವರಿ ತೆರವು ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಮಾತನಾಡಿದ್ದಾರೆ. ಇಲ್ಲಿ ಘನತ್ಯಾಜ್ಯ ನಿರ್ವಹಣೆ ಘಟಕ ಯೋಜನೆಗೆ 100 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಬಾಂಗ್ಲಾದೇಶದಿಂದ …

Read More »

ವಿಬಿ-ಜಿ ರಾಮ್ ಜಿ ಕಾಯ್ದೆಯ ಅನುಷ್ಠಾನವನ್ನು ತಡೆಹಿಡಿಯುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು: ವಿಬಿ-ಜಿ ರಾಮ್ ಜಿ ಕಾಯ್ದೆಯ ಅನುಷ್ಠಾನವನ್ನು ತಡೆಹಿಡಿಯಲು, ಜೀವನೋಪಾಯದ ಹಕ್ಕನ್ನು ಬಲಪಡಿಸಲು ಮತ್ತು ಸಂವಿಧಾನಬದ್ಧವಾಗಿ ರಾಜ್ಯ ಸರ್ಕಾರಗಳೊಂದಿಗಿನ ಸಮಾಲೋಚನೆಗಳನ್ನು ನಡೆಸುವ ನಿಟ್ಟಿನಲ್ಲಿ ತಾವು ವೈಯಕ್ತಿಕವಾಗಿ ಮುಂದಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ಕೋರಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಆ್ಯಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ …

Read More »

ಶಾಸಕ ವೀರೇಂದ್ರ ಪಪ್ಪಿಗೆ 4 ತಿಂಗಳ ಬಳಿಕ ಜಾಮೀನು ಮಂಜೂರು

ಬೆಂಗಳೂರು: ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣದಲ್ಲಿ ನಾಲ್ಕು ತಿಂಗಳ ಹಿಂದೆ ಬಂಧಿತರಾಗಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ) ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ನಾಲ್ಕು ತಿಂಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ವೀರೇಂದ್ರ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಕಾನೂನು ಬಾಹಿರವಾಗಿ ಕ್ಯಾಸಿನೋದಲ್ಲಿ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅಕ್ರಮವಾಗಿ ಬೆಟ್ಟಿಂಗ್ ನಡೆಸುತ್ತಿರುವ ಆರೋಪದಡಿ ಕಳೆದ ಆಗಸ್ಟ್ 23ರಂದು …

Read More »

ಸಿಮೆಂಟ್ ತುಂಬಿದ ಲಾರಿ ಪಲ್ಟಿ ಓರ್ವ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು, ಇಬ್ಬರ ವಿದ್ಯಾರ್ಥಿಗಳ ಸ್ಥಿತಿ ಗಂಭೀರ.

ಸಿಮೆಂಟ್ ತುಂಬಿದ ಲಾರಿ ಪಲ್ಟಿ ಓರ್ವ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು, ಇಬ್ಬರ ವಿದ್ಯಾರ್ಥಿಗಳ ಸ್ಥಿತಿ ಗಂಭೀರ. ಕುಡಚಿ – ಜಮಖಂಡಿ ರಸ್ತೆ ಮಧ್ಯದಲ್ಲಿ ಘಟನೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾಲ ಶಿರಗೂರ ಗ್ರಾಮದ ಬಳಿ ಘಟನೆ. ಕುಡಚಿ ಕಡೆಯಿಂದ ಹಾರೂಗೇರೆ ಕಡೆಗೆ ಹೊರಟ್ಟಿರುವ ಲಾರಿ ಪಲ್ಟಿ. ಸಿಮೆಂಟ್ ತುಂಬಿದ ಲಾರಿ ಕ್ರಾಸ್ ಬಳಿ ಆಯತಪ್ಪಿ ಪಲ್ಟಿ. ಬಿ ಬಿ ಬಾವಿ ಸರ್ಕಾರಿ ಫ್ರೌಢ ಶಾಲೆ ಹಾಲ ಶಿರಗೂರ ಶಾಲೆಗೆ …

Read More »

ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಏತ ನೀರಾವರಿ ಯೋಜನೆಯ ಕಾಮಗಾರಿ ಪ್ರಾಯೋಗಿಕವಾಗಿ ಚಾಲನೆ

ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಕೈಗೊಳ್ಳಲಾದ, ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಏತ ನೀರಾವರಿ ಯೋಜನೆಯ ಕಾಮಗಾರಿ ಪ್ರಾಯೋಗಿಕವಾಗಿ ಚಾಲನೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಹುಬ್ಬರವಾಡಿ, ಬೂದಿಹಾಳ, ಮೇಖಳಿ ಹಾಗೂ ಮಾಡಲಗಿ ಗ್ರಾಮಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಕೆರೆಗಳ ಪರಿಶೀಲನೆ ನಡೆಸಿದರು. ಬೇಸಿಗೆಯಲ್ಲಿ ತೀವ್ರ ನೀರಿನ ಅಭಾವವನ್ನು ಎದುರಿಸುತ್ತಿದ್ದ ರಾಯಬಾಗ ತಾಲೂಕಿನ 19 …

Read More »

ಚಿಕ್ಕೋಡಿ ಜಿಲ್ಲೆ ಮಾಡಿದಲ್ಲಿ,ಅಂಬೇಡ್ಕರ್ ಎಂದು ಹೆಸರಿಡಿ

ಚಿಕ್ಕೋಡಿ ಜಿಲ್ಲೆ ಮಾಡಿದಲ್ಲಿ,ಅಂಬೇಡ್ಕರ್ ಎಂದು ಹೆಸರಿಡಿ ಚಿಕ್ಕೋಡಿ : ಬೆಳಗಾವಿ ಜಿಲ್ಲೆ ವಿಭಜಿಸಿ ನೂತನ ಜಿಲ್ಲೆಯನ್ನಾಗಿ ಮಾಡಿದಲ್ಲಿ ಚಿಕ್ಕೋಡಿಗೆ ಬಾಬಾಸಾಹೇಬ ಡಾ.ಬಿ.ಆರ್. ಅಂಬೇಡ್ಕರ ಜಿಲ್ಲೆಯನ್ನಾಗಿ ನಾಮಕರಣ ಮಾಡುವಂತೆ ಒತ್ತಾಯಿಸಿ ಡಾ.ಅಂಬೇಡ್ಕರ ಜನ ಜಾಗೃತಿ ಸೇವಾ ಸಂಘದ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಚಿಕ್ಕೋಡಿ ನೆಲದಲ್ಲಿ ಡಾ.ಅಂಬೇಡ್ಕರ ಅವರು ನಡೆದಾಡಿರುವ ಇತಿಹಾಸವಿದೆ. ಅವರ ಹೆಸರು ನಾಮಕರಣ ಮಾಡಿದಲ್ಲಿ ಕಾಂಗ್ರೆಸ್ ಸರಕಾರ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದರು. ಚಿಕ್ಕೋಡಿ ಜಿಲ್ಲೆಗಾಗಿ ದಲಿತಪರ …

Read More »

ಬ್ಯಾನ್ ಆಗಿದ್ದ ಕನ್ನೇರಿ ಶ್ರೀಗಳ ಅದ್ದೂರಿ ಕಮ್‌ಬ್ಯಾಕ್,; ಬಬಲೇಶ್ವರ ಕ್ಷೇತ್ರದಲ್ಲಿ ಹೂಮಳೆ ಮೂಲಕ ಶ್ರೀಗಳಿಗೆ ಸ್ಪೆಶಲ್ ಸ್ವಾಗತ

ವಿಜಯಪುರ… : ಲಿಂಗಾಯತ ಸ್ವಾಮೀಜಿಗಳಿಗೆ ಅವಾಚ್ಯ ಶಬ್ಧಗಳಲ್ಲಿ ನಿಂದಿಸಿದರು ಎನ್ನುವ ಕಾರಣಕ್ಕೆ ಕನ್ನೇರಿ ಶ್ರೀಗಳಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಈಗ ನಿರ್ಬಂಧ ತೆರವಾಗಿದ್ದು, ಭಕ್ತರು ಕನ್ನೇರಿ ಶ್ರೀಗಳನ್ನ ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ವಿಶೇಷ ಎಂದರೆ ಸಚಿವ ಎಂ ಬಿ ಪಾಟೀಲ್ ಕ್ಷೇತ್ರದ ಮೂಲಕವೇ ಕನ್ನೇರಿ ಶ್ರೀ ಎಂಟ್ರಿ ಹೊಡೆದಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ… . : ಕೆಲ ತಿಂಗಳ ಹಿಂದೆ ಬಸವ ಸಂಸ್ಕೃತಿ ಅಭಿಯಾನದ ಬಗ್ಗೆ …

Read More »

ಸತೀಶ ಜಾರಕಿಹೊಳಿ ಅವರನ್ನು ಪ್ರೆಸ್‌ಕ್ಲಬ್ ಆಫ್ ಬೆಂಗಳೂರಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನಾಡಿನ ಪ್ರತಿಷ್ಠಿತ ಕ್ಲಬ್‌ಗಳಲ್ಲಿ ಒಂದಾದ ಪತ್ರಕರ್ತರ ಪ್ರಾತಿನಿಧಿಕ ಸಂಸ್ಥೆ ಪ್ರೆಸ್‌ಕ್ಲಬ್ ಆಫ್ ಬೆಂಗಳೂರು ಪ್ರತಿವರ್ಷ ಕೊಡಮಾಡುವ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಪ್ರೆಸ್‌ಕ್ಲಬ್ ಸದಸ್ಯರು ಬಹುಮತದ ಆಯ್ಕೆಯಂತೆ ವೈಚಾರಿಕ ಚಿಂತನೆಯ ವ್ಯಕ್ತಿತ್ವ ಹೊಂದಿರುವ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಅವರನ್ನು ಪ್ರೆಸ್‌ಕ್ಲಬ್ ಆಫ್ ಬೆಂಗಳೂರಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಹಿಂದೆ ದೇಶದ ಪ್ರತಿಷ್ಠಿತ ವ್ಯಕ್ತಿಗಳಾದ ಭಾರತದ ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡ, ಭಾರತರತ್ನ ಪ್ರಶಸ್ತಿ …

Read More »

ಸಿದ್ದರಾಮಯ್ಯನವರೇ ಬಜೆಟ್ ಮಂಡಿಸುತ್ತಾರೆ ಎಂಬ ಭರವಸೆ ಇದೆ: ಸತೀಶ್ ಜಾರಕಿಹೊಳಿ

ಯಾದಗಿರಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಮಾಹಿತಿ ಇಲ್ಲ. ಸಂಕ್ರಾಂತಿ ಹಬ್ಬ ಮುಗಿದ ನಂತರ ಇದರ ಬಗ್ಗೆ ಮಾತನಾಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಅವರೇ ಈ ಬಾರಿ ಬಜೆಟ್ ಮಂಡಿಸಲಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಹೀಗಿದ್ದಾಗ ಅವರೇ ಬಜೆಟ್ ಮಂಡಿಸುತ್ತಾರೆ ಎಂಬ ಭರವಸೆ ಇದೆ ಎಂದರು. …

Read More »

ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಹೆಚ್‌.ಡಿ.ರೇವಣ್ಣಗೆ ಬಿಗ್ ರಿಲೀಫ್ ‌

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ, ಹಾಲಿ ಶಾಸಕ ಹೆಚ್‌.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗಿ ರಿಲೀಫ್ ನೀಡಿದೆ. ಪ್ರಕರಣ ಕುರಿತು ಸೋಮವಾರ ವಿಚಾರಣೆ ನಡೆಸಿದ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್‌ ಅವರು, ವಿಳಂಬವಾಗಿ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್‌ 354 ಎ ಅಡಿ ಮಾಡಲಾದ ಆರೋಪವನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಆದೇಶಿಸಿದ್ದಾರೆ. …

Read More »