Breaking News

Laxminews 24x7

ಪಿಎಸ್‌ಐ ಪರೀಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬಯಲಾಗಿದೆ.

ಕಲಬುರಗಿ: ಪಿಎಸ್‌ಐ ಪರೀಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬಯಲಾಗಿದೆ. ಇಂದು ಕರ್ನಾಟಕ ಪರೀಕ್ಷಾ ಪರಿಷತ್ ನಡೆಸಿದ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಯುತ್ತಿರುವ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಯನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ​ ಬಂಧಿಸಿದ್ದಾರೆ. ಕಲಬುರಗಿ ನಗರದ ಶ್ರೀಶರಣ ಬಸವೇಶ್ವರ ವಿವಿ ಪರೀಕ್ಷಾ ಕೇಂದ್ರದಲ್ಲಿ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಪರೀಕ್ಷಾ ಅಭ್ಯರ್ಥಿ ತ್ರಿಮೂರ್ತಿ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. …

Read More »

ದೇಶದ ಸ್ವಾತಂತ್ರö್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತ ಮಾಡುವುದು ಸರಿಯಲ್ಲ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ದೇಶದ ಸ್ವಾತಂತ್ರö್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತ ಮಾಡುವುದು ಸರಿಯಲ್ಲ. ಮುಂಬರುವ ದಿನಗಳಲ್ಲಿ ಎಲ್ಲ ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲ ಸಮುದಾಯದವರನ್ನು ಒಂದುಗೂಡಿಸಿ ಒಗ್ಗಟ್ಟಿನಿಂದ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಹಾನ್ ಪುರುಷರಿಗೆ ಗೌರವ ಆದರ ನೀಡುವ ಮೂಲಕ ಅವರ ಸೇವೆಗಳನ್ನು ತಿಳಿಸಲು ಪ್ರಯತ್ನಿಸಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಬಲಭೀಮ ರಂಗಮAದಿರದ ಆವರಣದಲ್ಲಿ ಜರುಗಿದ …

Read More »

ಸಿಎಂ ಬದಲಾವಣೆ ಬಗ್ಗೆ ಚರ್ಚೆ ಆಗಿಲ್ಲ, ಕೇವಲ ಮಾಧ್ಯಮಗಳಲ್ಲಿ ವದಂತಿ :R.B. ತಿಮ್ಮಾಪೂರ

ಬಾಗಲಕೋಟೆ: ಸಿಎಂ ಬದಲಾವಣೆ ಬಗ್ಗೆ ಚರ್ಚೆ ಆಗಿಲ್ಲ, ಕೇವಲ ಮಾಧ್ಯಮಗಳಲ್ಲಿ ವದಂತಿ ಹರಡಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ಜಿ ಪರಮೇಶ್ವರ್​ ಮನೆಯಲ್ಲಿ‌ ಕಾಂಗ್ರೆಸ್​ ನಾಯಕರ ಡಿನ್ನರ್​ ಪಾರ್ಟಿಯಲ್ಲಿ ನಾನು ಭಾಗಿಯಾಗಿಲ್ಲ. ಆದರೆ ಅದಕ್ಕೆ ಅಂತಹದ್ದೇನು ಮಹತ್ವವೇನಿಲ್ಲ ಎಂದ ಅವರು, ಸಹಜವಾಗಿ ಭೋಜನಕ್ಕೆ ಕರೆದಿದ್ದರು, ಹೋಗಿದ್ದರು. ಅದಕ್ಕೆ ಹೆಚ್ಚು ‌ಮಹತ್ವ ಕೊಡುವ ಅವಶ್ಯಕತೆಯಿಲ್ಲ. ಸಿಎಂ ಬದಲಾವಣೆ ಬಗ್ಗೆ …

Read More »

ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ ಆರೋಪ

ಮಂಗಳೂರು: ಬರಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.   ಮಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ಇವತ್ತಿನವರೆಗೆ ಒಂದು ರೂಪಾಯಿ ಕೊಟ್ಟಿಲ್ಲ. ನಾವು ಎರಡು ಬಾರಿ ಮನವಿ ಕೊಟ್ಟೆವು. ಬರ ಪರಿಹಾರ ವೀಕ್ಷಣೆ ಮಾಡಲು ಕೇಂದ್ರದ ತಂಡ ಬಂದಿದೆ. ಪರಿಶೀಲನೆ ಮಾಡಿ 136 ತಾಲೂಕುಗಳಲ್ಲಿ 116 ತಾಲೂಕುಗಳು ಬರಪೀಡಿತ …

Read More »

ನಮ್ಮ ಧರ್ಮವನ್ನು ಪ್ರೀತಿಸೋಣ ಅನ್ಯ ಧರ್ಮವನ್ನು ಗೌರವಿಸೋಣ ; ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಜರುಗಿದ ಭಕ್ತಿ ಸಂಜೀವನ ಕೂಟಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ        ಮೂಡಲಗಿ: ಭಾರತದಲ್ಲಿ ನಾನಾ ಜಾತಿ-ಧರ್ಮಗಳಿದ್ದರೂ ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುತ್ತಿರುವ ನಮ್ಮ ದೇಶವು ಪ್ರಪಂಚದಲ್ಲಿ ಜಾತ್ಯಾತೀತ ರಾಷ್ಟ್ರವಾಗಿದ್ದು, ನಮ್ಮ ಧರ್ಮವನ್ನು ಪ್ರೀತಿಸುವುದರ ಜೊತೆಗೆ ಬೇರೆ ಧರ್ಮಗಳ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕೆಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.      ಶುಕ್ರವಾರ ಸಂಜೆ ಪಟ್ಟಣದ ಮೆಥೋಡಿಸ್ಟ್ ಚರ್ಚ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ಹಿರೇನಂದಿ ಗ್ರಾಮದ ಶ್ರೀ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …

Read More »

ವರ್ಷದ ಕೊನೆಯ ಚಂದ್ರಗ್ರಹಣ: ಭಕ್ತರಿಗೆ ಎಂದಿನಂತೆ ದರ್ಶನ ನೀಡಲಿರುವ ಮಲೆ ಮಾದಪ್ಪ

ಚಾಮರಾಜನಗರ: ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ನಡೆಯಲಿದೆ. ಭಾರತದಲ್ಲಿ ಮಧ್ಯರಾತ್ರಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ. ಚಂದ್ರಗ್ರಹಣ ಮಧ್ಯರಾತ್ರಿ 1:5 ಗಂಟೆಗೆ ಶುರುವಾಗಿ, 2:24ಕ್ಕೆ ಮುಕ್ತಾಯಗೊಳ್ಳಲಿದೆ. ಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಪೂಜೆಯ ಸಮಯ ಬದಲಾಗಿದ್ದು, ಕೆಲವು ದೇವಾಲಯಗಳನ್ನು ಬೇಗನೆ ಬಂದ್‌ ಮಾಡಿದರೆ, ಮತ್ತೆ ಕೆಲವೆಡೆ ಗ್ರಹಣ ಕಾಲದಲ್ಲಿ ಭಕ್ತರಿಗೆ ವಿಶೇಷಪೂಜೆ, ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತ್ತೊಂದೆಡೆ, ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ದರ್ಶನದಲ್ಲಿ …

Read More »

ಸರ್ಕಾರ ಬೀಳಿಸುವ ಬಿಜೆಪಿ ಷಡ್ಯಂತ್ರ ಫಲಿಸಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಶನಿವಾರ ಹೈದರಾಬಾದ್​ಗೆ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಶಾಸಕ ರವಿ ಗಣಿಗ ಅವರ ಬಿಜೆಪಿಯ ಆಮಿಷದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ, ಇದರಿಂದ ಏನೂ ಆಗುವುದಿಲ್ಲ ಎಂದು …

Read More »

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗದ ನಾಯಕ ಮುಖ್ಯಮಂತ್ರಿ: ಅಮಿತ್​ ಶಾ

ಹೈದರಾಬಾದ್​ (ತೆಲಂಗಾಣ): ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಜನತೆ ಅಧಿಕಾರಕ್ಕೆ ತಂದರೆ ಹಿಂದುಳಿದ ವರ್ಗದ ನಾಯಕನನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಘೋಷಿಸಿದ್ದಾರೆ. ಇಂದು ಸೂರ್ಯಪೇಟ್​ ಜಿಲ್ಲೆಯಲ್ಲಿ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಪಾಲ್ಗೊಂಡರು.       ”ನಾನು ತೆಲಂಗಾಣದ ಜನತೆಗೆ ಒಂದು ಮಾತು ಹೇಳ ಬಯಸುತ್ತೇನೆ. ನೀವು ಬಿಜೆಪಿಗೆ ಆಶೀರ್ವಾದ ಮಾಡಿ, ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದರೆ, …

Read More »

ಚಿಕ್ಕಮಗಳೂರು: ಶಾಖಾದ್ರಿ ಮನೆಯಲ್ಲಿ ಚಿರತೆ, ಜಿಂಕೆ ಚರ್ಮ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

ಚಿಕ್ಕಮಗಳೂರು: ಇಲ್ಲಿನ ಬಾಬಾ ಬುಡನ್​​ಗಿರಿ ದರ್ಗಾ ಶಾಖಾದ್ರಿ ಅವರ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು: ಇಲ್ಲಿನ ಬಾಬಾ ಬುಡನ್​​ಗಿರಿ ದರ್ಗಾ ಶಾಖಾದ್ರಿ ಅವರ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಈ …

Read More »