Breaking News

Laxminews 24x7

ಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ.ಬಿ.ಪಾಟೀಲ್‌

ವಿಜಯಪುರ: ವಿಜಯಪುರ ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಇದ್ದ ಪ್ರಮುಖ ಅಡೆತಡೆ ದೂರವಾಗಿದ್ದು, ಪರಿಸರ ಸಂಬಂಧಿತ ಅನುಮತಿ ಸಿಕ್ಕರೆ ಮುಂದಿನ ಮೂರು ತಿಂಗಳೊಳಗೆ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಬಹುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಪರಿಸರ ಅನುಮತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಬುಧವಾರ ನೀಡಿರುವ ಅಂತಿಮ ತೀರ್ಪು ಸ್ವಾಗತಾರ್ಹವಾಗಿದೆ ಎಂದು ಹೇಳಿದರು. ಮುಖ್ಯ …

Read More »

ಶೂಟೌಟ್‌ಗೆ ಆದೇಶ ನೀಡೋದು ಮ್ಯಾಜಿಸ್ಟ್ರೇಟ್‌ಗಳು, ಅಮಿತ್‌ ಶಾ ಅಲ್ಲ : ರಾಹುಲ್‌ಗೆ ಜಿತೇಂದ್ರ ಸಿಂಗ್‌ ತಿರುಗೇಟು

ನವದೆಹಲಿ: ಸಂಸತ್ತಿನಲ್ಲಿ ವಿರೋಧ ಪಕ್ಷಗಳ ಗದ್ದಲದ ಮಧ್ಯೆ ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆಧ್ವನಿ ಮತದ ಮೂಲಕ ಅಂಗೀಕಾರಕೊಂಡಿದೆ. ರಾಹುಲ್‌ ಗಾಂಧಿ  ಭಾಷಣಕ್ಕೆ ಸರ್ಕಾರದ ಪರವಾಗಿ ಸಚಿವ ಜಿತೇಂದ್ರ ಸಿಂಗ್‌ ಉತ್ತರ ನೀಡಲು ಮುಂದಾದಾಗ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದವು. ಭಾಷಣದ ಆರಂಭದಿಂದ ಮಸೂದೆ ಅಂಗೀಕಾರ ಆಗುವವರೆಗೂ ಮೋದಿ ಸರ್ಕಾರ ಚೋರ್‌ ಸರ್ಕಾರ ಎಂದು ಸದಸ್ಯರು ಘೋಷಣೆ ಕೂಗುತ್ತಿದ್ದರು. ವಿಪಕ್ಷಗಳ ಗದ್ದಲ ಮಧ್ಯೆಯೂ ಜಿತೇಂದ್ರ ಸಿಂಗ್‌, ವಿರೋಧ ಪಕ್ಷಗಳು ತೀವ್ರ …

Read More »

ಒಂದು ರಾಷ್ಟ್ರ, ಒಂದು ಚುನಾವಣೆ – ವರದಿ ಸಲ್ಲಿಕೆಗೆ ಅವಧಿ ವಿಸ್ತರಣೆ

ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’  ಜಾರಿಗೆ ಸಂಬಂಧಿಸಿದ ಎರಡು ಮಹತ್ವದ ಮಸೂದೆಗಳನ್ನು ಪರಿಶೀಲಿಸುತ್ತಿರುವ ಸಂಯುಕ್ತ ಸಂಸದೀಯ ಸಮಿತಿಯ ಅವಧಿಯನ್ನು ಲೋಕಸಭೆ  ವಿಸ್ತರಿಸಿದೆ. ಈ ಸಂಬಂಧ ಬುಧವಾರ ಲೋಕಸಭೆಯಲ್ಲಿ ಮಂಡಿಸಲಾದ ನಿರ್ಣಯ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ಜೆಪಿಸಿ  ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಪಿ.ಪಿ.ಚೌಧರಿ ಅವರು ಸಮಿತಿಯ ವರದಿ ಸಲ್ಲಿಕೆಗೆ ನಿಗದಿಪಡಿಸಿದ್ದ ಗಡುವನ್ನು 2026ರ ಚಳಿಗಾಲದ ಸಂಸತ್ ಅಧಿವೇಶನದ ಕೊನೆಯ ವಾರದ ಮೊದಲ ದಿನದವರೆಗೆ ವಿಸ್ತರಿಸುವಂತೆ ಪ್ರಸ್ತಾವನೆ ಮಂಡಿಸಿದರು. ಸದನವು …

Read More »

ಚಿಲ್ಲರೆ ಇಲ್ಲವೆಂದು ಸಚಿವರನ್ನು ಬಸ್ಸಿನಿಂದ ಕೆಳಗಿಳಿಸಿದ್ದ ನಿರ್ವಾಹಕನ ಅಮಾನತು ವಾಪಸ್

ಬೆಂಗಳೂರು: ಚಿಲ್ಲರೆ ಇಲ್ಲದ ಕಾರಣಕ್ಕೆ ಕಂಡಕ್ಟರ್ ಸಚಿವರನ್ನೇ ಬಸ್‌ನಿಂದ ಕೆಳಗಿಳಿಸಿದ್ದ ನಿರ್ವಾಹಕನ ಅಮಾನತು ತೆರವಿಗೆ ಸಚಿವ ಬೈರತಿ ಸುರೇಶ್  ಆದೇಶ ಹೊರಡಿಸಿದ್ದಾರೆ. ಜುಲೈ 11ರ ರಾತ್ರಿ ಸಾರಿಗೆ ಸಚಿವರು ದಿಢೀರನೆ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದ್ದರು. ಅಂದು ಕೆಂಪೇಗೌಡ ಬಸ್ ನಿಲ್ದಾಣದಿಂದ ನಾಗಶೆಟ್ಟಿಹಳ್ಳಿಗೆ ಸಂಚರಿಸುತ್ತಿದ್ದ ಬಸ್ನಲ್ಲಿ ಪ್ರಯಾಣಿಸುವಾಗ ನಿರ್ವಾಹಕ ಟಿ.ಜಿ. ರಾಮಕೃಷ್ಣ ಎಂಬುವರು ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಸಚಿವರನ್ನು ಬಸ್ಸಿನಿಂದ ಕೆಳಗೆ ಇಳಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಸಂಸ್ಥೆಯು ರಾಮಕೃಷ್ಣ …

Read More »

ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ

ಮಡಿಕೇರಿ: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೃಹತ್ ಮರ ಬಿದ್ದ ಪರಿಣಾಮ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಾಪುರ ಸಮೀಪದ ಬಿಳಿಗೇರಿ ಗ್ರಾಮದಲ್ಲಿ ನಡೆದಿದೆ. ಬಿಳಿಗೇರಿ ಗ್ರಾಮದ ಟಾಟಾ ಕಾಫಿ ತೋಟದಲ್ಲಿ ಈ ಘಟನೆ ನಡೆದಿದೆ. ದಿನನಿತ್ಯದ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರ ಮೇಲೆ ಏಕಾಏಕಿ ಬೃಹತ್ ಮರ ಉರುಳಿ ಬಿದ್ದಿದೆ. ಪರಿಣಾಮ ಅಸ್ಸಾಂ ಮೂಲದ ಪರ್ಬಿನಾ ಖಾತುನ್ (29) ಹಾಗೂ …

Read More »

ಕೆಲಸದ ಸಮಯದಲ್ಲಿ ಪಾರ್ಟಿ – 6 ಮಂದಿ ಪಿಡಿಓಗಳು ಸಸ್ಪೆಂಡ್

ಬೆಂಗಳೂರು: ಕೆಲಸದ ಅವಧಿಯಲ್ಲಿ ಗ್ರಾಮ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ್ದ 6 ಜನ ಪಿಡಿಓಗಳನ್ನ  ಸಸ್ಪೆಂಡ್  ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ  ಅಮಾನತು ಆದೇಶ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿ ಅಧಿಕಾರಿ, ಇಬ್ಬರು ಕಾರ್ಯದರ್ಶಿ ಮತ್ತು ಒಬ್ಬ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಶುಕ್ರವಾರ (ಜು.24ರಂದು) ಸಂಜೆ ಸಿದ್ದರಬೆಟ್ಟದ ಬಳಿ ಮದ್ಯ, ಮಾಂಸ ಸೇವಿಸಿ …

Read More »

ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಔಟ್: ಚುನಾವಣಾ ಆಯೋಗ

ಬೆಂಗಳೂರು: ಕರ್ನಾಟಕ(Karnataka) ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲು ಗುರುತಿಸಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಸವಿಸ್ತಾರವಾದ ಮಾಹಿತಿ ನೀಡಿದ್ದಾರೆ. ಪ್ರತಿಯೊಬ್ಬ ಮತದಾರರನ ಸ್ಥಳ ಮಹಜರು ಮಾಡಲಾಗಿದ್ದು, ಮೃತರ ಡೆತ್ ಸರ್ಟಿಫಿಕೇಟ್ ಸಂಗ್ರಹಿಸಿ, ಸಂಬಂಧಪಟ್ಟವರಿಂದ ಸಹಿ ಕೂಡ ಪಡೆಯಲಾಗಿದೆ. ಹೀಗಾಗಿ ಈ 84 ಲಕ್ಷಕ್ಕೂ ಅಧಿಕ ಜನರನ್ನು ಮೊದಲ ಕರಡು …

Read More »

ಪಿಎಂ ಸೂರ್ಯಘರ್ ಯೋಜನೆಗೆ ಭಾರೀ ಸ್ಪಂದನೆ, 48 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಲಾಭ – ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಪಿಎಂ ಸೂರ್ಯಘರ್; ಮಫ್ತ್ ಬಿಜ್ಲಿ ಯೋಜನೆ’  ದೇಶಾದ್ಯಂತ ಯಶಸ್ವಿಯಾಗಿ ಜಾರಿಯಾಗುತ್ತಿದ್ದು, ಇದುವರೆಗೆ 48.02 ಲಕ್ಷಕ್ಕೂ ಅಧಿಕ ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  ತಿಳಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಆರಂಭವಾದ ಈ ಯೋಜನೆಯಡಿ ಈಗಾಗಲೇ 39.72 ಲಕ್ಷಕ್ಕೂ ಹೆಚ್ಚು ಸೌರ ಮೇಲ್ಚಾವಣಿ (ರೂಫ್‌ಟಾಪ್ ಸೋಲಾರ್) ವ್ಯವಸ್ಥೆಗಳು ಅಳವಡಿಕೆಯಾಗಿದ್ದು, ಗ್ರಾಮೀಣ ಪ್ರದೇಶಗಳ ಮನೆಗಳಿಗೂ ಯೋಜನೆ ವಿಸ್ತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. …

Read More »

ಸಿಎಂ ಸ್ವಕ್ಷೇತ್ರದಲ್ಲಿ ಬರ ಪರಿಶೀಲನೆ ನಡೆಸಿದ ಬಿಜೆಪಿ ನಿಯೋಗ – ಶೀಘ್ರ ಬರ ಪರಿಹಾರ ಘೋಷಣೆಗೆ ಒತ್ತಾಯ

ರಾಮನಗರ: ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಹಿನ್ನೆಲೆ ಬಿಜೆಪಿ  ರಾಜ್ಯಾದ್ಯಂತ ಬರ ಪರಿಸ್ಥಿತಿಯ ಅಧ್ಯಯನಕ್ಕೆ ಮುಂದಾಗಿದ್ದು, ಇಂದು ಸಿಎಂ ಸ್ವಕ್ಷೇತ್ರ ಕನಕಪುರದಲ್ಲಿ ಬಿಜೆಪಿ ನಿಯೋಗ ಬರ ಅಧ್ಯಯನ ಪರಿಶೀಲನೆ ಮಾಡಿದೆ. ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಕನಕಪುರ ತಾಲೂಕಿಗೆ ಭೇಟಿ ನೀಡಿದ ಬಿಜೆಪಿ ನಿಯೋಗ ಸ್ಥಳೀಯ ರೈತರ ಸಂಕಷ್ಟ ಆಲಿಸಿತು. ತಾಲೂಕಿನ ಮಲ್ಲೇಗೌಡನದೊಡ್ಡಿ ಹಾಗೂ ಸಾಸಲಾಪುರ ಗ್ರಾಮಗಳಿಗೆ ಭೇಟಿ ನೀಡಿ, ನೀರಿಲ್ಲದೆ ಒಣಗುತ್ತಿರುವ ಬಾಳೆ …

Read More »

‘ವಂದೇ ಮಾತರಂ’ಗೆ ಅವಮಾನ ಮಾಡಿದ್ರೆ 3 ವರ್ಷ ಜೈಲು – ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ನವದೆಹಲಿ: ‘ವಂದೇ ಮಾತರಂ’ ಗೀತೆಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡುವುದು ಅಥವಾ ಅದರ ಗಾಯನಕ್ಕೆ ಅಡ್ಡಿಪಡಿಸುವುದನ್ನು ಶಿಕ್ಷಾರ್ಹ ಅಪರಾಧವಾಗಿಸುವ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ-2026 ಅನ್ನು ರಾಜ್ಯಸಭೆ  ಬುಧವಾರ ಧ್ವನಿಮತದ ಮೂಲಕ ಅಂಗೀಕರಿಸಿದೆ. ಮಸೂದೆ ಪ್ರಕಾರ, ತಪ್ಪಿತಸ್ಥರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ, ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಮಸೂದೆಯ ಕುರಿತು ನಡೆದ ಸಂಕ್ಷಿಪ್ತ ಚರ್ಚೆಯ ಬಳಿಕ ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅದನ್ನು ಅಂಗೀಕರಿಸಲಾಯಿತು. ಈ …

Read More »