ಚಿಕ್ಕೋಡಿ: ಧಾರಾಕಾರ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿದು ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಗಾಂಧಿ ಆಸ್ಪತ್ರೆ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ. ಸುಮಾರು 25 ಅಡಿ ಎತ್ತರದ ಹೊಸದಾಗಿ ನಿರ್ಮಿಸಲಾಗಿದ್ದ ಹೆದ್ದಾರಿಯ ತಡೆಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಗೋಡೆ ಕುಸಿದ ಪರಿಣಾಮ ಮಣ್ಣು ಹೊರಕ್ಕೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಗೋಡೆ ನೆನೆದು ಕುಸಿದಿದೆ ಎನ್ನಲಾಗಿದೆ. …
Read More »ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ
ನವದೆಹಲಿ: ಕರ್ನಾಟಕದಲ್ಲಿ ಪ್ರಸ್ತುತ ಕುಡಿಯುವ ನೀರಿಗೆ ಮಾತ್ರ ಸಾಲುವಷ್ಟು ನೀರಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸುತ್ತಿರುವ ಕಾನೂನು ತಂಡ ಮತ್ತು ಪ್ರಾಧಿಕಾರಗಳಲ್ಲಿನರಾಜ್ಯದ ಪ್ರಾತಿನಿಧ್ಯ ತೀರಾ ದುರ್ಬಲವಾಗಿದೆ ಎಂದು ವಾಗ್ದಾಳಿ ನಡೆಸಿದರು. ಕುಡಿಯುವ ನೀರಿಗಷ್ಟೇ ಲಭ್ಯ ನಮ್ಮ …
Read More »ಕೂಡಲೇ ಬರ ಘೋಷಿಸದಿದ್ದರೆ ‘ಚಲೋ ಹೊಲ ಗದ್ದೆ’ ಧರಣಿ ಆರಂಭ – ಅಶೋಕ್ ಎಚ್ಚರಿಕೆ
ಬಳ್ಳಾರಿ: ರಾಜ್ಯ ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡದಿದ್ದರೆ ಆಗಸ್ಟ್ 3 ರಿಂದ ‘ಚಲೋ ಹೊಲ ಗದ್ದೆ’ ಪ್ರತಿಭಟನೆ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಸಿದ್ದಾರೆ. ಕರೆಕಲ್ ಗ್ರಾಮಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಎಲ್ಲ ಜಿಲ್ಲೆಗಳಲ್ಲಿ ಬರ ಇದ್ದರೂ ರಾಜ್ಯ ಸರ್ಕಾರ (Congress) ಬರ ಘೋಷಣೆ ಮಾಡಿಲ್ಲ. ಕೂಡಲೇ ಬರ ಘೋಷಿಸದಿದ್ದರೆ ನಾವೆಲ್ಲರೂ ರೈತರ ಹೊಲದಲ್ಲಿ ಕುಳಿತು ಧರಣಿ ಮಾಡುತ್ತೇವೆ. …
Read More »ಕಳೆದ ವರ್ಷ ಭೂಕುಸಿತವಾದ ಜಾಗದಲ್ಲೇ ಮತ್ತೆ ಅಪಾಯದ ಭೀತಿ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಭೂಕುಸಿತದ ಆತಂಕ ಮತ್ತೆ ಹೆಚ್ಚಾಗಿದೆ. ಕಳೆದ ವರ್ಷ ಭೂಕುಸಿತ ಸಂಭವಿಸಿದ್ದ ಸ್ಥಳದಲ್ಲೇ ಇದೀಗ ಮತ್ತೆ ಭೂಮಿ ಕುಸಿದಿದ್ದು, ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಮಡಿಕೇರಿ ಸಮೀಪದ ಮಂಗಳದೇವಿ ನಗರದ ಖಾಸಗಿ ಜಾಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಗಮನಾರ್ಹ ಸಂಗತಿಯೆಂದರೆ, ಇದೇ ಸ್ಥಳದಲ್ಲಿ ಕಳೆದ ವರ್ಷವೂ ಭೂಕುಸಿತ ಉಂಟಾಗಿತ್ತು. ಇದೀಗ ನಿರಂತರ ಮಳೆಯಿಂದ ಮತ್ತೊಮ್ಮೆ ಭೂಮಿ ಕುಸಿದಿರುವುದು ಸ್ಥಳೀಯರನ್ನು …
Read More »ಕರ್ತವ್ಯ ನಿರತ ಯೋಧ ಹೃದಯಾಘಾತದಿಂದ ಸಾವು
ಧಾರವಾಡ: ಕರ್ತವ್ಯ ನಿರತ ಯೋಧ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದ ಯೋಧ ವಸಂತರೆಡ್ಡಿ ಕೆಂಚರೆಡ್ಡಿನವರ್ (45) ಮೃತ ಯೋಧ. 18ನೇ ಇನ್ಫಂಟ್ರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ವಸಂತರೆಡ್ಡಿ ಅವರು ಸದ್ಯ ರಾಜಸ್ಥಾನದ ಬಾಡಮೆರ್‌ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ 24 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಸಂತರೆಡ್ಡಿ ಅವರಿಗೆ ಬುಧವಾರ ಏಕಾಏಕಿ ಹೃದಯಾಘಾತವಾಗಿದೆ. ವೀರ ಯೋಧನ ಪಾರ್ಥಿವ ಶರೀರವು ಗುರುವಾರ ಸಂಜೆ 6 …
Read More »ಮದುವೆಯಾದ 3 ತಿಂಗಳಿಗೆ ಪತ್ನಿ ಕೊಂದು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾದ ಪತಿ
ಬೆಂಗಳೂರು: ಮದುವೆಯಾದ ಮೂರೇ ತಿಂಗಳಿಗೆ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ, ಮೃತದೇಹವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಮನೆಗೆ ಬೀಗ ಹಾಕಿ ಪರಾರಿಯಾದ ಘಟನೆ ಬೆಂಗಳೂರಿನ ಕುಂಬಳಗೋಡು ಸಮೀಪದ ಗೇರುಪಾಳ್ಯದಲ್ಲಿ ಬೆಳಕಿಗೆ ಬಂದಿದೆ. ಬಿಹಾರ ಮೂಲದ ರಿಯಾ ಕುಮಾರಿ ಮೃತ ಮಹಿಳೆ. ಆರೋಪಿ ಪತಿ ಧೀರಜ್ ಕುಮಾರ್ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಾಲ್ಕು ತಿಂಗಳ ಹಿಂದೆ ಈ ದಂಪತಿ ಬಿಹಾರದಿಂದ ಬೆಂಗಳೂರಿಗೆ ಬಂದು ಗೇರುಪಾಳ್ಯದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ರಿಯಾ …
Read More »ಬಾಗಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಶಂಕೆ: ನಾಗಲಕ್ಷ್ಮಿ ಚೌಧರಿ ಅನುಮಾನ
ಬಾಗಲಕೋಟೆ: ನಗರದ 50 ಹಾಸಿಗೆಯ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ನಡೆಯುತ್ತಿರಬಹುದು ಎಂಬ ಗಂಭೀರ ಅನುಮಾನವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಈ ಆಸ್ಪತ್ರೆಯಲ್ಲಿ ಪ್ರತಿದಿನ ಸರಾಸರಿ 30 ಹೆರಿಗೆಗಳಾಗುತ್ತಿವೆ. ಆದರೆ, ದಾಖಲೆಗಳನ್ನು ಗಮನಿಸಿದಾಗ ಹೆಣ್ಣು ಮಕ್ಕಳಿಗಿಂತ ಗಂಡು ಮಕ್ಕಳ ಜನನ ಪ್ರಮಾಣವೇ ಹೆಚ್ಚಿರುವುದು ಕಂಡುಬಂದಿದೆ. ಸಾಮಾನ್ಯವಾಗಿ ಹೆಣ್ಣು …
Read More »ಬಕೆಟ್‌ನಲ್ಲಿ ಬಿದ್ದು 8 ತಿಂಗಳ ಕಂದಮ್ಮ ದುರ್ಮರಣ
ಹಾಸನ: ಬಕೆಟ್‌ನಲ್ಲಿ ಬಿದ್ದು 8 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಹಾಸನ ನಗರದ ವಲ್ಲಭಭಾಯಿ ರಸ್ತೆಯಲ್ಲಿ ನಡೆದಿದೆ. ಪುಷ್ಪಾಲೋಚನ ಸಾವನ್ನಪ್ಪಿದ ಪುಟ್ಟ ಮಗು. ಪುಷ್ಪಾಲೋಚನ ಗಿರೀಶ್-ಚೈತ್ರಾ ಮೂರನೇ ಪುತ್ರಿಯಾಗಿದ್ದಳು. ಗಿರೀಶ್ ಚಿನ್ನ-ಬೆಳ್ಳಿ ಕೆಲಸ ಮಾಡುತ್ತಿದ್ದು, ದಂಪತಿಗೆ ಮೂವರು ಹೆಣ್ಣುಮಕ್ಕಳು. ಈ ಪೈಕಿ ಪುಷ್ಪಾಲೋಚನ ಮೂರನೆಯವಳು. ಚೈತ್ರಾ ಬಕೆಟ್‌ನಲ್ಲಿ ಬಟ್ಟೆ ನೆನೆಯಲು ಹಾಕಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ತೆವಳುತ್ತಾ ಬಂದ ಕಂದಮ್ಮ ಬಕೆಟ್‌ನಲ್ಲಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನಾ …
Read More »ಸೋಮವಾರ ಬೆಂಗಳೂರಿಗೆ ತಮಿಳುನಾಡು ಸಿಎಂ
ಚೆನ್ನೈ: ಸಿಡಬ್ಲ್ಯೂಆರ್‌ಸಿ ಆದೇಶ, ರಾಜ್ಯದಲ್ಲಿ ಕಾವೇರಿ ಹೋರಾಟದ ಮಧ್ಯೆಯೂ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಇದೇ ಮುಂದಿನ ಸೋಮವಾರ ಬೆಂಗಳೂರಿಗೆ ಬರಲಿದ್ದಾರೆ. ಕಾವೇರಿ ನೀರು-ಮೇಕೆದಾಟು ಡ್ಯಾಮ್ ವಿಚಾರವಾಗಿ ವಿಧಾನಸೌಧದಲ್ಲಿ ಸಿಎಂ ಡಿಕೆ ಶಿವಕುಮಾರ್ ಜೊತೆ ಪರಸ್ಪರ ಚರ್ಚೆ ಮಾಡಲಿದ್ದಾರೆ. ಬೆಂಗಳೂರಿಗೆ ಬರಲು ಪ್ರೈವೆಟ್ ಜೆಟ್ ಸಿದ್ಧಗೊಳಿಸಿರುವ ಸಿಎಂ ವಿಜಯ್‌ಗೆ ಜಲಸಂಪನ್ಮೂಲ ಖಾತೆ ಸಚಿವ ಎನ್.ಆನಂದ್, ಕೃಷಿ ಸಚಿವ ಆರ್.ವಿನೋದ್ ಸಾಥ್ ಕೊಡುವ ಸಾಧ್ಯತೆ ಇದೆ. ವಿಧಾನಸೌಧದಲ್ಲಿ ಚರ್ಚೆಗೂ ಮೊದಲು ಸಿಎಂ …
Read More »ಕೈಕೊಟ್ಟ ಲವ್ವರ್ – ಮನನೊಂದು ಯುವಕ ಆತ್ಮಹತ್ಯೆ
ಕಾರವಾರ: ಪ್ರೀತಿಸಿದ ಹುಡುಗಿ ಕೈಕೊಟ್ಟ ಹಿನ್ನೆಲೆಯಲ್ಲಿ ಮನಸ್ಸಿನ ನೋವು ತಾಳಲಾರದೇ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ಭಾಗದ ರಾಮನಗರದ ಬಳಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಹರೀಶ ಮೇಸ್ತಾ (24) ಆತ್ಮಹತ್ಯೆಗೆ ಶರಣಾದ ಯುವಕ. ತಾನು ಗಾಢವಾಗಿ ಪ್ರೀತಿಸುತ್ತಿದ್ದ ಯುವತಿಯನ್ನೇ ಮದುವೆಯಾಗಬೇಕೆಂಬ ಕನಸು ಕಂಡಿದ್ದ ಹರೀಶನಿಗೆ, ಇತ್ತೀಚೆಗೆ ಆಕೆ ದೂರವಾಗಿದ್ದು ತೀವ್ರ ನೋವು ತಂದೊಡ್ಡಿತ್ತು. ಪ್ರೇಮ ವೈಫಲ್ಯದಿಂದ ತೀವ್ರ ಮನನೊಂದಿದ್ದ ಈತ, ಮನೆಯಲ್ಲೇ …
Read More »
Laxmi News 24×7