ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಲವು ಕಲಾವಿದರು ಮತ್ತು ಕಲಾ ತಂಡಗಳು ಈಗಾಗಲೇ ಅರ್ಜಿ ಸಲ್ಲಿಸುತ್ತಿದ್ದಾರೆ. ದೇಶ ವಿದೇಶಗಳಿಂದ ಅನೇಕ ಕಲಾವಿದರು ಮೈಸೂರಿನ ಕಲಾಮಂದಿರದಲ್ಲಿರುವ ಕಚೇರಿಗೆ ನೇರವಾಗಿ ಮತ್ತು ಅಂಚೆಯ ಮೂಲಕ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ ಡಿ.ಸುದರ್ಶನ್ ತಿಳಿಸಿದ್ದಾರೆ. ದಸರಾದಲ್ಲಿ ಜರುಗುವ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ವೀರಗಾಸೆ, ಕತ್ತಿಕುಣಿತ , ಕರಡಿ ಕುಣಿತ, …
Read More »ಬಹು ನಿರೀಕ್ಷಿತ ‘ಗೃಹಲಕ್ಷ್ಮಿ’ ಯೋಜನೆಯ ಚಾಲನೆ ಕಾರ್ಯಕ್ರಮ ಇದೀಗ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್
ಬೆಂಗಳೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ‘ಗೃಹಲಕ್ಷ್ಮಿ’ ಯೋಜನೆಯ ಚಾಲನೆ ಕಾರ್ಯಕ್ರಮ ಇದೀಗ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆಗಿದೆ ಮತ್ತು ಯೋಜನೆ ಚಾಲನೆ ದಿನಾಂಕ ಆ.30ಕ್ಕೆ ಮುಂದೂಡಿಕೆಯಾಗಿದೆ. ಈ ಹಿಂದೆ ಮೂರು ಬಾರಿ ಚಾಲನೆಯ ದಿನಾಂಕ ಮುಂದೂಡಲಾಗಿತ್ತು. ಇದೀಗ ನಾಲ್ಕನೇ ಬಾರಿ ದಿನಾಂಕ ಮುಂದೂಡಿಕೆಯಾಗಿದೆ. ಮೊದಲು ಆಗಸ್ಟ್ ಮೊದಲ ವಾರ, ಬಳಿಕ ಆ. 17 ಅಥವಾ ಆ.18ರಂದು ಯೋಜನೆ ಚಾಲನೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಮತ್ತೆ ದಿನಾಂಕ ಬದಲು ಮಾಡಿ …
Read More »ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರದ ವಿರುದ್ಧ ಆಗಸ್ಟ್ 23ಕ್ಕೆ ಬಿಜೆಪಿ ಪ್ರತಿಭಟನೆ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: “ಈ ಸರ್ಕಾರ ಪಾಪರ್ ಆಗಿದೆ, ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ, ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಅಭಿವೃದ್ಧಿ ಕಾರ್ಯ ಸ್ಥಗಿತಗೊಳಿಸಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಸರ್ಕಾರ ನಮ್ಮ ಪ್ರತಿಭಟನೆಗೆ ಮಣಿಯದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತದೆ” ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿಂದು ಶಾಸಕರ ಸಭೆ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …
Read More »ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡ ಉದ್ಘಾಟನೆ
ಬೆಂಗಳೂರು: 3ಡಿ ಪ್ರಿಂಟಿಂಗ್ ಟೆಕ್ನಾಲಜಿ ಬಳಸಿ ನಿರ್ಮಿಸಲಾಗಿರುವ ಅಂಚೆ ಕಚೇರಿ ಕಟ್ಟಡವನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬೆಂಗಳೂರಿನಲ್ಲಿ ಇಂದು ಉಧ್ಘಾಟನೆ ಮಾಡಿದರು. ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಇದಾಗಿದ್ದು ನೂತನ ತಂತ್ರಜ್ಞಾನಕ್ಕೆ ನಾಂದಿಹಾಡಲಾಯಿತು. ಎಲ್&ಟಿ ಮೂಲಕ ಈ ಅಂಚೆ ಕಚೇರಿಯನ್ನು ನಿರ್ಮಾಣ ಮಾಡಲಾಗಿದ್ದು ಐಐಟಿ ಚೆನ್ನೈ ಪ್ರಸ್ತುತ ಯೋಜನೆಯಲ್ಲಿ ತಾಂತ್ರಿಕ ಮಾರ್ಗದರ್ಶನ ಒದಗಿಸಿದೆ. ಒಟ್ಟು 1021 ಚದರ ಅಡಿಗಳ ವಿಸ್ತೀರ್ಣ ಹೊಂದಿರುವ ಈ ಕಟ್ಟವನ್ನು 3ಡಿ ಕಾಂಕ್ರೀಟ್ …
Read More »ಭಾರತ-ಐರ್ಲೆಂಡ್ ಮೊದಲ ಟಿ-20 ಪಂದ್ಯಕ್ಕೆ ಮಳೆ ಅಡ್ಡಿ: ಭಾರತಕ್ಕೆ 139 ರನ್ ಗುರಿ
ಡಬ್ಲಿನ್ (ಐರ್ಲೆಂಡ್): ಭಾರತ ಮತ್ತು ಐರ್ಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭವಾಗಿದ್ದು, ಮೊದಲ ಪಂದ್ಯ ಡಬ್ಲಿನ್‌ನ ವಿಲೇಜ್ ಮೈದಾನದಲ್ಲಿ ನಡೆಯುತ್ತಿದೆ. ಪಂದ್ಯ ಗೆದ್ದು ಸರಣಿಯಲ್ಲಿ ಶುಭಾರಂಭ ಮಾಡಲು ಎರಡೂ ತಂಡಗಳು ತವಕಿಸುತ್ತಿವೆ. ಟಾಸ್ ಗೆದ್ದ ಬುಮ್ರಾ ಪಡೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿದೆ. ಐರ್ಲೆಂಡ್ ಪರ ಬ್ಯಾರಿ ಮೆಕಾರ್ಥಿ ಅರ್ಧಶತಕ …
Read More »ರಾಜ್ಯ ಸರ್ಕಾರ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡುತ್ತಿದೆ: ಬೊಮ್ಮಾಯಿ ವಾಗ್ದಾಳಿ
ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಟೀಕಿಸಿದವರನ್ನು ದಮನ ಮಾಡುವ ಸರ್ವಾಧಿಕಾರಿ ಧೋರಣೆಯನ್ನು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಅನುಸರಿಸುತ್ತಿದೆ. ಸರ್ಕಾರದ ವಿರುದ್ಧ ಸುದ್ದಿ ಮಾಡಿದ್ದಕ್ಕಾಗಿ ಮಾಧ್ಯಮಗಳ ಸ್ವಾತಂತ್ರ್ಯ ಹರಣ ಮಾಡಲಾಗುತ್ತಿದ್ದು, ಇದರ ವಿರುದ್ಧ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿವಾಸದಲ್ಲಿ ನಡೆದ ಪಕ್ಷದ ಬೆಂಗಳೂರು ಶಾಸಕರ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …
Read More »ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ
ಬೆಂಗಳೂರು : ನಗರದ ಮೆಜೆಸ್ಟಿಕ್ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ತಲುಪಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ರೈಲ್ವೆ ಇಂಜಿನ್ನಿಂದ ಹೊರ ಬಂದ ದಟ್ಟ ಹೊಗೆಯನ್ನು ಕಂಡ ಪ್ರಯಾಣಿಕರು ಕೆಲಕಾಲ ಆತಂಕಗೊಂಡಿದ್ದು, ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗ್ಗೆ 6ಕ್ಕೆ ಬೆಂಗಳೂರು ತಲುಪಿದ್ದ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಪ್ಲಾಟ್ ಫಾರ್ಮ್ 3ರಲ್ಲಿ ನಿಂತಿತ್ತು. 7:10ರ …
Read More »ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದಿಂದ ನಾನು ಹಿಂದೆ ಸರಿದಿಲ್ಲ: ವಿನಯ್ ಕುಲಕರ್ಣಿ
ಬೆಳಗಾವಿ : ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವೇಳೆ ವೀರಶೈವ ಮಹಾಸಭೆಯಲ್ಲಿದ್ದ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಅದರಲ್ಲಿನ ಬಹಳಷ್ಟು ಜನ ನಮಗೆ ಬೆಂಬಲ ಕೂಡ ಕೊಟ್ಟಿದ್ದರು. ಈಗ ನಾವೆಲ್ಲಾ ಒಂದಾಗಿ ಮತ್ತೆ ಹೋರಾಟ ಪ್ರಾರಂಭ ಮಾಡೋಣ ಎಂದು ಮಾತನಾಡಿದ್ದೇವೆ ಅಂತಾ ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನನ್ನು ಯಾರೂ ಹೈಜಾಕ್ ಮಾಡಿಲ್ಲ, ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ ಎಂದು ರಾಜ್ಯದ ಮುಖಂಡರನ್ನು ಮೊನ್ನೆ …
Read More »ದಾವಣಗೆರೆಯಲ್ಲಿ 1920ರ ದಶಕದ ಕ್ಯಾಮೆರಾಗಳ ಪ್ರದರ್ಶನ
ದಾವಣಗೆರೆ: 184ನೇ ವಿಶ್ವ ಛಾಯಾಗ್ರಾಹಕರ ದಿನವನ್ನು (World Photography Day) ಜಿಲ್ಲೆಯ ಫೋಟೊಗ್ರಾಫರ್ಸ್ ವಿಭಿನ್ನವಾಗಿ ಆಚರಣೆ ಮಾಡಿದ್ದಾರೆ. 1920ರ ಕಾಲದಲ್ಲಿ ಬಳಕೆ ಮಾಡುತ್ತಿದ್ದ ಹಳೇ ಕ್ಯಾಮೆರಾಗಳನ್ನು ಪ್ರದರ್ಶನಕ್ಕಿಟ್ಟಿದ್ದು ಯುವಜನತೆಯನ್ನು ಆಕರ್ಷಿಸಿತು. ಪ್ರಸ್ತುತ ಮೊಬೈಲ್ ಜಮಾನದಲ್ಲಿ ಸುಲಭವಾಗಿ ಫೋಟೊ ತೆಗೆಯಬಹುದು. ಅದರೆ 1920ರ ಕಾಲದಲ್ಲಿ ಒಂದು ಫೋಟೊ ತೆಗೆಯಲು ಫೋಟೊಗ್ರಾಫರ್ಸ್ ಎಷ್ಟು ಕಷ್ಟಪಡುತ್ತಿದ್ದರು ಎಂಬುದನ್ನು ಈ ಹಳೇ ಕ್ಯಾಮೆರಾಗಳು, ಅದರ ಬಿಡಿಭಾಗಗಳನ್ನು ಪ್ರದರ್ಶನಕ್ಕಿಡುವ ಮೂಲಕ ತೋರಿಸಲಾಯಿತು. ಫೀಲ್ಡ್ ಕ್ಯಾಮರಾಫೋಟೋಗ್ರಾಫರ್ ಯೂತ್ ವೆಲ್ಫೇರ್ ಅಸೋಸಿಯೇಷನ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »
Laxmi News 24×7