Breaking News

Laxminews 24x7

ಮನೋಜ್ ಜಾರಂಗೆ, ಮಹಾರಾಷ್ಟ್ರ ಸಿಎಂ ಭಿನ್ನ ಹೇಳಿಕೆ: ಮರಾಠ ಮೀಸಲಾತಿ ಗಡುವಿನ ಬಗ್ಗೆ ಮೂಡಿದ ಗೊಂದಲ

​( ಮಹಾರಾಷ್ಟ್ರ): ಸರ್ಕಾರದ ನಿಯೋಗ ಮರಾಠಾ ಮೀಸಲಾತಿ ಬಗ್ಗೆ ಅದಷ್ಟು ಬೇಗ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದ ಹಿನ್ನೆಲೆ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ಮೊಟಕುಗೊಳಿಸಿದ್ದಾರೆ. ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳಲು ಡಿಸೆಂಬರ್ 24ರ ತನಕ ಗಡುವು ನೀಡಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದೆಡೆ, ಮರಾಠ ಮೀಸಲಾತಿಗೆ ಮನೋಜ್ ಜಾರಂಗೆ …

Read More »

ನೆದರ್ಲೆಂಡ್ಸ್-ಅಫ್ಘಾನಿಸ್ತಾನ ಮಧ್ಯೆ ಇಂದು ಪೈಪೋಟಿ; ಟಾಸ್​ ಗೆದ್ದ ಡಚ್ ಟೀಂ ಬ್ಯಾಟಿಂಗ್

ಲಖನೌ(ಉತ್ತರಪ್ರದೇಶ): ಐಸಿಸಿ ವಿಶ್ವಕಪ್ ಕ್ರಿಕೆಟ್ 2023ರ 34ನೇ ಪಂದ್ಯ ನೆದರ್ಲ್ಯೆಂಡ್ಸ್ ಮತ್ತು ಅಫ್ಘಾನಿಸ್ತಾನ ನಡುವೆ ಇಂದು ಲಖನೌದ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಟಾಸ್​ ಗೆದ್ದ ನೆದರ್ಲೆಂಡ್ಸ್ ಬ್ಯಾಟಿಂಗ್​ ಆಯ್ದುಕೊಂಡಿತು. ನೆದರ್ಲೆಂಡ್ಸ್ ತಂಡದಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ವಿಕ್ರಮಜೀತ್ ಬದಲಿಗೆ ಬ್ಯಾರೆಸಿ ಸ್ಥಾನ ಪಡೆದಿದ್ದಾರೆ. ನಾಲ್ವರು ಸ್ಪಿನ್ನರ್‌ಗಳೊಂದಿಗೆ ಅಫ್ಘಾನಿಸ್ತಾನ ಮೈದಾನಕ್ಕಿಳಿಯಲಿದೆ. ಎರಡೂ ತಂಡಗಳು ಏಕದಿನ ವಿಶ್ವಕಪ್‌ನಲ್ಲಿ ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ಪ್ರಸಕ್ತ ಟೂರ್ನಿಯಲ್ಲಿ ಇತ್ತಂಡಗಳಿಗೂ ಇದು 7ನೇ ಪಂದ್ಯ. ಹಶ್ಮತುಲ್ಲಾ …

Read More »

ಯುವತಿಯಿಂದ ಅಶ್ಲೀಲ ವಿಡಿಯೋ ಕರೆ; 12 ಲಕ್ಷ ರೂಪಾಯಿ ಕಳ್ಕೊಂಡ ವೃದ್ಧ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಇತರೆ ನಗರಗಳಲ್ಲಿ ಸೈಬರ್​ ಕ್ರೈಂ ಮತ್ತು ಹನಿಟ್ರ್ಯಾಪ್​ನಂತಹ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ ದೆಹಲಿಯಲ್ಲಿ ಸೈಬರ್​ ಅಪರಾಧ ಪ್ರಕರಣವೊಂದರಲ್ಲಿ ಸಿಲುಕಿದ್ದ ವೃದ್ಧರೊಬ್ಬರನ್ನು ಪೊಲೀಸರು ರಕ್ಷಿಸಿದ್ದಾರೆ. ಅಷ್ಟೇ ಅಲ್ಲ, ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಸಂಪೂರ್ಣ ವಿವರ: ಶಾಹದಾರಾ ಜಿಲ್ಲೆಯ ಸೈಬರ್ ಸೆಲ್ ಠಾಣೆ ಪೊಲೀಸರು ರಾಜಸ್ಥಾನದ ವಂಚಕ ತಂಡದ ಇಬ್ಬರು ಸದಸ್ಯರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ರಾಜಸ್ಥಾನ ನಿವಾಸಿಗಳಾದ ಬರ್ಖತ್ ಖಾನ್ (32) …

Read More »

ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ:B.S.Y.

ಬೆಂಗಳೂರು/ಶಿವಮೊಗ್ಗ: ವಿರೋಧ ಪಕ್ಷದ ನಾಯಕರನ್ನು ಹೈಕಮಾಂಡ್ ಆದಷ್ಟು ಬೇಗ ನೇಮಿಸುತ್ತದೆ ಎಂಬ ವಿಶ್ವಾಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲರೂ ವಿರೋಧ ಪಕ್ಷದ ನಾಯಕರನ್ನು ಯಾವಾಗ ಆಯ್ಕೆ ಮಾಡುತ್ತೀರಾ ಎಂದು ಕೇಳುತ್ತಿದ್ದಾರೆ. ಈಗಾಗಲೇ ಪ್ರಕ್ರಿಯೆ ತಡವಾಗಿದೆ. ಆದಷ್ಟು ಬೇಗ ಆಯ್ಕೆ ಮಾಡಲಾಗುವುದು ಎಂದರು. ನಮ್ಮ ಪಕ್ಷದ ವತಿಯಿಂದ ಇಂದಿನಿಂದ ಹತ್ತಾರು ತಂಡಗಳು ಬರ ಅಧ್ಯಯನಕ್ಕಾಗಿ ರಾಜ್ಯದಲ್ಲಿ ಪ್ರವಾಸ ಮಾಡಲಿವೆ. ನಾನು …

Read More »

ರಾಜ್ಯೋತ್ಸವದಂದು ಕರಾಳ ದಿನಾಚರಣೆ ಮೆರವಣಿಗೆ, ಆಕ್ಷೇಪಾರ್ಹ ಘೋಷಣೆ; ಎಂಇಎಸ್​ನ 18 ಜನರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಿಸಿ, ನಾಡದ್ರೋಹಿ ಘೋಷಣೆಗಳನ್ನು ಕೂಗಿದ ಮಹಾರಾಷ್ಟ್ರ ಏಕೀಕಕರಣ ಸಮಿತಿಯ (ಎಂಇಎಸ್) 18 ಸದಸ್ಯರ ವಿರುದ್ಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತದಿಂದ ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಲಾಗಿತ್ತು. ಅನುಮತಿ ಇಲ್ಲದೇ ಇದ್ದರೂ ಕೂಡ ನಗರದಲ್ಲಿ ಕರಾಳ ದಿನ ಹೆಸರಲ್ಲಿ ಮೆರವಣಿಗೆ ಮಾಡಿ ಬೆಳಗಾವಿ, ಬೀದರ್, ಭಾಲ್ಕಿ, ನಿಪ್ಪಾಣಿ, ಕಾರವಾರ ಸಂಯುಕ್ತ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದರು. ಎಂಇಎಸ್ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿದ್ದ …

Read More »

ಮೂರ್ನಾಲ್ಕು ದಿನದಲ್ಲಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧ: ಡಿ‌.ಕೆ.ಶಿವಕುಮಾರ್

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಆದರೆ ಬಿಜೆಪಿಯಲ್ಲಿ ಅಸಮಾಧಾನ ಇರುವುದರಿಂದಲೇ ಈವರೆಗೆ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಿಲ್ಲ. ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಇಂದು ಮಾತನಾಡಿದ ಅವರು, ನಮ್ಮಲ್ಲಿ ಅಸಮಾಧಾನ ಎಲ್ಲಿದೆ?. ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ. ಈಗಾಗಲೇ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ …

Read More »

ಮೈಸೂರು: ಹಸಿರು ಪಟಾಕಿ ಹೊರತುಪಡಿಸಿ ಇತರೆ ಪಟಾಕಿಗಳ ಬಳಕೆ ನಿಷೇಧ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ ಹಬ್ಬವನ್ನು ನವೆಂಬರ್ 11 ರಿಂದ 15ರವರೆಗೆ ಆಚರಿಸಲಿದ್ದು, ಆ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಹಾಗೂ ವಾಯು ಮಾಲಿನ್ಯದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುತ್ತದೆ. ತಡೆಗಟ್ಟಲು ಸರ್ವೋಚ್ಛ ನ್ಯಾಯಾಲಯವು ಹೊರಡಿಸಿರುವ ಆದೇಶಗಳನ್ನು ತಪ್ಪದೇ ಪಾಲಿಸುವುದು ಸಾರ್ವಜನಿಕರ ಜವಾಬ್ದಾರಿಯಾಗಿರುತ್ತದೆ. ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸ್ಫೋಟಿಸಲು ಅವಕಾಶವಿದ್ದು, ಉಳಿದ ಸಮಯದಲ್ಲಿ ಪಟಾಕಿಗಳ …

Read More »

ಹೈಕಮಾಂಡ್ ಸೂಚಿಸಿದ್ರೆ ನಾನೂ ಸಿಎಂ ಆಗಲು ಸಿದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಮೈಸೂರು: ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕು. ಈ ನಡುವೆ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂಬ ಹೇಳಿಕೆ ವೈಯಕ್ತಿಕವಾದುದು. ಯಾರು ಸಿಎಂ ಆಗಬೇಕು, ಯಾರು ಮುಂದುವರೆಯಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಎಂದರೆ ನಾನೂ ಸಿಎಂ ಆಗಲು ಸಿದ್ಧ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮೈಸೂರಿನಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಪ್ರಿಯಾಂಕ್ ಖರ್ಗೆ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತಮ್ಮ …

Read More »

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಇಂದಿನಿಂದ: ಸಚಿವ ಕೆ.ಎಚ್.ಮುನಿಯಪ್ಪ

ಹುಬ್ಬಳ್ಳಿ: ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಇಂದಿನಿಂದಲೇ ಆರಂಭಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್​ಗೆ ಈವರೆಗೆ 2 ಲಕ್ಷ 90 ಸಾವಿರ ಅರ್ಜಿಗಳು ಬಂದಿವೆ. ಇದರಲ್ಲಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಅರ್ಜಿ ಪರಿಷ್ಕರಣೆ ಮಾಡಿ ಅರ್ಹರಿಗೆ ಕಾರ್ಡ್ ವಿತರಣೆ ಮಾಡಲಾಗುವುದು. ಈಗಾಗಲೇ ಅರ್ಜಿ ಹಾಕಿಕೊಂಡು ಕಾಯುತ್ತಿರುವ ಜನರಿಗೆ …

Read More »

ಐದು ವರ್ಷ ನಮ್ಮದೇ ಸರ್ಕಾರ , ನಾನೇ C.M.: ಸಿದ್ದರಾಮಯ್ಯ

ವಿಜಯನಗರ: ಐದು ವರ್ಷ ನಮ್ಮದೇ ಸರ್ಕಾರ ಇರಲಿದ್ದು, ನಾನೇ ಮುಂದುವರೆಯುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹಂಪಿಯಲ್ಲಿ ಕರ್ನಾಟಕ ಸಂಭ್ರಮ 50ಕ್ಕೆ ಚಾಲನೆ ಹಾಗೂ ಇತರ ಕಾರ್ಯಗಳಿಗೆ ಹೊಸಪೇಟೆಗೆ ಸಿಎಂ ಆಗಮಿಸಿದ್ದರು. ಈ ವೇಳೆ ಬದಲಾವಣೆ ವಿಚಾರದ ಪ್ರಶ್ನೆ ಮಾಡಿದ ಸುದ್ದಿಗಾರರಿಗೆ ಅವರು, “ಐದು ವರ್ಷ ನಮ್ಮದೇ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿ” ಎಂದು ಉತ್ತರಿಸಿದ್ದಲ್ಲದೇ, 5 ವರ್ಷ ನೀವೇ ಸಿಎಂ ಆಗಿರುತ್ತೀರಾ ಎನ್ನುವ ಪ್ರಶ್ನೆಗೆ “ನಾನೇ ಮುಂದುವರೆಯುವೆ, ಡಿಸಿಎಂ …

Read More »