ಬೀದರ್: ತರಕಾರಿ ತರಲು ಹೋಗಿ ಯುವಕ ಸಾವನ್ನಪ್ಪಿದ್ದು, ಬಿಸಿಲಿನ ಝಳಕ್ಕೆ ಮಗ ಬಲಿಯಾಗಿದ್ದಾನೆಂದು ತಂದೆ ಗೋಳಾಡಿದ್ದಾರೆ. ಈ ಘಟನೆ ಬೀದರ್ ( ಜಿಲ್ಲೆಯ ಕಮಲನಗರ ಪಟ್ಟಣದ ಡಿಗ್ಗಿ ರೋಡ್ ಬಳಿ ನಡೆದಿದೆ. ಯುಪಿ ಮೂಲದ ಮೊಹ್ಮದ್ ಸಮೀರ್ ಅಹ್ಮದ್ (20) ಸಾವನ್ನಪ್ಪಿದ ದುರ್ದೈವಿ ಯುವಕ. ಗರಿಷ್ಠ ತಾಪಮಾನ ಸಹಿಸಲಾರದೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನೆ ನಡೆದ ದಿನ ಯುವಕ ತರಕಾರಿ ತರಲು ಹೋಗಿದ್ದ. ಬಳಿಕ ಮನೆಗೆ ವಾಪಸ್ಸಾಗುವಾಗ ತಲೆ ತಿರುಗಿದಂತಾಗಿದ್ದು, ಕೂಡಲೇ …
Read More »ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್
ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ. ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ಸಭೆ ಪ್ರಾರಂಭ ಮಾಡುತ್ತೇನೆ ಎಂದರು. ಹಿಂದುತ್ವ, ನಿರುದ್ಯೋಗ, ಅಭಿವೃದ್ಧಿ ಮೂರು ಉದ್ದೇಶಗಳೊಂದಿಗೆ …
Read More »ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ: KEA
ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಒಟ್ಟು 890 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದ್ದು, ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ಕುರಿತು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು, ಕಲ್ಯಾಣ ಕರ್ನಾಟಕ ಮತ್ತು ಇತರ ಮೂಲ ವೃಂದ ಸೇರಿ ಎಲ್ಲರಿಗೂ ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನ. …
Read More »ಬೆಂಗಳೂರಿನಲ್ಲಿ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪನೆಗೆ ಮನವಿ
ನವದೆಹಲಿ: ಬೆಂಗಳೂರಿನಲ್ಲಿ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪಿಸುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕೇಂದ್ರ ಕಾರ್ಮಿಕ, ಎಂಎಸ್‌ಎಂಇ ರಾಜ್ಯಖಾತೆ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ. ಈ ಬಗ್ಗೆ ಪತ್ರ ಬರೆದಿರುವ ಅವರು, ಬೆಂಗಳೂರು ದೇಶದ ಪ್ರಮುಖ ಹಣಕಾಸು ಮತ್ತು ವಾಣಿಜ್ಯ ಕೇಂದ್ರವಾಗಿದೆ. ಡಿಆರ್‌ಟಿ ಅಡಿಯಲ್ಲಿ ಉದ್ಭವಿಸುವ ಕೇಸ್‌ಗಳು ಗಣನೀಯ ಪ್ರಮಾಣವನ್ನು ಹೊಂದಿದೆ. ಪ್ರಕರಣಗಳ ಹೆಚ್ಚುತ್ತಿರುವ ಬಾಕಿ ಸಂಖ್ಯೆ ಮತ್ತು ಅಪೀಲ್ ವೇದಿಕೆಯ ಅನಾನುಕೂಲತೆಯು ನಿರ್ಣಯ ಮತ್ತು …
Read More »CET 2026 – ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ
ಬೆಂಗಳೂರು: 2026ರ ಸಿಇಟಿ ಪರೀಕ್ಷೆಗೆ ( ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದ್ದು, ವಸ್ತ್ರಸಂಹಿತೆ ಜಾರಿ ಮಾಡಿದೆ. ಏ.22 ಕನ್ನಡ ಸೇರಿದಂತೆ ಏ.23 ಮತ್ತು 24ರಂದು ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ 745 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯಲು 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸದ್ಯ ಕೆಇಎ ಪರೀಕ್ಷೆಗೆ ವಸ್ತ್ರಸಂಹಿತೆ ಬಿಡುಗಡೆ ಮಾಡಿದ್ದು, ಕಡ್ಡಾಯವಾಗಿ ವಸ್ತ್ರಸಂಹಿತೆ ಪಾಲನೆಗೆ ಸೂಚನೆ …
Read More »ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಚಿಕ್ಕೋಡಿ :ಸದಲಗಾ ದತ್ತವಾಡ ರಸ್ತೆಯಿಂದ ಘೋಸರವಾಡ ಬ್ಯಾರೇಜವರೆಗೆ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ ಎಂಎಲ್ಸಿ ಪ್ರಕಾಶ ಹುಕ್ಕೇರಿ ಚಾಲನೆ ನೀಡಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಸದಲಗಾ-ದತ್ತವಾಡ ರಸ್ತೆಯಿಂದ ಘೋಸರವಾಡ ಬ್ಯಾರೇಜವರೆಗೆ ರಸ್ತೆ ಅಭಿವೃದ್ಧಿ ಆಗಬೇಕೆಂದು ಇಲ್ಲಿನ ಜನರ ಬೇಡಿಕೆಯಾಗಿತ್ತು.ಅವರ ಬೇಡಿಕೆಯಂತೆ 1 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇವತ್ತು ಚಾಲನೆ ನೀಡಲಾಗಿದೆ ಎಂದರು.ಸದಲಗಾ ಪಟ್ಟಣದ ಶಿವಾಜಿ ವೃತ್ತದಿಂದ ಬಸವೇಶ್ವರ …
Read More »ಮಜಗಾವದ ಆದಿನಾಥ ಜೈನ ಮಂದಿರದಲ್ಲಿ ಅಕ್ಷಯ ತೃತೀಯ ಸಡಗರ: ಭಗವಂತನಿಗೆ ಕಬ್ಬಿನ ಹಾಲಿನ ಅಭಿಷೇಕ
ಬೆಳಗಾವಿಯ ಮಜಗಾವ ಗ್ರಾಮದಲ್ಲಿ ಅಕ್ಷಯ ತೃತೀಯದ ನಿಮಿತ್ತ ಧಾರ್ಮಿಕ ಸಂಭ್ರಮ ಮನೆಮಾಡಿದೆ. ಮುನಿಗಳ ಮಾರ್ಗದರ್ಶನದಲ್ಲಿ ಭಗವಾನ್ ಆದಿನಾಥರಿಗೆ ವಿಶೇಷ ಕಬ್ಬಿನ ಹಾಲಿನ ಅಭಿಷೇಕ ಮಾಡುವ ಮೂಲಕ ಭಕ್ತರು ಭಕ್ತಿಭಾವದಿಂದ ಸಂಭ್ರಮಿಸಿದರು. ಬೆಳಗಾವಿ ಸಮೀಪದ ಮಜಗಾವ ಗ್ರಾಮದ ಭಗವಾನ್ ಶ್ರೀ 1008 ಆದಿನಾಥ ದಿಗಂಬರ ಜೈನ ಮಂದಿರದಲ್ಲಿ ಅಕ್ಷಯ ತೃತೀಯ ಕಾರ್ಯಕ್ರಮವು ಅತ್ಯಂತ ಸಡಗರದಿಂದ ಜರುಗಿತು. ಪರಮ ಪೂಜ್ಯ 108 ಮಹಾನಸಾಗರ್ ಮುನಿಗಳ ಪ್ರೇರಣೆ ಹಾಗೂ ಮಾರ್ಗದರ್ಶನದಲ್ಲಿ ನಡೆದ ಈ ಉತ್ಸವದಲ್ಲಿ, …
Read More »ಬೆಳಗಾವಿ ಶಿವಜಯಂತಿ ಮೆರುಗು: ಚವ್ಹಾಟ್ ಗಲ್ಲಿ ಮಂಡಳಿಯಿಂದ ಈ ಬಾರಿ ಅದ್ಭುತ ‘ಸಜೀವ ರೂಪಕ’ ಪ್ರದರ್ಶನ!
ಬೆಳಗಾವಿಯ ಶಿವಜಯಂತಿ ಅಂದ್ರೆ ಅಲ್ಲಿ ಸಜೀವ ರೂಪಕಗಳದ್ದೇ ಕಾರುಬಾರು. ಈ ಬಾರಿ ಚವ್ಹಾಟ್ ಗಲ್ಲಿಯ ಕ್ರಾಂತಿಸಿಂಹ ನಾನಾ ಪಾಟೀಲ್ ಚೌಕ್ ಮಂಡಳವು ಶಿವಭಕ್ತರ ಮನವಿಗೆ ಓಗೊಟ್ಟು, ತನ್ನ ಐತಿಹಾಸಿಕ ಸಜೀವ ರೂಪಕವನ್ನ ಒಂದೇ ಸ್ಥಳದಲ್ಲಿ ನಿಂತು ಪ್ರದರ್ಶಿಸಲು ನಿರ್ಧರಿಸಿದೆ. ಸುನಿಲ್ ಜಾಧವ್ ಅವರ ಮುಂದಾಳತ್ವದಲ್ಲಿ ಈ ಉಪಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಕ್ರಾಂತಿಸಿಂಹ ನಾನಾ ಪಾಟೀಲ್ ಚೌಕ್ ಚವಾಟ ಗಲ್ಲಿಯ ಶಿವಜಯಂತಿ ಉತ್ಸವ ಮಂಡಳವು ಈ ಬಾರಿ ಶಿವಭಕ್ತರಿಗಾಗಿ ವಿಶೇಷ ಸೌಲಭ್ಯವನ್ನ …
Read More »ಶರಣರ ವಚನಗಳೇ ವೈದ್ಯ ವಿಜ್ಞಾನದ ಸಾಕ್ಷಿ: ಬೆಳಗಾವಿಯಲ್ಲಿ ಡಾ. ಭವ್ಯಾ ಸಂಪಗಾರ ಪ್ರತಿಪಾದನೆ
12ನೇ ಶತಮಾನದ ಶರಣರ ವಚನಗಳು ಕೇವಲ ಆಧ್ಯಾತ್ಮಿಕ ದರ್ಶನಗಳಲ್ಲ, ಅವುಗಳಲ್ಲಿ ವೈದ್ಯ ವಿಜ್ಞಾನದ ಆಳವಾದ ಅಧ್ಯಯನ ಅಡಗಿದೆ ಎಂದು ಡಾ. ಭವ್ಯಾ ಸಂಪಗಾರ ತಿಳಿಸಿದ್ದಾರೆ. ಬೆಳಗಾವಿಯ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಈ ಕುರಿತು ಉಪನ್ಯಾಸ ನೀಡಿದರು. ಪೂಜ್ಯ ತಾಯಂದಿರ ಸಾನ್ನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಬೆಳಗಾವಿಯ ಸ್ಥಳೀಯ ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ …
Read More »ಕಾಗವಾಡ ತಾಲೂಕಿನ ಉಗಾರ ಖುರ್ದ್‌ನಲ್ಲಿ ‘ಜನಶಕ್ತಿ ಸೇವಾ ಸಂಘ’ ಉದ್ಘಾಟನೆ
ಭಾರತದಲ್ಲಿ ಯುವಶಕ್ತಿ ಒಗ್ಗೂಡುತ್ತಿರುವುದು ದೇಶದ ಅಭಿವೃದ್ಧಿಗೆ ಪೂರಕವಾದ ಶುಭ ಸಂಕೇತವಾಗಿದೆ. ಯುವಕರು ಗ್ರಾಮ, ಪಟ್ಟಣ ಹಾಗೂ ದೇಶದ ಪ್ರಗತಿಗಾಗಿ ಶ್ರಮಿಸಬೇಕು. ಸಂಘಟನೆಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ಉಗಾರ ಸಕ್ಕರೆ ಕಾರ್ಖಾನೆಯ ಜನರಲ್ ಮ್ಯಾನೇಜರ್ ಅನಂತ್ ಸಿದ್ಧಾಂತಿ ಅಭಿಪ್ರಾಯಪಟ್ಟರು. ರವಿವಾರ ಸಂಜೆ ಉಗಾರ ಖುರ್ದ್ ಪಟ್ಟಣದ ಬಿರೊಬಾ ಮಂದಿರದಲ್ಲಿ ನ್ಯಾಯವಾದಿ ರಾಹುಲ್ ಕಟಗೇರಿ ಅವರ ನೇತೃತ್ವದಲ್ಲಿ ಸ್ಥಾಪಿಸಲಾದ *’ಜನಶಕ್ತಿ ಸೇವಾ ಸಂಘ’*ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂಘದ ಸಂಸ್ಥಾಪಕ ರಾಹುಲ್ …
Read More »
Laxmi News 24×7