Breaking News

Laxminews 24x7

ಹೆದ್ದಾರಿಗೆ ಉರುಳಿ ಬಿದ್ದ ಬಾಯ್ಲರ್ ಟ್ಯಾಂಕ್; ತಪ್ಪಿದ ಅನಾಹುತ

ಮಂಡ್ಯ: ಬಾಯ್ಲರ್ ಟ್ಯಾಂಕ್ ಹೊತ್ತೊಯ್ಯುತ್ತಿದ್ದ ಬೃಹತ್ ಲಾರಿಯೊಂದು ಮರಕ್ಕೆ ಡಿಕ್ಕಿಯಾಗಿ, ಬಾಯ್ಲರ್ ರಸ್ತೆಗೆ ಉರುಳಿಬಿದ್ದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಸಮೀಪ ಮೈಸೂರು-ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ​ ರಾಜಸ್ಥಾನದಿಂದ ನಂಜನಗೂಡು ಕೈಗಾರಿಕಾ ಪ್ರದೇಶಕ್ಕೆ ಬಾಯ್ಲರ್ ಟ್ಯಾಂಕ್ ಅನ್ನು ಸಾಗಿಸಲಾಗುತ್ತಿತ್ತು. ಮುರುಕನಹಳ್ಳಿ ಬಳಿ ಬರುತ್ತಿದ್ದಂತೆ ಲಾರಿಯಲ್ಲಿದ್ದ (Lorry) ಬಾಯ್ಲರ್ ಟ್ಯಾಂಕ್ ರಸ್ತೆ ಬದಿಯ ಮರಕ್ಕೆ ತಗುಲಿದ ಪರಿಣಾಮ ಹೆದ್ದಾರಿಗೆ ಅಡ್ಡಲಾಗಿ ಉರುಳಿದೆ. ಅಪಘಾತದಿಂದಾಗಿ ಮೈಸೂರು-ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯಲ್ಲಿ …

Read More »

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

ಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ ತಿಂಗಳು 5 ಲಕ್ಷ ಗ್ರಾಮೀಣರಿಗೆ ಉದ್ಯೋಗ ನೀಡಿ, 1.5 ಕೋಟಿ ಮಾನವದಿನ ಉದ್ಯೋಗ ಸೃಷ್ಟಿ ಮಾಡುವಷ್ಟು ಅನುದಾನವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್‌ ಖಂಡ್ರೆ  ಹೇಳಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಅವರು, 60:40ರ ಅನುಪಾತದಲ್ಲಿ ಕೇಂದ್ರ ಸರ್ಕಾರ  ಮೊದಲ ತ್ರೈಮಾಸಿಕಕ್ಕೆ 1,700 ಕೋಟಿ ರೂ. ರಾಜ್ಯ ಸರ್ಕಾರ 1,200 …

Read More »

ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಆಗಲ್ಲ: ಬೇಳೂರು ಗೋಪಾಲಕೃಷ್ಣ

ಬೆಂಗಳೂರು: ಸಿದ್ದರಾಮಯ್ಯ  ಅವರು ಚುನಾವಣೆಗೆ ಸ್ಪರ್ಧೆ ಮಾಡಲ್ಲ ಅಂತ ಹೇಳಿದ್ದಾರೆ. ಆದರೆ ರಾಜಕೀಯ ನಿವೃತ್ತಿ ಆಗಲ್ಲ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರು ಇವತ್ತಿನ ರಾಜಕೀಯದಲ್ಲಿ ಕೆಟ್ಟ ಪರಿಸ್ಥಿತಿ ಇದೆ ಅಂತ ಹೇಳಿರೋದು. ಇವತ್ತಿನ ರಾಜಕೀಯ ಪರಿಸ್ಥಿತಿ ಬಗ್ಗೆ ಮಾತಾಡಿದ್ದಾರೆ. ಸಿದ್ದರಾಮಯ್ಯ ಅವರು 8 ವರ್ಷ ಸಿಎಂ ಆಗಿ ಉತ್ತಮ ಆಡಳಿತ ಕೊಟ್ಟವರು. ಸಿಎಂ ಇದ್ದಾಗಲು ಚುನಾವಣೆಗೆ ನಿಲ್ಲೋದಿಲ್ಲ ಅಂತ …

Read More »

ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಡಿಕೆಶಿ

ಬೆಂಗಳೂರು: ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್  ತಿಳಿಸಿದರು. ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು ಆತುರದಲ್ಲಿದ್ದೀರಿ. ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು. ಇದೇ ವೇಳೆ ಇಂದು ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ …

Read More »

KPSC ನಲ್ಲಿ 400 ಹುದ್ದೆಗಳಿಗೆ 800 ಕೋಟಿ ಡೀಲ್‌ ಆಗಿದೆ: ಆರ್‌. ಅಶೋಕ್‌ ಬಾಂಬ್‌

ಬೆಂಗಳೂರು: ಕೆಪಿಎಸ್‌ಸಿ ನಲ್ಲಿ ಪಶುವೈದ್ಯಾಧಿಕಾರಿ ಹುದ್ದೆಗಳ ಮಾರಾಟ ಆಗಿದೆ. 400 ಹುದ್ದೆಗಳಿಗೆ 2 ಕೋಟಿ ರೂ. ನಂತೆ 800 ಕೋಟಿ ರೂ. ಲಂಚ ಪಡೆಯಲಾಗಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌  ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಇಂದು (ಸೋಮವಾರ) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಪಿಎಸ್‌ಸಿ ನಲ್ಲಿ 800 ಕೋಟಿ ಡೀಲ್ ಆಗಿದೆ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ಆಗಬೇಕು. ರ‍್ಯಾಂಕ್‌ ಬಂದಿರೋರಿಗೆ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಕಡಿಮೆ …

Read More »

KPSC ನೇಮಕಾತಿಗೆ ಸುಳ್ಳು ಪ್ರಮಾಣಪತ್ರ ಸಲ್ಲಿಕೆ ಆರೋಪ – ಕೇಸ್‌ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಸುಮಾ ಸಾಹುಕಾರ್‌ಗೆ ಹೈಕೋರ್ಟ್ ತರಾಟೆ

ಬೆಂಗಳೂರು: KPSC ನೇಮಕಾತಿಗೆ ಸುಳ್ಳು ಪ್ರಮಾಣಪತ್ರ ಸಲ್ಲಿಕೆ ಆರೋಪ ಪ್ರಕರಣವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ಸುಮಾ ಸಾಹುಕಾರ್‌ಗೆ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಇಂದು (ಜು.27) ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಪೀಠ, ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ. ವರ್ಷಕ್ಕೆ 30 ಲಕ್ಷ ರೂ. ಆದಾಯವಿರುವ ನೀವು 40 ಸಾವಿರ ರೂ. ಆದಾಯವೆಂದು ಅರ್ಜಿ ಸಲ್ಲಿಸಿದ್ದೀರಿ. ಇದು ಮೇಲ್ನೋಟಕ್ಕೇ ವಂಚನೆ ಎಂಬುದು ತಿಳಿಯುತ್ತಿದೆ. ಕೆಪಿಎಸ್‌ಸಿಯ ಪ್ರತಿ …

Read More »

ಶಿವಮೊಗ್ಗದ ಲಾಡ್ಜ್‌ನಲ್ಲಿ ಕ್ರಷರ್ ಉದ್ಯಮಿ ಆತ್ಮಹತ್ಯೆ

ಶಿವಮೊಗ್ಗ: ಕ್ರಷರ್ ಉದ್ಯಮಿಯೊಬ್ಬರು ನಗರದ ಲಾಡ್ಜ್‌ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೋಪಾಳ ಬಡಾವಣೆಯ ನಿವಾಸಿ ನವೀನ್ ಕುಮಾರ್ ಬಳಗಾರ್ ಅಲಿಯಾಸ್ ಬಸವರಾಜ್ (42) ಆತ್ಮಹತ್ಯೆಗೆ ಶರಣಾದ ಉದ್ಯಮಿ. ನಗರದ ಲಾಡ್ಜ್‌ ಒಂದರಲ್ಲಿ ಕೊಠಡಿ ಬಾಡಿಗೆಗೆ ಪಡೆದುಕೊಂಡು ಅಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ಉದ್ಯಮದಲ್ಲಿ ಉಂಟಾಗಿದ್ದ ನಷ್ಟ ಹಾಗೂ ವಿಪರೀತ ಸಾಲದ ಹೊರೆಯಿಂದಾಗಿ ಅವರು ಮನನೊಂದಿದ್ದರು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗದ ದೊಡ್ಡಪೇಟೆ …

Read More »

ರಾಧಾಕೃಷ್ಣ ನೀರು ಸರಬರಾಜು ಯೋಜನೆ ವಿರೋಧಿಸಿ ಪ್ರತಿಭಟನೆ

ಚಿಕ್ಕೋಡಿ ತಾಲೂಕಿನ ಕಲ್ಲೋಳಿ ಗ್ರಾಮದ ಸಮೀಪ ರಾಧಾಕೃಷ್ಣ ನೀರು ಸರಬರಾಜು ಯೋಜನೆಯನ್ನು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರವು ಸದ್ದಿಲ್ಲದೆ ತೀವ್ರ ಸಿದ್ಧತೆ ನಡೆಸುತ್ತಿದೆ ನಮ್ಮ ಗಡಿ ಭಾಗದ ಕೃಷಿ ಅಂತರ್ಜಲ ಕುಡಿಯುವ ನೀರು ಮತ್ತು ಪರಿಸರ ಮೇಲೆ ಅತ್ಯಂತ ಮಾರಕ ಹಾಗೂ ಗಂಭೀರ ಪರಿಣಾಮ ಬೀರುವುದು ಈ ಯೋಜನೆಯು ಕರ್ನಾಟಕ ಸಾರ್ವಜನಿಕರ ತೆರಿಗೆ ಹಣಕ್ಕೆ ಹಾಗೂ ಕೃಷಿಕರ ಬದುಕಿಗೆ ದೊಡ್ಡ ಪ್ರಮಾಣದ ಹೊಡೆತ ಬೀಳಲಿದೆ ಚಿಕ್ಕೋಡಿ ನಿಪ್ಪಾಣಿ ತಾಲೂಕುಗಳ ರೈತರು ದಶಕಗಳ …

Read More »

ಅಧ್ಯಕ್ಷರ ಆಯ್ಕೆ ವಿಚಾರವಾಗಿ ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ

ಬೆಳಗಾವಿ: ರಾಜ್ಯದಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗಳು ನಡೆಯುತ್ತಿದೆ. ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ. ಬೆಳಗಾವಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ ನೇತೃತ್ವದಲ್ಲಿ ನಗರ ಘಟಕದ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿತ್ತು. ಅಭಿಪ್ರಾಯ ಸಂಗ್ರಹದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಮಾಜಿ ಶಾಸಕ ರಮೇಶ ಕುಡಚಿ …

Read More »

ಅರಣ್ಯ ಇಲಾಖೆಯಿಂದ ಶಾಕ್ – ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ರೇಟ್ ಡಬಲ್

ಚಾಮರಾಜನಗರ: ಅರಣ್ಯ ಇಲಾಖೆಯು ಸಫಾರಿ ಮಾಡೋರಿಗೆ ಶಾಕ್ ನೀಡಿದ್ದು, ಪ್ರಸಿದ್ಧ ಬಂಡೀಪುರ, ನಾಗರಹೊಳೆಯಲ್ಲಿ  ಸಫಾರಿ ದರವನ್ನು  ಬಹುತೇಕ ಡಬಲ್ ಮಾಡಲಾಗಿದೆ. ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸೆಪ್ಟೆಂಬರ್ 1ರಿಂದ ಪರಿಷ್ಕತ ಸಫಾರಿ ದರ ಜಾರಿಯಾಗಲಿದೆ. ಬಸ್, ಜೀಪ್, ಕ್ಯಾಮೆರಾ ಬಳಕೆ ಶುಲ್ಕ, ವಾಹನ ಪಾರ್ಕಿಂಗ್ ಸೇರಿದಂತೆ ಎಲ್ಲವನ್ನೂ ಬಹುತೇಕ ದ್ವಿಗುಣಗೊಳಿಸಿದ್ದಾರೆ. ಬಂಡೀಪುರದಲ್ಲಿ ಬಸ್ ಸಫಾರಿಗೆ ವಯಸ್ಕರ ದರವನ್ನು 650 ರೂ.ಯಿಂದ 1,000 ರೂ.ಗೆ ಏರಿಕೆ ಮಾಡಿದ್ದಾರೆ. ಇನ್ನೂ 12 ವರ್ಷದೊಳಗಿನ ಮಕ್ಕಳಿಗೆ …

Read More »