ಬೆಂಗಳೂರು: ರಾಜ್ಯದಲ್ಲಿ SIRಗೆ ರಾಜ್ಯ ಸರ್ಕಾರವೇ ಅಧಿಕಾರಿಗಳನ್ನ ಎತ್ತಿ ಕಟ್ಟುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವೇ ಎಸ್ಐಆರ್ ವಿಚಾರದಲ್ಲಿ ದ್ವಂದ್ವ ನಿಲುವು ತೋರುತ್ತಿದೆ. ಅಧಿಕಾರಿಗಳನ್ನು ರಾಜ್ಯ ಸರ್ಕಾರವೇ ಎತ್ತಿ ಕಟ್ಟುತ್ತಿದೆ. BLOಗಳು ಪ್ರತಿಭಟನೆ ಮಾಡ್ತಾರಂತೆ. ಇದಕ್ಕೆ ರಾಜ್ಯ ಸರ್ಕಾರ ಕುಮ್ಮಕ್ಕು ಕೊಡ್ತಿದೆ ಎಂದಿದ್ದಾರೆ. ವಾಸ್ತವ ಸತ್ಯವನ್ನು ಸಿಎಂ, ಪ್ರಿಯಾಂಕ್ ಖರ್ಗೆ ಅವರಿಗೆ ಕೇಳ್ತೀನಿ. ನಿಮ್ಮ ಕಾಂಗ್ರೆಸ್ ಮಹಾನ್ ನಾಯಕ …
Read More »ಬಿಡದಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಯ ಗ್ರಾಮಗಳಿಗೆ ಬಿಜೆಪಿ ನಿಯೋಗ ಭೇಟಿ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಲು ಬಿಜೆಪಿ ನಿಯೋಗವು ಯೋಜನಾ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹಾಗೂ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರನ್ನೊಳಗೊಂಡ ನಿಯೋಗವು ಮೊದಲು ಭೈರಮಂಗಲ ಗ್ರಾಮದ ಹಾಲಿನ ಡೈರಿಗೆ …
Read More »ರಾಜ್ಯ ಸರ್ಕಾರದ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ವಿಶೇಷ ಲೋಕ ಅದಾಲತ್ ಉತ್ತಮ ವೇದಿಕೆ – ಶಾಲಿನಿ ರಜನೀಶ್
ಬೆಂಗಳೂರು: ಭಾರತ ಸರ್ವೋಚ್ಛ ನ್ಯಾಯಾಲಯ ಆ.21ರಿಂದ 23ರವರೆಗೆ ಹಮ್ಮಿಕೊಳ್ಳಲಾಗಿರುವ `ಸಮಾಧಾನ ಸಮರೋಹ’ ವಿಶೇಷ ಲೋಕ ಅದಾಲತ್‌ನಲ್ಲಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಾಗಿದೆ. ಪ್ರತಿಯೊಂದು ಇಲಾಖೆ ಸರ್ವೋಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಮುಖಾ-ಮುಖಿಯಾಗಿ ಬಗೆಹರಿಸಿಕೊಳ್ಳಲು ಮುಂದಾಗಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸೂಚಿಸಿದ್ದಾರೆ. ಭಾರತ ಸರ್ವೋಚ್ಛ ನ್ಯಾಯಾಲಯದ `ಸಮಾಧಾನ ಸಮರೋಹ’ ವಿಶೇಷ ಲೋಕ ಅದಾಲತ್ ಕುರಿತಂತೆ ಇಂದು (ಜೂ.17) ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರ್ಕಾರದ …
Read More »ಶಫೀ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು 17 ವರ್ಷದ ಜೀವಿತಾ ಆತ್ಮಹತ್ಯೆ
ಕೋಲಾರ: ಅನ್ಯಧರ್ಮದ ಯುವಕನೊಬ್ಬ ಕೊಟ್ಟ ಕಿರುಕುಳದಿಂದ ಬೇಸರಗೊಂಡು 17 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಕೋಲಾರದ ಕೆಜಿಎಫ್‌ನ ದೊಡ್ಡಕಾರಿ ಗ್ರಾಮದಲ್ಲಿ ನಡೆದಿದೆ. ಜೀವಿತಾ (17) ಆತ್ಮಹತ್ಯೆಗೆ ಶರಣಾದ ಬಾಲಕಿ. 22 ವರ್ಷದ ಶಫೀ ಎಂಬ ಯುವಕ ನಿತ್ಯವೂ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಎಂದು ತಿಳಿದುಬಂದಿದೆ. ಯುವಕ ಬಾಲಕಿಯ ಪೋಷಕರಿಗೂ ನಿಮ್ಮ ಮಗಳನ್ನು ಪ್ರೀತಿಸುತ್ತಿದ್ದೇನೆ ಎಂದು ಧಮ್ಕಿ ಹಾಕಿದ್ದ. ಇದರಿಂದ ಪೋಷಕರು ಬಾಲಕಿಗೆ ಬೈದಿದ್ದರು. ಇದರಿಂದ ಮನನೊಂದ ಬಾಲಕಿ ನೇಣು …
Read More »ಭಟ್ಕಳದಲ್ಲಿ ಮತ್ತೆ ಉದ್ವಿಗ್ನತೆ| ಹಿಂದೂ ಕಾರ್ಯಕರ್ತರ ವಿರುದ್ಧ ಕೇಸ್- ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ!
ಕಾರವಾರ: ಇತ್ತೀಚಿನ ದಿನಗಳಲ್ಲಿ ಶಾಂತವಾಗಿದ್ದ ಭಟ್ಕಳನಗರದಲ್ಲಿ ಮತ್ತೆ ಕೋಮು ಸಂಘರ್ಷದ ಕಿಡಿ ಹೊತ್ತಿಕೊಂಡಿದೆ. ಹಿಂದೂ ಯುವತಿಯೊಂದಿಗೆ ಕಾರಿನಲ್ಲಿ ಹೋಗುತ್ತಿದ್ದ ಮುಸ್ಲಿಂ ಯುವಕನನ್ನು ಪ್ರಶ್ನಿಸಿ, ಪೊಲೀಸರಿಗೆ ಒಪ್ಪಿಸಿದ್ದ ಹಿಂದೂ ಮುಖಂಡರ ಮೇಲೆಯೇ ಪ್ರಕರಣ ದಾಖಲಾಗಿರುವುದನ್ನು ಖಂಡಿಸಿ ನೂರಾರು ಹಿಂದೂ ಕಾರ್ಯಕರ್ತರು ಭಟ್ಕಳ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ತಡರಾತ್ರಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ತನ್ನ ಕಾರಿನಲ್ಲಿ ಕರೆದೊಯ್ಯುತ್ತಿದ್ದ. ಈ ವೇಳೆ ಅನುಮಾನಗೊಂಡ ಹಿಂದೂ ಮುಖಂಡರು …
Read More »ಲೋಕ ಅದಾಲತ್ ಸದುಪಯೋಗವಾಗಲಿ
ಕಾಗವಾಡ: ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಜು.೧೧ರಂದು ಬೃಹತ್ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಕಕ್ಷಿದಾರರು ಮತ್ತು ಸಾರ್ವಜನಿಕರು ಇದರ ಲಾಭ ಪಡದುಕೊಳ್ಳಬೇಕು ಎಂದು ನ್ಯಾಯಾಧೀಶೆ ರೂಪಾ ಚಿನಿವಾರ ತಿಳಿಸಿದರು. ತಾಲೂಕು ನ್ಯಾಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಲೋಕ್ ಅದಾಲತ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ೧,೦೪೦ ಸಿವಿಲ್ ಮತ್ತು ಸುಮಾರು ೧,೬೦೦ ಕ್ರಿಮಿನಲ್ ದಾವೆಗಳಿದ್ದು, ಕಕ್ಷಿದಾರರಿಗೆ ರಾಜಿ ಸಂಧಾನ ಮಾಡಿಕೊಳ್ಳಲು ಅವಕಾಶವಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಉಪ ತಹಸೀಲ್ದಾರ್ ವಿಜಯಕುಮಾರ ಚೌಗುಲೆ, …
Read More »ಮತದಾರರ ಪಟ್ಟಿ ನವೀಕರಣ ನಿಖರವಾಗಿರಲಿ
ಗೋಕಾಕ: ಮತದಾರರ ಪಟ್ಟಿಯಿಂದ ಮತಪಟ್ಟ, ನಕಲಿ ಮತ್ತು ತಪ್ಪಾಗಿ ನಮೂದಿಸಲಾದ ಹೆಸರುಗಳನ್ನು ತೆಗೆದುಹಾಕುವಲ್ಲಿ ಮತ್ತು ಅರ್ಹ ನಾಗರಿಕರ ಹೆಸರನ್ನು ಮತದಾರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವಲ್ಲಿ ಬಿಎಲ್‌ಎ-2 ಪಾತ್ರ ಮಹತ್ವದ್ದಾಗಿದೆ. ಮತದಾರರ ಪಟ್ಟಿ ಪರಿಶೀಲನೆ ಹಾಗೂ ನವೀಕರಿಸುವ ಅಭಿಯಾನ ಯಶಸ್ವಿಯಾಗಿ ನಡೆಸಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಎನ್‌ಎಸ್‌ಎಸ್ ಕಚೇರಿಯಲ್ಲಿ ಅರಬಾವಿ ಬಿಜೆಪಿ ಮಂಡಲ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಾದ ಎಸ್‌ಐಆರ್ ವಿಶೇಷ ಸಭೆಯಲ್ಲಿ ಮಾತನಾಡಿದರು. ಯಾವ ಮುಲಾಜಿಲ್ಲದೆ ನಕಲಿ …
Read More »ಪಠ್ಯೇತರ ಚಟುವಟಿಕೆಗೆ ಆದ್ಯತೆ ಅಗತ್ಯ
ಮಾಂಜರಿ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಶಿವಶಕ್ತಿ ಶುಗರ್ಸ್ ಮಾನವ ಸಂಪನ್ಮೂಲ ಅಧಿಕಾರಿ ಬಿ.ಎಸ್.ಮುಧೋಳ ಹೇಳಿದರು. ಯಡ್ರಾವ ಗ್ರಾಮದಲ್ಲಿರುವ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ಸಮಾರಂಭಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ಸಲಹಾ ಸಮಿತಿ ಅಧ್ಯಕ್ಷ ಸತ್ಯಪ್ಪ ಭಿಷ್ಟೆ ಮಾತನಾಡಿ, ಸೃಜನಾತ್ಮಕ ಕಲಿಕೆಯಿಂದ ಮಕ್ಕಳ ವ್ಯಕ್ತಿತ್ವ ವೃದ್ಧಿಯಾಗುತ್ತದೆ ಎಂದು ತಿಳಿಸಿದರು. ದಯಾನಂದ ಕಬ್ಬೂರಿ, ಸದಾಶಿವ …
Read More »ಗಾಂಜಾ ಮಾರುತ್ತಿದ್ದವ ಪೊಲೀಸ್ ವಶಕ್ಕೆ
ರಾಮದುರ್ಗ: ನಗರದ ಸಮೀಪದ ಹಲಗತ್ತಿ ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ರಾಮದುರ್ಗ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ಮಾಡಿದ ಪೊಲೀಸರು ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕಿನ ಕೆರೂರ ಗ್ರಾಮದ ನವೀನ ಲಕ್ಷ್ಮಣ ಹೆದ್ದೇರಿ (21) ಎಂಬಾತನಿಂದ 180 ಗ್ರಾಂ ಗಾಂಜಾ, ಬೈಕ್, ಒಂದು ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಪಿಐಎಸ್ ಸವಿತಾ ಮುನ್ಯಾಳ, ಗ್ರೇಡ್-2 ತಹಸೀಲ್ದಾರ್ ಸಂಜಯ ಖಾತೇದಾರ, ಪೊಲೀಸ್ ಸಿಬ್ಬಂದಿ …
Read More »ಪಕ್ಷ ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಬೇಕು
ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಎಲ್ಲರೂ ಜಾಗ್ರತೆಯಿಂದ ಕಾರ್ಯನಿರ್ವಹಿಸಬೇಕು. ಬಿಎಲ್‌ಒ-2 ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಪ್ರತಿಯೊಬ್ಬ ಮತದಾರರ ಮಾಹಿತಿಯನ್ನು ಸಮಗ್ರವಾಗಿ ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ನಗರಸಭೆ ಸಮುದಾಯ ಭವನದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿಂದ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಕರೆಯಲಾಗಿದ್ದ ಎಸ್‌ಐಆರ್ ವಿಶೇಷ ಸಭೆಯಲ್ಲಿ ಮಾತನಾಡಿ, ಬೂತ್ ಮಟ್ಟದಲ್ಲಿ ನೇಮಕಗೊಂಡಿರುವ ಬಿಎಲ್‌ಎ-2 ಕಾರ್ಯಕರ್ತರು ಒಂದೇ ಹೆಸರಿನ …
Read More »
Laxmi News 24×7