Breaking News

Laxminews 24x7

RTO ಅಧಿಕಾರಿಗಳ ವಿಶೇಷ ಕಾರ್ಯಾಚರಣೆ – 390 ಖಾಸಗಿ ಶಾಲಾ ವಾಹನಗಳು ಸೀಜ್

ವಿಜಯನಗರ: ಫಿಟ್ನೆಸ್‌, ಇನ್ಶುರೆನ್ಸ್‌ ಇಲ್ಲದೇ ಓಡಾಟ ನಡೆಸುತ್ತಿದ್ದ ಖಾಸಗಿ ಶಾಲಾ ವಾಹನಗಳ ವಿರುದ್ಧ ವಿಜಯನಗರ ಜಿಲ್ಲೆಯ ಆರ್‌ಟಿಒ ಅಧಿಕಾರಿಗಳ ತಂಡ ಸಮರ ಸಾರಿದೆ. ವಿಶೇಷ ಕಾರ್ಯಾಚರಣೆ ನಡೆಸಿದ್ದು, ನೂರಾರು ವಾಹನಗಳನ್ನ ಜಪ್ತಿ ಮಾಡಿದೆ. ಹೌದು. ಜಿಲ್ಲೆಯಲ್ಲಿ ಫಿಟ್ನೆಸ್‌, ಇನ್ಶುರೆನ್ಸ್‌ ಇಲ್ಲದೇ ಓಡಾಟ ನಡೆಸುತ್ತಿದ್ದ ಖಾಸಗಿ ಶಾಲೆಗಳ 390 ವಾಹನಗಳನ್ನ ಆರ್‌ಟಿಒ ಅಧಿಕಾರಿಗಳ ತಂಡ ಜಪ್ತಿ ಮಾಡಿದೆ. ಕಳೆದ ಫೆಬ್ರವರಿಯಿಂದ ಈವರೆಗೆ 103 ಪ್ರಕರಣಗಳು ದಾಖಲಾಗಿದ್ದು, 11 ಲಕ್ಷ ರೂ.ಗಿಂತಲೂ ಅಧಿಕ ದಂಡ …

Read More »

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ನಿರ್ಧಾರ

ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ  ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ, ಆರಂಭಿಕ ಹಂತದಲ್ಲೇ ಸೋಂಕು ಪತ್ತೆಹಚ್ಚಿ, ಕಡಿವಾಣ ಹಾಕುವ ನಿರ್ಧಾರಕ್ಕೆ ಆರೋಗ್ಯ ಇಲಾಖೆ  ಮುಂದಾಗಿದೆ. ಅದಕ್ಕಾಗಿ ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ. ಏಕೆ ಈ ಮಹತ್ವದ ನಿರ್ಧಾರ? ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ  ಹಾಗೂ ಇತರ ಸಂಸ್ಥೆಗಳ ವರದಿಗಳ ಪ್ರಕಾರ, ಹೆಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ …

Read More »

ನನಗಾಗಿ ಎಲ್ಲವನ್ನೂ ತ್ಯಾಗ ಮಾಡಿದ್ದೀರಿ, ಆದ್ರೆ ನಾನು ಫೇಲಾದೆ: ಡೆತ್‌ನೋಟ್‌ ಬರೆದಿಟ್ಟು ನೀಟ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಮುಂಬೈ: ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕೇವಲ 166 ಅಂಕಗಳನ್ನು ಗಳಿಸಿದ ನಂತರ ಆಕೆ ಒತ್ತಡಕ್ಕೊಳಗಾಗಿದ್ದಳು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಶನಿವಾರ ಸಂಜೆ 4.30 ರ ಸುಮಾರಿಗೆ ಆಕೆ ತನ್ನ …

Read More »

ಪೇಪರ್ ಲೀಕ್‌ ತಡೆಗೆ ಕಠೋರ ಕಾನೂನು – ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ತಣ್ಣಗಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗ ತನ್ನ ಪ್ರಮುಖ ಶಾಸನಾತ್ಮಕ ಆದ್ಯತೆಗಳತ್ತ ಗಮನಹರಿಸುತ್ತಿದೆ. ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ ಬಳಿಕ ಹೌದು. ಕಾಕ್ರೋಚ್‌ ಜನತಾ ಪಾರ್ಟಿ  ತನ್ನ ಪ್ರತಿಭಟನೆ ಹಿಂಪಡೆದುಕೊಂಡಿದೆ. ಇದಾದ ಒಂದು ದಿನದ ನಂತರ, ಪ್ರಧಾನಿ ಮೋದಿ ಅವರು ಇನ್ಫೋಸಿಸ್ ಸಹ-ಸ್ಥಾಪಕ, ವಿಶ್ವಪ್ರಸಿದ್ಧ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ …

Read More »

ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ – ಯುವಸಮೂಹಕ್ಕೆ ಅತಿದೊಡ್ಡ ಗೆಲುವು, ಮಂಡಿಯೂರಿದ ಕೇಂದ್ರ

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ಅವರು ರಾಜೀನಾಮೆ ನೀಡಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಾರ್ಟಿ (CJP) ನಡುವೆ ಇಂದು (ಶನಿವಾರ) 3ನೇ ಸುತ್ತಿನ ಮಾತುಕತೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ ನಿಗದಿಯಾಗಿತ್ತು. ಆದ್ರೆ ಅದಕ್ಕೂ ಮುನ್ನವೇ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ್ದು, ಯುವ ಸಮೂಹಕ್ಕೆ …

Read More »

ಬರ ಸಂಕಷ್ಟದಲ್ಲಿ ರೈತರಿಗೆ ಸಾಲಮನ್ನಾ ಸೇರಿ ತುರ್ತು ಪರಿಹಾರ ಘೋಷಿಸಲಿ: ಡಾ. ವೀರಣ್ಣ ಚರಂತಿಮಠ

ಬಾಗಲಕೋಟೆ, : ರಾಜ್ಯದಲ್ಲಿ ಮುಂಗಾರು ಮಳೆ ವೈಫಲ್ಯದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ, ಬರ ಪರಿಹಾರ ಕ್ರಮಗಳನ್ನು ತುರ್ತಾಗಿ ಜಾರಿಗೊಳಿಸಬೇಕು ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಒತ್ತಾಯಿಸಿದರು. ಗುರುವಾರ ಬಾಗಲಕೋಟೆಯ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ಮತಕ್ಷೇತ್ರದ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಇಡೀ …

Read More »

ಉದ್ಯೋಗ ಖಾತ್ರಿಯಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಫಲವೃಕ್ಷೋದ್ಯಾನ: ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿ ಸರ್ಕಾರಿ ಜಮೀನಿನಲ್ಲಿ ಫಲವೃಕ್ಷೋದ್ಯಾನ ಅಭಿವೃದ್ಧಿಪಡಿಸಿ, ಅದನ್ನು ವಾರ್ಷಿಕ ಆಧಾರದ ಮೇಲೆ ಪಾರದರ್ಶಕ ಹರಾಜು ಮೂಲಕ ಅದೇ ಗ್ರಾಮದ ಯುವಕರಿಗೆ ಗುತ್ತಿಗೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ  ಸೂಚನೆ ನೀಡಿದ್ದಾರೆ. ಈ ಕುರಿತು ಇಲಾಖೆಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಪ್ರತಿ ಗ್ರಾಮದಲ್ಲೂ ಫಲವೃಕ್ಷೋದ್ಯಾನ ನಿರ್ಮಿಸಿದರೆ ಹಸಿರು ಹೊದಿಕೆ ಹೆಚ್ಚುವುದರ ಜೊತೆಗೆ ನಿರುದ್ಯೋಗಿ ಮತ್ತು ಭೂರಹಿತ ಯುವಕರಿಗೆ …

Read More »

3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪ

ಬೆಂಗಳೂರು: ಬಿಪಿಎಲ್  ಕಾರ್ಡ್‌ಗೆ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯನ್ನು 3 ಲಕ್ಷ ರೂ.ವರೆಗೆ ಹೆಚ್ಚಿಸುವ ಬಗ್ಗೆ ಸರ್ಕಾರದಲ್ಲಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ  ಜೊತೆ ಚರ್ಚೆ ನಡೆಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ) ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಬಿಪಿಎಲ್ ಕಾರ್ಡ್‌ಗೆ ಸಂಬಂಧಿಸಿದ ಆದಾಯ ಮಿತಿಯನ್ನು ಪರಿಷ್ಕರಿಸಲಾಗುತ್ತಿದೆ. ಈಗಾಗಲೇ ಸುಮಾರು …

Read More »

ʻನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ?ʼ ಎಂದಿದ್ದ ಸಿ.ಟಿ.ರವಿ ವಿರುದ್ಧ FIR

ಚಿಕ್ಕಮಗಳೂರು: ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ? ಎಂಬ ಹೇಳಿಕೆ ನೀಡಿದ್ದ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿರುದ್ಧ ಬಿಜೆಪಿ ವತಿಯಿಂದ ಚಿಕ್ಕಮಗಳೂರಿನಲ್ಲಿ ನಡೆದ ಯೂತ್ ಫಾರ್ ನೇಷನ್ ಕಾರ್ಯಕ್ರಮದಲ್ಲಿ ಮುಸ್ಲಿಮ್‌ ಸಮುದಾಯದ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಆಯೋಜಿಸಿದ್ದ ಪ್ರತಿಭಟನಾ …

Read More »

ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ: ಯದುವೀರ್ ಒಡೆಯರ್

ಮೈಸೂರು: ಕಾಂಗ್ರೆಸ್  ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ  ಸಂಬಂಧ ಪ್ರತಿಭಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀಟ್ ಪ್ರಶ್ನೆ ಪತ್ರಿಕೆ ಬಹಿರಂಗ ಪ್ರಕರಣವನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮರುಪರೀಕ್ಷೆ ನಡೆದು ಫಲಿತಾಂಶವೂ ಪ್ರಕಟವಾಗಿದೆ. ಆದರೂ ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಅರಾಜಕತೆ ಸೃಷ್ಟಿಸಲು ಹೊರಟಿದೆ. ಪ್ರತಿಭಟನೆ ಮೂಲಕ ದಿಕ್ಕು ತಪ್ಪಿಸುವ ಕೆಲಸವಾಗಿದೆ. …

Read More »