ಬೆಂಗಳೂರು, (ಆಗಸ್ಟ್ 06): ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಅಭೂತಪೂರ್ವ ಗೆಲ್ಲುವ ಮೂಲಕ ಬಹುಮತ ಪಡೆದು ಅಧಿಕಾರ ಹಿಡಿದಿರುವ ಕಾಂಗ್ರೆಸ್ (Congress) ಚಿತ್ತ ಇದೀಗ ಮುಂಬರುವ ಲೋಕಸಭೆ ಚುನಾವಣೆ ಮೆಲೆ ನೆಟ್ಟಿದೆ. ಕರ್ನಾಟಕದಲ್ಲಿ ಗೆದ್ದ ಜೋಶ್ನಲ್ಲೇ ಲೋಕಸಭಾ ಚುನಾವಣೆಗೆ(Loksabha Elections 2024) ಸಜ್ಜಾಗುತ್ತಿದೆ. ಇತ್ತೀಚೆಗಷ್ಟೇ ಹೈಕಮಾಂಡ್ ಸಹ ರಾಜ್ಯ ನಾಯಕರನ್ನು ದೆಹಲಿಗೆ ಕರೆಯಿಸಿಕೊಂಡು ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆಲುವಿನ ಟಾಸ್ಕ್ ನೀಡುವುದರ ಜೊತೆ ಕೆಲ ಸಲಹೆ ಸೂಚನೆಗಳನ್ನು ನೀಡಿ …
Read More »ಟೊಮ್ಯಾಟೊ ಬೆಳೆದು ಕೋಟ್ಯಧಿಪತಿಗಳಾದ ಅಣ್ತಮ್ಮ
ಈ ಕುಟುಂಬ ಮೊದಲಿಗೆ ಸ್ವಂತ ಜಮೀನಿನಲ್ಲಿ ಮಳೆ ಆಶ್ರಿತ ಬೆಳೆ ಬೆಳೆದು ಜೀವನ ಸಾಗಿಸುತ್ತಿತ್ತು. ಬಳಿಕ ಸಹೋದರರು ಎಸ್ಎಸ್ಎಲ್ಸಿ ಮುಗಿಸಿ, ಕಾಲೇಜು ಮೆಟ್ಟಿಲು ಏರದೆ ಕೃಷಿ ಮಾಡುವ ನಿರ್ಧಾರ ಕೈಗೊಂಡರು. 3-4 ವರ್ಷಗಳಿಂದ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಸಹೋದರರು ಟೊಮ್ಯಾಟೊ ಬೆಳೆಯುವುದನ್ನೇ ರೂಢಿಯಾಗಿಸಿಕೊಂಡಿದ್ದಾರೆ. 2 ವರ್ಷಗಳ ಹಿಂದೆ ಟೊಮ್ಯಾಟೊ ಬೆಲೆ ಕಡಿಮೆ ಇದ್ದ ಕಾರಣ ಅಷ್ಟೇನೂ ಲಾಭ ಸಿಕ್ಕಿರಲಿಲ್ಲ. ಹಿಂದಿನ ವರ್ಷವೂ ಖರ್ಚು ಸಿಕ್ಕಿತ್ತೇ ಹೊರತು ಲಾಭ ಕಂಡಿರಲಿಲ್ಲ. ಆದರೂ ಟೊಮ್ಯಾಟೊ …
Read More »ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ B.J.P.ಹೈಕಮಾಂಡ್, ಬುಲಾವ್
ಬೆಂಗಳೂರು: ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರ ಹೆಸರು ಅಂತಿಮಗೊಳಿಸಲು ವಿಳಂಬ ಮಾಡುತ್ತಿರುವ ಬಿಜೆಪಿ ಹೈಕಮಾಂಡ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬುಲಾವ್ ನೀಡಿದೆ. ಬೊಮ್ಮಾಯಿ ಪರ ಯಡಿಯೂರಪ್ಪ ಒಲವಿರುವ ಹಿನ್ನಲೆಯಲ್ಲಿ ಬೊಮ್ಮಾಯಿ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ. ಬೊಮ್ಮಾಯಿ ಇಂದೇ ದೆಹಲಿಗೆ ತೆರಳುತ್ತಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ …
Read More »ಸಾಲುಮರದ ತಿಮ್ಮಕ್ಕ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲು
ಬೆಂಗಳೂರು : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡಿದ್ದು, ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಸಂಜೆ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂಆರ್‌ಐ ಸ್ಕ್ಯಾನಿಂಗ್ ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೇರೆ ಯಾವುದೇ ತೊಂದರೆಯಾಗಿಲ್ಲ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಇಂದು ಹಾಸನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ ಸಾಲುಮರದ …
Read More »ಜಮೀನಿನಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ರೈತ ದಂಪತಿ ಮೃತಪಟ್ಟಿದ್ದಾರೆ.
ಬೆಳಗಾವಿ: ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿಜಗರಣಿ ಗ್ರಾಮದಲ್ಲಿ ಇಂದು ನಡೆದಿದೆ. ನಿಸ್ಸಾರ್ ಅಹಮ್ಮದ್ ಮಕ್ಬೂಲ್ ಸಾಬ್ ಸನದಿ(32), ಪತ್ನಿ ಲತಾ ನಿಸ್ಸಾರ್ ಅಹಮ್ಮದ್ ಸನದಿ(26) ಮೃತರು. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಘಟನೆ ನಡೆದಿದೆ. “ಜಮೀನಿನಲ್ಲಿ ಹಾದು ಹೋಗಿರುವ 11 ಕೆವಿ ವಿದ್ಯುತ್ ತಂತಿಗಳು ಹಳೆಯದಾಗಿದ್ದು, ತುಕ್ಕು ಹಿಡಿದಿದ್ದವು. ಇವುಗಳನ್ನು ಬದಲಾಯಿಸುವಂತೆ ಅನೇಕ ಬಾರಿ ಗ್ರಾಮಸ್ಥರು ಒತ್ತಾಯಿಸಿದ್ದರು. ಆದರೆ …
Read More »ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಸೋಮವಾರ ವಿವಿಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಆಗಸ್ಟ್ 7 ರಂದು (ನಾಳೆ) ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದ್ದಾರೆ. ಆಡಳಿತರೂಢ ಕಾಂಗ್ರೆಸ್ ಸರ್ಕಾರವೂ ಬಿಜೆಪಿ ಸರ್ಕಾರ ತಂದಿದ್ದ ರೈತ ಪರ ಯೋಜನೆಗಳನ್ನು ಕೈ ಬಿಟ್ಟಿದ್ದು, ರಾಜ್ಯದ ಅನ್ನದಾತರ ವಿರುದ್ಧವಾಗಿ ನಡೆದುಕೊಂಡಿದೆ. ರೈತ ವಿರೋಧಿ ನೀತಿಯನ್ನು ಖಂಡಿಸಿ ಸೋಮವಾರ ವಿವಿಧ ಜಿಲ್ಲಾ …
Read More »ಮುಂಬೈ ಪೊಲೀಸರಿಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ. ರೈಲುಗಳಲ್ಲಿ ಸರಣಿ ಸ್ಫೋಟ ನಡೆಸುವುದಾಗಿ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಆತನನ್ನು ಬಂಧಿಸಲಾಗಿದೆ.
ಮುಂಬೈ(ಮಹಾರಾಷ್ಟ್ರ) : ಗೃಹ ಸಚಿವ ಅಮಿತ್ ಶಾ ಅವರು ಮುಂಬೈ ಭೇಟಿ ನೀಡಿದ ಬೆನ್ನಲ್ಲೇ ಸ್ಥಳೀಯ ರೈಲುಗಳಲ್ಲಿ ಸರಣಿ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. ತಕ್ಷಣವೇ ಎಚ್ಚೆತ್ತುಕೊಂಡ ಪೊಲೀಸರು, ಓರ್ವನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಅಶೋಕ್ ಮುಖಿಯಾ ಎಂದು ಗುರುತಿಸಲಾಗಿದೆ. ಬೆದರಿಕೆ ಹಾಕಿದ್ದರ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ ಆರೋಪಿ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಲೋಕಲ್ ಟ್ರೈನ್ಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದ. ಪೊಲೀಸರು …
Read More »ವಾರಾಂತ್ಯದ ಪಾರ್ಟಿ ನೆಪದಲ್ಲಿ ಪುಂಡಾಟಿಕೆ ಮದ್ಯದ ಅಮಲಿನಲ್ಲಿದ್ದ ಯುವತಿಯ ರಂಪಾಟ
ಬೆಂಗಳೂರು: ವಾರಾಂತ್ಯದ ಪಾರ್ಟಿ ನೆಪದಲ್ಲಿ ಪುಂಡಾಟಿಕೆ ಮೆರೆಯುವ ಪ್ರಕರಣಗಳು ನಗರದಲ್ಲಿ ಆಗಾಗ ವರದಿಯಾಗುತ್ತಲೇ ಇರುತ್ತವೆ. ಅಂಥಹದ್ದೇ ಮತ್ತೊಂದು ಪ್ರಕರಣ ಶನಿವಾರ ತಡರಾತ್ರಿ ನಗರದ ಚರ್ಚ್ ಸ್ಟ್ರೀಟ್ನಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಯುವತಿಯೊಬ್ಬಳು ತೂರಾಡುತ್ತ ಸಾರ್ವಜನಿಕರಿಗೆ ತಲೆ ನೋವಾದ ಘಟನೆ ನಡೆದಿದೆ. ಬುದ್ಧಿ ಹೇಳಲು ಹೋದವರ ಮೇಲೆಯೇ ಮುಗಿ ಬೀಳುತ್ತಿದ್ದ ಯುವತಿಯನ್ನು ಸಂಬಾಳಿಸುವಲ್ಲಿ ಪೊಲೀಸರೇ ಹೈರಾಣಾಗಿದ್ದಾರೆ. ರಾತ್ರಿ ಪಾಳಿಯಲ್ಲಿದ್ದ ಪೊಲೀಸ್ ಸಿಬ್ಬಂದಿ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು ಯತ್ನಿಸಿದ್ದಾರೆ. ಆದರೆ ಮಹಿಳಾ ಸಿಬ್ಬಂದಿಗಳಿಲ್ಲದ …
Read More »ಹೈದರಾಬಾದ್ನ ಐತಿಹಾಸಿಕ ಸಂಕೇತವಾದ ಚಾರ್ ಮಿನಾರ್ ಇನ್ನು ಮುಂದೆ ವರ್ಷಪೂರ್ತಿ ವಿದ್ಯುದ್ಧೀಪಗಳಿಂದ ಜಗಮಗಿಸಲಿದೆ.
ಹೈದರಾಬಾದ್ (ತೆಲಂಗಾಣ) : ಹೈದರಾಬಾದ್ನ ಐತಿಹಾಸಿಕ ಸಂಕೇತವಾದ ಚಾರ್ ಮಿನಾರ್ ಇನ್ನು ಮುಂದೆ ವರ್ಷಪೂರ್ತಿ ವಿದ್ಯುದ್ಧೀಪಗಳಿಂದ ಜಗಮಗಿಸಲಿದೆ. ಪ್ರಸಿದ್ಧ ಸ್ಮಾರಕವಾಗಿರುವ ಚಾರ್ಮಿನಾರ್ ಮುಂಭಾಗದ ವಿದ್ಯುದ್ದೀಪದ ವ್ಯವಸ್ಥೆಯನ್ನು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಶನಿವಾರ ರಾತ್ರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚಾರ್ಮಿನಾರ್ ತ್ರಿವರ್ಣ ಧ್ವಜದ ಬಣ್ಣಗಳಲ್ಲಿ ಅದ್ಭುತವಾಗಿ ಬೆಳಗಿತು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ರೆಡ್ಡಿ, “ಇನ್ನು ಮುಂದೆ ವರ್ಷವಿಡೀ ಪ್ರತಿದಿನ ಸಂಜೆ ಚಾರ್ಮಿನಾರ್ ಅನ್ನು ವಿದ್ಯುದ್ದೀಪಗಳಿಂದ …
Read More »ಉದ್ಯಮಿಯೊಬ್ಬರು ಕಟ್ಟಡದ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಮಂಗಳೂರು : ಉದ್ಯಮಿಯೊಬ್ಬರು ಕಟ್ಟಡದ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಬೆಂದೂರುವೆಲ್ನ ಅಟ್ಲಾಂಟಿಕ್ ಅಪಾರ್ಟೆಂಟ್ನಲ್ಲಿ ಇಂದು ನಡೆದಿದೆ. ನಗರದಲ್ಲಿ ಕ್ವಾರೆ ಹಾಗೂ ಬಿಲ್ಡರ್ ಉದ್ಯಮದ ವ್ಯವಹಾರ ನಡೆಸುತ್ತಿದ್ದ ಮೋಹನ್ ಅಮೀನ್ (62) ಸಾವಿಗೀಡಾದವರು. ಇಂದು ಬೆಳಗ್ಗೆ 9 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಕೆಳಗೆ ಬಿದ್ದ ರಭಸಕ್ಕೆ ತಲೆ ಸಂಪೂರ್ಣ ಛಿದ್ರಗೊಂಡಿದೆ. ವಿಜಯವಾಹಿನಿ ಎಂಬ ಹೆಸರಿನ ಟಿಪ್ಪರ್, ಕ್ವಾರೆ, ಜಲ್ಲಿಕಲ್ಲು ಬಿಸ್ನೆಸ್ ಹೊಂದಿದ್ದ ಇವರು ಮಲ್ಲಿಕಟ್ಟೆಯಲ್ಲಿ ಕಚೇರಿ …
Read More »
Laxmi News 24×7