ಬೆಳಗಾವಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಕೈಗೆತ್ತಿಕೊಂಡ ಎಸ್ಕ್‌ಲೇಟರ್, ಲಿಫ್ಟ್ ಮತ್ತು ಪಾದಚಾರಿ ಸೇತುವೆ(ಫುಟ್ ಓವರ್ ಬ್ರಿಡ್ಜ್) ಕಾಮಗಾರಿ ಇನ್ನೂ ಮುಗಿಯದ ಕಾರಣ, ಪ್ರಯಾಣಿಕರ ಪರದಾಟ ಮುಂದುವರಿದಿದೆ. ರೈಲ್ವೆ ನಿಲ್ದಾಣ ಪ್ರವೇಶಿಸಿ ಒಂದು ಬದಿಯ ಪ್ಲಾಟ್‌ಫಾರಂನಿಂದ ಮತ್ತೊಂದು ಬದಿ ಪ್ಲಾಟ್‌ಫಾರಂಗೆ ತೆರಳಲು ಪ್ರಯಾಣಿಕರು ನರಕಯಾತನೆ ಅನುಭವಿಸಬೇಕಾದ ಪರಿಸ್ಥಿತಿ ಇದೆ. ಬೆಳಗಾವಿ ರೈಲ್ವೆ ನಿಲ್ದಾಣವು ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಸಂಪರ್ಕ ಕೊಂಡಿ. ಉತ್ತರ ಭಾರತ ಮತ್ತು ದಕ್ಷಿಣ ಭಾರತದ ಹಲವು …
Read More »ಅಕ್ರಮ ಗೋ ಸಾಗಾಟ ತಡೆಗೆ ಆಗ್ರಹ
ಬೆಳಗಾವಿ : ಗೋವಾ ಮತ್ತು ಮಹಾರಾಷ್ಟ್ರ ಗಡಿಗೆ ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಬಕ್ರೀದ್ ಸಂದರ್ಭದಲ್ಲಿ ಅಕ್ರಮವಾಗಿ ಗೋ ಸಾಗಾಟ ನಡೆಯಲಿದ್ದು, ಇದನ್ನು ತಡೆಯಲು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಚೆಕ್‌ಪೋಸ್ಟ್ ಆರಂಭಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿಎಚ್‌ಪಿ ನೇತೃತ್ವದಲ್ಲಿ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜರುಗಿದ ರ‌್ಯಾಲಿಯಲ್ಲಿ ವಿವಿಧ ಹಿಂದೂಪರ ಸಂಘಟನೆಗಳ ಪ್ರಮುಖರು ಹಾಗೂ …
Read More »ವಕ್ಫ್ ಆಸ್ತಿಗಳ ರಕ್ಷಣೆಗೆ ಹೋರಾಡುತ್ತಿದ್ದ ಹಿರಿಯ ವಕೀಲನ ಭೀಕರ ಕೊಲೆ! ಮುಂಜಾನೆ ವಾಕಿಂಗ್ ವೇಳೆ ಕಾರು ಹತ್ತಿಸಿ ಜಿಹಾದ್?
ಹೈದರಾಬಾದ್: ವಕ್ಫ್ ಆಸ್ತಿಗಳ ಅತಿಕ್ರಮಣ ಮತ್ತು ಖಾಸಗೀಕರಣದ ವಿರುದ್ಧ ನ್ಯಾಯಾಲಯದಲ್ಲಿ ಗಟ್ಟಿಯಾಗಿ ಧ್ವನಿ ಎತ್ತುತ್ತಿದ್ದ ಹಿರಿಯ ವಕೀಲ ಖಾಝಾ ಮೊಯಿಝುದ್ದೀನ್ (63) ಅವರನ್ನು ಶನಿವಾರ ಮುಂಜಾನೆ ಕಾರು ಢಿಕ್ಕಿ ಹೊಡೆಸಿ ಅತ್ಯಂತ ದಾರುಣವಾಗಿ ಕೊಲೆ ಮಾಡಲಾಗಿದೆ. ಮೇಲ್ನೋಟಕ್ಕೆ ಇದು ಸಾಮಾನ್ಯ ಅಪಘಾತದಂತೆ ಕಂಡರೂ, ಇದರ ಹಿಂದೆ ದೊಡ್ಡ ಭೂಮಾಫಿಯಾ ಕೈವಾಡವಿದ್ದು, ಇದೊಂದು “ಯೋಜಿತ ಮತ್ತು ವ್ಯವಸ್ಥಿತ ಕೊಲೆ” ಎಂದು ಮೃತರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಕೇವಲ 20 ಅಡಿ …
Read More »ನಾಳೆ ಬೆಳಿಗ್ಗೆ 11 ಗಂಟೆಗೆ ಹೈಕಮಾಂಡ್ ಜೊತೆ ಸಿಎಂ ಸಭೆ : ಕುತೂಹಲ ಮೂಡಿಸಿದ ರಾಜ್ಯ ರಾಜಕಾರಣ!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದಿಢೀರ್ ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರ ರಾಜಧಾನಿ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದು, ರಾಜ್ಯ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಈ ಮಹತ್ವದ ಸಭೆ ಆಯೋಜನೆಯಾಗಿದೆ. ಸಭೆಯಲ್ಲಿ ಹೈಕಮಾಂಡ್ ನಾಯಕರು ಮತ್ತು ಸಿಎಂ ಸಿದ್ದರಾಮಯ್ಯ ಅವರು ಪ್ರಸಕ್ತ …
Read More »ಬೆಳಗಾವಿ ಜಿಲ್ಲೆಯ ಹಳ್ಳಿಗಳಲ್ಲಿ ಬೀಜೋಪಚಾರ ಆಂದೋಲನ
ಬೆಳಗಾವಿ: ಈ ಬಾರಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 7,52,312 ಹೆಕ್ಟೇರ್ ಬಿತ್ತನೆ ಗುರಿ ಇಟ್ಟುಕೊಳ್ಳಲಾಗಿದೆ. ಇದಕ್ಕಾಗಿ 37,543 ಕ್ವಿಂಟಲ್‌ನಷ್ಟು ವಿವಿಧ ಬೀಜಗಳು ಹಾಗೂ 1,27,413 ಮೆಟ್ರಿಕ್ ಟನ್‌ನಷ್ಟು ರಸಗೊಬ್ಬರಗಳ ಬೇಡಿಕೆ ಬಂದಿದೆ. ಕಳೆದ ಬಾರಿ ಕೂಡ ಇಷ್ಟೇ ಪ್ರಮಾಣದ ಬಿತ್ತನೆ ಗುರಿ ಹಾಗೂ ಬೀಜಗಳ ಬೇಡಿಕೆ ಇತ್ತು. ಆದರೆ, ಈ ಬಾರಿ ರಸಗೊಬ್ಬರ ಬೇಡಿಕೆ ಯಥೇಚ್ಚವಾಗಿ ಏರಿದೆ. ಈ ಬಾರಿ ವಿಶೇಷವಾಗಿ ಕೃಷಿ ಇಲಾಖೆಯಿಂದ ಬೀಜೋಪಚಾರ ಆಂದೋಲನ ಮಾಡಲಾಗುತ್ತಿದೆ. ಪ್ರತಿ …
Read More »ಯಲ್ಲಮ್ಮನಗುಡ್ಡ ಕ್ಷೇತ್ರ; ಸಸಿ ನೆಟ್ಟು, ಪೋಷಿಸಲು ಶಾಸಕ ವಿಶ್ವಾಸ್ ವೈದ್ಯ ಕರೆ
ಉಗರಗೋಳ: ‘ರೇಣುಕಾ ಯಲ್ಲಮ್ಮನ ಕ್ಷೇತ್ರ ಬಂಡೆಗಲ್ಲುಗಳಿಂದ ಕೂಡಿರುವ ಪ್ರದೇಶ. ಇಲ್ಲಿ ಸಸಿ ನೆಟ್ಟು ಪೋಷಿಸುವುದು ಸವಾಲಿನ ಕೆಲಸ. ಹೀಗಾಗಿ ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಿಸಲು ಶ್ರಮಿಸಬೇಕು’ ಎಂದು ಯಲ್ಲಮ್ಮ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಉಪಾಧ್ಯಕ್ಷ, ಶಾಸಕ ವಿಶ್ವಾಸ್ ವೈದ್ಯ ಹೇಳಿದರು. ಯಲ್ಲಮ್ಮನ ಗುಡ್ಡದಲ್ಲಿ ಶನಿವಾರ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ, ಭದ್ರತಾ ಕೊಠಡಿಯ ಉದ್ಘಾಟನೆ, ಯಲ್ಲಮ್ಮನ ಗುಡ್ಡದ ಸೌಂದರ್ಯೀಕರಣ, ನೆರಳಿನ …
Read More »ನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ: ಸಂಕೇಶ್ವರ ಬಂದ್‌ಗೆ ಉತ್ತಮ ಸ್ಪಂದನೆ
ಸಂಕೇಶ್ವರ: ಹುಕ್ಕೇರಿ ತಾಲ್ಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆ ‘ಸಂಕೇಶ್ವರ ಬಂದ್’ ಕರೆಗೆ ಉತ್ತಮ ಸ್ಪಂದನೆ ದೊರೆಯಿತು. ನೀರಾವರಿ ಸೌಲಭ್ಯಕ್ಕಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಇಲ್ಲಿನ ವರ್ತಕರು ಸಹಮತ ಸೂಚಿಸಿ, ಶನಿವಾರ ಬೆಳಿಗ್ಗೆಯಿಂದಲೇ ಪಟ್ಟಣದ ಅಂಗಡಿ- ಮುಂಗಟ್ಟು ಹಾಗೂ ಉದ್ಯಮಗಳನ್ನು ಸ್ವಯಂಪ್ರೇರಿತರಾಗಿ ಮುಚ್ಚುವ ಮೂಲಕ ವ್ಯಾಪಾರಸ್ಥರು ರೈತರಿಗೆ ಸಾಥ್ ನೀಡಿದರು. ನೀರಾವರಿ ಸೌಲಭ್ಯಕ್ಕಾಗಿ ರೈತರು …
Read More »ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗಾಗಿ ಹೋರಾಟ: 12 ಕಾಂಗ್ರೆಸ್ ಸದಸ್ಯರು ರಾಜೀನಾಮೆ
ಧಾರವಾಡ: ‘ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಪ್ರತ್ಯೇಕ ಪಾಲಿಕೆ ರಚನೆ ಪ್ರಸ್ತಾವಕ್ಕೆ ರಾಜ್ಯಪಾಲರು ಅನುಮೋದನೆ ನೀಡಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದ್ದು, ಪಾಲಿಕೆಯ 12ಕಾಂಗ್ರೆಸ್ ಸದಸ್ಯರು (ಒಬ್ಬರು ನಾಮನಿರ್ದೇಶಿತ ಸದಸ್ಯರು) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬ್ಲಾಕ್ (ವಿಧಾನಸಭಾ ಕ್ಷೇತ್ರ 71 ಮತ್ತು 74) ಕಾಂಗ್ರೆಸ್ ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಎರಡನೇ ವಾರ್ಡ್‌ನ ಸದಸ್ಯೆ ಸೂರವ್ವ ಪಾಟೀಲ, ನಾಲ್ಕನೇ ವಾರ್ಡ್‌ನ ರಾಜಶೇಖರ ಕಮತಿ, 6ನೇ ವಾರ್ಡ್‌ನ …
Read More »ಭಟ್ಕಳ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ದೆಹಲಿ: ಕರ್ನಾಟಕದ ಕಾರವಾರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಕಳವಳ ಹಾಗೂ ಆಘಾತ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪ್ರಧಾನಿ ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಘೋಷಿಸಿದ್ದಾರೆ. ಈ ಕುರಿತು ಪ್ರಧಾನಮಂತ್ರಿ ಕಾರ್ಯಾಲಯ (PMO) ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಧಾನಿಯವರ ಸಂದೇಶವನ್ನು ಉಲ್ಲೇಖಿಸಿದೆ: “ಕರ್ನಾಟಕದ ಕಾರವಾರ ಜಿಲ್ಲೆಯಲ್ಲಿ ಸಂಭವಿಸಿದ ದುರಂತದ ಬಗ್ಗೆ …
Read More »ಸುವರ್ಣಸೌಧದಲ್ಲೇ ಈ ಬಾರಿ ಮುಂಗಾರು ಅಧಿವೇಶನ?; ಜಿಲ್ಲಾಡಳಿತದಿಂದ ಭರ್ಜರಿ ಸಿದ್ಧತೆ!
ಬೆಳಗಾವಿ: ಪ್ರತಿ ವರ್ಷ ಚಳಿಗಾಲದಲ್ಲಿ ಮಾತ್ರ ಅಧಿವೇಶನ ಕಾಣುತ್ತಿದ್ದ ಬೆಳಗಾವಿಯ ಸುವರ್ಣಸೌಧ, ಈ ಬಾರಿ ಮುಂಗಾರು ಅಧಿವೇಶನಕ್ಕೆ ಸಾಕ್ಷಿಯಾಗುವುದು ಬಹುತೇಕ ಪಕ್ಕಾ ಆಗಿದೆ. ಡಿಸೆಂಬರ್ ತಿಂಗಳ ಚಳಿ, ವಸತಿ ಸೌಕರ್ಯ ಹಾಗೂ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಲು ಸರ್ಕಾರ ಈ ಹೊಸ ಪ್ಲ್ಯಾನ್ ಮಾಡಿದ್ದು, ಬೆಳಗಾವಿಯಲ್ಲೇ ಮುಂಗಾರು ಅಧಿವೇಶನ ನಡೆಸಲು ತೀರ್ಮಾನಿಸಿದೆ ಎನ್ನಲಾಗಿದೆ. ಅಧಿವೇಶನ ನಡೆಸುವ ಕುರಿತು ಸರ್ಕಾರದ ಮಟ್ಟದಲ್ಲಿ ಸಿದ್ಧತೆಗಳು ನಡೆಯುತ್ತಿರುವುದರಿಂದ, ಬೆಳಗಾವಿ ಜಿಲ್ಲಾಡಳಿತ ಕೂಡ ಈಗಿನಿಂದಲೇ ಎಚ್ಚೆತ್ತುಕೊಂಡಿದೆ. ಬೆಳಗಾವಿ …
Read More »
Laxmi News 24×7