ಚಿಕ್ಕೋಡಿ:ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಮಾಜಿ ಶಾಸಕ ಶಾಮ ಘಾಟಗೆಯವರ ಜಮೀನಿನಲ್ಲಿ ಎಕರೆಗೆ 180 ಟನ್ ಕಬ್ಬು ಬೆಳೆಸಿ ದಾಖಲೆ ನಿರ್ಮಿಸಿ,ಇತರ ರೈತರಿಗೆ ಮಾದರಿಯಾಗಿದ್ದಾರೆ. ಮಾಜಿ ಶಾಸಕ ಶಾಮ ಘಾಟಗೆಯವರು ಕೇವಲ ಒಬ್ಬ ರಾಜಕಾರಣಿ ಆಗದೆ, ಕೃಷಿಯಲ್ಲೂ ಅಷ್ಟೇ ಆಸಕ್ತಿಯಿಂದ ಮುತುವರ್ಜಿ ವಹಿಸಿ ಎಕರೆಗೆ 180 ಟನ್ ಕಬ್ಬು ಬೆಳೆದು ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಒಂದು ಎಕರೆ ಜಮೀನಿನಲ್ಲಿ 40 ಟನ್ ಹಸಿ ಮೆಣಸಿನಕಾಯಿ, ಒಂದು ಎಕರೆ ಜಮೀನಿನಲ್ಲಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನಭಾಪುರ ಗ್ರಾಮದ ಶ್ರೀ ಈಶ್ವರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …
Read More »ಹಂಪಿಯಲ್ಲಿ ಗುಡ್ಡ ಹತ್ತುವಾಗ ಜಾರಿಬಿದ್ದು ಗಾಯಗೊಂಡ ಫ್ರಾನ್ಸ್ ಪ್ರವಾಸಿ; 2 ದಿನಗಳ ಬಳಿಕ ರಕ್ಷಣೆ
ವಿಜಯನಗರ: ವಿಶ್ವವಿಖ್ಯಾತ ಹಂಪಿ ಪ್ರವಾಸಕ್ಕೆ ಆಗಮಿಸಿದ್ದ ವಿದೇಶಿ ಪ್ರವಾಸಿಗನೊಬ್ಬ ಗುಡ್ಡ ಏರಲು ತೆರಳಿ ಕಾಲು ಜಾರಿ ಬಿದ್ದು, ಗಾಯಗೊಂಡ ಘಟನೆ ಮಹಾನವಮಿ ದಿಬ್ಬ ಸಮೀಪ ಡಿ.24ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಫ್ರಾನ್ಸ್‌ನ ಬ್ರುನೊ ರೋಜರ್ (52) ಗಾಯಾಳು ಎಂದು ತಿಳಿದುಬಂದಿದೆ. ಬ್ರುನೊ ರೋಜರ್ ಅವರು ಮಹಾನವಮಿ ದಿಬ್ಬದ ಬಳಿಯ ಅಷ್ಟಭುಜ ಸ್ನಾನಗುಡ್ಡದ ಹಿಂಭಾಗಕ್ಕೆ ತೆರಳಿದ್ದಾರೆ. ಗುಡ್ಡ ಏರಲು ಮುಂದಾಗಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದಾರೆ. ಕಾಲಿಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲೇ …
Read More »ಮೈಸೂರು ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮಹಿಳೆಯರಿಬ್ಬರು ಸಾವು
ಮೈಸೂರು ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಮಹಿಳೆಯರಿಬ್ಬರು ಸಾವು ಮೈಸೂರು: ಅರಮನೆಯ ಬಳಿ ಹೀಲಿಯಂ ತುಂಬಿದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿದೆ. ನಂಜನಗೂಡಿನ ಚಾಮಲಾಪುರದ ಮಂಜುಳಾ ಹಾಗೂ ಬೆಂಗಳೂರು ಮೂಲದ ಲಕ್ಷ್ಮಿ (29) ಮೃತ ಮಹಿಳೆಯರು. ಗುರುವಾರ (ಡಿ.25) ರಾತ್ರಿ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಬಲೂನ್ಗೆ ಹೀಲಿಯಂ ತುಂಬುತ್ತಿದ್ದ ವೇಳೆ ಗ್ಯಾಸ್ …
Read More »ಶಾಮನೂರು ಶಿವಶಂಕರಪ್ಪ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಬೇಕು: ರಂಭಾಪುರಿ ಶ್ರೀ
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಬೇಕೆಂದು ರಂಭಾಪುರಿ ಶ್ರೀಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದರು. ಸಿದ್ದರಾಮಯ್ಯರನ್ನು ಕಂಡ್ರೆ ಶಾಮನೂರು ಶಿವಶಂಕರಪ್ಪ ಅವರಿಗೆ ಬಹಳ ಪ್ರೀತಿ. ಅವರಿಲ್ಲದೆ ಕ್ಷೇತ್ರದಲ್ಲಿ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಹಾಗಾಗಿ, ಸಿಎಂ ಇಲ್ಲೇ ಬಂದು ಸಿಎಂ ಪ್ರಶಸ್ತಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು. ಇಂದು ದಾವಣಗೆರೆಯಲ್ಲಿ ನಡೆದ ದಿ.ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಹಾಗೂ ಶಿವಗಣಾರಾಧನೆ ಕಾರ್ಯಕ್ರಮದಲ್ಲಿ ಶ್ರೀಗಳು ಮಾತನಾಡಿದರು. ಇದಕ್ಕೂ …
Read More »ಚಿತ್ರದುರ್ಗ ಬಸ್ ದುರಂತ: ಗಾಯಗೊಂಡಿದ್ದ ಬಸ್ ಚಾಲಕ ಸಾವು
ಹುಬ್ಬಳ್ಳಿ: ಚಿತ್ರದುರ್ಗದ ಹಿರಿಯೂರು-ಶಿರಾ ನಡುವಿನ ಜವನಗೊಂಡಹಳ್ಳಿ ಬಳಿ ಸಂಭವಿಸಿದ್ದ ಬಸ್ ದುರಂತದಲ್ಲಿ ಗಾಯಗೊಂಡಿದ್ದ ಖಾಸಗಿ ಬಸ್ ಚಾಲಕ ಶಿಗ್ಗಾವಿಯ ಮೊಹಮ್ಮದ್ ರಫೀಕ್ (35) ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಕೆಎಂಸಿಆರ್‌ಐನಲ್ಲಿ ಮೃತಪಟ್ಟಿದ್ದಾರೆ. ಗುರುವಾರ ತಡರಾತ್ರಿ ಲಾರಿಯೊಂದು ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ವೇಳೆ ಬಸ್ಸಿನ ಚಾಲಕ ಮೊಹಮ್ಮದ್ ರಫೀಕ್ ಗಾಯಗೊಂಡು, ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. …
Read More »ಮೈಸೂರು ಅರಮನೆ ಮುಂಭಾಗ ಸಂಭವಿಸಿದ ಸ್ಫೋಟ ಅನಿರೀಕ್ಷಿತ,
ಮೈಸೂರು: “ಮೈಸೂರು ಅರಮನೆ ಮುಂಭಾಗ ಸಂಭವಿಸಿದ ಸ್ಫೋಟ ಅನಿರೀಕ್ಷಿತ. ಸಿಲಿಂಡರಿನ ತಾಪಮಾನ ಹೆಚ್ಚಾಗಿ ಸ್ಫೋಟಗೊಂಡಿದೆ” ಎಂದು ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು. “ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿಗೆ ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟಗೊಂಡು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಪ್ರವಾಸಕ್ಕೆ ಬಂದಿದ್ದ ಐವರಿಗೆ ಗಾಯವಾಗಿದೆ. ಇಬ್ಬರ ಸ್ಥಿತಿ (ಲಕ್ಷ್ಮಿ ಹಾಗೂ ಮಂಜುಳ) ಗಂಭೀರವಾಗಿದೆ. ಮೃತಪಟ್ಟ ವ್ಯಕ್ತಿ ಉತ್ತರ ಪ್ರದೇಶದವರಾಗಿದ್ದು ಸೀಸನಲ್ ವ್ಯಾಪಾರಿ. ಈ ಬಾರಿ ಬಲೂನ್ ಮಾರಾಟ ಮಾಡುತ್ತಿದ್ದರು. ಹೊರಗಡೆಯಿಂದ ಗ್ಯಾಸ್ ಸಿಲಿಂಡರ್ …
Read More »ಜಾರಕಿಹೊಳಿ ಕುಟುಂಬದ ಹಿರಿಯರಾದ ಪೂಜ್ಯ ದಿವಂಗತ ಶ್ರೀ ಲಕ್ಷ್ಮಣರಾವ್ ಆರ್. ಜಾರಕಿಹೊಳಿ ಹಾಗೂ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯಸ್ಮರಣೆ
ಜಾರಕಿಹೊಳಿ ಕುಟುಂಬದ ಹಿರಿಯರಾದ ಪೂಜ್ಯ ದಿವಂಗತ ಶ್ರೀ ಲಕ್ಷ್ಮಣರಾವ್ ಆರ್. ಜಾರಕಿಹೊಳಿ ಹಾಗೂ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯಸ್ಮರಣೆಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿಯವರ ಪುಣ್ಯತಿಥಿಯ ಸಂದರ್ಭದಲ್ಲಿ ಅವರ ಸಮಾಧಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಪುಷ್ಪಾರ್ಚನೆ ಸಲ್ಲಿಸಿ ಭಕ್ತಿಪೂರ್ವಕ ನಮನಗಳನ್ನು ಅರ್ಪಿಸಿದರು.
Read More »ಕಲಾ ಪ್ರತಿಭೋತ್ಸವಕ್ಕೆ ಚಾಲನೆ
ಕಲಾ ಪ್ರತಿಭೋತ್ಸವಕ್ಕೆ ಚಾಲನೆ ಬೆಳಗಾವಿ. ಜಿಲ್ಲೆಯ ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗೆ ಜಾನಪದ ಗೀತೆ, ಸುಗಮ ಸಂಗೀತ, ಹಿಂದೂಸ್ತಾನಿ ವಾದ್ಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಚಿತ್ರಕಲೆ, ಅಶುಭಾಷನ, ಶಾಸ್ತ್ರೀಯ ನೃತ್ಯ, ನಾಟಕ ಕಲಾ ಪ್ರಕಾರಗಳಲ್ಲಿ ಎರಡು ದಿನಗಳ ಕಾಲ ಸ್ಪರ್ಧಾ ಕಾರ್ಯಕ್ರಮಗಳಿಗೆ ಚಾಲನೇ ನೀಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವತಿಯಿಂದ ಮಂಗಳವಾರ (ಡಿ.26) ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜರುಗಿದ ವಲಯ ಮಟ್ಟದ ಕಲಾ …
Read More »ಮಕ್ಕಳಲ್ಲಿ ರಾಷ್ಟ್ರಪ್ರೀತಿ ಬೆಳೆಸಿದಾಗ ಶಿಕ್ಷಣ ಸಾರ್ಥಕವೆನಿಸುತ್ತದೆ: ಲೀಲಾವತಿ ಹಿರೇಮಠ
ಬೆಳಗಾವಿ : ಮಕ್ಕಳಲ್ಲಿ ಓದಿನ ಜೊತೆಗೆ ರಾಷ್ಟ್ರಪ್ರೀತಿಯನ್ನೂ ಬೆಳೆಸಿದಾಗ ಅಂತಹ ಶಿಕ್ಷಣ ಸಾರ್ಥಕವೆನಿಸುತ್ತದೆ. ಸಂತಮೀರಾ ಶಾಲೆಯ ಶಿಕ್ಷಣದಲ್ಲಿ ಭಾರತೀಯತೆ, ಸಂಸ್ಕೃತಿ, ಕಲೆಗಳನ್ನು ಕಾಣಲು ಸಾಧ್ಯ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಲೀಲಾವತಿ ಹಿರೇಮಠ ಹೇಳಿದ್ದಾರೆ. ಆನಗೋಳದ ಜನಕಲ್ಯಾಣ ಟ್ರಸ್ಟ್‌ನ ಸಂತ ಮೀರಾ ಇಂಗ್ಲಿಷ್ ಮೀಡಿಯಂ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳು ಕೇವಲ ಓದಿಗಷ್ಟೇ ಮಕ್ಕಳನ್ನು ಸೀಮಿತಗೊಳಿಸದೆ ಸರ್ವಾಂಗೀಣ ವಿಕಸನದ ಕಡೆಗೆ …
Read More »
Laxmi News 24×7