ರಾಯಚೂರು, : ನಡು ರಸ್ತೆಯಲ್ಲೇ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ರಾಯಚೂರು (Raichur) ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರುಕಾಲುವೆ ಬಳಿನಡೆದಿದೆ. ಕಾಪರ್ ವೈರ್ ಕಳ್ಳತನ ಆರೋಪಿಗಳನ್ನು ಬಂಧಿಸಲು ಹೋದಾಗ, ಬಳಗಾನೂರ ಠಾಣೆಯ ಪೊಲೀಸ್ ಪೇದೆ(Police constable) ಗಳಾದ ಮಂಜುನಾಥ್ ಹಾಗೂ ಗೋಪಾಲ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಕಾನ್ಸ್ಟೇಬಲ್ಗಳಿಗೆ ಸಿಂಧನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹಲ್ಲೆಗೈದ ಆರೋಪಿಗಳಿಗಾಗಿ ಬಳಗಾನೂರ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ …
Read More »ವಿಜಯಪುರ: ಜ.12 ರಿಂದ ಸಿದ್ದೇಶ್ವರ ಜಾತ್ರೆ ಮಹೋತ್ಸವ; ಯಾವ ದಿನ ಏನೇನು ನಡೆಯಲಿದೆ? ಮಾಹಿತಿ ಇಲ್ಲಿದೆ
ವಿಜಯಪುರ,: ಕೊರೊನಾ ಹಾಗೂ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಕಾರಣ ಕಳೆದ ಮೂರು ವರ್ಷಗಳಿಂದನಗರದಸಿದ್ದೇಶ್ವರ ಜಾತ್ರಾ ಮಹೋತ್ಸವ (Siddheshwar Fair) ನಡೆಸಿರಲಿಲ್ಲ. ಇದೀಗ ಜನವರಿ 12 ರಿಂದ ಜಾತ್ರೆ ಆರಂಭವಾಗಲಿದ್ದು, 18ರ ವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಆ ದಿನಗಳಂದು ವಿವಿಧ ಕಾರ್ಯಕ್ರಮಗಳನ್ನು ಪೂಜಾ ವಿಧಿವಿಧಾನಗಳು ನಡೆಯಲಿವೆ. ಜಾತ್ರಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ಜಾತ್ರಾ ಉತ್ಸವ ಸಮೀತಿ ಅಧ್ಯಕ್ಷ ಗುರು ಗಚ್ಚಿನಮಠ, ಜನೇವರಿ 12 ರಂದು ಗೋಮಾತೆ ಪೂಜೆ ಹಾಗೂ ನಂದಿಧ್ವಜಗಳ ಮೆರವಣಿಗೆ …
Read More »ಕೆಎಸ್ಆರ್ಟಿಸಿ ಬಸ್ ಸೋರಿಕೆ; ಬೆಂಗಳೂರಿನಿಂದ ಓಂಶಕ್ತಿ ದೇವಾಲಯಕ್ಕೆ ಹೋಗಿದ್ದ ಭಕ್ತರ ಪರದಾಟ
ಬೆಂಗಳೂರು, ಜ.8: ನಗರದಿಂದ ಕಾಂಚೀಪುರಂನಲ್ಲಿರುವ ಓಂ ಶಕ್ತಿ ದೇವಸ್ಥಾನಕ್ಕೆಕೆಎಸ್ಆರ್ಟಿಸಿ (KSRTC)ಸ್ಪೆಷಲ್ ಬಸ್ ಮೂಲಕ ತೆರಳಿದ್ದ ಓಂ ಶಕ್ತಿ ಮಾಲಾಧಾರಿಗಳು ಬಸ್ ಸೋರಿಕೆಯಿಂದ ಪರದಾಡುವಂತಾಗಿದೆ. ಬಸ್ ಬುಕ್ ಮಾಡಿದ ಭಕ್ತರಿಗೆ ಸಾರಿಗೆ ಇಲಾಖೆ ಡಕೋಟ ಬಸ್ ಕೊಟ್ಟಿರುವುದರಿಂದ ಭಕ್ತರು ಪರದಾಡುವಂತಾಗಿದೆ. ಚೆನ್ನೈ, ಕಾಂಚೀಪುರಂ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ. ಆದರೆ, ಬೆಂಗಳೂರಿನಿಂದ ಓಂ ಶಕ್ತಿ ದೇವಾಲಯಕ್ಕೆ ಭಕ್ತರು ಹೋಗಿದ್ದ ಕೆಎಸ್ಆರ್ಟಿಸಿ ಬಸ್ ಗುಜರಿಯಾಗಿದ್ದರಿಂದ ಮಳೆ ನೀರು ಸೋರಿಕೆಯಾಗುತ್ತಿದೆ. ಬಸ್ ಒಳಗೆ ಮಳೆ …
Read More »ಯಶಸ್ವಿ ರೈತನಾದ ಯೋಧ! ಸರ್ಕಾರಿ ಕೋಟಾಗೆ ಮುಗಿಬೀಳದೆ ಭೂತಾಯಿಯ ಸೇವೆಗೆ ಜೀವನ ಮುಡಿಪಿಟ್ಟ ಮಿಲ್ಟ್ರಿ ಮ್ಯಾನ್
17 ವರ್ಷ ಕಾಲ ಯೋಧನಾಗಿ ಸೇವೆ ಸಲ್ಲಿಸಿ ನಿವೃತ್ತಿಯ ಬಳಿಕ ರೈತನಾದ ಕಥೆಯಿದು. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೋಳಸಂಗಿ ಗ್ರಾಮದ ನಾರಾಯಣ ಸಾಳುಂಕೆ ಎಂಬುವವರೇ ಇದೀಗ ಯೋಧನಾಗಿ ದೇಶ ಸೇವೆ ಸಲ್ಲಿಸಿದ ಬಳಿಕ ರೈತನಾಗಿ ಭೂತಾಯಿ ಸೇವೆ ಮಾಡುತ್ತಿರುವರು.ಸಾಮಾನ್ಯವಾಗಿ ಯೋಧರಾಗಿ ಸೇವೆ ಸಲ್ಲಿಸಿ ಸೇನಾ ಸೇವೆಯಿಂದ ನಿವೃತ್ತಿಯಾದ ಬಳಿಕ ಸೇನಾ ಕೋಟಾದಡಿ ಸರ್ಕಾರಿ ನೌಕರಿಗೆ ಸೇರಲು ಹೆಚ್ಚಿನ ನಿವೃತ್ತ ಯೋಧರು ಬಯಸುತ್ತಾರೆ. ಆದರೆ ವಿಜಯಪುರ ಜಿಲ್ಲೆಯ ಯೋಧನೋರ್ವ ಬರೋಬ್ಬರು …
Read More »ನನಗೆ ನನ್ನ ಇಬ್ಬರು ಹೆಂಡ್ತೀರು ಬೇಕು; ಮದ್ಯದ ಅಮಲಿನಿಲ್ಲಿ ಮಾನ್ವಿ ಠಾಣೆಗೆ ನುಗ್ಗಿ ಪೊಲೀಸರಿಗೆ ಕಾಟ ಕೊಟ್ಟ ವ್ಯಕ್ತಿ
ರಾಯಚೂರು, : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಕಾಟ ಕೊಟ್ಟ ಘಟನೆರಾಯಚೂರು(Raichur) ಜಿಲ್ಲೆಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿ ಬಟ್ಟೆ ಬಿಚ್ಚಿಕೊಂಡು ಓಡಾಡುತ್ತಿದ್ದ ವ್ಯಕ್ತಿ ನೇರವಾಗಿ ಮಾನ್ವಿ ಪೊಲೀಸ್ ಠಾಣೆಗೆ ಬಂದು ನೀಡಿದ ಕಾಟಕ್ಕೆ ಪೊಲೀಸರೇ ಸುಸ್ತಾಗಿದ್ದರು. ಊಟದ ಹೊತ್ತಲ್ಲಿ ಎಂಟ್ರಿ ಕೊಟ್ಟಿದ್ದ ಆತನ ಕಿರಿಕ್ಗೆ ಖಾಕಿ ಪಡೆ ಏನ್ ಮಾಡಬೇಕು ಎಂದು ತಿಳಿಯದೇ ತಲೆ ಮೇಲೆ ಕೈ ಹೊತ್ತು ಕೂತಿದ್ದರು. ಮದಿರೆಯ ಮತ್ತಲ್ಲಿ ಹಾವಳಿ ಇಟ್ಟಿದ್ದವನ ಡಿಮ್ಯಾಂಡ್ಗೆ …
Read More »ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ: ಅಧಿಕಾರಕ್ಕಾಗಿ ಬಿಜೆಪಿ, ಕಾಂಗ್ರೆಸ್ ನಡುವೆ ಪೈಪೋಟಿ
ವಿಜಯಪುರ, ಜನವರಿ 08: ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ(Corporation Mayor, Deputy Mayor Elections)ಮಹೂರ್ತ ಕೂಡಿ ಬಂದಿದೆ. ನಾಳೆ ಪಾಲಿಕೆಯ ಮೇಯರ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಯುವುದು ಫಿಕ್ಸ್ ಆಗಿದೆ. ಪಾಲಿಕೆಗೆ ಚುನಾವಣೆ ನಡೆದು ವರ್ಷದ ಮೇಲೆ ಮೇಯರ್ ಉಪ ಮೇಯರ್ ಚುನಾವಣೆ ನಡೆಯುತ್ತಿರುವುದು ಹರ ಸಾಹಸವೇ ಆಗಿದೆ. ಕೆಲ ವಿಚಾರಗಳು ನ್ಯಾಯಾಲಯದಲ್ಲಿದ್ದ ಕಾರಣ ಚುನಾವಣೆ ನಡೆಸಲು ಆಗಿರಲಿಲ್ಲ. ಇದೀಗ ನಾಳೆ ಮೇಯರ್ …
Read More »ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿರುವವರ ನಾಟಕ: ಪ್ರಲ್ಹಾದ ಜೋಶಿ
ಬೆಂಗಳೂರು, ಜ.8: ಅಯೋಧ್ಯೆಯ ರಾಮ ಮಂದಿರದ (Ayodhya Ram Mandir) ಆಹ್ವಾನದ ಮಂತ್ರಾಕ್ಷತೆಯನ್ನು ಅನ್ನಭಾಗ್ಯ ಅಕ್ಕಿಯಲ್ಲೇ ಕೊಡುತ್ತಿದ್ದಾರೆ ಎಂಬ ಡಿಸಿಎಂಡಿಕೆ ಶಿವಕುಮಾರ್(DK Shivakumar) ಹೇಳಿಕೆಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi), ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಜೋಶಿ, ‘ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದವರು ರಾಮ ಮಂದಿರ ಆಗಬಾರದೆಂದು ಪಣ ತೊಟ್ಟವರು, ಇವತ್ತು ಅಕ್ಷತೆ ಮಾಡುತ್ತಿರುವುದಕ್ಕೆ ಸಂತೋಷ ಪಡುತ್ತಿರುವುದು …
Read More »ಕರವೇ ನಾರಾಯಣಗೌಡ ಸೇರಿ 29 ಕಾರ್ಯಕರ್ತರಿಗೆ ಇಂದೂ ಬಿಡುಗಡೆ ಭಾಗ್ಯವಿಲ್ಲ, ಕಾರಣವೇನು?
ಬೆಂಗಳೂರು, (ಜನವರಿ 08): ಕರ್ನಾಟಕ ರಕ್ಷಣಾ ವೇದಿಕೆ(ಕರವೇ)ಅಧ್ಯಕ್ಷ ಎ.ನಾರಾಯಣಗೌಡ ಸೇರಿದಂತೆ 29 ಕಾರ್ಯಕರ್ತರಿಗೆ ಜಾಮೀನು ಸಿಕ್ಕಿದೆ. ಆದ್ರೆ, ಜಾಮೀನು ಆದೇಶ ಪ್ರತಿ ಜೈಲಾಧಿಕಾರಿಗೆ ಸರಿಯಾದ ಸಮಯಕ್ಕೆ ತಲುಪಿಲ್ಲ. ಈ ಹಿನ್ನೆಲೆಯಲ್ಲಿ ಇಂದೂ ಸಹ ನಾರಾಯಣಗೌಡ ಸೇರಿದಂತೆ 29 ಕರವೇ ಕಾರ್ಯಕರ್ತರಿಗೆ ಬಿಡುಗಡೆ ಭಾಗ್ಯವಿಲ್ಲ. ಜಾಮೀನು ಆದೇಶ ಪ್ರತಿ ತಲುಪಿಸುವುದು ವಿಳಂಬವಾಗಿದ್ದರಿಂದ ನಾಳೆ ಬಿಡುಗಡೆಯಾಗುವ ಸಾಧ್ಯತೆಗಳಿವೆ. ನಾರಾಯಣಗೌಡ ಪರ ವಕೀಲ ಹೇಳಿದ್ದೇನು? ಇನ್ನು ಈ ಬಗ್ಗೆ ನಾರಾಯಣಗೌಡ ಪರ ವಕೀಲ ಕುಮಾರ್ ಎಲ್.ಜಿ …
Read More »ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಜಗದೀಶ್ ಶೆಟ್ಟರ್
ಧಾರವಾಡ, ಜನವರಿ 08: ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ಕೊಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್(Jagadish Shettar) ಹೇಳಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಾರೆ. ಹೀಗಾಗಿ ಅವರಿಗೆ ಲೋಕಸಭಾ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್ನಲ್ಲಿ ಚರ್ಚೆಗಳು ನಡೆದಿವೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಇದರ ಮಧ್ಯೆ ಇದೀಗ ಸ್ವತಃ ಜಗದೀಶ ಶೆಟ್ಟರ್ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಲೋಕಸಭೆ ತಯಾರಿ ಕುರಿತು ಕಾಂಗ್ರೆಸ್ ಸಭೆಗೂ ಮುಂಚೆ …
Read More »ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ: ಪ್ರಲ್ಹಾದ್ ಜೋಶಿ ವಿರುದ್ಧ ಸಚಿವ ಸಂತೋಷ್ ಲಾಡ್ ಆಕ್ರೋಶ
ಧಾರವಾಡ, ಜನವರಿ 08: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ 4 ಸಲ ಸಂಸದರಾಗಿ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಪ್ರಬುದ್ಧ ಧಾರವಾಡ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದಾರೆ. ಹೀಗೆ ಮಾತನಾಡುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನ ಹಿಂಪಡೆದು ಸಿಎಂ ಸಿದ್ದರಾಮಯ್ಯರವರ ಬಳಿ ಕ್ಷಮೆ ಕೇಳಲಿ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್(Santosh Lad)ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ ವಿಚಾರವಾಗಿ ಮಾತನಾಡಿದ ಅವರು, ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ನಡೆಯುತ್ತಿರುವುದಕ್ಕೆ ಹೋಲಿಸಿದ್ದಾರೆ ಎಂದಿದ್ದಾರೆ. ಇತ್ತೀಚೆಗೆ ಹಾರಿಕೊಂಡು …
Read More »
Laxmi News 24×7