Breaking News

Laxminews 24x7

ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಜು.21ರಂದು ಪತ್ರಿಕಾ ದಿನಾಚರಣೆ‌.

ಬಾಗಲಕೋಟೆ: ನಗರದ ಬಿ.ವಿ.ವಿ. ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಜು. 21ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಲೇಜಿನ ಸಭಾಭವನದಲ್ಲಿ ಬೆಳಿಗ್ಗೆ 10ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ವಿಜಯ ಕರ್ನಾಟಕ ದಿನಪತ್ರಿಕೆಯ ಹುಬ್ಬಳ್ಳಿಯ ಕಚೇರಿಯ ಸ್ಥಾನಿಕ ಸಂಪಾದಕರಾದ ಬಂಡು ಕುಲಕರ್ಣಿ ಉದ್ಘಾಟಿಸಿ ಕೃತಕ ಬುದ್ಧಿಮತ್ತೆ ಮತ್ತು ಭವಿಷ್ಯದ ಪತ್ರಿಕೋದ್ಯಮ ವಿಷಯದ ಕುರಿತು ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಬಾಗಲಕೋಟೆಯ ಹಿರಿಯ ಪತ್ರಕರ್ತರಾದ ಸುಶೀಲೇಂದ್ರ ಕುಂದರಗಿ …

Read More »

ದಿಲ್ಲಿಯಲ್ಲಿ ಬಿಡಾರ ಹೂಡಿರುವ ಶಾಸಕರನ್ನ ಹೈಕಮಾಂಡ್ ಮರಳಿ ರಾಜ್ಯಕ್ಕೆ ಕಳಿಸಬೇಕು: ಯತ್ನಾಳ್

ವಿಜಯಪುರ: ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಿಡಾರ ಹೂಡಿರುವವರನ್ನ ಕಾಂಗ್ರೆಸ್‌ ಹೈಕಮಾಂಡ್‌ ಮರಳಿ ರಾಜ್ಯಕ್ಕೆ ಕಳುಹಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಒತ್ತಾಯಿಸಿದ್ದಾರೆ. ವಿಜಯಪುರದಲ್ಲಿ ( ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರದ ಬಗ್ಗೆ ಯಾವುದೇ ನಿರ್ಣಯ ತಗೆದುಕೊಳ್ಳದೇ, ಇವತ್ತು ಸಚಿವ ಸಂಪುಟಕ್ಕೋಸ್ಕರ ದೆಹಲಿಯಲ್ಲಿ ಹೋಗಿ ಕುಳಿತಿದ್ದಾರೆ. ಕನಿಷ್ಠ ಅಲ್ಲಿರುವವರಿಗಾದ್ರೂ ಜ್ಞಾನ ಬೇಕು ಎಂದು ಕುಟುಕಿದ್ದಾರೆ. ಒಂದು ಸರ್ಕಾರದ ಮುಖ್ಯಮಂತ್ರಿ , ಎಲ್ಲ ಮಂತ್ರಿಗಳು ದೆಹಲಿಯಲ್ಲಿ ಬಿಡಾರ ಹೂಡಿದ್ದಾರೆ. …

Read More »

ಹೊಳೆನರಸೀಪುರದಲ್ಲಿ ಇಂದು ಚೆನ್ನಮ್ಮ ಅಂತ್ಯಕ್ರಿಯೆ – ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನಲ್ಲಿ ವಿಧಿವಿಧಾನ

ಹಾಸನ: ಮಾಜಿಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ  ನಿಧನರಾಗಿದ್ದು, ಅವರ ಪಾರ್ಥಿವ ಶರೀರ ಹೊಳೆನರಸೀಪುರ  ಪಟ್ಟಣದ ಹೆಚ್.ಡಿ.ರೇವಣ್ಣ ಅವರ ನಿವಾಸಕ್ಕೆ ಆಗಮಿಸಿದೆ. ಇಂದು ಮಧ್ಯಾಹ್ನ 2 ಗಂಟೆ ನಂತರ ಹರದನಹಳ್ಳಿ ಬಳಿಯ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ  ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದ್ದು, ಈಗಾಗಲೇ ಸಿದ್ಧತೆಗಳು ಮುಗಿದಿವೆ. ಚೆನ್ನಮ್ಮ ದೊಡ್ಡಗೌಡರ ಕುಟುಂಬದ ಯಜಮಾನಿ. ಕರುಣೆಯ ಮೂರ್ತಿಯಾಗಿದ್ದ ಕ್ಷಮೆಯಾಧರಿತ್ರಿ. ಮನೆ ಬಾಗಿಲಿಗೆ ಬಂದವರಿಗೆ ಬರಿಗೈಯಲ್ಲಿ ಕಳುಹಿಸದ ಅನ್ನಪೂರ್ಣೇಶ್ವರಿ. ರಾಜಕೀಯ ಕುಟುಂಬದ ಸಿಮೀತ ಹೆಣ್ಣು ಮಗಳು ಆಗಿರಲಿಲ್ಲ. …

Read More »

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ – 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಅನುಮೋದನೆ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ  ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿರುವುದಾಗಿ ಸಿಎಂ ಡಿಕೆ ಶಿವಕುಮಾರ್‌  ತಿಳಿಸಿದರು. ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹತ್ವದ ನಿರ್ಧಾರಗಳನ್ನೂ ಪ್ರಕಟಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಿರುವುದಾಗಿ ಮಾಹಿತಿ ನೀಡಿದರು. ಜೊತೆಗೆ ಹಾಸ್ಟೆಲ್ ಗಳ ಬೆಡ್‌ಕಾಟ್ ಖರೀದಿಗೆ 30 ಕೋಟಿ ಕೊಡುವ ಬಗ್ಗೆ ತೀರ್ಮಾನ ಮಾಡಲಾಗಿದೆ. …

Read More »

ಗುಳೆ ಹೋಗುವುದನ್ನು ತಪ್ಪಿಸಲು ಜನರಿಗೆ ಉದ್ಯೋಗ ನೀಡಿ: ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಪರಮೇಶ್ವರ್ ಸೂಚನೆ

ಬೆಂಗಳೂರು: ಬರಗಾಲದ ಹಿನ್ನೆಲೆಯಲ್ಲಿ ಜನರು ಉದ್ಯೋಗಕ್ಕಾಗಿ ಗುಳೆ ಹೋಗುತ್ತಿದ್ದಾರೆ. ಎಲ್ಲ ಜಿಲ್ಲಾ ಪಂಚಾಯತ್ ಸಿಇಒಗಳು ವಿಬಿ -ಜಿ ರಾಮ್ ಜಿ ಯೋಜನೆಯಡಿ  ಕೂಡಲೇ ಜನರಿಗೆ ಉದ್ಯೋಗ ನೀಡಿ, ಗುಳೆ ಹೋಗುವುದನ್ನು ತಪ್ಪಿಸಲು ಕ್ರಮ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್  ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ‌‌.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ‘ಬರ ಪರಿಸ್ಥಿತಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಕೃಷಿ, ಚಟುವಟಿಕೆ ಹಾಗೂ ಉದ್ಯೋಗ …

Read More »

88 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಕುಸಿತ – ಜೀವಸಂಕುಲಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಡಿಸಿಎಂ ಪರಂ ಸೂಚನೆ

ಬೆಂಗಳೂರು: 88 ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಶೇ.4 ರಷ್ಟು ಕುಸಿದಿದೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ. ಮಳೆಯ ಪ್ರಮಾಣ ಕಡಿಮೆಯಾಗಿದೆ. ಜಲಾಶಯಗಳಲ್ಲಿ ನೀರಿನ ಮಟ್ಟ ತೀರಾ ಕುಸಿದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಗಡಾಯಿಸಬಹುದು. ಹಾಗಾಗಿ ಜೀವಸಂಕುಲಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಡಿಸಿಎಂ ಹಾಗೂ ಕಂದಾಯ ಸಚಿವರಾದ ಡಾ.ಜಿ ಪರಮೇಶ್ವರ್‌  ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಡಿ‌‌.ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ‘ಬರ ಪರಿಸ್ಥಿತಿ, ಕುಡಿಯುವ …

Read More »

ಆ್ಯಸಿಡ್ ಎರಚಿದ ಆರೋಪಿ ಕುಟುಂಬ ಬೀದಿಗೆ ಬರಬಾರದು, ಅವನನ್ನು ಬಿಟ್ಟುಬಿಡಿ ಎಂದಿದ್ದ ಚೆನ್ನಮ್ಮ

ಬೆಂಗಳೂರು: ಆ್ಯಸಿಡ್ ಎರಚಿದ ಆರೋಪಿ ಕುಟುಂಬ ಬೀದಿಗೆ ಬರಬಾರದು, ಅವನನ್ನು ಬಿಟ್ಟುಬಿಡುವಂತೆ ಚೆನ್ನಮ್ಮ  ಹೇಳಿದ್ದರು ಎಂದು ವಕೀಲ ಚಂದ್ರಮೌಳಿಯವರು ನೆನೆದು ಭಾವುಕರಾಗಿದ್ದಾರೆ. ಬೆಂಗಳೂರಿನಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಚೆನ್ನಮ್ಮ ಅವರನ್ನು ನೆನೆದು ಭಾವುಕರಾದರು. ಆ್ಯಸಿಡ್ ಎರಚಿದ ಆರೋಪಿಗೆ ಶಿಕ್ಷೆ ಆಗಬಾರದು ಎಂದು ಚೆನ್ನಮ್ಮ ಅವರು ದೇವೇಗೌಡರ ಬಳಿ ಮನವಿ ಮಾಡಿದ್ದರಂತೆ. ನನ್ನ ಪೂರ್ವಜನ್ಮದ ಪಾಪ ಈ ರೀತಿ ಆಗಿದೆ. ಇದರಿಂದ ಅವನ ಕುಟುಂಬ ಬೀದಿಗೆ ಬರಬಾರದು …

Read More »

ವರದಕ್ಷಿಣೆ ಕಿರುಕುಳ, ಮಕ್ಕಳಾಗಿಲ್ಲವೆಂಬ ಬೇಸರಕ್ಕೆ ಗೃಹಿಣಿ ನೇಣಿಗೆ ಶರಣು

ಬೆಂಗಳೂರು: ವರದಕ್ಷಿಣೆ ಕಿರುಕುಳ ಹಾಗೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಆಗಾಗ ಕೌಟುಂಬಿಕ ಕಲಹ ನಡೆಯುತ್ತಿದ್ದ ಹಿನ್ನೆಲೆ 25 ವರ್ಷದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೊರೆನಾಗಸಂದ್ರ ಗ್ರಾಮದಲ್ಲಿ ನಡೆದಿದೆ. 25 ವರ್ಷದ ಕಾವ್ಯ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮೂಲತಃ ತುಮಕೂರು ಜಿಲ್ಲೆಯ ಕೊರಟಗೆರೆ ನಿವಾಸಿಯಾಗಿದ್ದ ಕಾವ್ಯ, ಮದುವೆಯಾದ ಬಳಿಕ ಪತಿ ನವೀನ್ ಜೊತೆ ನೆಲಮಂಗಲದ ಸಮೀಪದ ಸೊಂಡೆಕೊಪ್ಪದಲ್ಲಿ ವಾಸವಾಗಿದ್ದಳು. ಮೂರು ವರ್ಷಗಳ ಹಿಂದೆ ಕುಟುಂಬದವರ ಒಪ್ಪಿಗೆಯೊಂದಿಗೆ …

Read More »

ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ಜು.20ರಂದು ಹೊಳೆನರಸೀಪುರ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ (ಜು.20) ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿಯಲ್ಲಿ ನೆರವೇರಲಿದೆ. ಈ ಹಿನ್ನೆಲೆ ಸೋಮವಾರ (ಜು.20) ಹೊಳೆನರಸೀಪುರ ತಾಲೂಕಿನ ಎಲ್ಲಾ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಹೊಳೆನರಸೀಪುರದ ಎಲ್ಲಾ ಅಂಗಡಿಗಳು ಸ್ವಯಂಪ್ರೇರಿತವಾಗಿ ಬಂದ್‌ ಮಾಡಿ ಗೌರವ ಸಲ್ಲಿಸಲು ವ್ಯಾಪಾರಸ್ಥರು ನಿರ್ಧರಿಸಿದ್ದಾರೆ. ಗಣ್ಯ ವ್ಯಕ್ತಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಹೊಳೆನರಸೀಪುರ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ …

Read More »

2 ಷರತ್ತುಗಳನ್ನ ಒಪ್ಪಿದ್ರೆ ಸೋನಂ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸ್ತಾರೆ: ಪತ್ನಿ ಗೀತಾಂಜಲಿ

ನವದೆಹಲಿ: ಸಾಮಾಜಿಕ, ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್  ತಮ್ಮ ಉಪವಾಸ ಸತ್ಯಾಗ್ರಹವನ್ನ ಸೋಮವಾರ (ಜುಲೈ 20) ಅಂತ್ಯಗೊಳಿಸಲು ಸಿದ್ಧರಾಗಿದ್ದಾರೆ. ಆದರೆ, ಅದಕ್ಕೂ ಮುನ್ನ 2 ಪ್ರಮುಖ ಷರತ್ತುಗಳನ್ನ ಈಡೇರಿಸಬೇಕೆಂದು ಅವರ ಪತ್ನಿ ಗೀತಾಂಜಲಿ ಆಂಗ್ಮೋ ತಿಳಿಸಿದರು. ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾ ವೇದಿಕೆಯಲ್ಲಿ ಮಾತನಾಡಿದ ಗೀತಾಂಜಲಿ, ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಶಿಕ್ಷಣ ಕ್ಷೇತ್ರದ ಜವಾಬ್ದಾರಿತನದ ಪ್ರಶ್ನೆಯನ್ನ ರಾಜಕೀಯ ಪಕ್ಷಗಳು ಪ್ರಸ್ತಾಪಿಸುವ ಭರವಸೆ ನೀಡಿದರೆ ಮಾತ್ರ ಸೋನಂ ವಾಂಗ್‌ಚುಕ್‌ ಉಪವಾಸ …

Read More »