ಮುಂಬೈ: 45 ಲಕ್ಷ ವೆಚ್ಚದಲ್ಲಿ ಮದುವೆ ಮಾಡಿಕೊಟ್ಟು, 116.64 ಗ್ರಾಂ ಚಿನ್ನ ಉಡುಗೊರೆಯಾಗಿ ನೀಡಿದ್ರೂ, ಕಾರು ಖರೀದಿಗೆ 5 ಲಕ್ಷ ರೂ. ವರದಕ್ಷಿಣೆಗೆ ಪತಿ ಪೀಡಿಸಿದ್ದಕ್ಕೆ 4 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪುಣೆಯ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವೈಷ್ಣವಿ ಓಂಕಾರ್ ಗಿಸ್ರೆ (24) ಆತ್ಮಹತ್ಯೆಗೆ ಶರಣಾದ ಮಹಿಳೆ. ಭಾರೀ ವೆಚ್ಚದಲ್ಲಿ ಮದುವೆ ಮಾಡಿಕೊಟ್ಟರೂ, ಚಿನ್ನ ನೀಡಿದರೂ ಕಾರು ಖರೀದಿಸಲು ಇನ್ನೂ 5 ಲಕ್ಷ ರೂ. ನೀಡುವಂತೆ ಪತಿ ಮತ್ತು ಅತ್ತೆ-ಮಾವ …
Read More »ಯೋಜಿತ ಬೆಂಗಳೂರು ನಿರ್ಮಾಣಕ್ಕಾಗಿ ವ್ಯವಸ್ಥಿತ ರಸ್ತೆ ಜಾಲ: ಕೃಷ್ಣ ಬೈರೇಗೌಡ
ಬೆಂಗಳೂರು: ಜಿಬಿಎ ಹೊರಗಿನ-ಬೆಂಗಳೂರು ನಗರ ಜಿಲ್ಲೆಯ ಒಳಗಿನ ಪ್ರದೇಶಗಳ ಭವಿಷ್ಯದ ದೃಷ್ಟಿಯಿಂದ ಹೊಸ ರಸ್ತೆ ಜಾಲ (ರೋಡ್ ಗ್ರಿಡ್) ನಿರ್ಮಾಣ ಹಾಗೂ ಸಮರ್ಪಕ ರಸ್ತೆ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಮಂಗಳವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ನಗರ ಕಳೆದ 25 ವರ್ಷಗಳಿಂದ ಸೂಕ್ತ ಪೂರ್ವಯೋಜನೆ ಹಾಗೂ ಮುಂಜಾಗ್ರತಾ ತಯಾರಿ …
Read More »ನೈಸ್ ಅಕ್ರಮ 2ಜಿ, ಕಲ್ಲಿದ್ದಲು ಹಗರಣಕ್ಕಿಂತ ದೊಡ್ಡದು: ಡಿಕೆಶಿಗೆ ದಾಖಲೆ ಸಮೇತ ಹೆಚ್‌ಡಿಕೆ ಕೌಂಟರ್
ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ನಡುವೆ ನೈಸ್ ವಾರ್ ತಾರಕಕ್ಕೇರಿದೆ. ನೈಸ್ ಯೋಜನೆಗೆಸಹಿ ಹಾಕಿದ್ದೇ ದೇವೇಗೌಡರು ಎಂದು ಹೇಳಿದ್ದ ಸಿಎಂ ಡಿಕೆಶಿಗೆ ಕುಮಾರಸ್ವಾಮಿ ದಾಖಲಾತಿ ಸಮೇತ ಕೌಂಟರ್ ಕೊಟ್ಟಿದ್ದಾರೆ. ನೈಸ್ ಯೋಜನೆ 3 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತದ ಬೃಹತ್ ಹಗರಣವಾಗಿದ್ದು ಇದು 2ಜಿ ತರಂಗಾಂತರ ಮತ್ತು ಕಲ್ಲಿದ್ದಲು ಹಗರಣಕ್ಕಿಂತಲೂ ದೊಡ್ಡ ಅಕ್ರಮ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ …
Read More »ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತ ಬೇಡ: ಬ್ಯಾಂಕುಗಳಿಗೆ ಸೂಚಿಸಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ಮಾಸಿಕ 2,000 ರೂಪಾಯಿ ಹಣವನ್ನು ಯಾವುದೇ ಕಾರಣಕ್ಕೂ ಸಾಲದ ಕಂತು ಅಥವಾ ಬಡ್ಡಿಗೆ ಕಡಿತ ಮಾಡಿಕೊಳ್ಳದಂತೆ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶನ ನೀಡಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆದೇಶಿಸಿದ್ದಾರೆ. ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸಲ್ಲಿಸಿದ ಮನವಿ ಪತ್ರಕ್ಕೆ ತಕ್ಷಣವೇ ಸಕಾರಾತ್ಮಕವಾಗಿ ಸ್ಪಂದಿಸಿದ …
Read More »ಒಡಹುಟ್ಟಿದ ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಅಣ್ಣನಿಂದ ಕೊಲೆ
ಬೀದರ್: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಅಣ್ಣ-ತಮ್ಮನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಶಿವಪೂರ ಗ್ರಾಮದಲ್ಲಿ ನಡೆದಿದೆ. 20 ವರ್ಷದ ಸಚಿನ್ ಮೃತ ಯುವಕ. ಸಚಿನ್‌ನ ತಲೆಗೆ ಕಲ್ಲು ಎತ್ತಿಹಾಕಿ ಆತನ ಅಣ್ಣ ನಿತಿನ್ ಹತ್ಯೆ ಮಾಡಿದ್ದಾನೆ. ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆಯಿಂದಲೇ ಅಣ್ಣ-ತಮ್ಮಂದಿರ ನಡುವೆ ಗಲಾಟೆ ನಡೆಯುತ್ತಿತ್ತು. ತಡರಾತ್ರಿ ಇಬ್ಬರೂ ಕುಡಿದ ಮತ್ತಿನಲ್ಲಿದ್ದಾಗ ಮತ್ತೆ ಜಗಳ ಶುರುವಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು …
Read More »ರಸ್ತೆಯಲ್ಲಿ ಏಕಾಏಕಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು – ಸಂಪೂರ್ಣ ಸುಟ್ಟು ಕರಕಲು
ಕೋಲಾರ: ಬೆಂಗಳೂರು – ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಾರ್ಪಿಯೋ ಕಾರೊಂದು ಇದ್ದಕ್ಕಿದ್ದಂತೆ ಮಧ್ಯರಾತ್ರಿ ನಡು ರಸ್ತೆಯಲ್ಲಿ ಹೊತ್ತಿ ಉರಿದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕು ಕೆಂದಟ್ಟಿ ರಾಷ್ಟ್ರೀಯ ಹೆದ್ದಾರಿ-75 ರದೆಂದಟ್ಟಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ರಾಷ್ಟ್ರೀಯ ಹೆದ್ದಾರಿ-75ರ ಕೆಂದಟ್ಟಿ ಬಳಿ ಕಾರು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ …
Read More »ಹರಿಹರ ಪಂಚಮಸಾಲಿ ಪೀಠದಲ್ಲಿ ಸಭೆ, ಸಮಾರಂಭಕ್ಕೆ ಬ್ರೇಕ್ – ನಿಷೇಧಾಜ್ಞೆ ಮುಂದುವರಿಕೆ
ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ ಸ್ವಾಮೀಜಿ ಪರ ಭಕ್ತರು ಹಾಗೂ ಟ್ರಸ್ಟಿಗಳ ನಡುವಿನ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಲಿಂಗೈಕ್ಯ ಡಾ ಮಹಾಂತ ಸ್ವಾಮೀಜಿ 89ನೇ ಜಯಂತೋತ್ಸವ ಕಾರ್ಯಕ್ರಮದಲ್ಲೇ ಟ್ರಸ್ಟಿಗಳ ವಿರುದ್ದ ಹೋರಾಟಕ್ಕೆ ಭಕ್ತರು ಮುಂದಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಹಶೀಲ್ದಾರ್ ಸಂತೋಷ್ ಕುಮಾರ್ ಅವರು ನಿಷೇಧಾಜ್ಞೆ ಮುಂದುವರಿಸಿ ಆದೇಶ ಹೊರಡಿಸಿದ್ದಾರೆ. ಲೆಕ್ಕ ಕೊಡಿ ಅಭಿಯಾನ ಸಮಿತಿ, ಟ್ರಸ್ಟಿಗಳ ವಿರುದ್ಧ ಮತ್ತೆ ಹೋರಾಟಕ್ಕೆ ಮುಂದಾಗಿತ್ತು. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ …
Read More »ಸ್ಕೂಟಿ, ಲಾರಿ ನಡುವೆ ಮುಖಾಮುಖಿ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ವೇಯ ಸರ್ವೀಸ್ ರಸ್ತೆಯಲ್ಲಿ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ರಾಮನಗರ ತಾಲೂಕಿನ ಕೆಂಪನಹಳ್ಳಿ ಗೇಟ್ ಬಳಿ ನಡೆದಿದೆ. ರಾಮನಗರ ತಾಲೂಕಿನ ದಾರಾಪುರ ಗ್ರಾಮದ ನಿವಾಸಿ ನಿತಿನ್ (21) ಮೃತಪಟ್ಟ ಸವಾರ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಹಿಂಬದಿ ಸವಾರ ಸೇವಂತ್‌ನನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ರಾತ್ರಿ ಕೆಲಸ …
Read More »ಬೆಳಗಾವಿ:ಡಿವೋರ್ಸ್ ಕೇಳಿದ್ದಕ್ಕೆ ಪತ್ನಿಯ ಬರ್ಬರ ಹತ್ಯೆ – ಹಂತಕನಿಗಾಗಿ ತೀವ್ರ ಶೋಧ
ಬೆಳಗಾವಿ: ಪತ್ನಿ ವಿಚ್ಛೇದನ ಕೇಳಿದ್ದಕ್ಕೆ ಸಿಟ್ಟಿಗೆದ್ದ ಪತಿ ಆಕೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದ ಪ್ರಕರಣ ಬೈಲಹೊಂಗಲ ತಾಲೂಕಿನ ಅಮಟೂರ ಗ್ರಾಮದಲ್ಲಿ ನಡೆದಿದೆ. ಬೈಲಹೊಂಗಲದ ಗೊಲ್ಲರ ಓಣಿ ನಿವಾಸಿ ಲಕ್ಷ್ಮಿ ಮಾಡಮಗೇರಿ (31) ಕೊಲೆಯಾದ ದುರ್ದೈವಿ. ರಾಜು ಮಾಡಮಗೇರಿ ಪತ್ನಿಯನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ. ಐದು ವರ್ಷಗಳ ಹಿಂದೆ ಇಬ್ಬರು ಪ್ರೀತಿಸಿ ಮದುವೆ ಆಗಿದ್ದರು. ಎರಡು ವರ್ಷದಿಂದ ಇಬ್ಬರ ನಡುವೆ ಮನಸ್ತಾಪ ಇತ್ತು ಎಂದು ತಿಳಿದುಬಂದಿದೆ. ಇದೇ ಕಾರಣಕ್ಕೆ ವಿಚ್ಛೇದನ …
Read More »ಜಮ್ಮು ಕಾಶ್ಮೀರದಲ್ಲಿ ಸಿಐಎಸ್‌ಎಫ್ ಯೋಧನಿಂದಲೇ ಗುಂಡಿನ ದಾಳಿ – ಅಧಿಕಾರಿ ಸೇರಿ ನಾಲ್ವರು ಸಹೋದ್ಯೋಗಿಗಳ ಹತ್ಯೆ
ಶ್ರೀನಗರ: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬ ಮನಬಂದಂತೆ ಗುಂಡು ಹಾರಿಸಿ ಒಬ್ಬ ಹಿರಿಯ ಅಧಿಕಾರಿ ಸೇರಿದಂತೆ ನಾಲ್ವರು ಸಿಬ್ಬಂದಿಯನ್ನು ಹತ್ಯೆ ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಡೆದಿದೆ. ಬಸೋಹ್ಲಿಯ ಮಾಷ್ಕಾ ಗ್ರಾಮದಲ್ಲಿರುವ ರಾವಿ ನದಿಯ ಉಪನದಿಯಾದ ಸೇವಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ‘ಸೇವಾ ಜಲವಿದ್ಯುತ್ ಯೋಜನೆ’ ಘಟಕದಲ್ಲಿ ನಿಯೋಜನೆಗೊಂಡಿದ್ದ ಸಿಐಎಸ್‌ಎಫ್ ತುಕಡಿಯಲ್ಲಿ ಮಂಗಳವಾರ ಸಂಜೆ ಸುಮಾರು 6:40 ರ ವೇಳೆಗೆ ಈ …
Read More »
Laxmi News 24×7