ಬೆಂಗಳೂರು: ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ, ವಿದ್ಯಾರ್ಥಿ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ನಡೆಸಿದ ತನಿಖೆ ವೇಳೆ ಶಾಲೆಯ ಪ್ರಾಂಶುಪಾಲರು ಹಾಗೂ ಶಿಕ್ಷಕರ ಹಲ್ಲೆ ನಡೆಸಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿ ತಂದೆ, ಚಿಕ್ಕಬಸ್ತಿಯ ರಾಮಸಂದ್ರ ನಿವಾಸಿ ಮಹೇಶ್ ಕುಮಾರ್ ಎಂಬುವರು ನೀಡಿದ ದೂರಿನ ಮೇರೆಗೆ ಜ್ಞಾನಭಾರತಿ ಠಾಣೆ ಪೊಲೀಸರು ಮರಿಯಪ್ಪನಪಾಳ್ಯದಲ್ಲಿನ ಸೇಂಟ್ ಫಿಲೋಮಿನ ಶಾಲೆ ಆಡಳಿತ ಮಂಡಳಿ ಸಂಸ್ಥಾಪಕ ಕಾರ್ಯದರ್ಶಿ ರಂಗಸ್ವಾಮಿ, ಪ್ರಾಂಶುಪಾಲ …
Read More »ಬೆಳಗಾವಿಯಲ್ಲಿ ಸಹೋದರರ ಭೀಕರ ಕೊಲೆ
ಬೆಳಗಾವಿ: ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದ ಕ್ಷುಲ್ಲಕ ಕಾರಣದ ಜಗಳವೊಂದು ಇಬ್ಬರು ಸಹೋದರರ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ. ಲಗಮಪ್ಪ ರಾಮಣ್ಣವರ (32) ಹಾಗೂ ಬಸಪ್ಪ ರಾಮಣ್ಣವರ (38) ಕೊಲೆಯಾದ ದುರ್ದೈವಿ ಸಹೋದರರು. ಮೃತ ಸಹೋದರರು ಹಾಗೂ ಅವರ ಸಂಬಂಧಿಕರ ನಡುವೆ ಕೌಟುಂಬಿಕ ವಿಚಾರವಾಗಿ ಜಗಳ ಆರಂಭವಾಗಿದೆ. ಮಾತಿನ ಚಕಮಕಿಯಾಗಿದ್ದ ವಾಗ್ವಾದ, ಕ್ಷಣಾರ್ಧದಲ್ಲೇ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ವೇಳೆ ಉದ್ರಿಕ್ತಗೊಂಡ …
Read More »ಅರಿವು ಮೂಡಿಸಿ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ಪಿಆರ್‌ಗಳ ಪಾತ್ರ ಪ್ರಮುಖ: ಡಾ. ಕರ್ನಲ್ ಎಂ ದಯಾನಂದ
ಬೆಳಗಾವಿ: ಆಸ್ಪತ್ರೆಯಲ್ಲಿ ಕೆಲಸ ಮಾಡುವಾಗ ಹಲವಾರು ಸಮಸ್ಯೆಗಳು, ಒತ್ತಡಗಳು, ಅಸಮಾಧಾನಗಳು, ಬೇಡಿಕೆಗಳಿರುತ್ತವೆ. ಆದರೆ ಅವುಗಳನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಜನಸಂಪರ್ಕ ಅಧಿಕಾರಿಗಳು ನಿಸ್ಸಿಮರು. ಅವರು ಆಸ್ಪತ್ರೆಯಲ್ಲಿದ್ದರೂ, ಇಲ್ಲದಿದ್ದರೂ ಕೆಲಸದ ಮಹತ್ವ ಒಂದೇ ಆಗಿರುತ್ತದೆ. ಆಸ್ಪತ್ರೆಗಳ ಬಗ್ಗೆ ಜನರ ಮನೋಭಾವ ಸ್ವಲ್ಪ ನಕಾರಾತ್ಮಕವಾಗಿದ್ದು, ಹಣ ಹೆಚ್ಚು ಖರ್ಚಾಗುತ್ತದೆ ಎಂಬ ಭಾವನೆ. ಅದನ್ನು ಹೋಗಲಾಡಿಸಿ ಜನರಿಗೆ ಅರಿವು ಮೂಡಿಸಿ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ಜನಸಂಪರ್ಕ ಅಧಿಕಾರಿಗಳು ಪ್ರಮುಖ ಪಾತ್ರವಹಿಸುತ್ತಾರೆ ಎಂದು ಕೆಎಲ್‌ಇ ಸಂಸ್ಥೆಯ ಡಾ. …
Read More »ಪಿಜಿ ಕೋರ್ಸ್‌ಗಳ ಪ್ರವೇಶ ದಿನಾಂಕ ವಿಸ್ತರಿಸಿದ ಆರ್‌ಸಿಯು
ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿ ಮುಖ್ಯ ಆವರಣದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರ ವಿಜಯಪುರ ಹಾಗೂ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿನ ಸಂಯೋಜಿತ ಮಹಾವಿದ್ಯಾಲಯಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿರುವ ಸ್ನಾತಕೋತ್ತರ ಕೋರ್ಸುಗಳ ವ್ಯಾಸಂಗಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಯು.ಯು.ಸಿ.ಎಂ.ಎಸ್ ತಂತ್ರಾಂಶ (UUCMS) https://uucms.karnataka.gov.in. ಮೂಲಕ ಅರ್ಜಿಗಳನ್ನು ದಿನಾಂಕ: 01-07-2026 ರಿಂದ ದಿನಾಂಕ: 20-07-2026. ಆಹ್ವಾನಿಸಲಾಗಿತ್ತು. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಸ್ನಾತಕೋತ್ತರ ಪ್ರವೇಶಾತಿ ಅರ್ಜಿ ಸಲ್ಲಿಸುವ ದಿನಾಂಕವನ್ನು ದಿನಾಂಕ: 21-07-2026 ರಿಂದ 26-07-2026ರ ವರೆಗೆ …
Read More »ದಾಖಲೆ ತಿದ್ದುಪಡಿ ಮಾಡಿ ರೈತರಿಗೆ ಹಸ್ತಾಂತರಿಸಿದ ನೀರಾವರಿ ನಿಗಮ: ರೈತರ ಹೋರಾಟಕ್ಕೆ ಮಣಿದ ಅಧಿಕಾರಿಗಳು
ಬೆಳಗಾವಿ: ಇಲ್ಲಿನ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿ ಎದುರು ನಾಲ್ಕು ದಿನಗಳಿಂದ ನಡೆಸುತ್ತಿದ್ದ ಹುಕ್ಕೇರಿ ತಾಲೂಕಿನ ಮಾಸ್ತಿಹೊಳಿ ಗ್ರಾಮದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಶುಕ್ರವಾರ ನೀರಾವರಿ ಇಲಾಖೆಯ ಅಧಿಕಾರಿಗಳು ಭರವಸೆ ನೀಡುವುದರೊಂದಿಗೆ ಅಂತ್ಯಕಂಡಿದೆ. ಹಿಡಕಲ್ ಜಲಾಶಯ ಯೋಜನೆಯಿಂದ ಭೂಮಿ ಕಳೆದುಕೊಂಡ 24 ಗ್ರಾಮಗಳ ಸಂತ್ರಸ್ತ ರೈತರು ನ್ಯಾಯಯುತ ಪರಿಹಾರ ಹಾಗೂ ದಾಖಲೆಗಳಲ್ಲಿನ ಲೋಪದೋಷಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಜಾನುವಾರುಗಳೊಂದಿಗೆ ಕರ್ನಾಟಕ ನೀರಾವರಿ ನಿಗಮದ …
Read More »ಬಿ.ವಿ.ವಿ.ಸಂಘದಲ್ಲಿ ಬಿವಿವಿಎಸ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ಮಹಾವಿದ್ಯಾಲಯಕ್ಕೆ ವಿಶ್ವವಿದ್ಯಾಲಯದ ಪರಿಶೀಲನಾ ಸಮಿತಿ ಭೇಟಿ
ಬಾಗಲಕೋಟೆ: ನೂತನವಾಗಿ ಆರಂಭಗೊAಡಿರುವ ಬಿವಿವಿ ಸಂಘದ ಸಂಗೀತ ಮತ್ತು ಪ್ರದರ್ಶಕ ಕಲೆಗಳ ಮಹಾವಿದ್ಯಾಲಯಕ್ಕೆ ವಿವಿಧ ಕೋರ್ಸುಗಳಿಗೆ ಅನುಮೋದನೆ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಪರಿಶೀಲನಾ ಸಮಿತಿಯು ಮಹಾವಿದ್ಯಾಲಯಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪರಿಶೀಲನಾ ಸಮಿತಿಯ ಸದಸ್ಯರು ಪಂ. ಪುಟ್ಟರಾಜ ಗವಾಯಿ ಹಾಗೂ ಹಾನಗಲ್ ಕುಮಾರೇಶ್ವರ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಬಳಿಕ ಮಹಾವಿದ್ಯಾಲಯದ ಮೂಲಸೌಕರ್ಯ, ಗಾಯನ, …
Read More »ಆಷಾಢ ಮಾಸದ ಮೊದಲ ಶುಕ್ರವಾರ – ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ, ನಾಗಲಕ್ಷ್ಮೀಯಾದ ತಾಯಿ
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಆವರಿಸಿದೆ. ಇಡೀ ಬೆಟ್ಟವನ್ನು ವಿಶೇಷ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಮುಂಜಾನೆಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನಡೆಯುತ್ತಿದೆ. ತಾಯಿ ಚಾಮುಂಡಿ ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದು, ಉತ್ಸವ ಮೂರ್ತಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ದೇವಿಯ ದರ್ಶನಕ್ಕೆ ಬೆಳಗಿನ ಜಾವದಿಂದಲೇ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಈ ಬಾರಿ 2 ಸಾವಿರ ರೂ. ಮೌಲ್ಯದ ಟಿಕೆಟ್ ಪಡೆದವರಿಗೆ ನೇರ …
Read More »ರಾಜ್ಯದಲ್ಲಿ ಮಳೆ ಕೊರತೆ – ಸಚಿವಾಲಯದ ಎಲ್ಲಾ ಕಚೇರಿಗಳಲ್ಲಿ ನೀರು, ವಿದ್ಯುತ್ ಮಿತ ಬಳಕೆಗೆ ಸಿಎಸ್ ಆದೇಶ
ಬೆಂಗಳೂರು: ನಿರಂತರ ಮಳೆ ಕೊರತೆ ಹಿನ್ನೆಲೆ ರಾಜ್ಯದಲ್ಲಿರುವ ಎಲ್ಲಾ ಸಚಿವಾಲಯದ ಕಚೇರಿಗಳಲ್ಲಿ ನೀರು ಹಾಗೂ ವಿದ್ಯುತ್ ಅನ್ನು ಮಿತವಾಗಿ ಬಳಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ಪ್ರಸ್ತುತ ಸಂಭವಿಸುತ್ತಿರುವ ಎಲ್‌ನೊ ಹವಾಮಾನ ವೈಪರೀತ್ಯದ ಪರಿಣಾಮದಿಂದ ವಿಶ್ವದಾದ್ಯಂತ ಸಾಮಾನ್ಯ ಹವಾಮಾನ ಮಾದರಿಗಳನ್ನ ವ್ಯತ್ಯಯಗೊಳಿಸುತ್ತಿದ್ದು, ದೇಶದಲ್ಲಿ ಅತಿವೃಷ್ಟಿ, ಪ್ರವಾಹ ಮತ್ತು …
Read More »ಜು.17 ರಂದು ಪ್ರಧಾನಿ ಮೋದಿಯಿಂದ ಕರ್ನಾಟಕದ 4 ‘ಅಮೃತ ಭಾರತ್ʼ ನಿಲ್ದಾಣಗಳ ಉದ್ಘಾಟನೆ
ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯು ನಿಲ್ದಾಣಗಳು, ರೈಲುಗಳು, ಹಳಿಗಳು ಹಾಗೂ ಸಿಗ್ನಲಿಂಗ್ ವ್ಯವಸ್ಥೆಗಳನ್ನು ಜಾಗತಿಕ ಮಾನದಂಡಗಳಿಗೆ ತಕ್ಕಂತೆ ಆಧುನೀಕರಿಸುವ ದಿಸೆಯಲ್ಲಿ ಮಹತ್ವದ ಪರಿವರ್ತನೆಯಲ್ಲಿ ಸಾಗುತ್ತಿದೆ. ಇದರ ಮೂಲಕ ಪ್ರಯಾಣಿಕರ ಅನುಭವ ಮತ್ತು ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸುವತ್ತ ಗಮನ ಹರಿಸಲಾಗುತ್ತಿದೆ. ಇದರ ಭಾಗವಾಗಿ ಕರ್ನಾಟಕದ 4 ʻಅಮೃತ ಭಾರತ್ʼ ನಿಲ್ದಾಣಗಳನ್ನು ಪ್ರಧಾನಿ ಮೋದಿ ಉದ್ಘಾಟಿಸುತ್ತಿದ್ದಾರೆ. ‘ಅಮೃತ ಭಾರತ್ ನಿಲ್ದಾಣ ಯೋಜನೆ’ (ABSS)ಯಡಿ, ಪ್ರಧಾನಿ ನರೇಂದ್ರ ಮೋದಿ ಅವರು, ಶುಕ್ರವಾರ (ಜು.17) ದೇಶಾದ್ಯಂತ ನವೀಕರಿಸಲಾದ …
Read More »120 ಸ್ಥಾನ ಪಡೆಯೋ ಕಾಲವೂ ಬರುತ್ತೆ, ಅಲ್ಲಿವರೆಗೂ ನಾನೇನು ಸಾಯಲ್ಲ: ಹೆಚ್‌ಡಿಕೆ ತಿರುಗೇಟು
ಬೆಂಗಳೂರು: ಜೆಡಿಎಸ್ 120 ಸ್ಥಾನ ಪಡೆಯುವ ಕಾಲವೂ ಬರುತ್ತದೆ ಅಂತ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಮಾಜಿ ಸಚಿವ ಚೆಲುವರಾಯಸ್ವಾಮಿ ಅವರಿಗೆ ತಿರುಗೇಟು ಕೊಟ್ಟರು. ಕುಮಾರಸ್ವಾಮಿ 120 ಸ್ಥಾನ ಗೆದ್ದು ತೋರಿಸಲಿ ಎಂಬ ಚೆಲುವರಾಯಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 20 ವರ್ಷಗಳಿಂದ ಟೀಕೆ ಮಾಡ್ತಾನೇ ಇದ್ದಾರೆ. ನನ್ಮ ವಿರುದ್ಧ ವಿಷ ಕಾರುತ್ತಾರೆ. ನೋಡೋಣ 120 ಸೀಟು ಗೆದ್ದು ತೋರಿಸೋ ದಿನ ಬರುತ್ತದೆ. ಅಲ್ಲಿವರೆಗೂ ನಾನೇನು ಸಾಯಲ್ಲ ಎಂದರು. …
Read More »
Laxmi News 24×7