ಬೆಳಗಾವಿ ಭಾಗದಲ್ಲಿ ಕಳೆದ 10-12 ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಅವಾಂತರ ಸೃಷ್ಟಿಸಿದೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಮನೆಗಳ ಕುಸಿತ ಮುಂದುವರಿದಿದೆ. ತಾಲೂಕಿನ ಭೂತರಾಮನಹಟ್ಟಿಯಲ್ಲಿ ಮಳೆಯ ರಭಸಕ್ಕೆ ಮನೆಯ ಗೋಡೆ, ಛಾವಣಿ ಕುಸಿದು ಬಿದ್ದಿದೆ. ಬೆಳಗಾವಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಮಳೆಯಿಂದ ಮರಗಳು ಮತ್ತು ಮನೆಗಳ ನೆಲಕೆ ಉರುಳುತ್ತಿವೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿ ಮನೆ ಕುಸಿದು ಬಿದ್ದಿದೆ. ಶಬ್ಧ ಕೇಳಿದ …
Read More »ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಎರಡನೇ ಮಹಡಿಯಲ್ಲಿ ಮೇಲ್ಛಾವಣಿ ಸೋರುತ್ತಿದೆ.
ನಿರಂತರ ಮಳೆಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಸೋರುತ್ತಿರುವ ಘಟನೆ ನಡೆದಿದೆ. ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಎರಡನೇ ಮಹಡಿಯಲ್ಲಿ ಮೇಲ್ಛಾವಣಿ ಸೋರುತ್ತಿದೆ. ಆಸ್ಪತ್ರೆ ಕಟ್ಟಡ ಸೋರುತ್ತಿರುವ ಹಿನ್ನೆಲೆ ಅಲ್ಲಿಯ ಸಿಬ್ಬಂದಿಗಳು ಬಕೆಟ್, ಬುಟ್ಟಿಗಳನ್ನು ಇಟ್ಟಿದ್ದಾರೆ. ಹೆರಿಗೆ ಮತ್ತು ಶಸ್ತ್ರಚಿಕಿತ್ಸೆ ವಿಭಾಗ ಇರುವ ಮಹಡಿಯಲ್ಲಿ ಮೇಲ್ಛಾವಣಿ ಸೋರುತ್ತಿದೆ.ಗರ್ಭಿಣಿ, ಬಾಣಂತಿಯರು ಬೆಚ್ಚಗಿನ ವಾತಾವರಣದಲ್ಲಿ ಇರಬೇಕು. ಈ ರೀತಿ ತಂಪಾದ ವಾತಾವರಣದಲ್ಲಿ ಗರ್ಭಿಣಿ, ಬಾಣಂತಿಯರಿಗೆ ಕಷ್ಟ ಆಗುತ್ತೆ. ಸಂಬಂಧ ಪಟ್ಟ ಅಧಿಕಾರಿಗಳು …
Read More »ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 165.00 ಮಿ ಮೀ ಮಳೆಯಾಗಿದೆ.
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ 6,7 ಮತ್ತು 11 ನೇ ತಿರುವಿನಲ್ಲಿ ಭಾರಿ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದಿದೆ. ಅಲ್ಲದೇ ಹೆಚ್ಚಿನ ಮಳೆಯಿಂದಾಗಿ ತಡೆಗೋಡೆ ಕುಸಿದಿದ್ದು, ಅಪಘಾತದ ಸಂಭವವಿರುವುದರಿಂದ ತಾತ್ಕಾಲಿಕವಾಗಿ ಭಾರಿ ವಾಹನ ಸಂಚಾರ ನಿಷೇಧಿಸಿ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ. ಆರ್ ಸೆಲ್ವಮಣಿ ಆದೇಶಿಸಿದ್ದಾರೆ. ತಕ್ಷಣದಿಂದ …
Read More »ಗೃಹ ಸಚಿವರ ನಿವಾಸದೆದುರು ಪ್ರತಿಭಟಿಸಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ
ಬೆಂಗಳೂರು: ಗೃಹ ಸಚಿವರ ನಿವಾಸದ ಬಳಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಯುವ ಮೋರ್ಚಾದ 14 ಮಂದಿ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ 143, 149 (ಕಾನೂನು ಬಾಹಿರವಾಗಿ ಒಗ್ಗೂಡುವಿಕೆ) ಆರೋಪದಡಿ ಸದಾಶಿವನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆ: ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆಯ ಕೆಲವು ಆರೋಪಿಗಳ ಕುರಿತ ಹಾಗೂ ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ನೀಡಿರುವ ಹೇಳಿಕೆಯನ್ನು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹಿಂಪಡೆಯಬೇಕೆಂದು …
Read More »ಸುಲಿಗೆ ಪ್ರಕರಣದಲ್ಲಿ 23 ವರ್ಷ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಬಂಧನ
ಮಂಗಳೂರು (ದಕ್ಷಿಣ ಕನ್ನಡ): ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಶೀರ್ ಬಂಧಿತ ಆರೋಪಿ. ಜುಲೈ 26ರಂದು ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣವೇನು? : 2000ರ ಡಿಸೆಂಬರ್ 17ರಂದು ರಾತ್ರಿ 8:45ರ ಹೊತ್ತಿಗೆ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ ಆರೋಪಿಗಳು ಚಾಕು ತೋರಿಸಿ ಕುತ್ತಿಗೆಯಲ್ಲಿದ್ದ ಕರಿಮಣಿ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹುಸೇನ್ ಯಾನೆ …
Read More »ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ.
ಬೆಂಗಳೂರು: ಅನುತ್ತೀರ್ಣರಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಪೂರಕ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದ್ದು, ಇಂದು ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಆಗಸ್ಟ್ 21ರಿಂದ ಸೆಪ್ಟೆಂಬರ್ 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. 2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ಈ ಪರೀಕ್ಷೆಗೆ ನೋಂದಾಯಿಸಲು …
Read More »ತ್ಯಾಂಶ ನೋಡಿ ಕಾನೂನಾತ್ಮಕ ಅವಕಾಶಗಳಿದ್ದರೆ ಕೇಸ್ ವಾಪಸ್: ಜಿ.ಪರಮೇಶ್ವರ್
ಬೆಂಗಳೂರು : ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಪ್ರಕರಣದಲ್ಲಿ ಆರೋಪಿಗಳ ಕೇಸ್ ವಾಪಸ್ ವಿಚಾರವಾಗಿ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ.ಪರಮೇಶ್ವರ್, ಬಹಳ ಜನ ಶಾಸಕರು ಬೇರೆ ಬೇರೆ ಸಂಸ್ಥೆಗಳ ಕೇಸ್ಗಳನ್ನು ವಾಪಸ್ ತೆಗೆದುಕೊಳ್ಳಿ ಎಂದು ಪತ್ರ ಕೊಡ್ತಿದ್ದಾರೆ. ಕೇಸ್ ವಾಪಸ್ ತಗೊಳ್ಳಿ ಅಂದಾಕ್ಷಣ ವಾಪಸ್ ತೆಗೆದುಕೊಳ್ಳಲು ಆಗುವುದಿಲ್ಲ. ಅದಕ್ಕೊಂದು ಪದ್ದತಿ ಇದೆ. ಕ್ಯಾಬಿನೆಟ್ ಸಬ್ ಕಮಿಟಿ ಮುಂದೆ ವಿಷಯ ಮಂಡಿಸಬೇಕಾಗುತ್ತದೆ. ಸಬ್ ಕಮಿಟಿ ಸಾಧಕ-ಬಾಧಕದ ಬಗ್ಗೆ ಚರ್ಚಿಸಿ …
Read More »ಧಾರವಾಡದಲ್ಲಿ ನಿರಂತರ ಮಳೆ; 198 ಮನೆಗಳಿಗೆ ಹಾನಿ
ಧಾರವಾಡ: ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಸದ್ಯ ಅಬ್ಬರ ಕೊಂಚ ಕಡಿಮೆಯಾಗಿದೆ. ಹಲವೆಡೆ ಮಳೆಯಿಂದಾಗಿ ಅಪಾರ ಆಸ್ತಿಪಾಸ್ತಿ ಹಾನಿ, ಸಾವು-ನೋವು ಸಂಭವಿಸಿದೆ. ಧಾರವಾಡ ಜಿಲ್ಲೆಯಲ್ಲಿ ಜುಲೈ 26ರ ಬೆಳಿಗ್ಗೆ 8 ಗಂಟೆಯಿಂದ 27ರ ಬೆಳಿಗ್ಗೆ 8 ಗಂಟೆಯವರೆಗೆ ವಿವಿಧ ತಾಲೂಕುಗಳಲ್ಲಿ ಸುಮಾರು 198 ಮನೆಗಳಿಗೆ ಹಾನಿಯಾಗಿದೆ. 8 ತಾಲೂಕುಗಳಲ್ಲಿ 198 ಮನೆಗಳಿಗೆ ಹಾನಿ: ನಿರಂತರ ಮಳೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ 87 ಮನೆಗಳು, ಅಳ್ನಾವರ …
Read More »ಮಹಾ ಸಿಎಂ ಶಿಂಧೆ ಉಸ್ತುವಾರಿ ಜಿಲ್ಲೆಯಲ್ಲಿ ಹಳ್ಳಿಗರ ಬದುಕು ದುಸ್ತರ: ಪ್ರಾಣವನ್ನೇ ಪಣಕ್ಕಿಡುವ ಪರಿಸ್ಥಿತಿ
ಥಾಣೆ (ಮಹಾರಾಷ್ಟ್ರ): ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಕಳೆದ ಏಳೂವರೆ ವರ್ಷಗಳಿಂದ ಥಾಣೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹಾಗೂ ಒಂದು ವರ್ಷದಿಂದ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಇಲ್ಲಿನ ಲೋಖಂಡೇವಾಡಿಯ ವಿದ್ಯಾರ್ಥಿಗಳು, ರೋಗಿಗಳು ಸೇರಿ ಇಡೀ ಗ್ರಾಮಸ್ಥರು ಮಳೆಗಾಲದಲ್ಲಿ ಪ್ರಾಣವನ್ನೇ ಪಣಕ್ಕಿಟ್ಟು ಸಂಚರಿಸುತ್ತಿರುವ ಪರಿಸ್ಥಿತಿ ಇದೆ. ಮಹಾ ಸಿಎಂ ಶಿಂಧೆ ಉಸ್ತುವಾರಿ ಜಿಲ್ಲೆಯಲ್ಲಿ ಹಳ್ಳಿಗರ ಬದುಕು ದುಸ್ತರ: ಪ್ರಾಣವನ್ನೇ ಪಣಕ್ಕಿಡುವ ಪರಿಸ್ಥಿತಿಮೂರು ವರ್ಷಗಳ ಹಿಂದೆ ಏಕನಾಥ್ ಶಿಂಧೆ ಅವರ ಲೋಕೋಪಯೋಗಿ …
Read More »ಸೋರುತಿಹುದು ಹುಬ್ಬಳ್ಳಿ ಕೇಂದ್ರಿಯ ಬಸ್ ನಿಲ್ದಾಣ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ನಿತ್ಯ ಸುರಿಯುತ್ತಿರುವ ಮಳೆ ಅಬ್ಬರಕ್ಕೆ ನಗರದ ಬಹುತೇಕ ಬಹುತೇಕ ಸರ್ಕಾರಿ ಸ್ವಾಮ್ಯದ ಕಟ್ಟಡಗಳು ಸೋರುತ್ತಿವೆ. ಹುಬ್ಬಳ್ಳಿಯ ಕೇಂದ್ರಿಯ ಬಸ್ ನಿಲ್ದಾಣ ಕೂಡ ಇದರಿಂದ ಹೊರತಾಗಿಲ್ಲ. ಹುಬ್ಬಳ್ಳಿಯಿಂದ ಬೆಂಗಳೂರು, ವಿಜಯಪುರ,ಬಳ್ಳಾರಿ, ಚೆನೈ, ಹೈದರಬಾದ್,ಮುಂಬೈ, ಪುಣೆ, ಶಿರಡಿ ಸಾಂಗಲಿ ಮೀರಜ್ ಸೇರಿ ಹಲವಾರು ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರೀಯ ಹೊಸ ಬಸ್ ನಿಲ್ದಾಣದ ಕಟ್ಟಡ ಚಾವಣಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಸಿಬ್ಬಂದಿ ವಿಶ್ರಾಂತಿ …
Read More »
Laxmi News 24×7