Breaking News

Laxminews 24x7

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು: ಸಿಎಂ

ಬೆಂಗಳೂರು/ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಇಂದು ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, “ಪ್ರತ್ಯೇಕ ಕರ್ನಾಟಕಕ್ಕೆ ಒತ್ತಾಯ ಮಾಡುವುದು ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನ. ಏಕೀಕರಣಕ್ಕಾಗಿ ಬಹಳ ಜನ ಹೋರಾಡಿದರು. ಭಾಷಾವಾರು ಪ್ರಾಂತ್ರ್ಯ ರಚನೆಯಾಗುವಾಗಲೂ ಹೋರಾಟ ಮಾಡಿದವರಿದ್ದಾರೆ. ಹೈದರಾಬಾದ್ ಕರ್ನಾಟಕಕ್ಕೆ …

Read More »

ಕೆರೆ ಖಾಲಿ ಖಾಲಿ; ಬರದ ಮಧ್ಯೆ ಕುಡಿಯುವ ‌ನೀರಿಗಾಗಿ ಪರಿತಪಿಸುತ್ತಿರುವ ಉಮಚಗಿ ಗ್ರಾಮಸ್ಥರು

ಹುಬ್ಬಳ್ಳಿ : ಅದೊಂದು ಪುಟ್ಟ ಗ್ರಾಮ, ಇಲ್ಲಿ ಈ ಹಿಂದೆ ಯಾವತ್ತೂ ಕುಡಿಯುವ ನೀರಿಗೆ ಬರ ಬಂದಿರಲಿಲ್ಲ. ಆದರೆ ಗ್ರಾಮದಲ್ಲಿ ನಡೆದ ಒಂದು ಘಟನೆ ಮತ್ತು ಅದರ ನಂತರ ಗ್ರಾಮಸ್ಥರು ತೆಗೆದುಕೊಂಡ ನಿರ್ಧಾರದಿಂದ ಇಂದು ಇಡೀ ಊರಿನ ಜನರು ನೀರಿಗಾಗಿ ಪರದಾಡುವಂತಾಗಿದೆ. ಹೌದು, ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮಸ್ಥರ ಒಂದು ತಪ್ಪು ನಿರ್ಧಾರ ಈಗ ವರ್ಷಪೂರ್ತಿ ಕೊರಗುವಂತೆ ಮಾಡಿದೆ. ಎರಡು ತಿಂಗಳ ಹಿಂದೆ ಲಕ್ಷಾಂತರ ರೂಪಾಯಿ ವ್ಯಯಿಸಿ ಕೆರೆ ಖಾಲಿ ಮಾಡಿಸಿದ್ದ …

Read More »

ಇಂಧನ ಸಚಿವ ಕೆ ಜೆ ಜಾರ್ಜ್‌ ವಿರುದ್ಧ ದುರುದ್ದೇಶಪೂರಿತ ಪೋಸ್ಟ್‌ ಮಾಡಿದ್ದ ಆರೋಪಿಯ ಸೆರೆ

ಬೆಂಗಳೂರು: ತೆಲಂಗಾಣ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್ ವಿರುದ್ಧ ಎಕ್ಸ್ ಖಾತೆಯಲ್ಲಿ ದುರುದ್ದೇಶಪೂರಿತ ಪೋಸ್ಟ್‌ ಮಾಡಿದ್ದ ಭಾರತ್‌ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಾರ್ಟಿಯ ಐಟಿ ಸೆಲ್‌ ಉದ್ಯೋಗಿಯನ್ನು ಪೂರ್ವ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಬಿಆರ್‌ಎಸ್ ಪಕ್ಷದ ಕಾರ್ಯಕರ್ತ, ಪಕ್ಷದ ಐಟಿ ಸೆಲ್‌ ಉದ್ಯೋಗಿಯಾಗಿರುವ ತೆಲಂಗಾಣ ಕರೀಂನಗರ ನಿವಾಸಿ ರವಿಕಾಂತ್ ಶರ್ಮಾ (33) ಬಂಧಿತ ಆರೋಪಿ. ಆರೋಪಿಯ ತಂದೆ ಸಹ ಬಿಆರ್‌ಎಸ್ ಪಕ್ಷದ ಮಾಜಿ ಕಾರ್ಪೋರೇಟರ್‌ …

Read More »

ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಅಮಾನತು

ಬೆಳಗಾವಿ: ಇಲ್ಲಿಯ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್​ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಆದೇಶ ಹೊರಡಿಸಿದ್ದಾರೆ.   ಹೈಕೋರ್ಟ್ ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಸರ್ಕಾರಕ್ಕೆ ಮತ್ತು ಪೊಲೀಸ್ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತ ಎಸ್ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಬಾಡಿಗೆಗೂ ಕೊಠಡಿ ಸಿಗದೆ ಗ್ರಾಮಸ್ಥರೇ ನಿರ್ಮಿಸಿದ್ರು ಅಂಗನವಾಡಿ ಕೇಂದ್ರ

ಕಾರವಾರ : ಬಾಲ್ಯ ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಸರ್ಕಾರ ಅಂಗನವಾಡಿಗಳನ್ನು ತೆರೆದಿದೆ. ಆದರೆ, ಉತ್ತರಕನ್ನಡ ಜಿಲ್ಲೆಯ ಅದೆಷ್ಟೋ ಕಡೆ ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳೇ ಇಲ್ಲ. ಇದ್ದ ಕೆಲ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿ ಬಾಡಿಗೆ ಕಟ್ಟಡದಲ್ಲಿ ನಡೆಸುತ್ತಿದ್ದರೂ ಕೆಲ ತಿಂಗಳಿಂದ ಬಾಡಿಗೆ ಕೂಡ ಕಟ್ಟಿಲ್ಲ. ಹೀಗಾಗಿ, ಕಟ್ಟಡ ಮಂಜೂರಾಗುವುದೆಂದು ಕಾದು ಕುಳಿತಿದ್ದ ಗ್ರಾಮದ ಜನರು ಸರ್ಕಾರದ ವಿಳಂಬ ನೀತಿಗೆ ರೋಸಿ ಹೋಗಿ ಕೊನೆಗೆ ತಾತ್ಕಾಲಿಕ ಅಂಗನವಾಡಿಯೊಂದನ್ನು ನಿರ್ಮಿಸಿಕೊಂಡಿದ್ದಾರೆ. ಹೌದು, ಒಂದೆಡೆ ಶಿಥಿಲಾವಸ್ಥೆ ತಲುಪಿ …

Read More »

ಹೆಚ್ಚುವರಿ ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ

ಬೆಂಗಳೂರು : ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೆ ಕಾರ್ಯಕ್ಕಾಗಿ ಹೆಚ್ಚು ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ ಬರೆಯಲು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪಾಲಿಕೆ ಅಧಿಕಾರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ಶುಕ್ರವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಸರ್ವೆ ಮಾಡಲು ಹೆಚ್ಚು ಭೂಮಾಪಕರ ಅವಶ್ಯಕತೆಯಿದ್ದು, …

Read More »

ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್​-ಆಟೋ ಮಧ್ಯೆ ಅಪಘಾತ; ಐವರು ಸಾವು

ಮಲಪ್ಪುರಂ(ಕೇರಳ): ಕರ್ನಾಟಕದಿಂದ ಬರುತ್ತಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್‌ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ಘಟನೆ ಜಿಲ್ಲೆಯ ಮಂಚೇರಿಯಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಸಂಭವಿಸಿದೆ. ನಿನ್ನೆ ಸಂಜೆ ಆರು ಗಂಟೆಗೆ ಮಂಚೇರಿ-ಅರೀಕೋಡು ರಸ್ತೆಯ ಚೆಟ್ಟಿಅಂಗಡಿ ಎಂಬಲ್ಲಿ ಅಪಘಾತ ನಡೆದಿದೆ. ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಕರ್ನಾಟಕ ಬಸ್ ಮತ್ತು ಆಟೋ ಮಧ್ಯೆ ಅಪಘಾತವಾಗಿದೆ. ಆಟೋ ಚಾಲಕ ಮಜೀದ್, …

Read More »

ಮಧ್ಯಮಾವಧಿ, ದೀರ್ಘಾವಧಿ ಸಾಲದ ಅಸಲು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ: ಸಿಎಂ

ಬೆಳಗಾವಿ/ಬೆಂಗಳೂರು: ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆ ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ. ಬಿಜೆಪಿಯವರು 2018ರ ತಮ್ಮ ಪ್ರಣಾಳಿಕೆಯಲ್ಲಿ “ನಮ್ಮ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು” …

Read More »

ಭಗೀರಥ ಉಪ್ಪಾರ ಸಮಾಜವನ್ನು ಪಜಾ/ ಪ.ಪಂಗಡಕ್ಕೆ ಸೇರಿಸಲು ಸರಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ

ಭಗೀರಥ ಉಪ್ಪಾರ ಸಮಾಜವನ್ನು ಪಜಾ/ ಪ.ಪಂಗಡಕ್ಕೆ ಸೇರಿಸಲು ಸರಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಜರುಗಿದ ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಗೋಕಾಕ: ಭಗೀರಥ ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಸರ್ಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಬೀರೇಶ್ವರ ಸಭಾಭವನದಲ್ಲಿ ಶುಕ್ರವಾರದಂದು …

Read More »