Breaking News

Laxminews 24x7

ಪಾಕ್ ವಾಯುಪ್ರದೇಶಕ್ಕೆ ಪರ್ಯಾಯ – ಚೀನಾದ ವಾಯುಮಾರ್ಗ ಬಳಸಲು ಭಾರತ ಮಾತುಕತೆ

ನವದೆಹಲಿ: ಪಾಕಿಸ್ತಾನ  ತನ್ನ ವಾಯುಪ್ರದೇಶವನ್ನು ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ನಿರ್ಬಂಧಿಸಿರುವ ಹಿನ್ನೆಲೆ ಪರ್ಯಾಯ ವಾಯುಮಾರ್ಗ ಬಳಸುವ ಕುರಿತು ಭಾರತ  ಚೀನಾ  ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಭಾರತೀಯ ವಿಮಾನಗಳು ಪಾಕಿಸ್ತಾನದ ವಾಯುಪ್ರದೇಶವನ್ನು ತಪ್ಪಿಸಿ ಸಂಚರಿಸಲು ಚೀನಾದ ಚಿನ್‌ಜಿಯಾಂಗ್ ವಾಯುಸೀಮೆ ಬಳಸುವ ಸಾಧ್ಯತೆ ಬಗ್ಗೆ ಚರ್ಚೆ ನಡೆಯುತ್ತಿದೆ. ವಿಶೇಷವಾಗಿ ಚೀನಾದ ಹೊತಾನ್ ಪ್ರದೇಶದ ಮಾರ್ಗ ಮೂಲಕ ವಿಮಾನಗಳ ಕಾರ್ಯಾಚರಣೆ ನಡೆಸುವ ಕುರಿತು ಕಳೆದ ಒಂದು ವರ್ಷದಿಂದ ಮಾತುಕತೆ …

Read More »

ಮಡಗಾಂವ್ – ಮಂಗಳೂರು ವಂದೇ ಭಾರತ್ ಬೆಂಗಳೂರುವರೆಗೆ ವಿಸ್ತರಣೆ

ಕಾರವಾರ: ಉತ್ತರ ಕನ್ನಡ ಮತ್ತು ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಂಗಳೂರು ಮತ್ತು ಮಡಗಾಂವ್  ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಪರ್ಕಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಪ್ರಸ್ತುತ ಸಂಚರಿಸುತ್ತಿರುವ ಮಡಗಾಂವ್ – ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರಿಗೆ ವಿಸ್ತರಿಸಲಾಗಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಪತ್ರದ ಮೂಲಕ ಅಧಿಕೃತ ಮಾಹಿತಿ ನೀಡಿದ್ದಾರೆ ಎಂದು ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ …

Read More »

ಕಬ್ಬಿಗೆ 5,500 ರೂ. ನೀಡಿ – ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ, ಜೋಶಿ ಮನೆ ಮುತ್ತಿಗೆ

ಹುಬ್ಬಳ್ಳಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ರೈತರ ಹೋರಾಟ ತೀವ್ರಗೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಹುಬ್ಬಳ್ಳಿಗೆ ಆಗಮಿಸಿದ್ದು, ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ರೈತರು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿ ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿ ಮಾಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಜೊತೆಗೆ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ  ಹೆಚ್ಚಿಸಬೇಕು ಹಾಗೂ ರೈತರಿಗೆ ನ್ಯಾಯಯುತ ಬೆಲೆ ಸಿಗುವಂತೆ ಕ್ರಮ ಕೈಗೊಳ್ಳಬೇಕು …

Read More »

9 ಕಿಮೀ ಕ್ರಮಿಸೋಕೆ 1 ಗಂಟೆ – ಬೆಂಗ್ಳೂರಲ್ಲಿ ಮಳೆಯಿಂದ ಭಾರೀ ಟ್ರಾಫಿಕ್‌ ಜಾಮ್‌!

ಬೆಂಗಳೂರು: ನಗರದಲ್ಲಿ ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಔಟರ್ ರಿಂಗ್ ರೋಡ್, ಹೆಚ್‌ಎಸ್‌ಆರ್ ಲೇಔಟ್, ಅಗರಲೇಕ್, ಕಾಡುಬೀಸನಹಳ್ಳಿ ಸುತ್ತಮುತ್ತ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. 9 ಕಿಮೀ ಕ್ರಮಿಸೋದಕ್ಕೆ 1 ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ. ಮಳೆ, ರಸ್ತೆಗುಂಡಿ, ರಸ್ತೆಯಲ್ಲಿ ನೀರು ನಿಂತು ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಟ್ರಾಫಿಕ್‌ ಜಾಮ್‌ ಆಗುತ್ತಲೇ ಇರುತ್ತದೆ. ಇದರ ನಡುವೆ ಮಳೆಯಿಂದಾಗಿ ಟ್ರಾಫಿಕ್‌ …

Read More »

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಭೂಕಂಟಕ – ಜಮೀನು ಕಬಳಿಕೆ ಆರೋಪದಡಿ FIR

ಕಲಬುರಗಿ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇದೀಗ ಭೂಕಂಟಕ ಎದುರಾಗಿದ್ದು, ಜಮೀನು ಕಬಳಿಕೆ ಆರೋಪದಡಿ ಶಿವಶಂಕರಪ್ಪ ಹಾಗೂ ಅವರ ಅಳಿಯನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಶ್ವನಾಥ್ ಪಾಟೀಲ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ಜಿಲ್ಲೆಯ ಶಹಾಪುರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೂರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಶಹಾಪುರ ತಾಲೂಕಿನ ಅಣಬಿ ಗ್ರಾಮದಲ್ಲಿ 10 ಎಕರೆ 20 ಗುಂಟೆ ಜಮೀನು ಕಬಳಿಕೆ ಮಾಡಲಾಗಿದೆ. ನನ್ನ ಮಲತಾಯಿ …

Read More »

SIRನಲ್ಲಿ ಗೋಲ್ಮಾಲ್ ಆರೋಪ; ದೇಶಾದ್ಯಂತ ಹೋರಾಟಕ್ಕೆ ‘ಕೈ’ ಸಜ್ಜು

ನವದೆಹಲಿ: ದೇಶದಲ್ಲಿ ಎಸ್‌ಐಆರ್  ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಚುನಾವಣಾ ಆಯೋಗದಲ್ಲಿ  ಭಿನ್ನಾಭಿಪ್ರಾಯದ ಸುದ್ದಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ದೇಶದ್ಯಾಂತ ಹೋರಾಟ ನಡೆಸಲು ಕಾಂಗ್ರೆಸ್ ಸಜ್ಜುಗೊಂಡಿದ್ದು, ಈ ಬಗ್ಗೆ ಚರ್ಚಿಸಲು ಇಂದು CWC ಸಭೆ ನಡೆಸಿದೆ. ಸಭೆಯಲ್ಲಿ ಪ್ರಧಾನಿ ಮೋದಿ, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ‘ಕೈ’ ನಾಯಕರು ಆಗ್ರಹಿಸಿದ್ದು, ಐದು ಷರತ್ತುಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಚುನಾವಣಾ ಆಯೋಗದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಬಟಾಬಯಲಾಗಿದೆ. ಎಸ್‌ಐಆರ್ …

Read More »

ಮುಖ್ಯ ಚುನಾವಣಾ ಆಯುಕ್ತರು ಮೋದಿ ಸರ್ಕಾರದ ಕೈಗೊಂಬೆ: ಖರ್ಗೆ ವಾಗ್ದಾಳಿ

ನವದೆಹಲಿ: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್‌ ಕುಮಾರ್‌  ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಜ್ಞಾನೇಶ್‌ ಕುಮಾರ್‌ ಆಡಳಿತಾರೂಢ ಬಿಜೆಪಿಯ ಕೈಗೊಂಬೆ. ಅವರನ್ನು ಆಯುಕ್ತ ಸ್ಥಾನದಿಂದ ತಕ್ಷಣ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಬ್ರಿಟಿಷರ ಆಡಳಿತದ ಸಂದರ್ಭದಲ್ಲಿ ಇದ್ದಂತೆಯೇ, ಭಾರತದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವ ಐತಿಹಾಸಿಕ ಹೊಣೆಗಾರಿಕೆ ಮತ್ತೊಮ್ಮೆ ಕಾಂಗ್ರೆಸ್ ಹೆಗಲ ಮೇಲೆ ಬಂದಿದೆ. ಬ್ರಿಟಿಷರಿಂದ ನಾವು ಮತದಾನದ …

Read More »

ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ ಬಾಕಿ!

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಿರುವ ಒಟ್ಟು ಸುಮಾರು 38,000 ಕೋಟಿ ರೂ. ಬಾಕಿ ಮೊತ್ತವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅಧಿಕೃತ ಮನವಿ ಪತ್ರ ಸಲ್ಲಿಸಿದೆ. ಈ ಹಿಂದೆ ಉಪಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಹಾಗೂ ನಂತರ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಚರ್ಚೆಯಲ್ಲಿ ನೀಡಿದ್ದ ಭರವಸೆಯನ್ನು ಸಂಘ ನೆನಪಿಸಿದೆ. …

Read More »

ಉಡ ಬೇಟೆಯಾಡಿದ್ದ ತಂದೆ-ಮಗನ ಬಂಧನ

ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಗ್ರಾಮದಲ್ಲಿ ಉಡ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ತಂದೆ-ಮಗನನ್ನು ಬಂಧಿಸಿದೆ. ಇನಾಸ್ ಬಸ್ಥ್ಯಾಂವ್ ಸಿದ್ದಿ ಹಾಗೂ ಪ್ರಕಾಶ್ ಇನಾಸ್ ಸಿದ್ದಿ ಬಂಧಿತರು. ಕಾಡಿನಲ್ಲಿ ಉಡ ಬೇಟೆ ಮಾಡಿರುವ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ದೊರತ ಹಿನ್ನೆಲೆಯಲ್ಲಿ ಕಣ್ಣಿಗೇರಿ ಗ್ರಾಮದ ನಿವಾಸಿ ಇನಾಸ್ ಬಸ್ಥ್ಯಾಂವ್ ಸಿದ್ದಿ ಮನೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಎರಡು ಮೃತಪಟ್ಟ ಉಡಗಳು …

Read More »

ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತ ಬೇಡ: ಬ್ಯಾಂಕುಗಳಿಗೆ ಸೂಚಿಸಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ಮಾಸಿಕ 2,000 ರೂಪಾಯಿ ಹಣವನ್ನು ಯಾವುದೇ ಕಾರಣಕ್ಕೂ ಸಾಲದ ಕಂತು ಅಥವಾ ಬಡ್ಡಿಗೆ ಕಡಿತ ಮಾಡಿಕೊಳ್ಳದಂತೆ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶನ ನೀಡಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆದೇಶಿಸಿದ್ದಾರೆ. ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ) ಅವರು ಸಲ್ಲಿಸಿದ ಮನವಿ ಪತ್ರಕ್ಕೆ ತಕ್ಷಣವೇ ಸಕಾರಾತ್ಮಕವಾಗಿ ಸ್ಪಂದಿಸಿದ …

Read More »