ಯಾವುದೇ ಅಧಿಕಾರಿಗಳನ್ನು ಬದಲಿಸುವ ಉದ್ದೇಶ ನಮಗಿಲ್ಲ. ಆದರೆ ಹಿಂದಿನಂತೆ ಇದ್ದರೆ ಆಗುವುದಿಲ್ಲ. ಜನರು ಬಹಳ ನಿರೀಕ್ಷೆ ಇಟ್ಟು ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕು. ಸುಳ್ಳು ಹೇಳುತ್ತ ಕಾಲಕಳೆದರೆ ನಡೆಯುವುದಿಲ್ಲ. ನಮ್ಮ ಸ್ಪೀಡ್ ಗೆ ನೀವೂ ಓಡಬೇಕು. ಜಿಲ್ಲಾಧಿಕಾರಿಗಳ ಕೈಗೆ, ಶಾಸಕರ ಕೈಗೆ ಸಿಗದೆ ಓಡಾಡುವವರು ಈಗಲೇ ಹೊರಗೆ ಹೋಗಲು ಸಿದ್ಧತೆ ಮಾಡಿಕೊಳ್ಳಿ” ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ …
Read More »ರಾಜ್ಯ ಸರಕಾರಿ ನೌಕರರಿಗೆ ಹೊಸ ಸರಕಾರದ ಕೊಡುಗೆ
ಬೆಂಗಳೂರು : ರಾಜ್ಯ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ರಾಜ್ಯದ ನೂತನ ಕಾಂಗ್ರೆಸ್ ಸರಕಾರಿ ಆದೇಶ ಹೊರಡಿಸಿದೆ. ಶೇ.31ರಿಂದ 35ಕ್ಕೆ ಡಿಎ ಹೆಚ್ಚಳ ಮಾಡಲಾಗಿದೆ. ಇದು ಜನೆವರಿ 1ರಿಂದ ಪೂರ್ವಾನ್ವಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ಕಾರದ ಆದೇಶ ಸಂಖ್ಯೆ: ಆಇ ೧ ಎಸ್‌ಆರ್‌ಪಿ 2023 ಬೆಂಗಳೂರು, ದಿನಾಂಕ: 30ನೇ ಮೇ 2023 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2023 …
Read More »ಭಾರತೀಯ ಅರಣ್ಯ ಸೇವೆ ಅಧಿಕಾರಿ ರಾಜ್ ಕಿಶೋರ್ ಸಿಂಗ್ ರವರು ಮೇ 31 ರಂದು ವಯೋ ನಿವೃತ್ತಿ ಹೊಂದಲಿದ್ದಾರೆ.
ಬೆಂಗಳೂರು: ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥರಾಗಿರುವ ಭಾರತೀಯ ಅರಣ್ಯ ಸೇವೆ ಅಧಿಕಾರಿ ರಾಜ್ ಕಿಶೋರ್ ಸಿಂಗ್ ರವರು ಮೇ 31 ರಂದು ವಯೋ ನಿವೃತ್ತಿ ಹೊಂದಲಿದ್ದಾರೆ. ಅವರ ಜಾಗಕ್ಕೆ 1987ನೇ ಬ್ಯಾಚಿನ ಭಾರತೀಯ ಅರಣ್ಯ ಸೇವೆ ಅಧಿಕಾರಿ ಹಾಗೂ ಪ್ರಸ್ತುತ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಾಗಿ ಸೇವೆ ಸಲ್ಲಿಸುತ್ತಿರುವ ರಾಜೀವ್ ರಂಜನ್ ಅವರನ್ನು ಜೂನ್ 1 ರಿಂದ ಅನ್ವಯ …
Read More »ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು,ಬೆಳಗಾವಿ 16,765, B.P.L. ರೇಷನ್ ಕಾರ್ಡ್ ರದ್ದು.!
ಬೆಂಗಳೂರು : ಆಹಾರ ಇಲಾಖೆ ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿ ಪಡೆದವರಿಗೆ ಬಿಗ್ ಶಾಕ್ ನೀಡಿದೆ. ನಿಯಮ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ, 3,30,000 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಸರ್ಕಾರಿ ಮತ್ತು ಅರೆ ಸರ್ಕಾರಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ 22 ಸಾವಿರ ನೌಕರರು ಬಿಪಿಎಲ್ ಪಡಿತರ ಚೀಟಿ ಪಡೆದಿದ್ದಾರೆ ಎಂಬ ಮಾಹಿತಿ ಆಹಾರ ಇಲಾಖೆಗೆ ಸಿಕ್ಕಿದ್ದು, ಈವರೆಗೆ 17,338 ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ …
Read More »ಮದುವೆಗೆ ನಿರಾಕರಿಸಿದ ಪ್ರಿಯಕರನ ಮೇಲೆ ಮಹಿಳೆ ಬಿಸಿ ನೀರು ಎರಚಿ ಹಲ್ಲೆ
ಬೆಂಗಳೂರು : ಬೆಂಗಳೂರು ಜಿಲ್ಲೆಯ ಚಾಮರಾಜಪೇಟೆಯಲ್ಲಿ ಮದುವೆಗೆ ನಿರಾಕರಿಸಿದ ಪ್ರಿಯಕರನ ಮೇಲೆ ಮಹಿಳೆ ಬಿಸಿ ನೀರು ಎರಚಿ ಹಲ್ಲೆ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ಮೂಲದ ಮಹಿಳೆ ಇಂತಹ ಕೃತ್ಯವೆಸಗಿದ್ದಾಳೆ ಎಂದು ತಿಳಿದುಬಂದಿದೆ. ಕೆಲವು ದಿನಗಳಿಂದ ಭೀಮಾಶಂಕರ ಮತ್ತು ಮಹಿಳೆ ಪ್ರೀತಿಸುತ್ತಿದ್ದರು. ಆಬಳಿಕ ಮಹಿಳೆಗೆ ಮೊದಲೇ ಮದುವೆಯಾಗಿದೆ ಎಂದು ಗೊತ್ತಾಗಿದೆ. ಈ ಕಾರಣದಿಂದಾಗಿ ಮಹಿಳೆಯಿಂದ ಅಂತರ ಕಾಯ್ದುಕೊಳ್ಳಲು ಭೀಮಾಶಂಕರ ಮುಂದಾಗಿದ್ದಾನೆ ಅಲ್ಲದೇ ತಾನು ವಾಸವಾಗಿದ್ದ …
Read More »ಆತಂಕದಲ್ಲಿ ಮಕ್ಕಳ ಶಿಕ್ಷಣ; ಸರ್ಕಾರಿ ಶಾಲೆಗಳ ಗೋಳು ಕೇಳೋರು ಯಾರು..?
ಬೆಳಗಾವಿ: ರಾಜ್ಯಾದ್ಯಂತ ಶಾಲೆಗಳ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಆದರೆ, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳೇ ವಿದ್ಯಾರ್ಥಿಗಳನ್ನು ಸ್ವಾಗತಿಸುವ ದುಃಸ್ಥಿತಿ ಬೆಳಗಾವಿ ಜಿಲ್ಲೆಯಲ್ಲಿದೆ. ಹೌದು, ರಾಜ್ಯ ಸರ್ಕಾರದ ಸುತ್ತೋಲೆಯಂತೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲೆಗಳು ಸೋಮವಾರ ಆರಂಭವಾಗಿವೆ. ಬೆಳಗಾವಿಯಲ್ಲಿ ಮೊದಲ ದಿನ ಕೆಲವೇ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ್ದು, ಶಿಕ್ಷಕರು ಶಾಲೆ ಆರಂಭದ ಹಿನ್ನೆಲೆ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. 31ರಿಂದ ಎಲ್ಲ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಶಾಲೆಯತ್ತ ಮುಖ ಮಾಡಲಿದ್ದಾರೆ. ಮಕ್ಕಳು ಉತ್ಸಾಹದಿಂದ …
Read More »ದಾವಣಗೆರೆ: ಶೀಲ ಶಂಕಿಸಿ ಪತ್ನಿ, ಮಗು ಕೊಲೆ- ಅಪರಾಧಿಗೆ ಜೀವಾವಧಿ ಶಿಕ್ಷೆ
ದಾವಣಗೆರೆ: ಶೀಲ ಶಂಕಿಸಿ ಪತ್ನಿ ಹಾಗೂ ಮಗಳನ್ನು ಕೊಲೆ ಮಾಡಿದ ಅಪರಾಧಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮಾಯಕೊಂಡ ಗ್ರಾಮದ ನಾಗರಾಜ ಶಿಕ್ಷೆಗೆ ಗುರಿಯಾದ ಅಪರಾಧಿ. ಶಿಲ್ಪಾ ಹಾಗೂ 2 ವರ್ಷದ ಮಗು ಕೃತಿಕಾ ಕೊಲೆಯಾದವರು. ನಾಗರಾಜನಿಗೆ 2015ರಲ್ಲಿ ಶಿಲ್ಪಾ ಅವರ ಜೊತೆ ವಿವಾಹವಾಗಿತ್ತು. ಅವರಿಗೆ 2 ವರ್ಷದ ಕೃತಿಕಾ ಎನ್ನುವ ಹೆಣ್ಣು ಮಗುವಿತ್ತು. ನಾಗರಾಜ ಪತ್ನಿಯ ಶೀಲದ ಬಗ್ಗೆ …
Read More »ಹೊಲದಲ್ಲಿ ತುರ್ತು ಭೂಸ್ಪರ್ಷ ಮಾಡಿದ ವಿಮಾನ
ಬೆಳಗಾವಿ: ತಾಲೂಕಿನ ಹೊನ್ನಿಹಾಳ- ಬಾಗೇವಾಡಿ ಮಾರ್ಗ ಮಧ್ಯೆ ತರಬೇತಿ ವಿಮಾನವೊಂದು ಬೆಳಗ್ಗೆ ಹೊಲದಲ್ಲೇ ತುರ್ತು ಭೂ ಸ್ಪರ್ಷ ಮಾಡಿದ್ದು ಭಾರೀ ದುರಂತವೊಂದು ತಪ್ಪಿದೆ. ಸಾಂಬ್ರಾ ವಿಮಾನ ನಿಲ್ದಾಣದಿಂದ ತರಬೇತಿ ನಡೆಸಲಾಗುತ್ತಿದ್ದ ವಿಮಾನ ತಾಂತ್ರಿಕ ತೊಂದರೆಯಿಂದ ಹೊಲದಲ್ಲೇ ಲ್ಯಾಂಡ್ ಆಯಿತು. ಈ ವೇಳೆ ತರಬೇತುದಾರ ಪೈಲಟ್ ಕಾಲಿಗೆ ಪೆಟ್ಟಾಗಿದೆ.ಘಟನೆ ನಡೆದ ಬೆನ್ನಿಗೇ ಮಾರಿಹಾಳ ಠಾಣೆ ಪೊಲೀಸರು ಹಾಗೂ ವಾಯುಸೇನೆ …
Read More »ಲೈಂಗಿಕ ದೌರ್ಜನ್ಯ, ಕೊಲೆ ಅಪರಾಧಿಗೆ 15 ದಿನಗಳಲ್ಲೇ ಮರಣದಂಡನೆ ವಿಧಿಸಿದ ಮಥುರಾ ಕೋರ್ಟ್…!
ಮಥುರಾ (ಉತ್ತರ ಪ್ರದೇಶ): ಜಿಲ್ಲೆಯ ವಿಶೇಷ ಪೋಕ್ಸೊ ಕಾಯಿದೆ ನ್ಯಾಯಾಲಯವು ಕೇವಲ 15 ದಿನಗಳಲ್ಲಿ ಲೈಂಗಿಕ ದೌರ್ಜನ್ಯ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆ ವಿಧಿಸುವ ಮೂಲಕ ಸೋಮವಾರ ಇತಿಹಾಸ ಸೃಷ್ಟಿಸಿದೆ. ಪೊಲೀಸರ ಚುರುಕುತನ ಮತ್ತು ಎಲ್ಲ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಅಪರಾಧಿಗೆ 15 ದಿನಗಳಲ್ಲಿಯೇ ಶಿಕ್ಷೆಯನ್ನು ಪ್ರಕಟಿಸಲಾಗಿದೆ. ಹೌದು, ನ್ಯಾಯಾಲಯವು ಅಪರಾಧಿಗೆ ಮರಣದಂಡನೆ ವಿಧಿಸಿದೆ. ಏಪ್ರಿಲ್ 8ಕ್ಕೆ ಕಾಣೆಯಾಗಿದ್ದ ಬಾಲಕ: ಸದರ್ ಬಜಾರ್ ಪೊಲೀಸ್ ಠಾಣೆಯ ಔರಂಗಾಬಾದ್ ಪ್ರದೇಶದ 9 ವರ್ಷದ ಬಾಲಕ …
Read More »2 ಸಾವಿರದ ನೋಟು ಚಲಾವಣೆಗೆ ತಂದು ಬ್ಯಾನ್ ಮಾಡಿದ್ದು ಅಸಂಬದ್ಧ: ಚಿದಂಬರಂ ಟೀಕೆ
ಮುಂಬೈ: ಎರಡು ಸಾವಿರದ ನೋಟು ಚಲಾವಣೆ ಮತ್ತು ಅದರ ಹಿಂಪಡೆಯುವಿಕೆ ಭಾರತೀಯ ಕರೆನ್ಸಿಯ ಸಮಗ್ರತೆ ಮತ್ತು ಸ್ಥಿರತೆಯ ಮೇಲೆ ಅನುಮಾನ ಮೂಡಿಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಸೋಮವಾರ ಹೇಳಿದ್ದಾರೆ. ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರದ ಮಾಜಿ ಹಣಕಾಸು ಸಚಿವರು, ಆರ್ಥಿಕ ಸೂಚ್ಯಂಕಗಳು ಕೆಳಮುಖವಾಗುತ್ತಿವೆ. ಇದು ಆರ್ಥಿಕತೆ ಬೆಳವಣಿಗೆ ಹೊಂದುತ್ತದೆ ಎಂಬ ವಿಶ್ವಾಸ ಕಡಿಮೆ ಮಾಡಿದೆ ಎಂದು ಹೇಳಿದರು. ಭಾರತೀಯ ರಿಸರ್ವ್ ಬ್ಯಾಂಕ್ ಚಲಾವಣೆಯಲ್ಲಿದ್ದ 2000 ರೂಪಾಯಿ ನೋಟುಗಳನ್ನು …
Read More »
Laxmi News 24×7