Breaking News

Laxminews 24x7

ಎರಡು ಅವಧಿಗೆ ಅಧಿಕಾರದಲ್ಲಿದ್ದರೂ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವಲ್ಲಿ ಬಿಜೆಪಿ ವಿಫಲವಾಗಿದೆ ಎಂದ ದೆಹಲಿ ಸಿಎಂ

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ತೆಗೆದುಹಾಕುವುದು ದೇಶಭಕ್ತಿಯ ಶ್ರೇಷ್ಠ ಕಾರ್ಯ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಹೇಳಿದ್ದಾರೆ. ತಮ್ಮ ಚುನಾವಣಾ ಕ್ಷೇತ್ರವಾದ ನವದೆಹಲಿಯಲ್ಲಿ ಪಕ್ಷದ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿದ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್​, ಕೇಸರಿ ಪಕ್ಷ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. “ನಮ್ಮ ಪಕ್ಷದ ಸ್ವಯಂಸೇವಕರು ಯಾರೂ ಯಾವುದೇ ರಾಜಕೀಯ ಹಿನ್ನೆಲೆಯಿಂದ ಬಂದವರಲ್ಲ. ಆದರೂ ನನ್ನ ಕ್ಷೇತ್ರದ ಜನರು ಸ್ವಯಂಸೇವಕರ …

Read More »

ಕುಮಾರಸ್ವಾಮಿ ಸಿಎಂ ಆಗಿದ್ದಾಗ ತಾಜ್ ವೆಸ್ಟೆಂಡ್​​ನಲ್ಲಿ ಏತಕ್ಕಾಗಿ ಇದ್ದರು:C,M

ಬೆಂಗಳೂರು : ಕುಮಾರಸ್ವಾಮಿ ಸಿಎಂ ಆಗಿದ್ದಾಗ ಎಲ್ಲಿದ್ರು ಅಂತಾ ಗೊತ್ತಿದೆಯಲ್ಲ.?. ಇವರು ಇದ್ದದ್ದು ಎಲ್ಲಿ?. ಏತಕ್ಕಾಗಿ ಅಲ್ಲಿದ್ದರು ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಟೌನ್ ಹಾಲ್ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ತಾಜ್​ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇದ್ರಲ್ವಾ ಯಾಕೆ ಇದ್ರು?. ಇವರು ಇದ್ದದ್ದು ಎಲ್ಲಿ?. ಏತಕ್ಕೋಸ್ಕರ …

Read More »

ಪೊಲೀಸ್ ಸಿಬ್ಬಂದಿಗೆ ಪೂರೈಸಿದ್ದ ಆಹಾರದಲ್ಲಿ ಹುಳು

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ – ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್‌ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಪಂದ್ಯದ ಸಂದರ್ಭದಲ್ಲಿ ಭದ್ರತೆಗಾಗಿ 970 ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯೊಂದಕ್ಕೆ ವಹಿಸಿತ್ತು. ಈ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯು ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿರುವ …

Read More »

ಬಾಗಲಕೋಟೆಯಲ್ಲಿ ಗಮನ ಸೆಳೆದ ಛಪ್ಪನ್ ಭೋಗ್​ ಆಚರಣೆ

ಬಾಗಲಕೋಟೆ : ದಸರಾ ಹಬ್ಬದ ನಿಮಿತ್ತ ನಗರದಲ್ಲಿರುವ ಜಗದಂಬಾ ದೇವಸ್ಥಾನದಲ್ಲಿ ಛಪ್ಪನ್ ಭೋಗ್​ ಎಂಬ ವಿಶೇಷ ಪೂಜೆ ನೆರವೇರಿಸಲಾಯಿತು. 56 ಬಗೆಯ ತಿಂಡಿ ತಿನಿಸು ಹಾಗೂ ಹಣ್ಣು ಹಂಪಲುಗಳನ್ನು ದೇವಿಯ ಮುಂದೆ ಇಟ್ಟು ಪೂಜೆ ಸಲ್ಲಿಸಲಾಯಿತು. ಆ ಬಳಿಕ ಎಲ್ಲ ತಿಂಡಿಗಳನ್ನು ಒಂದೆಡೆ ಸೇರಿಸಿ ಪ್ರಸಾದ ವಿತರಣೆ ಮಾಡಲಾಯಿತು. ಯಾವುದೇ ಜಾತಿ, ಮತ, ಪಂಥ ಎನ್ನದೇ ಎಲ್ಲ ತರಹದ ಭಕ್ತರು ತಂದಿರುವ ಪ್ರಸಾದ ವಿತರಿಸುವ ಮೂಲಕ ಗಮನ ಸೆಳೆಯಲಾಯಿತು. ದಸರಾ ಹಬ್ಬ …

Read More »

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ: ಜನವರಿ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಸಲೀಂ ಅಹ್ಮದ್

ಧಾರವಾಡ: ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಪುನರ್‌ರಚನೆ ವಿಚಾರಕ್ಕೆ ಪರಿಷತ್​ ಮುಖ್ಯ ಸಚೇತಕ ಸಲೀಂ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಚರ್ಚೆ ಸೂಕ್ತವಲ್ಲ ಎಂದು ಹೇಳಿದ್ದಾರೆ. ಮುಖಂಡರು, ಶಾಸಕರು ಚರ್ಚಿಸಬೇಡಿ ಎಂದಿದ್ದಾರೆ. ಸಮಯ, ಸಂದರ್ಭ ಬಂದಾಗ ವರಿಷ್ಠರು ಹೇಳುತ್ತಾರೆ ಎಂದರು. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ವಿಚಾರದ ಬಗ್ಗೆ ಮಾತನಾಡಿ, ಈಗಾಗಲೇ 28 ಲೋಕಸಭಾ ವೀಕ್ಷಕರ ನೇಮಕವಾಗಿದೆ. ಎಲ್ಲ ಜಿಲ್ಲೆಗಳಲ್ಲಿ ವೀಕ್ಷಕರು ಸಭೆಗಳನ್ನು ಮಾಡುತ್ತಿದ್ದಾರೆ. ಶಾಸಕರು, ಮಾಜಿ …

Read More »

ಕಸಾಪ ತಾಲ್ಲೂಕಾಧ್ಯಕ್ಷ ಸುರೇಶ ಸಿದ್ದಪ್ಪಾ ಹಂಜಿ ಅವರಿಗೆ ಸತ್ಕಾರ

ಬೆಳಗಾವಿ : ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಸುರೇಶ ಸಿದ್ದಪ್ಪಾ ಹಂಜಿ ಅವರು ಸಾಮಾಜಿಕ ಶೈಕ್ಷಣಿಕ ಸಾಂಸ್ಕೃತಿಕ ರಂಗಗಳಲ್ಲಿ ಮಾಡಿರುವ ಅಮೋಘ ಸೇವೆಯನ್ನು ಗುರುತಿಸಿ É ಆತ್ಮಶ್ರೀ ಸಾಂಸ್ಕೃತಿಕ ಪ್ರತಿಷ್ಠಾನ ದ ವತಿಯಿಂದ ಕೊಡಮಾಡುವ ರಾಷ್ಟ್ರೀಯ ಸಮಾಜ ಸೇವಾ ರತ್ನ ಪ್ರಶಸ್ತಿ ಲಭಿಸಿರುವ ಕಾರಣ ಬೆಳಗಾವಿ ತಾಲೂಕಿನ ನಿಂಗೆನಟ್ಟಿ ಗ್ರಾಮದ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಭೀಮರಾವ್ ಧನಪ್ಪಾ ನಾಯ್ಕ ಹಾಗೂ ಬಂಬರಗೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ …

Read More »

ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜಾ ಕಾರ್ಯಕ್ರಮಗಳು ಆರಂಭ

ಮೈಸೂರು: ನವರಾತ್ರಿಯ ನವಮಿಯ ದಿನವಾದ ಇಂದು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಆಯುಧ ಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಬೆಳಗ್ಗಿನಿಂದಲೇ ಆಯುಧ ಪೂಜೆಯ ಧಾರ್ಮಿಕ ಕೈಂಕರ್ಯಗಳು ಆರಂಭವಾಗಿವೆ. ಇಂದು ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜಾ ಕಾರ್ಯಗಳು ಬೆಳಗ್ಗಿನಿಂದಲೇ ಆರಂಭವಾಗಿವೆ. ಬೆಳಗ್ಗೆ 5:30ಕ್ಕೆ ಅರಮನೆ ಒಳಗಡೆ ಚಂಡಿಕಾ ಹೋಮ ನೆರವೇರುತ್ತಿದೆ. ಬೆಳಗ್ಗೆ 5:20 ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು …

Read More »

ಉಪಾಧ್ಯಕ್ಷ’ ಟೀಸರ್​ ರಿಲೀಸ್​: ನಾನು ‘ಹೀರೋ’ ಎಂದಾಗ ಜನ ಚುಚ್ಚುಮಾತಿನಿಂದ ನೋಯಿಸಿದ್ದಾರೆ – ಚಿಕ್ಕಣ್ಣ

ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾದ ಟೀಸರ್​ ಅನ್ನು ನಟರಾದ ದುನಿಯಾ ವಿಜಯ್​, ನೆನಪಿರಲಿ ಪ್ರೇಮ್​ ಹಾಗೂ ಅಭಿಷೇಕ್​ ಅಂಬರೀಶ್​ ಬಿಡುಗಡೆಗೊಳಿಸಿದರು. ಕಾಮಿಡಿ ಶೋಗಳಲ್ಲಿ ಅಭಿನಯಿಸುತ್ತಾ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಬಹುಬೇಡಿಕೆಯ ಹಾಸ್ಯ ನಟನಾಗಿ ಗುರುತಿಸಿಕೊಂಡವರು ಚಿಕ್ಕಣ್ಣ. ಇವರ ನಟನೆಯ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಉಪಾಧ್ಯಕ್ಷ’. ಈ ಸಿನಿಮಾದ ಮೂಲಕ ಚಿಕ್ಕಣ್ಣ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೈಲೆಂಟ್​ ಆಗಿ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಜ್ಜಾಗಿರುವ ‘ಉಪಾಧ್ಯಕ್ಷ’ ಚಿತ್ರದ ಟೀಸರ್​ ಬಿಡುಗಡೆಯಾಗಿದೆ. ‘ಉಪಾಧ್ಯಕ್ಷ’ …

Read More »

ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 2.5 ಕೋಟಿ ವಂಚನೆ ಆರೋಪ: ಚೈತ್ರಾ ಮಾದರಿ ಮತ್ತೊಂದು ಕೇಸ್​ ಬೆಳಕಿಗೆ

ವಿಜಯನಗರ : ಕಳೆದ ಕೆಲವು ದಿನಗಳ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್‌ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ವಂಚಿಸಿದ್ದ ಪ್ರಕರಣ ಸಂಬಂಧ ಚೈತ್ರಾ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ಇದರ ಬೆನ್ನಲ್ಲೇ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 2.5 ಕೋಟಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಬಿಜೆಪಿ ಮಾಜಿ ಮುಖಂಡ ಹಾಗೂ ಬಿಜೆಪಿಯ ಪ್ರಮುಖ ರಾಜ್ಯ ನಾಯಕರೊಬ್ಬರ ಆಪ್ತರ ವಿರುದ್ಧ ವಂಚನೆ ಆರೋಪ ಕೇಳಿ …

Read More »

ಸಿಯಾಚಿನ್​ನಲ್ಲಿ ಅಗ್ನಿವೀರ್​​​ ಅಕ್ಷಯ್​ ಹುತಾತ್ಮ: ಭಾರತೀಯ ಸೇನೆಯಿಂದ ಗೌರವ ಸಲ್ಲಿಕೆ

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್​ನ ಸಿಯಾಚಿನ್​ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ‘ಅಗ್ನಿವೀರ್​’​​​ ಗವಟೆ ಅಕ್ಷಯ್​ ಲಕ್ಷ್ಮಣ್​ ಎಂಬುವರು ಹುತಾತ್ಮರಾಗಿದ್ದಾರೆ. ಇವರು ಸೇನಾ ಕಾರ್ಯಾಚರಣೆಯಲ್ಲಿ ಪ್ರಾಣವನ್ನು ತ್ಯಾಗ ಮಾಡಿದ ಮೊದಲ ಅಗ್ನಿವೀರ್​ ಆಗಿದ್ದು, ಭಾರತೀಯ ಸೇನೆಯು ಭಾನುವಾರ ಅಂತಿಮ ಗೌರವ ಸಲ್ಲಿಸಿದೆ.     ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಹಿಮನದಿಯಲ್ಲಿ ಗವಟೆ ಅಕ್ಷಯ್​ ಲಕ್ಷ್ಮಣ್​ ಅವರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅಕ್ಷಯ್ ಮಹಾರಾಷ್ಟ್ರ ಮೂಲದವರಾಗಿದ್ದು, ಇವರ ಸಾವಿನ ಕುರಿತು ನಿಖರ ಮಾಹಿತಿ ತಕ್ಷಣಕ್ಕೆ …

Read More »