Breaking News

Laxminews 24x7

ಈ ದೇಶವನ್ನು ದಿವಾಳಿ ಮಾಡಿದ್ದು ಮೋದಿ ಸರ್ಕಾರವೇ ಹೊರತು‌ ನಾವು ಯಾರೂ ಅಲ್ಲ:

ಕಲಬುರಗಿ: ಐದು ಗ್ಯಾರಂಟಿ ಕೊಟ್ಟರೆ ಕರ್ನಾಟಕ ದಿವಾಳಿ ಆಗುತ್ತೆ ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಆದರೆ ಈ ದೇಶವನ್ನು ದಿವಾಳಿ ಮಾಡಿದ್ದು ಮೋದಿ ಸರ್ಕಾರವೇ ಹೊರತು‌ ನಾವು ಯಾರೂ ಅಲ್ಲ. ಈಗಾಗಲೇ ಉಚಿತ‌ ಅಕ್ಕಿ, ಶಕ್ತಿ ಯೋಜನೆ, ಇಂದು ಗೃಹಜ್ಯೋತಿ ಯೋಜನೆ ಜಾರಿಗೆ ತಂದಿದ್ದೇವೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸಿ ಕರ್ನಾಟಕ‌ದ ಸಮಗ್ರ ಅಭಿವೃದ್ಧಿ ಮಾಡಿ ಮಾದರಿಯಾಗುತ್ತೇವೆ.‌ ಬಿಜೆಪಿಯವರೇ ತಾಕತ್ತಿದ್ದರೆ ನಮ್ಮ ಗ್ಯಾರಂಟಿಗಳನ್ನು ದೇಶದ …

Read More »

ಆಸ್ತಿಗಾಗಿ ಪತ್ನಿಯೊಂದಿಗೆ ಸೇರಿ ಹೆತ್ತಮ್ಮನನ್ನೇ ಕೊಂದ ಪುತ್ರ

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಆಸ್ತಿಗಾಗಿ ಹೆತ್ತ ತಾಯಿಯನ್ನು ಮಗ ಕೊಲೆ ಮಾಡಿರುವ ಪ್ರಕರಣ ದೇವನಹಳ್ಳಿ ತಾಲೂಕಿನ ಉದಯಗಿರಿ ಸಮೀಪ ನಡೆದಿದೆ. ಚಿನ್ನಮ್ಮ ಕೊಲೆಗೀಡಾದ ಮಹಿಳೆ. ಚಿನ್ನಮ್ಮನಿಗೆ ಇಬ್ಬರು ಗಂಡು ಮಕ್ಕಳು. ಮೊದಲನೇ ಮಗ ರಾಘವೇಂದ್ರ ಮತ್ತು ಎರಡನೇ ಮಗ ರಾಜೇಶ್. ಮೊದಲ ಮಗ ರಾಘವೇಂದ್ರನಿಗೆ ಸುಧಾ ಎಂಬುವವಳೊಂದಿಗೆ ಮದುವೆ ಆಗಿದೆ. ಕಳೆದ ಒಂದು ವರ್ಷದ ಹಿಂದೆ ಚಿನ್ನಮ್ಮ ತನ್ನ ಗಂಡನನ್ನು ಕಳೆದುಕೊಂಡಿದ್ದರು. ಇರೋ ಜಮೀನನ್ನು ಮಾರಿ ಇಬ್ಬರು ಮಕ್ಕಳಿಗೆ ಸಮನಾಗಿ ಹಂಚುವ …

Read More »

ರಾಜ್ಯದಾದ್ಯಂತ 6 ಕೆಲಸದ ದಿನಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಮೂರು ಸುತ್ತುಗಳಲ್ಲಿ ದಡಾರ ಮತ್ತು ರುಬೆಲ್ಲಾ ಲಸಿಕೆ ಕಾರ್ಯಕ್ರಮ

ಬೆಂಗಳೂರು: ಮಿಷನ್ ಇಂದ್ರಧನುಷ್ 5.0 (IMI 5,0) ಕಾರ್ಯಕ್ರಮದಡಿ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ದಡಾರ ಮತ್ತು ರುಬೆಲ್ಲಾ ಲಸಿಕೆ ಅಭಿಯಾನವನ್ನು ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಸೌಧದಲ್ಲಿ ಶನಿವಾರ ಸಂಜೆ ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ರಾಯಚೂರಿನಲ್ಲಿ ಆಗಸ್ಟ್ 7 ರಂದು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯಲ್ಲಿನ ಎಲ್ಲಾ ಲಸಿಕೆಗಳನ್ನು ನೀಡಿ …

Read More »

ವೀಸಾ – ಪಾಸ್‌ಪೋರ್ಟ್ ಇಲ್ಲದ ವಿದೇಶಿ ಪ್ರಜೆ ಬಂಧನ

ಧರ್ಮಶಾಲಾ(ಹಿಮಾಚಲ ಪ್ರದೇಶ): ಕಾಂಗ್ರಾ ಜಿಲ್ಲೆಯ ಗ್ಲೋಬಲ್ ಸಿಟಿ ಎಂದು ಕರೆಯಲ್ಪಡುವ ಮೆಕ್ಲಿಯೋಡ್‌ಗಂಜ್‌ನಲ್ಲಿ ಮಾನ್ಯವಾದ ವೀಸಾ ಮತ್ತು ಪಾಸ್‌ಪೋರ್ಟ್ ಹೊಂದಿರದ ವಿದೇಶಿ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಪ್ರಕಾರ ಈ ವಿದೇಶಿ ಪ್ರಜೆ 2021 ರಿಂದ ಮೆಕ್ಲಿಯೋಡ್‌ಗಂಜ್‌ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಕಾಂಗ್ರಾ ಪೊಲೀಸರು ವೀಸಾ ಮತ್ತು ಪಾಸ್‌ಪೋರ್ಟ್ ಕೇಳಿದಾಗ ಈ ವಿದೇಶಿ ಪ್ರಜೆಯ ಬಳಿ ಮಾನ್ಯವಾಗಿರುವ ವೀಸಾ ಅಥವಾ ಪಾಸ್‌ಪೋರ್ಟ್ ಇರಲಿಲ್ಲ. ಧರ್ಮಶಾಲಾದ ಮೆಕ್ಲಿಯೋಡ್‌ಗಂಜ್‌ನಲ್ಲಿ ವೀಸಾ ಅಥವಾ ಪಾಸ್‌ಪೋರ್ಟ್ ಇಲ್ಲದೇ ಈ ವಿದೇಶಿ …

Read More »

ಭಯೋತ್ಪಾದಕ ನಂಟು ಇರುವ ಕಾರಣ ಎನ್​ಐಎ ಈ ಪ್ರಕರಣವನ್ನು ತನ್ನ ಸುಪರ್ದಿಗೆ ನೀಡುವಂತೆ ಕೇಳಿದೆ.

ನಾಗ್ಪುರ (ಮಹಾರಾಷ್ಟ್ರ): ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್​ ಗಡ್ಕರಿ ಅವರಿಗೆ ಎರಡು ಬಾರಿ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಪ್ರಕರಣವನ್ನು ನಾಗ್ಪುರದಿಂದ ಮುಂಬೈಗೆ ವರ್ಗಾವಣೆ ಮಾಡುವಂತೆ ಕೋರಿ ಮುಂಬೈ ಹೈಕೋರ್ಟ್​ಗೆ ಎನ್​ಐಎ ಮನವಿ ಸಲ್ಲಿಸಿದೆ. ಈ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ಮುಂಬೈ ಹೈಕೋರ್ಟ್​ನ ನಾಗ್ಪುರ ಪೀಠದಲ್ಲಿ ಎನ್​ಐಎ ಮೇಲ್ಮನವಿ ಸಲ್ಲಿಸಿದೆ. ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ರಾಜ್ಯ ಸರ್ಕಾರ ಹಾಗೂ ಪ್ರಮುಖ ಆರೋಪಿ …

Read More »

ಅರ್ಬಾಜ್​ ಖಾನ್​ ಬರ್ತ್​ಡೇ ಪಾರ್ಟಿಯಲ್ಲಿ ಬಾಲಿವುಡ್​ ಸೂಪರ್​ ಸ್ಟಾರ್​ ಸಲ್ಮಾನ್​ ಖಾನ್​ ಹೊಸ ಲುಕ್

ನಟ ಹಾಗೂ ನಿರ್ಮಾಪಕ ಅರ್ಬಾಜ್​ ಖಾನ್​ ಬರ್ತ್​ಡೇ ಪಾರ್ಟಿಯಲ್ಲಿ ಬಾಲಿವುಡ್​ ಸೂಪರ್​ ಸ್ಟಾರ್​ ಸಲ್ಮಾನ್​ ಖಾನ್​ ಭಾಗವಹಿಸಿ ಗಮನ ಸೆಳೆದರು. ಬಾಲಿವುಡ್​ ನಟ ಹಾಗೂ ನಿರ್ಮಾಪಕ ಅರ್ಬಾಜ್​ ಖಾನ್​ ನಿನ್ನೆಯಷ್ಟೇ ತಮ್ಮ 56ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ಅವರು ತಮ್ಮ ಆತ್ಮೀಯರಿಗಾಗಿ ಗ್ರ್ಯಾಂಡ್​ ಪಾರ್ಟಿಯನ್ನು ಆಯೋಜಿಸಿದ್ದರು. ಅರ್ಬಾಜ್​ ಖಾನ್​ ಹಿರಿಯ ಸಹೋದರ ಮತ್ತು ಬಾಲಿವುಡ್​ ಸೂಪರ್​ ಸ್ಟಾರ್​ ಸಲ್ಮಾನ್​ ಖಾನ್​ ಈ ಪಾರ್ಟಿಯಲ್ಲಿ ಭಾಗವಹಿಸಿ ಗಮನ ಸೆಳೆದರು. …

Read More »

ನಾನು ಹಿಟ್ ಅಂಡ್​ ರನ್ ವ್ಯಕ್ತಿಯಲ್ಲ,:HDK

ಬೆಂಗಳೂರು: ನಾನು ಹಿಟ್ ಅಂಡ್​ ರನ್ ವ್ಯಕ್ತಿಯಲ್ಲ, ಯಾವತ್ತೂ ಕೂಡ ನಾನು ಆ ರೀತಿ ಮಾಡಿದವನಲ್ಲ. ಕಾಂಗ್ರೆಸ್​ನವರು ನನ್ನ ಹೆಸರೇಳಿ ಹಿಟ್ ಅಂಡ್​ ರನ್ ಅಂತಾರೆ. ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಹಿಂದೆ ಪೇ ಸಿಎಂ ಅಂತಾ ಪೋಸ್ಟರ್ ಬೇರೆ ಅಂಟಿಸಿದ್ದರು. ಎಲ್ಲದಕ್ಕೂ ದಾಖಲೆ ಕೊಡ ಅಂತಾ ಹೇಳುತ್ತಿದ್ದರು. ಆದರೆ ಅವರೀಗ ಮಾಡ್ತಿರೋದು ಏನು?. ಅವರ ಯಾವುದೇ ಆರೋಪಗಳಿಗೆ ದಾಖಲೆಗಳಿವೆಯಾ? ಎಂದು ಕಾಂಗ್ರೆಸ್​ ನಾಯಕರ ಹೇಳಿಕೆಗಳಿಗೆ ಮಾಜಿ ಸಿಎಂ ಹೆಚ್.ಡಿ …

Read More »

ರಾಜ್ಯ ಪೊಲೀಸ್​ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್​ ಅಧಿಕಾರಿ ಅಲೋಕ್​ ಮೋಹನ್​ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ಹೊಂದಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರನ್ನು ಅದೇ ಹುದ್ದೆಗೆ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಪ್ರವೀಣ್ ಸೂದ್​ರಿಂದ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ರಾಜ್ಯ ಸರ್ಕಾರ ಮೇ 21ರಂದು ನೇಮಕಗೊಳಿಸಿತ್ತು. ಅಗ್ನಿಶಾಮಕ ಮತ್ತು ತುರ್ತು ಸೇವೆ ಹಾಗೂ ಗೃಹರಕ್ಷಕ ದಳದ ಡಿಜಿಯಾಗಿದ್ದ ಅಲೋಕ್ ಮೋಹನ್ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆಗಾರಿಕೆ ಹೊತ್ತಿದ್ದರು. …

Read More »

ಜೈನ ಮುನಿ ಹತ್ಯೆ ಪ್ರಕರಣ ಸಿಐಡಿ ಹಿರಿಯ ಅಧಿಕಾರಿ ಡಿಜಿಪಿ ಡಾ ಎಂ ಎ ಸಲೀಂ ಭೇಟಿ ನೀಡಿ ಪರಿಶೀಲನೆ

ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಸಿಐಡಿ ಡಿಜಿಪಿ ಡಾ ಎಂ ಎ ಸಲೀಂ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತದ ಆಶ್ರಮಕ್ಕೆ ಇವತ್ತು ಸಿಐಡಿ ಹಿರಿಯ ಅಧಿಕಾರಿ ಡಿಜಿಪಿ ಡಾ.ಎಂ ಎ ಸಲೀಂ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಲವು ಕಾಲ ಸ್ಥಳಿಯರ ಜೊತೆ …

Read More »

ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರ ಪ್ರತಿಭಟನೆ

ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸುತ್ತಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿಶ್ವವಿದ್ಯಾಲಯಗಳಿಗೆ ಸರ್ಕಾರ ಅನುದಾನ ಬಂದ್ ಮಾಡಿರುವುದರಿಂದ ವಿದ್ಯಾರ್ಥಿಗಳು ಜ್ವಲಂತ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಬೇಕಾಗುವ ಅನುದಾನ ನೀಡಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಚಿವರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಎಚ್ಚರಿಕೆ ನೀಡಿದರು. ವಿದ್ಯಾರ್ಥಿಗಳಿಗೆ …

Read More »