ಚಿಕ್ಕೋಡಿ(ಬೆಳಗಾವಿ): ಕಬ್ಬಿಗೆ ಸೂಕ್ತ ದರ ನೀಡುವಂತೆ ಕಳೆದ ಏಳು ದಿನಗಳಿಂದ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಮಾತುಕತೆ ಮುಂದಾಗಿತ್ತು. ಅಂತೆಯೇ ಬುಧವಾರ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಸರ್ಕಾರದ ಪರವಾಗಿ ರೈತರ ಜೊತೆ ಸಭೆ ನಡೆಸಿದರೂ ಯಾವುದೇ ಸಂಧಾನ ಆಗಿಲ್ಲ. ಇದರಿಂದ ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಜೊತೆ ರೈತ ಮುಖಂಡ ಶಶಿಕಾಂತ ಗುರೂಜಿ ಮಾತನಾಡಿ, ಕಳೆದ ಏಳು …
Read More »ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್
ಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು ಕಟ್ಟಿ ಹಾಕಿ 200 ಗ್ರಾಂ ಚಿನ್ನಾಭರಣ ದೋಚಿದ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣೆಯ ವ್ಯಾಪ್ತಿಯ ನೆರಳೂರು ಗ್ರಾಮದಲ್ಲಿ ಬುಧವಾರ ನಡೆದಿದೆ. ನೆರಳೂರು ಗ್ರಾಮದ ನಿವಾಸಿಗಳಾದ ನಾಗವೇಣಿ ಮತ್ತು ರವಿಕುಮಾರ್ ಅವರ ಮನೆಗೆ ಆಹ್ವಾನ ಪತ್ರಿಕೆ ನೀಡಲು ಬಂದವರಂತೆ ನಟಿಸಿ ಕಳ್ಳರು ಕೃತ್ಯ ಎಸಗಿದ್ದಾರೆ. ರವಿಕುಮಾರ್ ಖಾಸಗಿ ಕಂಪನಿಯಲ್ಲಿನ ಉದ್ಯೋಗಿಯಾಗಿದ್ದಾರೆ. …
Read More »8 ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಹೋರಾಟ, ಸರ್ಕಾರಕ್ಕೆ ಸಂಜೆ 7 ಗಂಟೆಯ ಡೆಡ್‌ಲೈನ್
ಬೆಳಗಾವಿ, ನವೆಂಬರ್ 6: ಬೆಲೆ ನಿಗದಿಗೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ (Farmers Protest), ಹೋರಾಟದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ವಾರದಿಂದಲೂ ನಡೆಯುತ್ತಿರುವ ಪ್ರತಿಭಟನೆ ಇಂದು ಉಗ್ರ ರೂಪ ತಾಳುವ ಸಾಧ್ಯತೆ ಇದೆ. ಪ್ರತೀ ಟನ್ ಕಬ್ಬಿಗೆ 3500 ರೂಪಾಯಿ ಕೊಡಲೇ ಬೇಕು ಎಂದು ಪಟ್ಟು ಹಿಡಿದಿರೋ ಕಬ್ಬು ಬೆಳೆಗಾರರು, ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಒಂದು ವಾರದಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಅದೇ ಹೋರಾಟ ಇಂದು 8 …
Read More »ಅಪ್ರಾಪ್ತೆ ತಂಗಿಗೆ ಮಗು ಕರುಣಿಸಿ ಜೈಲುಪಾಲಾದ ಭೂಪ!
ಕೊಪ್ಪಳ, ನವೆಂಬರ್ 06: ನಿನ್ನನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಜೊತೆ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿರುವ ಆಘಾತಕಾರಿ ಘಟನೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗರ್ಭವತಿಯಾಗಿದ್ದ ಬಾಲಕಿ ವಾರದ ಹಿಂದೆ ಮಗುವಿಗೆ ಜನ್ಮ ನೀಡಿದ್ದು, 21 ವರ್ಷದ ಆರೋಪಿ ಅಣ್ಣನ ವಿರುದ್ಧ ಬಾಲಕಿ ದೂರಿನನ್ವಯ ಪೋಕ್ಸೋ ಕೇಸ್ ದಾಖಲಾಗಿದೆ. ಸದ್ಯ ಆರೋಪಿಯನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಘಟನೆ ಏನು? ಮನೆಯಲ್ಲಿ ಯಾರೂ …
Read More »ಬೆಂಗಳೂರು ಸಾಕಾಗಿದೆ, ಯಾರನ್ನೂ ಇಲ್ಲಿಗೆ ಕರೆಯಬೇಡಿ’ ಎಂಬ ರೆಡ್ಡಿಟ್‌ನಲ್ಲಿ ವೈರಲ್ ಆಗಿರುವ ಪೋಸ್ಟ್ ನಗರದ ಸಮಸ್ಯೆಗಳನ್ನು ಬಿಚ್ಚಿಟ್ಟಿದೆ.
ಬೆಂಗಳೂರು ಸಾಕಾಗಿದೆ, ಯಾರನ್ನು ಇಲ್ಲಿಗೆ ಬನ್ನಿ ಎಂದು ಕರೆಯಬೇಡಿ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೆಡ್ಡಿಟ್‌ನಲ್ಲಿ ಈ ಪೋಸ್ಟ್ ವೈರಲ್ ಆಗಿದ್ದು, ಇದಕ್ಕೊಂದು ಶೀರ್ಷಿಕೆಯನ್ನು ಕೂಡ ನೀಡಿದ್ದಾರೆ. “ಬೆಂಗಳೂರು ಸಾಕಾಗಿದೆ, ಜನರನ್ನು ಆಹ್ವಾನಿಸುವುದನ್ನು ನಿಲ್ಲಿಸುವ ಸಮಯ ಬಂದಿದೆ. ಮಿತಿ ಮೀರಿ ಬೆಳೆಯುತ್ತಿರುವ ನಗರ, ಹೆಚ್ಚುತ್ತಿರುವ ಬಾಡಿಗೆಗಳು, ಮೂಲಸೌಕರ್ಯದ ಕೊರತೆ, ಅಪರಾಧಗಳು, ಹೀಗೆ ಅನೇಕ ವಿಚಾರಗಳಿಂದ ಬೆಂಗಳೂರು ಬೇಡ ಎನ್ನುವ ನಿರ್ಧಾರಕ್ಕೆ ಬರಬೇಕಾದ ಸ್ಥಿತಿ ಬಂದಿದೆ.” ಎಂದು ಈ …
Read More »ತಿಂಗಳಿನಿಂದ ಪೊಲೀಸ್ ಠಾಣೆಯಲ್ಲೇ ನಿಂತಿದ್ದ ಕಾರಲ್ಲಿತ್ತು ಚಿನ್ನ, ಬೆಳ್ಳಿ ಮತ್ತು ಕಂತೆ ಕಂತೆ ಹಣ!
ತಿಂಗಳಿನಿಂದ ಪೊಲೀಸ್ ಠಾಣೆಯಲ್ಲೇ ನಿಂತಿದ್ದ ಕಾರಲ್ಲಿತ್ತು ಚಿನ್ನ, ಬೆಳ್ಳಿ ಮತ್ತು ಕಂತೆ ಕಂತೆ ಹಣ! ಚಿಕ್ಕಮಗಳೂರು, ನವೆಂಬರ್ 06: ಪೊಲೀಸರು ಸೀಜ್ ಮಾಡಿದ್ದ ಕಾರಣ ಒಂದು ತಿಂಗಳಿನಿಂದ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ. ಮಾಜಿ ಶಿಕ್ಷಣ ಸಚಿವ ದಿ .ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ ನೇಪಾಳಿ ಗ್ಯಾಂಗ್ನ ಸಾಂಗ್ಲಿ ಪೊಲೀಸರ ನೆರವು ಪಡೆದು ಬಂಧಿಸಲಾಗಿತ್ತು. …
Read More »ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ್ ನಲ್ಲಿ ಮಾಜಿ ಸಚಿವರು, ಶಾಸಕರು ಆದ ಹೆಚ್.ವೈ.ಮೇಟಿ ಅಂತಿಮ ನಮನ
ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ್ ನಲ್ಲಿ ಮಾಜಿ ಸಚಿವರು, ಶಾಸಕರು ಆದ ಹೆಚ್.ವೈ.ಮೇಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಬಳಿಕ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಮೇಟಿಯವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು, ಅಗಲಿದ ಆತ್ಮೀಯನಿಗೆ ಅಂತಿಮ ನಮನ ಸಲ್ಲಿಸಿದೆ. ಮೇಟಿಯವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬ ಸದಸ್ಯರು ಮತ್ತು ಬಂಧು ಬಳಗದವರಿಗೆ ಈ ದುಃಖ ಭರಿಸುವ ಶಕ್ತಿ ದೊರಕಲಿ.
Read More »ಧಾನಿ ನರೇಂದ್ರ ಮೋದಿ ನವೆಂಬರ್ 28ಕ್ಕೆ ಉಡುಪಿಗೆ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28ಕ್ಕೆ ಉಡುಪಿಗೆ ಬರಲಿದ್ದಾರೆ. ಕೃಷ್ಣಮಠಕ್ಕೆ ಭೇಟಿ ನೀಡುವ ಅವರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ಭೇಟಿಯ ಜೊತೆಗೆ ಉಡುಪಿಯ “ಕೃಷ್ಣ ಕಾರಿಡಾರ್” ಯೋಜನೆಯ ಕನಸು ಚಿಗುರಿದೆ. ನವೆಂಬರ್ 28ಕ್ಕೆ ಮೋದಿ ಉಡುಪಿ ಭೇಟಿ, ಭಕ್ತರನ್ನುದ್ದೇಶಿಸಿ ಮಾತು: ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಉಡುಪಿ ಅವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಪರ್ಯಾಯ ಶ್ರೀ ಪುತ್ತಿಗೆ ಮಠದವರು ಆಯೋಜಿಸಿರುವ ಲಕ್ಷ ಕಂಠ …
Read More »ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ ಭಾಲ್ಕಿ ತಾಲೂಕಿನ ನೀಲಂನಹಳ್ಳಿ ತಾಂಡಾ ಹತ್ತಿರದ ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ನೆರೆಯ ತೆಲಂಗಾಣದ ನಾರಾಯಣಖೇಡ್ ತಾಲೂಕಿನ ಜಗನ್ನಾಥಪುರದ ರಾಚಪ್ಪ ರಾಮಚಂದ್ರಪ್ಪ ಬಿರಾದಾರ್ (51), ಚಾಲಕ ನವನಾಥ ಶರಣಪ್ಪ (25), ಯಲ್ಲವಾಯಿ ಗ್ರಾಮದ ನಾಗರಾಜು ಇಸ್ಟಯ್ಯಾ (38) ಸ್ಥಳದಲ್ಲಿಯೇ ಮೃತಪಟ್ಟರೆ, ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ಜಗನ್ನಾಥಪುರಿಯ ಕಾಶಿನಾಥ ರಾಮಶೆಟ್ಟಿ (62) …
Read More »ಖಾಸಗಿ ಜಮೀನಿನಲ್ಲಿ ಮಾಲೀಕರ ಅನುಮತಿ ಇಲ್ಲದೆ ಶವ ಸಂಸ್ಕಾರ ಮಾಡಬಹುದೇ: ಸರ್ಕಾರದ ನಿಲುವು ಕೇಳಿದ ಹೈಕೋರ್ಟ್
ಬೆಂಗಳೂರು: ಖಾಸಗಿ ಜಮೀನಿನಲ್ಲಿ ಮಾಲೀಕರ ಪರವಾನಿಗೆಯಿಲ್ಲದೆ ಶವ ಸಂಸ್ಕಾರ ಮಾಡಬಹುದೇ ಎಂಬುದರ ಕುರಿತು ತನ್ನ ನಿಲುವನ್ನು ತಿಳಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ತಮ್ಮ ಒಪ್ಪಿಗೆಯಿಲ್ಲದೇ ಸೊಸೆಯ ಶವವನ್ನು ಮನೆಯ ಬಳಿ ಹೂಳಲಾಗಿದೆ. ಹಾಗಾಗಿ ಸಮಾಧಿಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಬಂಗಾರಪೇಟೆಯ ತುರಾಂಡಹಳ್ಳಿಯ ಹೆಚ್. ಗೋಪಾಲಗೌಡ ಎಂಬುವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕ ಸದಸ್ಯಪೀಠ ಈ ನಿರ್ದೇಶನ …
Read More »
Laxmi News 24×7