ಬೆಳಗಾವಿ,: ಅನಾರೋಗ್ಯದಿಂದ ಸಾವನ್ನಪ್ಪಿದ ಮಗನ ಅಂತ್ಯಕ್ರಿಯೆಗೆ (Last Rites) ದುಡ್ಡಿಲ್ಲದೇ ಪರದಾಡುತ್ತಿದ್ದ ತಾಯಿಗೆ ಬೆಳಗಾವಿಯ (Belagavi) ವಿಜಯ ಮೋರೆ ಅವರ ಯಂಗ್ ಬೆಲಗಾಮ್ ಫೌಂಡೇಶನ್ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದೆ. ಹಣವಿಲ್ಲದೇ ಪರದಾಡುತ್ತಿದ್ದ ಹೆತ್ತತಾಯಿಯ ನೆರವಿಗೆ ಬಂದ ಯಂಗ್ ಬೆಲಗಾಮ್ ಫೌಂಡೇಶನ್ ಹಿಂದೂ ಸಂಪ್ರದಾಯದಂತೆ ವಿಧಿವಿಧಾನಗಳನ್ನ ಮುಗಿಸಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ವಿಶ್ವನಾಥ ಶಿವಲಿಂಗಪ್ಪ ಗುರಕ್ಕನವರ(34) ಎಂಬುವವರು ಅನಾರೋಗ್ಯದಿಂದಾಗಿ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮೃತ ವಿಶ್ವನಾಥನ …
Read More »ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಿಂದ ಬ್ಲಾಕ್‌ಮೇಲ್ : ಕಾಂಗ್ರೆಸ್ ದೂರು
ಬೆಂಗಳೂರು: ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ (Rajyasabha Election) ತನಗೆ ಅಡ್ಡಮತ ಚಲಾಯಿಸುವಂತೆ ಬಿಜೆಪಿ (BJP) ಹಾಗೂ ಜಾತ್ಯಾತೀತ ಜನತಾದಳ (JDS) ಅಭ್ಯರ್ಥಿ ಕುಪೇಂದ್ರ ರೆಡ್ಡಿ (Kupendra Reddy) ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ (Congress) ನಾಯಕರು ದೂರು ದಾಖಲು ಮಾಡಿದ್ದಾರೆ. ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ (Ganiga Ravikumar), ಪೊನ್ನಣ್ಣ (Ponnanna) ಹಾಗೂ ಕೋನರೆಡ್ಡಿ (Konareddy) ನೇತೃತ್ವದ ನಿಯೋಗದಿಂದ ಬೆಂಗಳೂರು (Benagaluru) ಪೊಲೀಸ್ ಆಯುಕ್ತ ಬಿ. ದಯಾನಂದ್ (B. Dayanand) ಅವರಿಗೆ …
Read More »ಪ್ರತಿಪಕ್ಷದಿಂದ ಸಭಾತ್ಯಾಗ – ಇದು ನಾಚಿಕೆಗೇಡು ಎಂದ ಸಿಎಂ!
ಬೆಂಗಳೂರು : ಬಜೆಟ್ (Karnataka Budget 2024) ಮೇಲಿನ ಚರ್ಚೆಯ ಎರಡನೇ ದಿನವಾದ ಮಂಗಳವಾರ ಸಿಎಂ ಸಿದ್ದರಾಮಯ್ಯ (CM Siddaramaiah) ಭಾಷಣದ ವೇಳೆ ಕುಪಿತರಾದ ಬಿಜೆಪಿ (BJP) ನಾಯಕರು ಸಾಮೂಹಿಕವಾಗಿ ಸಭಾತ್ಯಾಗ (Session walkout) ಮಾಡಿದರು. ಇದನ್ನು ಲೇವಡಿ ಮಾಡಿದ ಸಿಎಂ ಸಿದ್ದರಾಮಯ್ಯ ನಾಚಿಕೆಯಿಂದ ಬಿಜೆಪಿವರು ಹೊರಗೆ ಹೋಗುತ್ತಿದ್ದಾರೆ ಎಂದು ಟೀಕಿಸಿದರು. ಕೇಂದ್ರ ಬೆಜಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ಯಾವುದೇ ಹೆಚ್ಚಿನ ನೆರವು ನೀಡಿಲ್ಲ. ಜೊತೆಗೆ ತೆರಿಗೆ ಹಂಚಿಕೆಯಲ್ಲಿಯೂ …
Read More »ರೈತರ ಖಾತೆಗೆ 10,000ರೂ. – 2 ಕಂತುಗಳಲ್ಲಿ ನೇರ ನಗದು ವರ್ಗಾವಣೆ
ರಾಜ್ಯದ ರೈತರ ಏಳಿಗೆಗಾಗಿ ಸಿದ್ದು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ರೈತ ಸಿರಿ ಯೋಜನೆ ಪ್ರಮುಖವಾದುದು. ಸಿರಿಧಾನ್ಯ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಜಾರಿಗೆ ತಂದಿರುವ ಯೋಜನೆ ಇದಾಗಿದ್ದು, ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10,000 ಪ್ರೋತ್ಸಾಹ ಧನವನ್ನು 2 ಕಂತುಗಳಲ್ಲಿ ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಮೊದಲ ಕಂತಿನಲ್ಲಿ 6,000, 2ನೇ ಕಂತಿನಲ್ಲಿ 4,000 ಹಣ …
Read More »ತೀಯ ಪಿಯುಸಿ, ಎಸ್‌ಎಸ್‌ಎಲ್ಸಿ ಪರೀಕ್ಷೆ ದಿನಾಂಕ ಪ್ರಕಟ
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಮಾಹಿತಿ ನಿಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ,2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22ರ ವರೆಗೆ ನಡೆಯಲಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಎಪ್ರಿಲ್ 6ರವರೆಗೆ ನಡೆಯಲಿವೆ ಎಂದು ತಿಳಿಸಿದರು.
Read More »ಮಾ.9ರ ಬಳಿಕ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಸಾಧ್ಯತೆ.!
ಮಾರ್ಚ್ 9ರ ಬಳಿಕ ಭಾರತೀಯ ಚುನಾವಣೆ ಆಯೋಗ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಭಾರತೀಯ ಚುನಾವಾಣಾ ಆಯೋಗ ಉನ್ನತ ಅಧಿಕಾರಿಗಳು ಅಂತಿಮ ಪರಿಶೀಲನೆಗಾಗಿ ರಾಜ್ಯಗಳಿಗೆ ತೆರಳುತ್ತಿದೆ. ಚುನಾವಣಾ ಸಮಿತಿ ಮಾ.9ರ ಬಳಿಕ ಚುನಾವಣೆ ದಿನಾಂಕ ಘೋಷಿಸುವ ಸಾಧ್ಯತೆ ಇದ” ಎಂದು ವರದಿಯಾಗಿದೆ. ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಭಾರತದಲ್ಲಿ 18ನೇ ಲೋಕಸಭೆಯ ಸದಸ್ಯರ ಆಯ್ಕೆಗೆ ಸಾರ್ವತ್ರಿಕ ಚುನಾವಣೆ ನಡೆಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
Read More »ಬಿಪಿಎಲ್ ಕಾರ್ಡುದಾರರಿಗೆ ಬಂಪರ್: ಕೇಂದ್ರದಿಂದ ಮಹತ್ವದ ಯೋಜನೆ
ಕೇಂದ್ರ ಸರಕಾರದ ಆಯುಷ್ಮಾನ್ ಯೋಜನೆಯ ಅಡಿಯಲ್ಲಿ ಕೇವಲ ಸರಕಾರಿ ಆಸ್ಪತ್ರೆಗಳಲ್ಲಿ ಮಾತ್ರವಲ್ಲ, ಖಾಸಗಿ ಆಸ್ಪತ್ರೆಗಳಲ್ಲಿಯೂ ಕೂಡ ಉಚಿತ ಚಿಕಿತ್ಸೆಗೆ ಅವಕಾಶವಿದೆ. ಬಿಪಿಎಲ್ ಕಾರ್ಡು ಹೊಂದಿರುವವರು 5 ಲಕ್ಷ ರೂಪಾಯಿ ಹಾಗೂ ಎಪಿಎಲ್ ಕಾರ್ಡುದಾರರು ಅಥವಾ ಕಾರ್ಡು ಹೊಂದದೇ ಇರುವವರು ಕೂಡ 1.5 -2 ಲಕ್ಷ ರೂಪಾಯಿಯ ವರೆಗೆ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶವಿದೆ. ನೀವು abdm.gov.in / ಗೆ ಭೇಟಿ ನೀಡುವ ಮೂಲಕ ನೀವು ಆಯುಷ್ಮಾನ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Read More »ಲೋಕಸಭೆಗೆ 2 ಕ್ಷೇತ್ರಗಳಿಂದ ಕಣಕ್ಕಿಳಿಯಲು ಸಿದ್ಧವಾಗಿರುವ ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಫೆಬ್ರವರಿ 19: ಬಿಜೆಪಿ ತೊರೆದು ಕಾಂಗ್ರೆಸ್‌ನಲ್ಲಿದ್ದಾಗ ಲೋಕಸಭಾ ಚುನಾವಣೆ ಸ್ಪರ್ಧೆ ಇಲ್ಲ ಎಂದು ಕಡ್ಡಿ ತುಂಡಾದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದರು. ಇದೀಗ ವರಸೆ ಬದಲಿಸಿರುವ ಅವರು ಬಿಜೆಪಿಯಿಂದ ಈ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಆಸೆ ವ್ಯಕ್ತಪಡಿಸಿದ್ದಾರೆ.ಎರಡು ದಿನ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯ ಕಾರ್ಯಕಾರಿಣಿ ಸಭೆಯ ಬಳಿಕ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ದೃಷ್ಟಿಯಿಂದ ಸಂಘಟನಾತ್ಮಕವಾಗಿ ಹಲವು ವಿಷಯಗಳು ಚರ್ಚೆಯಾದವು. ಟಿಕೆಟ್ …
Read More »ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ: ಕೃಷ್ಣ ಬೈರೇಗೌಡ
ಬೆಂಗಳೂರು,: ಕಂದಾಯ ಇಲಾಖೆಯ ಕೆಲಸವನ್ನು ಮತ್ತಷ್ಟು ಚುರುಕುಗೊಳಿಸಲು ಹಾಗೂ ಜನರಿಗೆ ಸರಳ ಆಡಳಿತ ನೀಡುವ ಉದ್ದೇಶದಿಂದ ಶೀಘ್ರದಲ್ಲೇ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.”ತಾಲೂಕುಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ನೌಕರರನ್ನು ಬೇರೆಡೆ ನಿಯೋಜನೆ ಮಾಡಲಾಗುತ್ತಿದೆ. ಉದ್ಯೋಗಿಗಳ ಕೊರತೆಯಿಂದಾಗಿ ಕಂದಾಯ ಇಲಾಖೆಯಲ್ಲಿ ಜನರಿಗೆ ಸರಿಯಾದ ಸಮಯಕ್ಕೆ ಕೆಲಸವಾಗುತ್ತಿಲ್ಲ” ಎಂಬ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೂಡ್ಲಿ …
Read More »ಬರ ಪೀಡಿತ ಪ್ರತಿ ತಾಲೂಕುಗಳಲ್ಲಿ ಮೇವು ಬ್ಯಾಂಕ್
ಧಾರವಾಡ, ಫೆಬ್ರವರಿ 19; ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜನರು ಮಾತ್ರವಲ್ಲ ಜಾನುವಾರುಗಳು ಸಹ ಸಂಕಷ್ಟಕ್ಕೆ ಸಿಲುಕಿವೆ. ಧಾರವಾಡ ಜಿಲ್ಲೆಯಲ್ಲಿ ಬರಪೀಡಿತ ತಾಲೂಕಿಗೊಂದು ಮೇವು ಬ್ಯಾಂಕ್ ಆರಂಭ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ.ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಸೋಮವಾರ ಮಾದನಭಾವಿ ಸರ್ಕಾರಿ ಗೋಶಾಲೆಗೆ ಭೇಟಿ ನೀಡಿದರು. ಜಿಲ್ಲೆಯಲ್ಲಿ 1,38,492 ಟನ್ ಮೇವು ದಾಸ್ತಾನು ಲಭ್ಯವಿದೆ. ಬರಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಮತ್ತು ಜನರ ಬೇಡಿಕೆಗೆ ಅನುಗುಣವಾಗಿ …
Read More »
Laxmi News 24×7