ಇಂದು ಬೆಂಗಳೂರಿನ ನಿವಾಸದಲ್ಲಿ ಬಿಜೆಪಿ ಪಕ್ಷದ ಹಿರಿಯ ನಾಯಕರು ಹಾಗೂ ಗೋಕಾಕ ವಿಧಾನ ಸಭಾ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀಯುತ ರಮೇಶ್ ಅಣ್ಣಾ ಜಾರಕಿಹೊಳಿ ಸಾಹುಕಾರ್ ರವರನ್ನು ಅಭಿಮಾನಿಗಳು ಭೇಟಿ ಮಾಡಿ ಪ್ರೀತಿಯ ಸತ್ಕಾರ ಸ್ವೀಕರಿಸಿದರು ಸಾಹುಕಾರ್ ಪಡೆ ಯುವ ಕರ್ನಾಟಕ ನಮ್ಮ ಸಾಹುಕಾರ್ ನಮ್ಮ ಹೆಮ್ಮೆ
Read More »ಬೆಳಗಾವಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ.
ಬೆಳಗಾವಿಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಡ್ಲೆಕ್ಕೊಪ್ಪ ಗ್ರಾಮದಲ್ಲಿ ಪತ್ತೆಯಾದ ಹೆಬ್ಬಾವು. ಗ್ರಾಮದಲ್ಲಿ ಕಾಣಿಸಿಕ್ಕೊಳ್ಳುತ್ತಿದ್ದಂತೆ 112 ನಂಬರಗೆ ಕರೆ ಮಾಡಿದ್ದ ಸ್ಥಳೀಯರು. ಸ್ಥಳಕ್ಕೆ ದೌಡಾಯಿಸಿದ ಪೋಲಿಸ್ ಸಿಬ್ಬಂದಿಗಳು ಹೆಬ್ಬಾವನ್ನ ಹಿಡಿಯುವಲ್ಲಿ ಯಶಸ್ವಿ. ಪ್ರಕಾಶ ಗಾಡಿವಡ್ಡರ ಎನ್ನುವ ಪೊಲೀಸ್ ಸಿಬ್ಬಂದಿ ಹೆಬ್ಬಾವು ಹಿಡಿಯುವಲ್ಲಿ ಯಶಸ್ವಿ. ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಅರಣ್ಯ ಪ್ರದೇಶದಲ್ಲಿ ಹೆಬ್ಬಾವು ಬಿಟ್ಟ ಪೊಲೀಸರು. ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
Read More »ರಾಜ್ಯದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: “ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬರೆದಿರುವ “ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. “ಶಿವಕುಮಾರ್ ಅವರು ಜಲಸಂಪನ್ಮೂಲ …
Read More »ನಂದಿನಿಯಿಂದ 2 ಹೊಸ ಉತ್ಪನ್ನ ಪರಿಚಯ: ಸೀಡ್ ಡಿಲೈಟ್, ಗುವಾ ಚಿಲ್ಲಿ ಲಸ್ಸಿ ಮಾರುಕಟ್ಟೆಗೆ
ಮಂಗಳೂರು: ಕೆಎಂಎಫ್ನಿಂದ ನಂದಿನಿ ಬ್ರ್ಯಾಂಡ್ನಲ್ಲಿ ಹಾಲಿನ ಜೊತೆಗೆ ಹಲವು ಉತ್ಪನ್ನಗಳು ಮಾರುಕಟ್ಟೆಯಲ್ಲಿವೆ. ಇದರಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಿಂದ ಈಗಾಗಲೇ 29 ಉತ್ಪನ್ನಗಳು ಗ್ರಾಹಕರನ್ನು ಸೆಳೆಯುತ್ತಿವೆ. ನವೆಂಬರ್ 16 ರಂದು ಆರೋಗ್ಯಕ್ಕೂ ಉತ್ತಮವಾಗಿರುವ ಇನ್ನೆರಡು ಉತ್ಪನ್ನಗಳ ಬಿಡುಗಡೆಗೆ ನಂದಿನಿ ಸಜ್ಜಾಗಿದೆ. ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಿಂದ ಈಗಾಗಲೇ ನಂದಿನಿ ಬ್ರ್ಯಾಂಡ್ನಲ್ಲಿ 29 ಉತ್ಪನ್ನಗಳು ಮಾರುಕಟ್ಟೆಯಲ್ಲಿವೆ. ನವೆಂಬರ್ 16ರಂದು ನಂದಿನಿ ಸೀಡ್ ಡಿಲೈಟ್ ಮತ್ತು ನಂದಿನಿ …
Read More »ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣಮೃಗಗಳು ಸಾವು: ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ
ಬೆಳಗಾವಿ/ಬೆಂಗಳೂರು: ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮೊನ್ನೆ (ನ.13) 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಬೆಳಗ್ಗೆ ಮತ್ತೆ 20 ಕೃಷ್ಣಮೃಗಗಳು ಸಾವನ್ನಪ್ಪಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ‘ಮಾಹಿತಿ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಡಿಎಫ್ಒ ಎನ್.ಇ.ಕ್ರಾಂತಿ ಅವರನ್ನು ಈಟಿವಿ …
Read More »ಹುಬ್ಬಳ್ಳಿಯಲ್ಲಿ ಅನಧಿಕೃತ ಬ್ಯಾನರ್ಗಳ ಹಾವಳಿ: ಮಹಾನಗರ ಪಾಲಿಕೆ ಆದಾಯಕ್ಕೂ ಕೊಕ್ಕೆ
ಹುಬ್ಬಳ್ಳಿ : ಹುಬ್ಬಳ್ಳಿ – ಧಾರವಾಡ ಅವಳಿ ನಗರದಲ್ಲಿ ಬ್ಯಾನರ್ಗಳು, ಬಂಟಿಂಗ್ ಹಾಗೂ ಫ್ಲೆಕ್ಸ್ಗಳ ಹಾವಳಿ ಮಿತಿಮೀರಿದೆ. ಮುಖ್ಯ ರಸ್ತೆಗಳು ಸೇರಿದಂತೆ ಎಲ್ಲೆಂದರಲ್ಲಿ ಅನಧಿಕೃತವಾಗಿ ಬ್ಯಾನರ್ಗಳನ್ನು ಅಳವಡಿಸಿರುವುದರಿಂದ ನಗರ ಸೌಂದರ್ಯಕ್ಕೂ ಧಕ್ಕೆಯಾಗಿದೆ. ಸುಗಮ ಸಂಚಾರಕ್ಕೂ ಸಮಸ್ಯೆಯಾಗಿದೆ. ಜೊತೆಗೆ ಮಹಾನಗರ ಪಾಲಿಕೆ ಆದಾಯಕ್ಕೂ ಕುತ್ತು ಬಂದಿದೆ. ನಗರದಲ್ಲಿ ರಾಜಕೀಯ ಪಕ್ಷದ ಅಥವಾ ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಕೂಡ ಶುಭಕೋರುವ ಹಾಗೂ ಸ್ವಾಗತಕೋರುವ ಬ್ಯಾನರ್ಗಳು ದೊಡ್ಡ ಪ್ರಮಾಣದಲ್ಲಿವೆ. ಗೋಕುಲ ರಸ್ತೆಯ ವಿಮಾನ ನಿಲ್ದಾಣದಿಂದ …
Read More »ಬಿಹಾರ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಪಾಠ, ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ: ಸತೀಶ್ ಜಾರಕಿಹೊಳಿ
ಬಿಹಾರ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಒಂದು ದೊಡ್ಡ ಪಾಠ, ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ: ಸತೀಶ್ ಜಾರಕಿಹೊಳಿ ದಾವಣಗೆರೆ : ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ. ಸಿಎಂ ಬದಲಾವಣೆ ಮಾತೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಿಎಂ ಸಿದ್ದರಾಮಯ್ಯ ಅವರ ಪರ ಬ್ಯಾಟ್ ಬೀಸಿದ್ದಾರೆ. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದ ಆವರಣದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೂ ಮುನ್ನ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕಡೆ ಸಂಚಾರ ಮಾಡಲು ಹೆಲಿಕಾಪ್ಟರ್ …
Read More »ಡಿಕೆಶಿ ವಿರಚಿತ “ನೀರಿನ ಹೆಜ್ಜೆ” ಕೃತಿ ಬಿಡುಗಡೆಗೊಳಿಸಿದ ಸಿಎಂ ಸಿದ್ಧರಾಮಯ್ಯ
ಡಿಕೆಶಿ ವಿರಚಿತ “ನೀರಿನ ಹೆಜ್ಜೆ” ಕೃತಿ ಬಿಡುಗಡೆಗೊಳಿಸಿದ ಸಿಎಂ ಸಿದ್ಧರಾಮಯ್ಯ ಕರ್ನಾಟಕ ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರ ವಿರಚಿತ ನೀರಿನ ಹೆಜ್ಜೆ ಕೃತಿಯನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಡುಗಡೆ ಮಾಡಿದರು. ಜಲಸಂಪನ್ಮೂಲ ಇಲಾಖೆ, ಕರ್ನಾಟಕ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಲಿಂಗದಾಳ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …
Read More »ಕಬ್ಬು ಬೆಳೆಗೆ ದರ ನಿಗದಿ ಮಾಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿದ್ದ ಹೋರಾಟ ಅಂತ್ಯ
ಬಾಗಲಕೋಟೆ: ಕಬ್ಬು ಬೆಳೆಗೆ ದರ ನಿಗದಿ ಸಂಬಂಧಪಟ್ಟಂತೆ ನಡೆಯುತ್ತಿರುವ ರೈತರ ಹೋರಾಟ ಇಬ್ಬರು ಸಚಿವರ ಸಂಧಾನದಿಂದಾಗಿ ಯಶಸ್ಸು ಕಂಡಿದ್ದು, ರೈತರ ಹೋರಾಟ ಸಮಾಪ್ತಿಗೊಂಡಿದೆ. ಕಳೆದ ದಿನ ಕಬ್ಬು ತುಂಬಿದ ಟ್ರ್ಯಾಕ್ಟರ್ಗೆ ಬೆಂಕಿ ಹಚ್ಚಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ರೈತರು & ಸಕ್ಕರೆ ಕಾರ್ಖಾನೆ ಮಾಲೀಕರ ಮಧ್ಯೆ ಸಂಧಾನ ಸಭೆ ನಡೆಸಿ, …
Read More »
Laxmi News 24×7