Breaking News

Laxminews 24x7

ಎಲ್ಲ ಗ್ರಾಮಗಳಿಗೆ ಸ್ಮಶಾನ ಭೂಮಿ ಮತ್ತು ಒತ್ತುವರಿಯಾದ ಸರ್ಕಾರ ಭೂಮಿಯನ್ನು ತೆರವುಗೊಳಿಸಿರುವ ಬಗ್ಗೆ ವಿವರಣೆ ನೀಡಲು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಬೆಂಗಳೂರು : ರಾಜ್ಯದಲ್ಲಿ ಜನವಸತಿ ಇರುವ ಎಲ್ಲ ಗ್ರಾಮಗಳಿಗೆ ಗೌರವಯುತ ಮತ್ತು ಸಾಂಪ್ರದಾಯಿಕವಾಗಿ ಶವ ಸಂಸ್ಕಾರ ಮಾಡಲು ಸ್ಮಶಾನ ಭೂಮಿ ಒದಗಿಸಲು ಹಾಗೂ ಒತ್ತುವರಿಯಾದ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಲು ಕೈಗೊಂಡಿರುವ ಕ್ರಮಗಳ ವಿರುದ್ಧ ಅರ್ಜಿದಾರರು ಎತ್ತಿರುವ ಆಕ್ಷೇಪಗಳಿಗೆ ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.   ರಾಜ್ಯದಲ್ಲಿ ಸ್ಮಶಾನವಿಲ್ಲದ ಗ್ರಾಮ ಮತ್ತು ಪಟ್ಟಣಗಳಿಗೆ ಅಗತ್ಯ ಜಮೀನು ಒದಗಿಸಲು ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಸರ್ಕಾರ ಪಾಲಿಸಿಲ್ಲ ಎಂದು …

Read More »

ರಾಜ್ಯದಲ್ಲಿ ನಮ್ಮ ಕ್ಲಿನಿಕ್​ಗಳನ್ನು ಇನ್ನಷ್ಟು ಜನಸ್ನೇಹಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ

ಬೆಂಗಳೂರು: ಜನಸಾಮಾನ್ಯರಿಗೆ ಉಚಿತ ಚಿಕಿತ್ಸೆ ನೀಡುವ ಉದ್ದೇಶದಿಂದ ಪ್ರಾರಂಭಿಸಲಾಗಿರುವ ನಮ್ಮ ಕ್ಲಿನಿಕ್​​ಗಳಿಗೆ ಆರೋಗ್ಯ ಸಚಿವರು ಜನಸ್ನೇಹಿ ಸ್ಪರ್ಶ ನೀಡಿದ್ದು, ಕ್ಲಿನಿಕ್​​ಗಳ ಸಮಯ ಬದಲಾವಣೆ ಮಾಡಿ ಸಂಜೆ ವೇಳೆಯೂ ಚಿಕಿತ್ಸೆ ಲಭಿಸುವಂತೆ ಮಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇರುವ ಕ್ಲಿನಿಕ್​​ಗಳ ಪೈಕಿ ಶೇಕಡಾ 25ರಷ್ಟು ನಮ್ಮ ಕ್ಲಿನಿಕ್​ಗಳ ಸಮಯ ಬದಲಾವಣೆ ಮಾಡಲು ಆರೋಗ್ಯ ಸಚಿವರು ಆದೇಶಿಸಿದ್ದಾರೆ. ಸಂಜೆ 4.30ಕ್ಕೆ ಬಾಗಿಲು ಮುಚ್ಚುತ್ತಿದ್ದ ನಮ್ಮ ಕ್ಲಿನಿಕ್​ಗಳು ಇನ್ನು ಮುಂದೆ ರಾತ್ರಿ 8 ಗಂಟೆಯ ತನಕ …

Read More »

ಹುಬ್ಬಳ್ಳಿ – ಧಾರವಾಡ ಮೊಟ್ಟ ಮೊದಲ ಮಹಿಳಾ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ

ಹುಬ್ಬಳ್ಳಿ/ಬೆಂಗಳೂರು: ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆಸಿದೆ. ಹುಬ್ಬಳ್ಳಿ ಧಾರವಾಡ ನೂತ‌ನ ಪೊಲೀಸ್ ಆಯುಕ್ತರನ್ನಾಗಿ ಮಹಿಳಾ ಐಪಿಎಸ್ ಅಧಿಕಾರಿ ರೇಣುಕಾ ಸುಕುಮಾರ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮಿಷನರೇಟ್​ನ ಮೊಟ್ಟ ಮೊದಲ ಮಹಿಳಾ ಕಮಿಷನರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಭಾರಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ ಬಾಬು ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ರೇಣುಕಾ ಸುಕುಮಾರ ಅವರು 2011ರ ಐಪಿಎಸ್ …

Read More »

ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ವಾರಾಹಿ ಯಾತ್ರೆಯ ಮೂರನೇ ಹಂತ ಇಂದಿನಿಂದ ವಿಶಾಖಪಟ್ಟಣದಲ್ಲಿ ಆರಂಭವಾಗಲಿದೆ.

  ವಿಶಾಖಪಟ್ಟಣಂ, ಆಂಧ್ರಪ್ರದೇಶ: ನಟ ರಾಜಕಾರಣಿ ಪವನ್​ ಕಲ್ಯಾಣ್​ ಅವರಿಂದ ನಡೆಯುತ್ತಿರುವ ವಾರಾಹಿ ಯಾತ್ರೆ ಮುಂದುವರಿಯಲಿದೆ.ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ಮೂರನೇ ಹಂತದ ವಾರಾಹಿ ಯಾತ್ರೆಗೆ ಇಂದಿನಿಂದ ಚಾಲನೆ ದೊರೆಯಲಿದೆ. ವಿಶಾಖಪಟ್ಟಣದಲ್ಲಿ ಆರಂಭವಾಗಲಿರುವ ಈ ಯಾತ್ರೆ ಇದೇ ತಿಂಗಳ 19ರವರೆಗೆ ಮುಂದುವರಿಯಲಿದೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನದಂದು ತಮ್ಮ ಈ ವಾರಾಹಿ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಇಂದು ಮಧ್ಯಾಹ್ನ ಪವನ್ ಕಲ್ಯಾಣ್ ನಗರವನ್ನು ತಲುಪಲಿದ್ದು, …

Read More »

ಚುನಾವಣೆ ಗೆಲ್ಲಲು ಕೈ ಮಹಾಪ್ಲಾನ್​.. ವಿದ್ಯಾರ್ಥಿನಿಗೆ ಸ್ಮಾರ್ಟ್​​​ ಫೋನ್​ ವಿತರಿಸಿದ ರಾಹುಲ್

ಜೈಪುರ(ರಾಜಸ್ಥಾನ): ಮತ್ತೆ ಅಧಿಕಾರಕ್ಕೆ ಮರಳಲು ಪ್ಲಾನ್​ ಹಾಕಿರುವ ಸಿಎಂ ಅಶೋಕ್​ ಗೆಹ್ಲೋಟ್​ ಅದಕ್ಕಾಗಿ ಭರ್ಜರಿ ಕಾರ್ಯತಂತ್ರವನ್ನು ರೂಪಿಸುತ್ತಿದ್ದಾರೆ. ಇದಕ್ಕಾಗಿ ಅವರು ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಜೈಪುರದ ಬಿರ್ಲಾ ಆಡಿಟೋರಿಯಂನಲ್ಲಿ ಇಂದು ಸ್ಮಾರ್ಟ್​ಫೋನ್​ ಯೋಜನೆಗೆ ಚಾಲನೆ ನೀಡಲಿದ್ದಾರೆ. ಯೋಜನೆಗೆ ಚಾಲನೆ ಸಿಗುವ ಮುನ್ನವೇ ಕಾಂಗ್ರೆಸ್​ ನೇತಾರ, ರಾಹುಲ್​ ಗಾಂಧಿ ನಿನ್ನೆ ಮಂಗರ್‌ನಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಸ್ಮಾರ್ಟ್‌ಫೋನ್ ಹಸ್ತಾಂತರಿಸುವ ಮೂಲಕ ಯೋಜನೆಗೆ ಚಾಲನೆ ಕೊಟ್ಟಿದ್ದಾರೆ. ಮೊದಲ ಸುತ್ತಿನಲ್ಲಿ ಚಿರಂಜೀವಿ ಕುಟುಂಬದ ಮಹಿಳಾ ಮುಖ್ಯಸ್ಥರು …

Read More »

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐಎಎಸ್, ಕೆಎಎಸ್ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಿದ್ದಂತೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯೊಂದಿಗೆ ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ‘ಶತಮಾನೋತ್ಸವ’ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಕಾರಣಿಗಳು …

Read More »

ರಾಜ್ಯ ಸರ್ಕಾರದಿಂದ ಡ್ರೈವರ್​ ಹುದ್ದೆಗೆ ಅರ್ಜಿ ಆಹ್ವಾನ

ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಡ್ರೈವರ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಒಟ್ಟು ಮೂರು ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಸೂಕ್ತ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಸೂಚನೆಹುದ್ದೆ …

Read More »

ಸ್ತ್ರೀ ದ್ವೇಷಿ ವ್ಯಕ್ತಿ’: ಸಂಸತ್ತಿನಲ್ಲಿ ರಾಹುಲ್ ‘ಫ್ಲೈಯಿಂಗ್‌ ಕಿಸ್’ಗೆ ಸ್ಮೃತಿ ಇರಾನಿ ಆರೋಪ; ಸ್ಪೀಕರ್‌ಗೆ ಶೋಭಾ ಕರಂದ್ಲಾಜೆ ದೂರು

ನವದೆಹಲಿ: ಲೋಕಸಭೆಯಲ್ಲಿಂದು ಮಣಿಪುರ ಹಿಂಸಾಚಾರ ವಿಷಯವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿಲುವಳಿ ಮೇಲೆ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಅವರು ತಮ್ಮ ಭಾಷಣದ ನಂತರ ‘ಫ್ಲೈಯಿಂಗ್​ ಕಿಸ್​’ (ಗಾಳಿಯಲ್ಲಿ ಮುತ್ತು) ನೀಡಿದ್ದಕ್ಕೆ ಬಿಜೆಪಿ ಮಹಿಳಾ ಸಂಸದರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ರಾಹುಲ್​ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಪೀಕರ್​ ಓಂ ಬಿರ್ಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸದನದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರತ್ತ ರಾಹುಲ್​ ಗಾಂಧಿ ‘ಅನುಚಿತ ಸನ್ನೆ’ …

Read More »

ಕ್ವಿಟ್ ಇಂಡಿಯಾ ದಿನಾಚರಣೆ.. ರ‍್ಯಾಲಿ ನಡೆಸದಂತೆ ಮುಂಬೈನಲ್ಲಿ ಗಾಂಧೀಜಿ ಮರಿ ಮೊಮ್ಮಗ ತುಷಾರ್​ ಗಾಂಧಿ ಬಂಧನ, ಬಿಡುಗಡೆ

ಮುಂಬೈ (ಮಹಾರಾಷ್ಟ್ರ) : ಕ್ವಿಟ್​ ಇಂಡಿಯಾ ಚಳವಳಿಯ 81ನೇ ವಾರ್ಷಿಕೋತ್ಸವದ ಅಂಗವಾಗಿ ಇಲ್ಲಿನ ಆಗಸ್ಟ್​ ಕ್ರಾಂತಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿ ನಡೆಸದಂತೆ ನನ್ನನ್ನು ಪೊಲೀಸರು ತಡೆದಿದ್ದಾರೆ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಮರಿ ಮೊಮ್ಮಗ ತುಷಾರ್​ ಗಾಂಧಿ ಆರೋಪಿಸಿದ್ದಾರೆ.   ಇಲ್ಲಿನ ಆಗಸ್ಟ್​ ಕ್ರಾಂತಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ತುಷಾರ್ ಗಾಂಧಿ ಅವರು ಇಂದು ಬೆಳಿಗ್ಗೆ ಸುಬುರ್ಬಾನ್​ ಸಾಂತಾ ಕ್ರೂಝ್​ನಲ್ಲಿರುವ ಮನೆಯಿಂದ ಹೊರಟಿದ್ದರು. ಈ ವೇಳೆ ಮನೆಗೆ ಆಗಮಿಸಿದ …

Read More »

ಪ್ರೇಮ ವಿವಾಹಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರಿಂದ ತಂದೆಯ ಹತ್ಯೆಗೆ ಸಂಚು ರೂಪಿಸಿದ ಮಗಳು

ಸೊಲ್ಲಾಪುರ (ಮಹಾರಾಷ್ಟ್ರ): ಪ್ರೇಮ ವಿವಾಹಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರಿಂದ ಮಗಳು ತಂದೆಯ ಹತ್ಯೆಗೆ ಸಂಚು ರೂಪಿಸಿದ್ದಾಳೆ. ಕೊಲೆ ಮಾಡಲು ನಾಲ್ವರಿಗೆ 60 ಸಾವಿರ ರೂ. ಸುಪಾರಿ (ತಲಾ 15 ಸಾವಿರ) ನೀಡಿದ್ದಾಳೆ. ಸೊಲ್ಲಾಪುರದ ಮಾಧಾ ಪೊಲೀಸರು ಕೂಲಂಕಷವಾಗಿ ವಿಚಾರಣೆ ನಡೆಸಿದ ಬಳಿಕ ಯುವತಿ, ಪ್ರಿಯಕರ ಹಾಗೂ ತಂದೆಯ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ಬಂಧಿಸಿದ್ದಾರೆ. ತಾಲೂಕಿನ ವಡಚಿ ವಾಡಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳು ಯವತಿಯ ತಂದೆ ಮಾದ ತಾಲೂಕಿನ ನಿವಾಸಿ …

Read More »