Breaking News

Laxminews 24x7

ಕುಡಿದ ಮತ್ತಲ್ಲಿ ಟ್ರಾಫಿಕ್‌ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಯುವಕರು – ವಿಡಿಯೋ ವೈರಲ್‌

ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಇಬ್ಬರು ಯುವಕರು ಟ್ರಾಫಿಕ್ ಪೊಲೀಸರ  ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ  ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ನಡೆದಿದೆ. ವಾಹನ ತಪಾಸಣೆ ವೇಳೆ ಇಬ್ಬರು ಯುವಕರನ್ನು ಟ್ರಾಫಿಕ್ ಪೊಲೀಸರು ತಡೆದಿದ್ದರು. ಈ ವೇಳೆ ಮದ್ಯಪಾನ ಮಾಡಿರುವ ಬಗ್ಗೆ ಪ್ರಶ್ನಿಸಿದ್ದರು. ಇದರಿಂದ ಸಿಟ್ಟಿಗೆದ್ದ ಯುವಕರು ಪೊಲೀಸರ ಮೇಲೆ ದರ್ಪ ತೋರಿದ್ದಾರೆ. ಮೈಕೈ ಮುಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಮುಂದಾಗಿದ್ದಾರೆ. ಯುವಕರ ವರ್ತನೆ ಸಾರ್ವಜನಿಕರು ತಮ್ಮ ಮೊಬೈಲ್‍ನಲ್ಲಿ ಸೆರೆಯಾಗಿದೆ. …

Read More »

ಎಲ್ಲಾ ಹೊರೆ ಜನರ ಮೇಲೆ ಹಾಕ್ತಿದ್ರೆ, ಮೋದಿ ಯಾವಾಗ ಜವಾಬ್ದಾರಿ ತಗೋತಾರೆ: ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಬೆಂಗಳೂರು: ಎಲ್ಲಾ ಹೊರೆಯನ್ನು ಜನರ ಮೇಲೆ ಹಾಕುತ್ತಿದ್ದರೆ ಮೋದಿ  ಯಾವಾಗ ಜವಾಬ್ದಾರಿ ತೆಗೆದುಕೊಳ್ತಾರೆ ಅಂತ ಕೇಂದ್ರ ಸಚಿವ ಪ್ರಿಯಾಂಕ್‌ ಖರ್ಗೆ  ಪ್ರಶ್ನೆ ಮಾಡಿದರು. ಬೆಂಗಳೂರಿನಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 10 ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ 5 ರೂ. ಹೆಚ್ಚಿಸಿರುವ ಕೇಂದ್ರದ ನಡೆಯನ್ನು ತೀವ್ರವಾಗಿ ಖಂಡಿಸಿದರು. ಬೆಲೆ ಏರಿಕೆಗೆ ಉತ್ತರ ನೀಡಬೇಕಾದವರು ಕೇಂದ್ರ ಸರ್ಕಾರ. ಉಳಿದ ಎಲ್ಲ ಕಡೆ ಬಿಜೆಪಿ ನಾಯಕರು ಮಾತನಾಡ್ತಾರೆ ಇದಕ್ಕೆ ಯಾಕೆ ಯಾರು ಮಾತನಾಡುತ್ತಿಲ್ಲ? …

Read More »

ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ

ಬೆಂಗಳೂರು: ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಶೋಕ್ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ವಿಲ್ಸನ್ ಗಾರ್ಡನ್ ನಿವಾಸಿ ಗೌತಮ್ (28) ಎಂದು ಗುರುತಿಸಲಾಗಿದೆ. ಶುಕ್ರವಾರ ಮುಂಜಾನೆ ಅಶೋಕ್ ನಗರದ ಖಾಲಿ ಜಾಗದಲ್ಲಿ ಈ ಘಟನೆ ನಡೆದಿತ್ತು. ಈತ ಪುನರ್ವಸತಿ ಕೇಂದ್ರದಿಂದ ಬಂದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.    ಮೇಲ್ನೋಟಕ್ಕೆ ಕೊಲೆ ಆಗಿರಬಹುದೆಂಬ ಅನುಮಾನ ಇತ್ತು. ಆದರೆ ತನಿಖೆ ವೇಳೆ ಯುವಕ ಆತ್ಮಹತ್ಯೆ ಮಾಡಿಕೊಂಡಿರೋದು ಗೊತ್ತಾಗಿದೆ. …

Read More »

ಆರ್‌ಡಿಪಿಆರ್ ಕಚೇರಿಯಲ್ಲಿ ಗುಂಡು, ತುಂಡು ಪಾರ್ಟಿ: ಎಇಇ ಸೇರಿ ಮೂವರು ಅಮಾನತು

ರಾಯಚೂರು: ಜಿಲ್ಲೆಯ ಲಿಂಗಸುಗೂರಿನ  ಆರ್‌ಡಿಪಿಆರ್  ಕಚೇರಿಯಲ್ಲಿ ಗುಂಡು ತುಂಡು ಪಾರ್ಟಿ ಮಾಡಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು, ಎಇಇ  ಸೇರಿ ಮೂವರನ್ನ ಅಮಾನತು ಮಾಡಲಾಗಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಎಇಇ ಕಚೇರಿಯಲ್ಲಿ ಆರ್‌ಡಿಪಿಆರ್ ಎಇಇ ಹನುಮಪ್ಪ ಆದವಾನಿ, ಎಫ್‌ಡಿಎ ರಾಮಣ್ಣ ಪೂಜಾರಿ ಹಾಗೂ ಕಾವಲುಗಾರ ಹನುಮಂತ ಮೂವರು ಗುಂಡು, ತುಂಡು ಪಾರ್ಟಿ ನಡೆಸಿದ್ದರು. ಇದೀಗ ಮೂವರು ಸರ್ಕಾರಿ ಕಚೇರಿಯನ್ನು ವೈಯಕ್ತಿಕ ಉದ್ದೇಶಕ್ಕೆ ಬಳಕೆ ಮಾಡಿಕೊಂಡು ಕರ್ತವ್ಯಲೋಪ …

Read More »

ಯಾವ ಪುರುಷಾರ್ಥಕ್ಕೆ ಮತ್ತೊಂದು ಸ್ಟೇಡಿಯಂ? ಯಾವ ಆಟಗಾರ ಕೇಳಿದ್ರು? – ಆರ್.ಅಶೋಕ್ ಕಿಡಿ

ಬೆಂಗಳೂರು: ಯಾವ ಆಟಗಾರ ಸ್ಟೇಡಿಯಂ ಕೇಳಿದ್ದರು ಅಂತ ಬೆಂಗಳೂರಲ್ಲಿ ಸ್ಟೇಡಿಯಂ ಮಾಡುತ್ತಿದ್ದೀರಿ? ಯಾವ ಪುರುಷಾರ್ಥಕ್ಕೆ ಆನೇಕಲ್‌ನಲ್ಲಿ ಮತ್ತೊಂದು ಸ್ಟೇಡಿಯಂ ಮಾಡುತ್ತಿದ್ದೀರಿ? ಕಮಿಷನ್‌ಗಾಗಿ ದುಡ್ಡು ಹೊಡೆಯಲು ಮಾಡುತ್ತಿರುವ ಸ್ಟೇಡಿಯಂ ಇದು ಎಂದು ವಿಪಕ್ಷ ನಾಯಕ ಆರ್.ಅಶೋಕ್  ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಆನೇಕಲ್ ಬಳಿ ಸ್ಟೇಡಿಯಂ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ಸರ್ಕಾರ ಕೋಟಿ-ಕೋಟಿ ಹಣ ಬರುವ ಯೋಜನೆಗಳನ್ನು ಮಾಡಲು ಮುಂದಾಗುತ್ತಿದೆ. ನಾನು …

Read More »

ಹಗಲು ರಾತ್ರಿ ಎನ್ನದೇ ಅಕ್ರಮವಾಗಿ ಮಣ್ಣು ಸಾಗಾಟ – ಇಡೀ ಗ್ರಾಮವೇ ಧೂಳುಮಯ!

ದಾವಣಗೆರೆ: ಹೊನ್ನಾಳಿ  ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಜನರು ಮನೆಲೀ ನೆಮ್ಮದಿಯಿಂದ ಊಟ ಮಾಡೋದಿರಲಿ, ನೆಮ್ಮದಿಯಿಂದ ಮಲಗೋಕೂ ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯಲ್ಲಿ ಎಲ್ಲೆ ಮುಟ್ಟಿದರೂ ಧೂಳು ಅಂಟಿಕೊಳ್ಳುತ್ತಿದ್ದು, ಈ ಧೂಳು ಗ್ರಾಮಸ್ಥರ ನೆಮ್ಮದಿ ಹಾಳು ಮಾಡಿದೆ. ಹಗಲು ರಾತ್ರಿ ಎನ್ನದೇ ಗ್ರಾಮದಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ  ಮಾಡಲಾಗುತ್ತಿದೆ. ಇದಕ್ಕಾಗಿ ನಿರಂತರವಾಗಿ ಟ್ರ್ಯಾಕ್ಟರ್‌ಗಳು ಓಡಾಡುತ್ತಿದ್ದು, ಶಬ್ದದ ಜೊತೆಗೆ ಧೂಳಿನಿಂದಾಗಿ ಗ್ರಾಮಸ್ಥರು ಬೇಸತ್ತು ಹೋಗಿದ್ದಾರೆ. ಇದರಿಂದ ಗ್ರಾಮಸ್ಥರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ವಿಶಾಲವಾಗಿ …

Read More »

ವಾಹನ ಸವಾರರಿಗೆ ಮತ್ತೆ ಶಾಕ್; ಪೆಟ್ರೋಲ್ 87, ಡೀಸೆಲ್ 91 ಪೈಸೆ ಏರಿಕೆ

ನವದೆಹಲಿ: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. 10 ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ (Petrol-Diesel Price Hike) ಏರಿಕೆ ಮಾಡಲಾಗಿದೆ. ಶನಿವಾರ ಪೆಟ್ರೋಲ್ 87 ಪೈಸೆ ಮತ್ತು ಡೀಸೆಲ್ 91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಹಾಗೂ ಡೀಸೆಲ್ ಬೆಲೆ 95.04 ರೂ. ಆಗಿದೆ. ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 99.51 ರೂ., ಡೀಸೆಲ್ ಬೆಲೆ ಲೀಟರ್‌ಗೆ 92.49 ರೂ. ಆಗಿದೆ. …

Read More »

ಮಳೆಗಾಲ ಎದುರಿಸಲು ಸರ್ವ ಸನ್ನದ್ಧರಾಗಿ, ಅಧಿಕಾರಿಗಳಿಗೆ ಡಿಸಿ ಡಾ.ಆನಂದ ಕೆ ಖಡಕ್ ಸೂಚನೆ

ವಿಜಯಪುರ: ಮುಂಗಾರು ಆರಂಭಗೊಳ್ಳುತ್ತಿದ್ದು ಈಗಿನಿಂದಲೇ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಭವನೀಯ ಪ್ರಕೃತಿ ವಿಕೋಪ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದ್ದು, ಪ್ರವಾಹದಲ್ಲಿ ಜನ-ಜಾನುವಾರು ಹಾನಿಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಅಧಿಕಾರಿಯ ಪ್ರಥಮ ಆದ್ಯತೆಯಾಗಿದೆ ಎಂದರು. ತಾಲೂಕು ಹಂತದಲ್ಲಿ ಸಂಭವಿಸುವ ಪ್ರಕೃತಿ …

Read More »

ಪಾಲಿಕೆ ವಿಚಾರ ಬಳಸಿಕೊಂಡು ಕಾಂಗ್ರೆಸ್​ ಸುಳ್ಳು ಆರೋಪ ಮಾಡುತ್ತಿರುವುದು ಖಂಡನೀಯ

ಧಾರವಾಡ: ಪ್ರತ್ಯೇಕ ಪಾಲಿಕೆ ವಿಚಾರವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು ಬಿಜೆಪಿ ವಿರುದ್ಧ ಕಾಂಗ್ರೆಸ್​ ಸುಳ್ಳು ಆರೋಪ ಮಾಡುತ್ತಿರುವುದು ಖಂಡನೀಯ ಎಂದು ವಿಧಾನಸಭೆ ಪ್ರತಿಪಕ್ಷ ಉಪನಾಯಕ ಮತ್ತು ಶಾಸಕ ಅರವಿಂದ ಬೆಲ್ಲದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಧಾರವಾಡ ಭಾಗದ ಅಭಿವೃದ್ಧಿ ಕುಂಠಿತವಾಗಿರುವುದನ್ನು ಮನಗಂಡು, ಈ ಹಿಂದೆ ಬಿಜೆಪಿಯೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಸ್ಥಳಿಯ ಶಾಸಕರ ನೇತೃತ್ವದಲ್ಲಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸಬೇಕೆಂಬ ನಿರ್ಧಾರ ಕೈಗೊಂಡಿತ್ತು. ಬದಲಾದ …

Read More »

ಧಾರವಾಡ ಪ್ರತ್ಯೇಕ ಪಾಲಿಕೆಗಾಗಿ ಪ್ರತಿಭಟನಾ ಮೆರವಣಿಗೆ

ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ ಹಾಗೂ ದೀಪಕ ಚಿಂಚೋರೆ ಅಭಿಮಾನಿ ಬಳಗದ ವತಿಯಿಂದ ಕಾಂಗ್ರೆಸ್​ ಮುಖಂಡ ದೀಪಕ ಚಿಂಚೋರೆ ನೇತೃತ್ವದಲ್ಲಿ ನಗರದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಒಂದೆಡೆ ಪ್ರತ್ಯೇಕ ಮಹಾನಗರ ಪಾಲಿಕೆಗಾಗಿ 15ರಿಂದ ಸತ್ಯಪ್ರತಿಪಾದನಾ ಸತ್ಯಾಗ್ರಹ ನಡೆಸುತ್ತಿದೆ. ಮತ್ತೊಂದೆಡೆ ಮೇ 22ರಂದು ತಮ್ಮ ಜನ್ಮದಿನ ಆಚರಿಸಿಕೊಳ್ಳದಿರುವ ದೀಪಕ ಚಿಂಚೋರೆ ನಿರ್ಧರಿಸಿದ್ದರು. ಕಾರ್ಯಕರ್ತರು, ಬೆಂಬಲಿಗರು ಪ್ರತ್ಯೇಕ ಪಾಲಿಕೆ ಹೋರಾಟದಲ್ಲಿ ಭಾಗವಹಿಸಲು ಕರೆ ನೀಡಿದ್ದರು. ಅವರ ಕೋರಿಕೆಯಂತೆ ಸಾವಿರಾರು ಜನ …

Read More »