Breaking News

Laxminews 24x7

ʻಡಿಕೆʼ ಸರ್ಕಾರದಲ್ಲಿ ಮಹಿಳೆಯರಿಗಿಲ್ಲ ʻಸಚಿವ ಸ್ಥಾನʼ.!

ಬೆಳಗಾವಿ: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದ ಮೊದಲ ಹಂತದ ಸಚಿವ ಸಂಪುಟ ರಚನೆಯಲ್ಲಿ ಪುರುಷರಿಗೆ ಆಧ್ಯತೆ ನೀಡಲಾಗಿದ್ದು, ಕೈ ಪಾಳೆಯದಲ್ಲಿರುವ ಮಹಿಳಾ ಶಾಸಕರಿಗೂ ಮಂತ್ರಿಯಾಗುವ ಸೌಭಾಗ್ಯ ದೊರೆಯದಿರುವುದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಹೌದು…ಈಗಾಗಲೇ ಪ್ರಮಾಣವಚನ ಸ್ವೀಕರಿಸಿದ ಹದಿನಾಲ್ಕು ಜನರ ಇಡೀ ಮಂತ್ರಿಮಂಡಲದಲ್ಲಿ ಒಬ್ಬರೇ ಒಬ್ಬ ಮಹಿಳಾ ಶಾಸಕರಿಗೆ ಪ್ರಾತಿನಿಧ್ಯ ನೀಡಲಾಗಿಲ್ಲ. ಪ್ರಮಾಣ ವಚನ ಸ್ವೀಕಾರ ಮಾಡುವವರೆಲ್ಲರೂ ಪುರುಷರಾಗಿದ್ದಾರೆ. ವಿವಿಧ …

Read More »

ಸಹಾಯಕ ಪ್ರಾಧ್ಯಾಪಕಿಯ ನಿಗೂಢ ಹತ್ಯೆ

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿಯೊಬ್ಬರ ನಿಗೂಢ ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಶಿವಾಜಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ದೇವಸ್ಮಿತಾ ಪೌಲ್‌ ಕೊಲೆಯಾದ ದುರ್ದೈವಿ. ಇವರು ಪೂರ್ವ ದೆಹಲಿಯ ವಸುಂಧರಾ ಎನ್‌ಕ್ಲೇವ್‌ನ ಸತ್ಯಂ ಅಪಾರ್ಟ್ಮೆಂಟ್‌ನಲ್ಲಿ ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಇವರ ಪತಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ. ಗುರುವಾರ ಮಧ್ಯಾಹ್ನ 2:25 ರ ಸುಮಾರಿಗೆ ದೇವಸ್ಮಿತಾ ಪೌಲ್‌ ಸಹೋದರಿ ದೇವಾರತಿ ನ್ಯೂ ಅಶೋಕ್ ನಗರ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆಯ …

Read More »

ಸಚಿವ ಸಂಪುಟದಲ್ಲಿ ಪಕ್ಷದ ರೆಡ್ಡಿ ಸಮುದಾಯದ ಶಾಸಕರಿಗೆ ಸೂಕ್ತ ಪ್ರಾತಿನಿಧಿ ಕಲ್ಪಿಸಿ

ಬೆಳಗಾವಿ:ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಪಕ್ಷದ ರೆಡ್ಡಿ ಸಮುದಾಯದ ಶಾಸಕರಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕು. ಇಲ್ಲವಾದರೆ ರಾಜ್ಯಾದ್ಯಂತ ಹಂತ ಹಂತವಾಗಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಬೆಳಗಾವಿ ರಡ್ಡಿ ಸಂಘದ ಮಾಜಿ ಉಪಾಧ್ಯಕ್ಷ ಬಸವರಾಜ ಬಾವಲತ್ತಿ ಎಚ್ಚರಿಕೆ ನೀಡಿದರು. ಸದಾಶಿವನಗರದ ರೆಡ್ಡಿ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಪಕ್ಷಕ್ಕಾಗಿ ದುಡಿದ ಹಿರಿಯ ನಾಯಕರು ಎಂದಿಗೂ ಕಾಂಗ್ರೆಸ್‌ಗೆ ಕೆಟ್ಟ ಹೆಸರು ತರುವ ಕೆಲಸ ಮಾಡಿಲ್ಲ. ಆದರೂ …

Read More »

ವಿದ್ಯಾರ್ಥಿನಿ ಜೊತೆ ಲವ್ವಿ-ಡವ್ವಿ; ಕಾಮುಕ ಪ್ರೊಫೆಸರ್‌ ವಿರುದ್ಧ ರೊಚ್ಚಿಗೆದ್ದ ಧಾರವಾಡ ವಿವಿ ವಿದ್ಯಾರ್ಥಿಗಳು

ಧಾರವಾಡ: ಆಕಾರವಿಲ್ಲದ ಕಲ್ಲಿಗೆ ಒಬ್ಬ ಶಿಲ್ಪಿ ಹೇಗೆ ಆಕಾರ ನೀಡುತ್ತಾನೋ ಅದೇ ರೀತಿ, ಅಜ್ಞಾನವೆಂಬ ಅಂದಕಾರದಲ್ಲಿರುವ ವ್ಯಕ್ತಿಗೆ ಜ್ಞಾನವೆಂಬ ಮಾರ್ಗ ತೋರುವವನೇ ಶಿಕ್ಷಕ. ಆದ್ರೆ ಗುರುವೇ ದೇವರು ಎಂದು ನಂಬಿರುವ ಸಂಸ್ಕೃತಿ ನಮ್ಮದು. ಆದ್ರೆ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ-ಶಿಕ್ಷಕರ ನಡುವಿನ ಬಾಂಧವ್ಯಕ್ಕೆ ಬೆಲೆ ಇಲ್ಲದಂತಾಗ್ತಿದೆ. ದೇವರಿಗೆ ಸಮನಾದ ಶಿಕ್ಷಕನೇ ವಿದ್ಯಾರ್ಥಿನಿ ಜೊತೆ ಸೇರಿ ಹೊಲಸು ತಿನ್ನುವ ಕೆಲಸ ಮಾಡಿರುವುದು ಕಂಡುಬರುತ್ತಿದೆ. ಇದಕ್ಕೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ  ನಡೆದಿರುವ ಘಟನೆ ಸಾಕ್ಷಿಯಾಗಿದೆ. …

Read More »

ನನಗೆ ಒಳ್ಳೆಯ ಖಾತೆಯನ್ನೇ ಕೊಟ್ಟಿದ್ದಾರೆ – I’m happy ಎಂದ ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಈ ಹಿಂದೆಯೇ ನಾನು ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಹೇಳಿದ್ದೆ. ಆದ್ರೆ ನನಗೆ ಒಳ್ಳೆಯ ಖಾತೆಯನ್ನೇ ಕೊಟ್ಟಿದ್ದಾರೆ. So I’m happy ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮುಂದುವರಿದು… ರಾಮಲಿಂಗಾ ರೆಡ್ಡಿ ಹಾಗೂ ಮುನಿಯಪ್ಪ ಅವರು ಬಹಳ ವರ್ಷಗಳಿಂದ ಕಾಂಗ್ರೆಸ್‌ನಲ್ಲಿರುವ ಹಿರಿಯ ನಾಯಕರು, ನಿಷ್ಠೆಯಿಂದ ಇರುವವರು. ಹೈಕಮಾಂಡ್‌ ಅವರೊಟ್ಟಿಗೆ ಮಾತನಾಡಿ, ಅದೇನೇ ಸಮಸ್ಯೆಯಿದ್ದರೂ ಸೌಹಾರ್ಧಯುತವಾಗಿ ಬಗೆಹರಿಸುತ್ತಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Read More »

ಮನವೊಲಿಸಿ, ಒಪ್ಪದಿದ್ರೆ ರಾಜೀನಾಮೆ ಅಂಗೀಕರಿಸಿ – ಒಂದು ಸಾಲಿನ ಸಂದೇಶ ಕೊಟ್ಟ ರಾಹುಲ್‌ ಗಾಂಧಿ

ಬೆಂಗಳೂರು: ʻಬೆಂಗಳೂರು ಅಭಿವೃದ್ಧಿʼ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾರೆಡ್ಡಿ  ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೋರಮಂಗಲದ ಕಚೇರಿಯಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆಯ ಹಿಂದಿನ ಅಸಲಿ ಕಾರಣಗಳನ್ನ ಮುಕ್ತವಾಗಿ ಬಿಚ್ಚಿಟ್ಟಿದ್ದಾರೆ. ಯಾರ ಮನವೊಲಿಕೆಗೂ ಬಗ್ಗದ ರಾಮಲಿಂಗಾರೆಡ್ಡಿ, ʻನನ್ನ ನಿರ್ಧಾರ ಅಚಲ, ಯಾರನ್ನೂ ಭೇಟಿಯಾಗುವ ಪ್ರಶ್ನೆಯೇ ಇಲ್ಲʼ ಎಂದು ಹಠ ಹಿಡಿದಿರುವುದು ಡಿಕೆಶಿ ಪಾಲಿಗೆ ಆರಂಭದಲ್ಲೇ ಅತಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಮಧ್ಯೆ ಲೋಕಸಭೆ …

Read More »

ನಾನ್‌ ಸಿಎಂ ಆದ್ಮೇಲೆ ರಾಮಲಿಂಗಾರೆಡ್ಡಿಗೆ ಬೆಂಗ್ಳೂರು ಅಭಿವೃದ್ಧಿ ಖಾತೆ‌ ಕೊಡ್ತೀನಿ ಅಂದ್ದಿದ್ದು ನಿಜ: ಡಿಕೆಶಿ

ಬೆಂಗಳೂರು: ನಾನು ಸಿಎಂ ಆದ್ಮೇಲೆ ರಾಮಲಿಂಗಾ ರೆಡ್ಡಿ  ಅವರಿಗೆ ಬೆಂಗಳೂರು ಅಭಿವೃದ್ಧಿ ಖಾತೆ ಕೊಡ್ತೀನಿ ಅಂತ ಮಾತುಕೊಟ್ಟಿದ್ದು ನಿಜ ಎಂದು ಸಿಎಂ ಡಿಕೆ ಶಿವಕುಮಾರ್‌  ಒಪ್ಪಿಕೊಂಡಿದ್ದಾರೆ. ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ವಿಚಾರ ‌ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ ಅವರು ಬೇರೆ ಕಡೆ ಹೋಗಿದ್ದರು, ಈಗ ಬರ್ತಿದ್ದಾರೆ. ನಾನು ಅವರನ್ನ ಭೇಟಿಯಾಗುತ್ತೇನೆ ಎಂದಿದ್ದಾರೆ. ನಾನು ಸಿಎಂ ಆದ್ಮೇಲೆ ನಿನಗೆ ಈ ಖಾತೆ ಕೊಡ್ತೀನಿ ಅಂತ ಹೇಳಿದ್ದು ನಿಜ. ಸಾರಿಗೆ …

Read More »

ಚಿಕ್ಕಬಳ್ಳಾಪುರ | KIADB ಯಿಂದ 13 ಹಳ್ಳಿಗಳ 2,800 ಎಕ್ರೆ ಭೂಸ್ವಾಧೀನ ವಿರೋಧಿಸಿ ಬೈಕ್ ರ‍್ಯಾಲಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2,800 ಎಕರೆ ಜಮೀನನ್ನ ಕೆಐಎಡಿಬಿ ಭೂಸ್ವಾಧೀನ ಮಾಡಿಕೊಳ್ಳಬಾರದು ಎಂದು ರೈತರು ಚಿಕ್ಕಬಳ್ಳಾಪುರದಿಂದ  ಬೆಂಗಳೂರಿನ ವಿಧಾನಸೌಧಕ್ಕೆ ಬೈಕ್ ರ‍್ಯಾಲಿ  ನಡೆಸಿದರು. ಕಳೆದ 81 ದಿನಗಳಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ರೈತರು  ಇಂದು ಬೆಂಗಳೂರಿಗೆ ಬೈಕ್ ರಾಲಿ ನಡೆಸಿದ್ದರು. ಸಾವಿರಾರು ಮಂದಿ ರೈತರು ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡರು. ಈ ಹಿನ್ನೆಲೆ ಚಿಕ್ಕಬಳ್ಳಾಪುರ ಪೊಲೀಸರು 500 ಕ್ಕೂ …

Read More »

ರಾಜ್ಯಕ್ಕೆ ಮುಂಗಾರು ಪ್ರವೇಶ – ರೈತರಿಗೆ ಬಿತ್ತನೆ ಕಾರ್ಯಕ್ಕೆ ಸೂಚನೆ

ಧಾರವಾಡ: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ರೈತರು  ಬಿತ್ತನೆ ಕಾರ್ಯ ಮಾಡಲು ಹವಾಮಾನ ಇಲಾಖೆ ವಿಜ್ಞಾನಿಗಳು ಸೂಚನೆ ನೀಡಿದ್ದಾರೆ. ಕೇರಳಕ್ಕೆ ಮುಂಗಾರು ಮಳೆ  ತಡವಾಗಿ ಪ್ರವೇಶವಾದರೂ, ರಾಜ್ಯಕ್ಕೆ ಸಮಯಕ್ಕೆ ಸರಿಯಾಗಿ ಪ್ರವೇಶವಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾದ್ಯತೆ ಇದೆ. ಉಳಿದ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ವಿವಿಯ ಹವಾಮಾನ ಇಲಾಖೆ ವರದಿ ಮಾಡಿದೆ.

Read More »

ಕಾಂಗ್ರೆಸ್‌ ವಿರುದ್ಧದ ಜನಾಕ್ರೋಶಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ – ಮೋದಿ

ಗಾಂಧೀನಗರ: ಕರ್ನಾಟಕದಲ್ಲಿ  ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದೆ. ಇದರಿಂದ ಕಾಂಗ್ರೆಸ್ ವಿರುದ್ಧವೂ ಸಾರ್ವಜನಿಕರ ತೀವ್ರ ಆಕ್ರೋಶವಿದೆ ಎಂದು ಪ್ರಧಾನಿ ಮೋದಿ  ಹೇಳಿದ್ದಾರೆ. ಗುಜರಾತ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ `ಸ್ವಾವಲಂಬಿ ಭಾರತ’ ಅಭಿಯಾನದಡಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದರು. ಕಾಂಗ್ರೆಸ್ ಅಥವಾ ರಾಹುಲ್ ಗಾಂಧಿಯ ಹೆಸರನ್ನು ಉಲ್ಲೇಖಿಸದೇ, ಕೆಲವರು ಭಾರತವನ್ನು ಕೆಣಕಲು ಬಯಸುತ್ತಾರೆ. ಬಿಜೆಪಿಯ ರಾಜಕೀಯ ಯಶಸ್ಸನ್ನು ಉಲ್ಲೇಖಿಸಿದ ಅವರು, ದೇಶವು ಅವ್ಯವಸ್ಥೆ, ಅನಿಶ್ಚಿತತೆ ಮತ್ತು ಹತಾಶೆಯನ್ನು ಮೆಚ್ಚುವುದಿಲ್ಲ. ಕಳೆದ …

Read More »