Breaking News

Laxminews 24x7

₹2 ಕೋಟಿ ವೆಚ್ಚದಲ್ಲಿ ನೂತನ ದೇವಸ್ಥಾನ, ಸಭಾಮಂಟಪ ನಿರ್ಮಾಣ: ಚೆಕ್ ಹಸ್ತಾಂತರಿಸಿದ ಮೃಣಾಲ್‌ ಹೆಬ್ಬಾಳಕರ್

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ 2 ಕೋಟಿ ರೂ. ಅನುದಾನದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಂಗರಗಾ ಗ್ರಾಮದಲ್ಲಿ ನೂತನ ಶ್ರೀ ಕಲ್ಮೇಶ್ವರ ದೇವಸ್ಥಾನ ಹಾಗೂ ಸಭಾಮಂಟಪ ನಿರ್ಮಾಣವಾಗಲಿದೆ. ಕಾಮಗಾರಿಯ ಮೊದಲ ಹಂತವಾಗಿ ₹19.81 ಲಕ್ಷ ಮೊತ್ತದ ಅನುದಾನದ ಚೆಕ್‌ನ್ನು ದೇವಸ್ಥಾನ ಕಮಿಟಿ ಸದಸ್ಯರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಹಸ್ತಾಂತರಿಸಿದರು. ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ …

Read More »

ಈರುಳ್ಳಿ ಬೆಳೆಗಾರರಿಗೆ ಬಂಪರ್ – ಬೆಳಗಾವಿ ಎಪಿಎಂಸಿಯಲ್ಲಿ ದರ ದಿಢೀರ್ ಏರಿಕೆ

ಬೆಳಗಾವಿ: ಕಳೆದ ಎರಡು-ಮೂರು ವರ್ಷಗಳಿಂದ ನಿರಂತರ ನಷ್ಟ ಅನುಭವಿಸುತ್ತಿದ್ದ ಈರುಳ್ಳಿ ಬೆಳೆಗಾರರಿಗೆ ಈ ಬಾರಿ ಬಂಪರ್ ಬೆಲೆ ಸಿಕ್ಕಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಬೆಳಗಾವಿ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ದರ ಗಣನೀಯವಾಗಿ ಏರಿಕೆಯಾಗಿದೆ. ಕಳೆದ 15 ದಿನಗಳ ಹಿಂದೆ ಪ್ರತಿ ಕ್ವಿಂಟಾಲ್‌ಗೆ 2,000 ದಿಂದ 2,500 ರೂಪಾಯಿ ಇದ್ದ ದರ, ಸದ್ಯ ಕ್ವಿಂಟಾಲ್‌ಗೆ 3,500 ರಿಂದ 4,500 ರೂಪಾಯಿವರೆಗೆ ಜಿಗಿದಿದೆ. ಇದರೊಂದಿಗೆ ಸಗಟು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ …

Read More »

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ – ಅನಾಥವಾದ ಕಂದಮ್ಮ

ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ ವಸಿಷ್ಠ ಸೇತುವೆಯ ಬಳಿ ಸಂಭವಿಸಿದ ದುರಂತವೊಂದು ಸಂಭವಿಸಿದೆ. ಮೂರು ವರ್ಷದ ಮಗುವನ್ನು ಬಿಟ್ಟು ದಂಪತಿ ಬ್ರಿಡ್ಜ್ ಮೇಲಿಂದ ನದಿಗೆ ಹಾರಿದ್ದು, ಕಂದಮ್ಮ ಅನಾಥವಾಗಿದೆ. ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ವೆಲ್ಪುರು ಗ್ರಾಮದ ನಿವಾಸಿಗಳಾದ ಪತಿ ದೊಡ್ಡ ಸಾಯಿ (29) ಮತ್ತು ಅವರ ಪತ್ನಿ ಶಿರೀಷಾ (28) ನದಿಗೆ ಹಾರಿದ ದಂಪತಿ ಎಂದು ಗುರುತಿಸಲಾಗಿದೆ.  ಪೊಲೀಸರ ಮಾಹಿತಿ ಪ್ರಕಾರ, ಘಟನೆ ನಡೆದ ರಾತ್ರಿ …

Read More »

ಮರಕ್ಕೆ ಕಟ್ಟಿ ಹಲ್ಲೆ, ಬೆಂಕಿ ಹಚ್ಚಿ ಚಿತ್ರಹಿಂಸೆ – ಎರಡು ತಿಂಗಳು ನರಳಿ ಇನ್ಸ್ಟಾ ಇನ್‌ಫ್ಲ್ಯೂಯೆನ್ಸರ್‌ ಸಾವು

ಚಂಡೀಗಢ: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಪಂಜಾಬ್‌ನ  ಇನ್ಸ್ಟಾ ಇನ್‌ಫ್ಲ್ಯೂಯೆನ್ಸರ್‌ ಒಬ್ಬರು ಎರಡು ತಿಂಗಳ ಬಳಿಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. 28 ವರ್ಷದ ಮಂಜೀತ್ ಕೌರ್ ಮೃತ ಮಹಿಳೆ. ಅವರನ್ನು ಅಪಹರಿಸಿ, ಹಲ್ಲೆ ಮಾಡಿ ಬೆಂಕಿ ಹಚ್ಚಲಾಗಿತ್ತು ಎಂದು ಹೇಳಲಾಗಿತ್ತು. ಇದಾದ ಸುಮಾರು ಎರಡು ತಿಂಗಳ ನಂತರ ಅವರು ಸಾವನ್ನಪ್ಪಿದ್ದಾರೆ. ಕೌರ್ ವಿಚ್ಛೇದನ ಪಡೆದಿದ್ದು, ಅವರ ಏಳು ವರ್ಷದ ಮಗ ಬಚಾವ್‌ ಆಗಿದ್ದಾರೆ ಎಂದು ವರದಿಯಾಗಿದೆ. ಜುಲೈ 3 ರಂದು ಚಂಡೀಗಢದ ಸೆಕ್ಟರ್ …

Read More »

ಬೈಕ್ ಬೆನ್ನಟ್ಟಿ ಬಂದು ಗುಂಡಿನ ದಾಳಿ – ಆಪ್ ನಾಯಕನ ಬರ್ಬರ ಹತ್ಯೆ

ಚಂಡೀಗಢ: ಆಮ್ ಆದ್ಮಿ ಪಕ್ಷದ ನಾಯಕರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಮಮ್ದೋಟ್ ಪಟ್ಟಣದಲ್ಲಿ ನಡೆದಿದೆ. ಗುರುಪ್ರೀತ್ ಸಿಂಗ್ ಗೋಪಿ ಹತ್ಯೆಯದ ಆಪ್ ನಾಯಕ. ಗುರುಪ್ರೀತ್ ಮತ್ತು ಹರ್‌ಪ್ರೀತ್ ಎಂಬ ವ್ಯಕ್ತಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಕಾರಿನಲ್ಲಿ ಬಂದ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅವರನ್ನು ಬೆನ್ನಟ್ಟಿದ್ದಾರೆ. ಬಳಿಕ ಬೈಕ್‌ಗೆ ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗುರುಪ್ರೀತ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ …

Read More »

ಗ್ಯಾನೇಂದ್ರ ಬೆನ್ನಲ್ಲೇ ಸಿಐಡಿ ಮತ್ತೊಂದು ಬೇಟೆ – ಸಹಾಯ ಮಾಡಿದ್ದ ಮಧ್ಯವರ್ತಿ ವಶಕ್ಕೆ

ಬೆಂಗಳೂರು: ಕೆಪಿಎಸ್‌ಸಿ ಹಗರಣದಲ್ಲಿ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್ ಬಂಧನದ ಬೆನ್ನಲ್ಲೇ ಇದೀಗ ಸಿಐಡಿ ತಂಡ ಮತ್ತೊಂದು ಬೇಟೆಯಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿಯೊಬ್ಬನನ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ. ಪ್ರಕರಣದಲ್ಲಿ ಗ್ಯಾನೇಂದ್ರ ಕುಮಾರ್‌ ಅವರಿಗೆ ಸಹಾಯ ಮಾಡಿದ್ದ ಹಿನ್ನೆಲೆ ಮಧ್ಯವರ್ತಿಯನ್ನ ವಶಕ್ಕೆ ಪಡೆಯಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಇನ್ನೂ ಕಳೆದ ರಾತ್ರಿಯಷ್ಟೇ ಕೆಪಿಎಸ್‌ಸಿ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅವರನ್ನು ಬಂಧಿಸಲಾಗಿತ್ತು. ವಿಚಾರಣೆಗೆ …

Read More »

ಚಿಕ್ಕಮಗಳೂರಲ್ಲಿ ಆಹಾರ ಇಲಾಖೆ ಅಧಿಕಾರಿಗಳ ದಾಳಿ – 30 ಕೆಜಿ ನಕಲಿ ನಾಟಿ ತುಪ್ಪ ಪತ್ತೆ

ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯಲ್ಲಿನ ಮನೆಯೊಂದರ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ 30 ಕೆ.ಜಿ.ಗೂ ಹೆಚ್ಚಿನ ನಕಲಿ ನಾಟಿ ತುಪ್ಪ ವಶ ಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯೊಂದರಲ್ಲಿ ದಂಧೆಕೋರರು ಡಾಲ್ಡಾ, ರಾಸಾಯನಿಕ ಬಳಸಿ ತುಪ್ಪ ತಯಾರಿಸಿರುವುದು ಗೊತ್ತಾಗಿದೆ. ಅದನ್ನು ನಾಟಿ ತುಪ್ಪ ಎಂದು ಮಾರಾಟ ಮಾಡುತ್ತಿದ್ದರು. ದಂಧೆಕೋರರು ಮನೆಯ ಬಾಗಿಲು ಲಾಕ್‌ …

Read More »

ಕಲಬುರಗಿ ಪಾಲಿಕೆ ಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯ

ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ ಅಧಿಕಾರದ ಗದ್ದುಗೆಗೆ ಕಾಂಗ್ರೆಸ್‌  ಮತ್ತೊಮ್ಮೆ ಏರಿದ್ದು, ಮೇಯರ್‌ ಹಾಗೂ ಉಪ ಮೇಯರ್‌ ಎರಡೂ ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಜ್ಮಲ್ ಗೋಳಾ ಅವರು 35 ಮತಗಳನ್ನು ಪಡೆದು 24ನೇ ಮೇಯರ್‌ ಆಗಿ ಆಯ್ಕೆಯಾದರು. ಉಪ ಮೇಯರ್‌ ಆಗಿ ಕಾಂಗ್ರೆಸ್‌ನ ಫರನಾ ಖುಸ್ರೋ ಜಾಗೀರದಾರ್ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಪಾಲಿಕೆಯಲ್ಲಿ ಕಾಂಗ್ರೆಸ್‌ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ಬಿಜೆಪಿ ಅಭ್ಯರ್ಥಿ ಗುರುರಾಜ್ ಪಟ್ಟಣ ಅವರು 26 …

Read More »

ನೇಪಾಳ ಜಲಪ್ರಳಯ – ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್ ಆದ 54 ಮಂದಿ ಕನ್ನಡಿಗರು

ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಭೀಕರ ಜಲಪ್ರಳಯದ ನಡುವೆ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರಿಗೆ  ಕೊನೆಗೂ ನೆಮ್ಮದಿ ಸಿಕ್ಕಿದೆ. ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ 54 ಮಂದಿ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ಸಾಗಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕನ್ನಡಿಗರು, ನೇಪಾಳದಲ್ಲಿ ಎದುರಾದ ಭೀಕರ ಅನುಭವವನ್ನು ಹಂಚಿಕೊಂಡಿದ್ದಾರೆ. ಹಾವೇರಿ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 54 ಮಂದಿ ಪ್ರವಾಸಿಗರು ಆಗಸ್ಟ್ 23ರಂದು ನೇಪಾಳ ಪ್ರವಾಸ ಕೈಗೊಂಡಿದ್ದರು. ಆದರೆ ಆಗಸ್ಟ್ 26ರಂದು …

Read More »

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಜಾರಿಬಿದ್ದು ಸಾವು

ಚಿಕ್ಕಮಗಳೂರು: ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಜಾರಿಬಿದ್ದು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಕಡಬಗೆರೆ ಸಮೀಪದ ಕಾಫಿತೋಟದಲ್ಲಿ ನಡೆದಿದೆ. ಗುಡ್ಡೆಕೊಪ್ಪ ಗ್ರಾಮದ ರಮೇಶ್ (35) ಮೃತ ದುರ್ದೈವಿ. ಬಾಸಾಪುರ ಅರಣ್ಯ ಪ್ರದೇಶದಲ್ಲಿ ಕಳೆದ ರಾತ್ರಿ ಗುಂಪೊಂದು ಅಂದರ್-ಬಾಹರ್ ಆಡುತ್ತಿತ್ತು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಬಾಳೆಹೊನ್ನೂರು ಪೊಲೀಸರು ದಾಳಿ ನಡೆಸಿದ್ದರು. ಅಲ್ಲಿದ್ದ 9 ಜನ ಪರಾರಿಯಾಗಲು ಯತ್ನಿಸಿದ್ದು, ಅದರಲ್ಲಿ ಇಬ್ಬರನ್ನು …

Read More »