Breaking News

Laxminews 24x7

 ಸಿಎಂ ಕಚೇರಿಯಲ್ಲಿ ಸಣ್ಣ ಹುದ್ದೆಗೆ 30 ಲಕ್ಷ ರೂ., ದೊಡ್ಡ ಹುದ್ದೆಗೆ ಕೋಟಿ ಕೋಟಿ ಹಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸಿಎಂ ಕಚೇರಿಯಲ್ಲಿ ಸಣ್ಣ ಹುದ್ದೆಗೆ 30 ಲಕ್ಷ ರೂ., ದೊಡ್ಡ ಹುದ್ದೆಗೆ ಕೋಟಿ ಕೋಟಿ ಹಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು. ಬೆಂಗಳೂರು: ಸಿಎಂ ಕಚೇರಿಯಲ್ಲಿ ಸಣ್ಣ ಹುದ್ದೆಗೆ 30 ಲಕ್ಷ ರೂ., ದೊಡ್ಡ ಹುದ್ದೆಗೆ ಕೋಟಿ ಕೋಟಿ ಹಣ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು. ಭ್ರಷ್ಟಾಚಾರ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಅವರ …

Read More »

ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಹಿಂಪಡೆದರೆ ಸಾಲದು ನಮ್ಮ ಕೃಷಿ ಮಾರಾಟ ವ್ಯವಸ್ಥೆ ಸದೃಢಗೊಳಿಸಿ ರೈತ ಸ್ನೇಹಿ ಮಾಡುವಂತೆ ಕೃಷಿ ಆರ್ಥಿಕ ತಜ್ಞ ಡಾ ಪ್ರಕಾಶ ಕಮ್ಮರಡಿ ಒತ್ತಾಯಿ

ಬೆಳಗಾವಿ : ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಹಿಂಪಡೆದರೆ ಸಾಲದು ನಮ್ಮ ಕೃಷಿ ಮಾರಾಟ ವ್ಯವಸ್ಥೆ ಸದೃಢಗೊಳಿಸಿ ರೈತ ಸ್ನೇಹಿ ಮಾಡುವಂತೆ ಕೃಷಿ ಆರ್ಥಿಕ ತಜ್ಞ ಡಾ ಪ್ರಕಾಶ ಕಮ್ಮರಡಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಪಿಎಂಸಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ‌ ಹಿಂದಿನ ಕೊರೊನಾ ವೇಳೆ ಬಿಜೆಪಿ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಅವಶ್ಯಕತೆ ಇರಲಿಲ್ಲ. ಎಪಿಎಂಸಿ ಕಾಯ್ದೆ ವ್ಯಾಪ್ತಿಗೆ ಬರುವ ಉತ್ಪನ್ನಗಳ ಮಾರಾಟ ಈ ಪ್ರಾಂಗಣದಲ್ಲಿ ನಡೆಯಬೇಕು. …

Read More »

12ನೇ ಶತಮಾನದ ಬಸವಾದಿ ಶರಣರ ವಚನಗಳಿಗೆ ಪುನರ್ಜನ್ಮ ಕೊಟ್ಟಿದ್ದು ವಚನ ಗುಮ್ಮಟ ಹಳಕಟ್ಟಿಯವರು: ಡಾ ಸಿ ಕೆ ನಾವಲಗಿ

ಬೆಳಗಾವಿ : 12ನೇ ಶತಮಾನದ ಕಲ್ಯಾಣ ಕ್ರಾಂತಿಯ ನಂತರ ಚದುರಿ ಹೋಗಿದ್ದ ವಚನಗಳನ್ನು ಸಂಗ್ರಹಿಸಿ, ವಚನಗಳಿಗೆ ಪುನರ್ಜನ್ಮ ಕೊಟ್ಟಿದ್ದು ವಚನ ಪಿತಾಮಹ ಡಾ ಫ ಗು ಹಳಕಟ್ಟಿಯವರು. ಇವರು 20ನೇ ಶತಮಾನದ ವಚನ ಸಾಹಿತ್ಯದ ಶಿಖರ ಸೂರ್ಯ ಎಂದು ಖ್ಯಾತ ಸಾಹಿತಿ ಡಾ ಸಿ ಕೆ ನಾವಲಗಿ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ …

Read More »

ಗುರು ಪೂರ್ಣಿಮೆ ಹಾಗೂ ದಿವ್ಯ ಸತ್ಸಂಗ ಕಾರ್ಯಕ್ರಮದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸನ್ಮಾನ

ಬೆಳಗಾವಿ: ಮಂತ್ರಿಯಾದ ನಂತರ ಇಡೀ ರಾಜ್ಯ ಮತ್ತು ಜಿಲ್ಲೆಯಿಂದ ಜನ ಭೇಟಿಯಾಗಲು ಬರುತ್ತಿದ್ದಾರೆ. ಆದರೆ ನನ್ನ ಕ್ಷೇತ್ರದ ಜನರ ಕಷ್ಟ ಸುಖ ಹಂಚಿಕೊಳ್ಳಲು ಅವರಿಗೆ ಸಮಯ ಕೊಡಲು ಸಾಧ್ಯವಾಗುತ್ತಿಲ್ಲ. ಇದು ನನಗೆ ನಿಜವಾಗಲೂ ದೊಡ್ಡ ತಲೆ‌ನೋವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೇಸರ ಹೊರಹಾಕಿದ್ದಾರೆ. ಭಾನುವಾರ ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖಾ ಮಠದಲ್ಲಿ ನಡೆದ 68ನೇ ಮಾಸಿಕ ಸುವಿಚಾರ ಚಿಂತನೆ ಅಂಗವಾಗಿ …

Read More »

ಬಿಟ್ ಕಾಯಿನ್ ಹಗರಣ: ತನಿಖೆಗೆ ಎಡಿಜಿಪಿ ಮನೀಶ್ ಕರ್ಬಿಕರ್ ನೇತೃತ್ವದ ಎಸ್‌ಐಟಿ ತಂಡ ರಚನೆ

ಬೆಂಗಳೂರು: ಇಡೀ ರಾಜ್ಯ ಅಷ್ಟೇ ಅಲ್ಲದೆ ರಾಷ್ಟ್ರ ಮಟ್ಟದಲ್ಲೂ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣ ಮತ್ತೆ ಮುನ್ನೆಲೆಗೆ ಬಂದಿದೆ. ಸರ್ಕಾರ ಮೊದಲೇ ತಿಳಿಸಿದಂತೆ ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಎಸ್‌ಐಟಿ (ವಿಶೇಷ ತನಿಖಾ ತಂಡ)ವನ್ನ ರಚನೆ ಮಾಡಿದೆ. ಅದರ ಮುಖ್ಯಸ್ಥರನ್ನನಾಗಿ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ತಂಡದಲ್ಲಿ ಡಿಐಜಿ ವಂಶಿಕೃಷ್ಣ, ಡಿಸಿಪಿ ಅನೂಪ್ ಶೆಟ್ಟಿ, ಎಸ್​ಪಿ ಶರತ್ ಸಹ ಇರಲಿದ್ದಾರೆ. ತಂಡ ರಚನೆಯಾಗುತ್ತಿದ್ದಂತೆ ಸಿಐಡಿಯಲ್ಲಿ …

Read More »

ಸಂಸದ ಪ್ರತಾಪ್ ಸಿಂಹಗೆ ನಿಂದಿಸಿದ ಪ್ರಕರಣ ; ಪೊಲೀಸ್ ಪೇದೆ ಸಸ್ಪೆಂಡ್ ಮಾಡಿ ಕಮಿಷನರ್ ಆದೇಶ..!

ಸಂಸದ ಪ್ರತಾಪ್ ಸಿಂಹಗೆ ನಿಂದಿಸಿದ ಪ್ರಕರಣ ; ಪೊಲೀಸ್ ಪೇದೆ ಸಸ್ಪೆಂಡ್ ಮಾಡಿ ಕಮಿಷನರ್ ಆದೇಶ..! ಸಾಮಾಜಿಕ ಜಾಲತಾಣದಲ್ಲಿ ಸಂಸದ ಪ್ರತಾಪಸಿಂಹ ಅವರನ್ನು ನಿಂದನೆ ಮಾಡಿದ್ದ ಪೊಲೀಸ್ ಪೇದೆಯನ್ನು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಸೇವೆಯಿಂದ ಅಮಾನತು ಮಾಡಿ ಆದೇಶಿಸಿದ್ದಾರೆ. ಮೈಸೂರಿನ ವಿವಿ ಪುರಂ ಸಂಚಾರ ವಿಭಾಗದಲ್ಲಿ ಪೇದೆಯಾಗಿರುವ ಬಿ. ಪ್ರಕಾಶ್ ಫೇಸ್ ಬುಕ್ ನಲ್ಲಿ ಸಂಸದ ಪ್ರತಾಪಸಿಂಹ ವಿರುದ್ದ ಕಾಮೆಂಟ್ಸ್ ಮಾಡಿ ನಿಂದಿಸಿದ್ಷರು. ಇದರ ವಿರುದ್ದ …

Read More »

ವ್ಯವಸ್ಥೆಯಲ್ಲಿ ಸುಧಾರಣೆ ನಮ್ಮಿಂದ ಮಾತ್ರ ಸಾಧ್ಯ, ಯಾರೂ ಒಳ್ಳೆಯವರಲ್ಲ ಎಂದಾದರೆ ನೋಟಾಕ್ಕೆ ಮತ ಹಾಕಬೇಕು.: ಸಂತೋಷ್ ಹೆಗ್ಡೆ

ಮಂಡ್ಯ: ಪ್ರಜಾಪ್ರಭುತ್ವದಲ್ಲಿ ರಾಜಕೀಯದ ಅಗತ್ಯತೆ ಬಹಳಷ್ಟು ಇದೆ. ಅದರೆ ರಾಜಕೀಯ ವೃತ್ತಿಯಾಗಬಾರದು, ಸೇವೆಯಾಗಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದರು. ಕನ್ನಡ ಸೇನೆ ಕರ್ನಾಟಕ ವತಿಯಿಂದ ನಗರದ ಗಾಂಧಿ ಭವನದಲ್ಲಿ ಭಾನುವಾರ ನಡೆದ ಪ್ರಸ್ತುತ ರಾಜಕೀಯದಲ್ಲಿ ಯುವಜನರ ಪಾತ್ರ ಕುರಿತ ವಿಚಾರಣ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಎಸಿಬಿಯನ್ನು ಜಾರಿಗೆ ತಂದು ಲೋಕಾಯುಕ್ತಕ್ಕೆ ಇದ್ದ ಎರಡು ಅಧಿಕಾರಗಳಲ್ಲಿ ಒಂದು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವ ಅಧಿಕಾರವನ್ನು ಕಿತ್ತುಕೊಂಡು …

Read More »

ಪಂಚ ಗ್ಯಾರಂಟಿಗಳಿಗೆ ಅಂದಾಜು 30,000 – 40,000 ಕೋಟಿ ರೂ. ಬೇಕಾಗಬಹುದು?: ಆರ್ಥಿಕ ಇಲಾಖೆ

ಬೆಂಗಳೂರು: 2023-24ನೇ ಸಾಲಿನ ಬಜೆಟ್ (ಆಯವ್ಯಯ) ಮಂಡನೆಗೆ (ಜುಲೈ 7) ಸಿಎಂ ಸಿದ್ದರಾಮಯ್ಯ ಅಂತಿಮ ಸ್ಪರ್ಶ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಹಣಕಾಸು ವರ್ಷದ ಉಳಿದ ಒಂಬತ್ತು ತಿಂಗಳಿಗೆ ಮಂಡಿಸುವ ಈ ಬಜೆಟ್​ನಲ್ಲಿ ಒಂದಷ್ಟು ಹೊರೆಗಳು ಸವಾಲಾಗಿವೆ. ಈ ಬಾರಿಯ ಬಜೆಟ್​ನಲ್ಲಿ ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಕಡಿಮೆ. ಬೊಮ್ಮಾಯಿ ಸರ್ಕಾರ ಮಂಡಿಸಿದ್ದ ಲೇಖಾನುದಾನದಲ್ಲಿ ಮೀಸಲಿರಿಸಿದ ಅನುದಾನಗಳನ್ನೇ ಪೂರ್ಣಪ್ರಮಾಣದ ಬಜೆಟ್​ನಲ್ಲಿ ಮರು ಹಂಚಿಕೆ ಮಾಡುವ ಸಂಭವ ಹೆಚ್ಚು. ಅಂದಾಜು 3.35 ಲಕ್ಷ …

Read More »

ಇಂದಿನಿಂದ 10 ದಿನಗಳ ಕಾಲ ರಾಜ್ಯ ವಿಧಾನಸಭೆ ಅಧಿವೇಶನ

ಬೆಂಗಳೂರು: ಇಂದಿನಿಂದ ಅಂದರೇ ಜುಲೈ 3 ರಿಂದ 10 ದಿನಗಳ ಕಾಲ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ.‌ ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಹೊಸ ಕಾಂಗ್ರೆಸ್ ಸರ್ಕಾರದ ಮುನ್ನೋಟವನ್ನು ಮುಂದಿಡಲಿದ್ದಾರೆ. ಮಂಗಳವಾರದಿಂದ ಉಭಯ ಸದನ ಆಡಳಿತಾರೂಢ ಹಾಗೂ ಪ್ರತಿಪಕ್ಷಗಳ ನಡುವಿನ ಸದನ ಕದನಕ್ಕೆ ಸಾಕ್ಷಿಯಾಗಲಿದೆ. 10 ದಿನಗಳ ಕಾಲ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನ ನಡೆಯಲಿದ್ದು, ಇಂದು ಜಂಟಿ ಅಧಿವೇಶನ …

Read More »

ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆ ಲಭ್ಯ: ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ

ಬೆಂಗಳೂರು: ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ. ಇದೇ ವೇಳೆ ಹಿಂಬಾಕಿಯನ್ನು ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ.   ಜುಲೈ 25ರೊಳಗೆ ಯೋಜನೆಗೆ ನೋಂದಾಯಿಸಿಕೊಂಡಲ್ಲಿ ಆಗಸ್ಟ್ ತಿಂಗಳ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ. ಹಾಗೆಯೇ, ಜುಲೈ 25 ರಿಂದ ಆಗಸ್ಟ್ 25ರೊಳಗೆ ನೋಂದಾಯಿಸಿದಲ್ಲಿ ಸೆಪ್ಟೆಂಬರ್ ತಿಂಗಳ ಬಿಲ್​ನಲ್ಲಿ ಯೋಜನೆಯ ಪ್ರಯೋಜನ ಸಿಗಲಿದೆ. (ಬಿಲ್ಲಿಂಗ್ ಅವಧಿ …

Read More »