ಬೆಂಗಳೂರು: ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆಗೆ ಪೆಟ್ಟುಬಿದ್ದ ಕಾರಣ ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶತಾಯುಷಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕರನ್ನು ಅರಣ್ಯ ಹಾಗೂ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. “ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಸಾಕಿರುವ ಮಹಾತಾಯಿಯಾದ ನಿಮಗೆ ಇಡೀ ಕರುನಾಡಿ ಜನರಷ್ಟೇ ಅಲ್ಲದೇ ವಿಶ್ವ ಪರಿಸರ ಪ್ರೇಮಿಗಳ ದಿವ್ಯ ಶುಭ ಹಾರೈಕೆ ಇದೆ. ನೀವು ಶೀಘ್ರ ಗುಣಮುಖರಾಗುತ್ತೀರಿ” ಎಂದು …
Read More »ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ನಡೆದ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.
ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ನಡೆದಿದೆ ಎನ್ನಲಾದ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ಬಗ್ಗೆ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. “ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಲಾಗಿದೆ” ಎಂದು ತಿಳಿಸಿದ್ದಾರೆ. ಈ ಪ್ರಕರಣ ರಾಜಕೀಯವಾಗಿ ಭಾರಿ ಸದ್ದು ಮಾಡಿದೆ. ಬಿಜೆಪಿ, …
Read More »ಖುದ್ದು ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಫಿಲ್ಡಿಗಿಳಿಯುವ ಮೂಲಕ ಕಸ ವಿಲೇವಾರಿ ಪರಿಶೀಲನೆ
ಬೆಳಗಾವಿ : ನಗರದ ಕೆಲವು ವಾರ್ಡ್ಗಳಿಗೆ ಕಸ ಸಂಗ್ರಹಿಸುವ ವಾಹನಗಳು ಹೋಗುತ್ತಿರಲಿಲ್ಲ. ಕೆಲವು ಕಡೆಗಳಲ್ಲಿ ಸರಿಯಾದ ಸಮಯಕ್ಕೆ ವಾಹನ ತೆರಳುತ್ತಿಲ್ಲವೆಂದು ಆಯುಕ್ತರಿಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿದ್ದವು. ಇದರಿಂದ ಎಚ್ಚೆತ್ತುಕೊಂಡ ಆಯುಕ್ತ ಅಶೋಕ ದುಡಗುಂಟಿ ಸೋಮವಾರ ಬೆಳಗ್ಗೆ 5.30ಕ್ಕೆ ಸೈಕಲ್ ಮೇಲೆ ಕಸ ಸಂಗ್ರಹಿಸುವ ವಾಹನಗಳ ಶಾಖೆಗೆ ದಿಢೀರ್ ಭೇಟಿ ನೀಡಿದ್ದರು. ಈ ವೇಳೆ ಚಾಲಕರು, ಕ್ಲೀನರ್ ಗಳು ಎಷ್ಟು ಗಂಟೆಗೆ ಡ್ಯೂಟಿಗೆ ಬರುತ್ತಾರೆ ಎಂದು ಹಾಜರಿ ಪುಸ್ತಕ ಪರೀಕ್ಷಿಸಿದರು. ಸರಿಯಾದ …
Read More »ಬಿಬಿಎಂಪಿ ಹಣ ಬಿಡುಗಡೆಗೆ ವಿಳಂಬ ಮಾಡಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ಗುತ್ತಿಗೆದಾರರು
ಬೆಂಗಳೂರು: ಕಳೆದ 26 ತಿಂಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ತಾವು ಮಾಡಿರುವ ಕಾಮಗಾರಿಗಳ ಬಾಕಿ ಬಿಲ್ ಪಾವತಿ ಮಾಡದಿರುವ ಕುರಿತು ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯನಿರತ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು (ಸೋಮವಾರ) ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಗುತ್ತಿಗೆದಾರರು, ”ಪಾಲಿಕೆಯ ಮುಖ್ಯ ಆಯುಕ್ತರು ಬಿಲ್ ಪಾವತಿಗೆ ಮೀನಮೇಷ ಎಣಿಸುತ್ತಿದ್ದಾರೆ. ಬಿಲ್ ಬಾಕಿ ಉಳಿಸಿಕೊಂಡು, …
Read More »ಕೆಎಸ್ಆರ್ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್ಪೆಕ್ಟರ್ ಹತ್ಯೆ
ಬಳ್ಳಾರಿ: ನಗರದ ಕೆಎಎಸ್ಆರ್ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್ಪೆಕ್ಟರ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಹುಸೇನಪ್ಪ (54) ಕೊಲೆಯಾದ ಸೆಕ್ಯುರಿಟಿ ಇನ್ಸ್ಪೆಕ್ಟರ್. ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಮಾರಕಾಸ್ತ್ರಗಳಿಂದ ಹುಸೇನಪ್ಪ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದಾರೆ. ಹುಸೇನಪ್ಪ ಕೆಎಸ್ಆರ್ಟಿಸಿನಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ನಾಳೆ ಬೀದರ್ನಲ್ಲಿ ಚಾಲಕರ ನೇಮಕಾತಿ ಪರೀಕ್ಷೆಗೆ ತೆರಳುತ್ತಿದ್ದ ಅವರು ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವ ವೇಳೆ ಕೊಲೆ ಮಾಡಲಾಗಿದೆ. ಸ್ಥಳಕ್ಕೆ …
Read More »ನ್ನಡ ಚಿತ್ರರಂಗಕ್ಕೆ ಮೇಲಿಂದ ಮೇಲೆ ಆಘಾತ
ಕನ್ನಡ ಚಿತ್ರರಂಗ ಸೇರಿದಂತೆ ಇತರೆ ಭಾಷೆ ಸಿನಿಮಾ ನಟ-ನಟಿಯರ ಹಠಾತ್ ಸಾವು ಅವರ ಅಭಿಮಾನಿಗಳಲ್ಲಿ ತೀವ್ರ ನೋವು ಉಂಟು ಮಾಡುತ್ತಿದೆ. ಇತ್ತೀಚಿನ ದಿನದಲ್ಲಿ ಯುವ ಜನತೆಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಇದಕ್ಕೆ ಸಾಕ್ಷಿಯೆಂಬಂತೆ ಅನೇಕ ಪ್ರಕರಣಗಳು ನಮ್ಮ ಸುತ್ತಮುತ್ತಲೂ ನಡೆಯುತ್ತಿವೆ. ಅದರಲ್ಲೂ ಕನ್ನಡ ಚಿತ್ರರಂಗದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಈ ರೀತಿ ಯುವ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಕೇವಲ ಉದ್ಯಮಕ್ಕೆ ಮಾತ್ರವಲ್ಲ, ರಾಜ್ಯಕ್ಕೆ ಬರಸಿಡಿಲು ಬಡಿಯುವಂತೆ ಮಾಡಿವೆ. ನಟ …
Read More »ರಾಷ್ಟ್ರ ಧ್ವಜಗಳಿಗೆ ಭಾರೀ ಬೇಡಿಕೆ: ಸಿದ್ಧವಾಗುತ್ತಿವೆ ಸಾವಿರಾರು ತ್ರಿವರ್ಣ ಧ್ವಜಗಳು
ಹುಬ್ಬಳ್ಳಿ: ರಾಷ್ಟ್ರಧ್ವಜ ತಯಾರಿಕೆಗೆ ಭಾರತೀಯ ಮಾನಕ ಸಂಸ್ಥೆ (ಬಿಐಎಸ್)ಯಿಂದ ಮಾನ್ಯತೆ ಪಡೆದ ದೇಶದ ಏಕೈಕ ಸಂಸ್ಥೆ ಎಂದರೆ ಅದು ಹುಬ್ಬಳ್ಳಿಯ ಬೆಂಗೇರಿಯ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ. ಕೋವಿಡ್ ನಂತರ ಮತ್ತೆ ಇಲ್ಲಿನ ರಾಷ್ಟ್ರಧ್ವಜಗಳಿಗೆ ದೇಶಾದ್ಯಂತ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆ ಸಂಸ್ಥೆಯು ಈ ವರ್ಷ ಮೂರು ಕೋಟಿ ರೂಪಾಯಿ ವಹಿವಾಟು ನಡೆಸುವ ನಿರೀಕ್ಷೆಯನ್ನು ಹೊಂದಿದೆ. ದೇಶದ ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಅಧಿಕೃತವಾಗಿ ರಾಷ್ಟ್ರಧ್ವಜಗಳನ್ನು ಸರಬರಾಜು ಮಾಡುವ ಹುಬ್ಬಳ್ಳಿಯ …
Read More »ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಮೇಲೆ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಿ ಧಾರವಾಡ ಹೈಕೋರ್ಟ್
ಧಾರವಾಡ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಮೇಲೆ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಿ ಧಾರವಾಡ ಹೈಕೋರ್ಟ್ ತೀರ್ಪು ನೀಡಿದೆ. ವಿಧಾನಸಭಾ ಚುನಾವಣೆ ವೇಳೆ ಜೆಪಿ ನಡ್ಡಾ ಅವರ ಮೇಲೆ ಎಫ್‌ಐಆರ್ ದಾಖಲಾಗಿತ್ತು. ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಮೇ 11, 2023ರಂದು ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ದೂರು ದಾಖಲಾಗಿತ್ತು. ಮೇ 7, 2023 ರಂದು ಬಹಿರಂಗ ಸಭೆ ನಡೆದಿತ್ತು. ಬಹಿರಂಗ ಸಭೆಯಲ್ಲಿ ಜೆ ಪಿ ನಡ್ಡಾ ಭಾಷಣ ಮಾಡಿದ್ದರು. …
Read More »ತಮ್ಮ ಮೇಲೆ ಕೇಳಿ ಬಂದ ಲಂಚದ ಆರೋಪಕ್ಕೆ ಸಂಬಂಧಪಟ್ಟಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ
ಮಂಡ್ಯ/ಬೆಂಗಳೂರು: ಕೃಷಿ ಸಚಿವರು ಲಂಚಕ್ಕಾಗಿ ಪೀಡಿಸುತ್ತಿದ್ದಾರೆ ಎಂದು ಸ್ವತಃ ಕೃಷಿ ಇಲಾಖೆಯ ಅಧಿಕಾರಿಗಳೇ ನೇರವಾಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು, ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ ಎಂದು ಕಿಡಿಕಾರಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಆರೋಪಿಸಿ ಮಂಡ್ಯ ಜಿಲ್ಲೆಯ ಏಳು ಕೃಷಿ ಅಧಿಕಾರಿಗಳಿಂದ ದೂರು ಅರ್ಜಿ ಬಂದಿದ್ದು, ಈ ಬಗ್ಗೆ …
Read More »ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನಿಗೆ 136 ಎಂ ಎಲ್ ಎ ಗಳ ಸಪೋರ್ಟ್ ಇದೆ:
ಬಾಗಲಕೋಟೆ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆಯಲ್ಲ. ಅಲ್ಲಿಯ ಸ್ಪೀಕರ್, ಎಷ್ಟು ಬಾರಿ ನಮ್ಮ ನಾಯಕರನ್ನು ಹೊರ ಹಾಕಿದ್ದಾರೆ? ಎಷ್ಟು ಹೊತ್ತು ಹೊರಹಾಕಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ಪಕ್ಷದ ಮುಖಂಡರಿಗೆ ಅಬಕಾರಿ ಇಲಾಖೆ ಸಚಿವ ಆರ್ ಬಿ ತಿಮ್ಮಾಪೂರ ಟಾಂಗ್ ನೀಡಿದ್ದಾರೆ. ಬಾಗಲಕೋಟೆ ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ವಿರೋಧ ಮಾಡುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು. ಅದ್ರ ಬಗ್ಗೆ ಮಾತನಾಡಲು ಯೋಗ್ಯತೆ ಅವರಿಗೆ ಇಲ್ಲ, ಮೊದಲು ಬಿಜೆಪಿಗರು ತಾವು …
Read More »
Laxmi News 24×7