Home / Laxminews 24x7 (page 1898)

Laxminews 24x7

ಕಾಮುಕ ಯುವಕನೋರ್ವ ಯುವಕನನ್ನು ರೇಪ್ ಮಾಡಿರುವ ವಿಲಕ್ಷಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.

ಚಿಕ್ಕೋಡಿ: ಇಲ್ಲೊಬ್ಬ ಕಾಮುಕ ಯುವಕನೋರ್ವ ಯುವಕನನ್ನು ರೇಪ್ ಮಾಡಿರುವ ವಿಲಕ್ಷಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ಬಸ್ ಗಾಗಿ ಕಾಯುತ್ತಿದ್ದ ಯುವಕನನ್ನು ಬೈಕ್ ಮೇಲೆ ಹತ್ತಿಸಿಕೊಂಡು ಕರೆದೊಯ್ದು ನಿರ್ಜನ ಪ್ರದೇಶ ನೋಡಿ ಅನೈಸರ್ಗಿಕ ಸಂಭೋಗ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ನೊಂದ ಯುವಕ ಅಥಣಿ ಪೊಲೀಸರಿಗೆ ದೂರು ಸಲ್ಲಿಸಿದ್ದಾನೆ. ಈ ಬಗ್ಗೆ ನೊಂದ ಯುವಕನಿಂದ ದೂರು ದಾಖಲಿಸಿಕೊಂಡ ಅಥಣಿ ಪೊಲೀಸ್ ಠಾಣೆಯ ಪೊಲೀಸರು ಅತ್ಯಾಚಾರಿ ಆರೋಪಿ …

Read More »

ವರ್ಷದ ಹಿಂದೆ ​ ವ್ಹೀಲ್​ಚೇರ್​ ಮೇಲೆ ಸತ್ಯಜಿತ್ ನಮ್ಮನೆಗೆ ಬಂದಿದ್ದರು; ಪುನೀತ್​ ರಾಜ್​ಕುಮಾರ್​

ಸತ್ಯಜಿತ್​ ​ ಅವರಿಗೆ ಈ ಮೊದಲು ಗ್ಯಾಂಗ್ರಿನ್​ ಆಗಿತ್ತು. ಹೀಗಾಗಿ, ಅವರ ಕಾಲನ್ನು ಕತ್ತರಿಸಲಾಗಿತ್ತು. ಹೀಗಾಗಿ, ವ್ಹೀಲ್​ಚೇರ್​ ಮೇಲೆಯೇ ಅವರು ಕುಳಿತಿರುತ್ತಿದ್ದರು. ಕನ್ನಡ ಚಿತ್ರರಂಗದ ಬಹುಬೇಡಿಕೆಯ ಪೋಷಕ ನಟನಾಗಿದ್ದ ಸತ್ಯಜಿತ್​ ಅವರು ಇಂದು (ಅ.10) ಕೊನೆಯುಸಿಳೆದಿದ್ದಾರೆ. 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಪುನೀತ್​ ರಾಜ್​ಕುಮಾರ್​ ನಟನೆಯ ಕೆಲ ಸಿನಿಮಾಗಳಲ್ಲೂ ಸತ್ಯಜಿತ್​ ಅವರು ಕಾಣಿಸಿಕೊಂಡಿದ್ದರು. ಹೀಗಾಗಿ, ಪುನೀತ್​ ಮತ್ತು ಸತ್ಯಜಿತ್​ ನಡುವೆ ಒಳ್ಳೆಯ ಪರಿಚಯವಿತ್ತು. ಈಗ ಸತ್ಯಜಿತ್​ ಅವರು ಮೃತಪಟ್ಟ …

Read More »

ಕೋಟಿಗೊಬ್ಬ 3 ಟ್ರೈಲರ್: ಸುದೀಪ್ ವಯಸ್ಸಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಮ್ಯಾ

ಮೋಹಕ ತಾರೆ ರಮ್ಯಾ ಚಿತ್ರರಂಗದಿಂದ ದೂರ ಇದ್ದಾರೆ. ಹೊಸ ಸಿನಿಮಾಗಳಲ್ಲಿ ನಟಿಸುತ್ತಿಲ್ಲ, ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ. ಆದರೆ, ಚಿತ್ರರಂಗದಲ್ಲಿ ನಡೆಯುತ್ತಿರುವ ಆಗುಹೋಗುಗಳನ್ನು ಗಮನಿಸುತ್ತಲೇ ಇರ್ತಾರೆ. ಯಾವ ಸಿನಿಮಾ ಬಂತು, ಯಾವ ಟ್ರೈಲರ್ ಬಂತು, ಯಾವ ಪೋಸ್ಟರ್ ಬಂತು ಎಂದು ಗಮನಿಸುವ ರಮ್ಯಾ ಇಷ್ಟವಾದರೆ ಆ ಚಿತ್ರದ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ ಶುಭಹಾರೈಸುತ್ತಾರೆ. ಇದೀಗ, ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ 3 ಚಿತ್ರದ ಟ್ರೈಲರ್ ಬಗ್ಗೆ ರಮ್ಯಾ ಪ್ರತಿಕ್ರಿಯಿಸಿದ್ದಾರೆ. ಕೋಟಿಗೊಬ್ಬ …

Read More »

ಮೈಸೂರಿನಲ್ಲಿ ಬೆಳಕಿನ ಹಬ್ಬ; ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2021 ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ವಿಶೇಷ ವಿಭಿನ್ನವಾದ ದೀಪಾಲಂಕಾರ ಮಾಡಲಾಗಿದೆ. ರಾತ್ರಿ 10ರವರೆಗೆ ವಿದ್ಯುತ್ ದೀಪಾಲಂಕಾರದ ಸಮಯ ವಿಸ್ತರಿಸಲಾಗಿತ್ತು. 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗುವ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರಕ್ಕೆ ಅನುಮತಿ ನೀಡಲಾಗಿದೆ. ಈ ದೀಪಾಲಂಕಾರ ವ್ಯವಸ್ಥೆ 102.9 ಕಿಲೋ ಮೀಟರ್ ಮಾಡಲಾಗಿದೆ. ಬರೋಬ್ಬರಿ 40 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ರಾತ್ರಿ 6.30 ರಿಂದ ರಾತ್ರಿ …

Read More »

ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ

  ಬೆಂಗಳೂರು: ಟೊಮ್ಯಾಟೊ ಸೇರಿದಂತೆ ತರಕಾರಿಗಳ ಬೆಲೆ ದಿಢೀರ್ ಏರಿಕೆ ಕಂಡಿದೆ. ರಾಜ್ಯದ ಹಲವೆಡೆ ಭಾರಿ ಮಳೆ ಹಿನ್ನೆಲೆ ತರಕಾರಿಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು,ಟೊಮ್ಯಾಟೊ, ಕ್ಯಾರೆಟ್ ಬೆಲೆಗಳು ಏರಿಕೆಯಾಗಿವೆ. ಪ್ರತೀ ತರಕಾರಿ ಮೇಲೆ 10 ರಿಂದ 20 ರೂಗಳಷ್ಟು ಹೆಚ್ಚಳವಾಗಿದ್ದು ಯಾವ ತರಕಾರಿ ಬೆಲೆ ಎಷ್ಟು ಹೆಚ್ಚಾಗಿದೆ ಎಂಬ ಮಾಹಿತಿ ಇಲ್ಲಿದೆ. ಕೊತ್ತಂಬರಿ ಸೊಪ್ಪು ಒಂದು ಕಟ್ಟಿಗೆ 30 ರಿಂದ 40 ರೂ. ಗೆ ಏರಿಕೆ ಹಸಿ ಮೆಣಸಿನಕಾಯಿ ಕೆ.ಜಿ 50 …

Read More »

ಕಾಂಗ್ರೆಸ್​ನಲ್ಲಿ ಅಲ್ಪಸಂಖ್ಯಾತ ನಾಯಕರ ನಡುವೆ ಸಮರ: ಶಾಸಕ ಶಾಸಕ ಜಮೀರ್ ಅಹ್ಮದ್​ಗೆ ಮಣೆ; ಸಿ ಎಂ ಇಬ್ರಾಹಿಂ ದೂರ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ನಾಯಕರ ನಡುವೆ ಶೀತಲ ಸಮರ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ವಿಧಾನ ಪರಿಷತ್ ವಿಪಕ್ಷ ನಾಯಕ ಸ್ಥಾನವನ್ನು ಪಕ್ಷದ ವರಿಷ್ಠರ ಬಳಿ ಬೇಡಿಕೆಯಿಟ್ಟಿದ್ದರು. ಆದರೆ ಸಿ.ಎಂ.ಇಬ್ರಾಹಿಂ ಬೇಡಿಕೆಯನ್ನು ಈವರೆಗೂ ಕಾಂಗ್ರೆಸ್ ನಾಯಕರು ಅಷ್ಟಾಗಿ ಪರಿಗಣಿಸಿಲ್ಲ. ಹೀಗಾಗಿ ಸಿ.ಎಂ.ಇಬ್ರಾಹಿಂ ನಿಧಾನವಾಗಿ ಕಾಂಗ್ರೆಸ್​ನಿಂದ ದೂರ ಸರಿಯುತ್ತಿದ್ದಾರೆ ಎಂದ ಹೇಳಲಾಗಿದೆ. ಅಲ್ಲದೇ ಅವರು ಇತ್ತೀಚಿಗೆ ಜೆಡಿಎಸ್ ಜತೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಸಹ …

Read More »

ಉಪ ಸಮರಕ್ಕೆ ನಾಮಪತ್ರ ಸಲ್ಲಿಸಿರುವ ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಆಸ್ತಿ ವಿವರ ಇಲ್ಲಿದೆ

ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಅಬ್ಬರ ಜೋರಾಗಿದೆ. ಜೆಡಿಎಸ್ ಶಾಸಕ ಎಂ ಸಿ ಮನಗೂಳಿ ಅವರ ನಿಧನದಿಂದ ತೆರವಾಗಿರುವ ಶಾಸಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ವಿವಿಧ ಪಕ್ಷಗಳ ಅಭ್ಯರ್ಥಿಗಳು ಹಾಗೂ ಕೆಲ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಉಪ ಸಮರಕ್ಕೆ ನಾಮಪತ್ರ ಸಲ್ಲಿಸಿರುವ ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಆಸ್ತಿ ವಿವರ ಇಲ್ಲಿದೆ. ರಮೇಶ್ ಭೂಸನೂರ ಆಸ್ತಿ ವಿವರ ಬಿಜೆಪಿ ಅಭ್ಯರ್ಥಿ …

Read More »

ಸಿಂದಗಿಯಲ್ಲಿ ಕಾಂಗ್ರೆಸ್‌ ಮೂರನೇ ಸ್ಥಾನ’

ಹಾಸನ: ‘ಹಾನಗಲ್‌ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಸಕಲೇಶಪುರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿಂದಗಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮೂರನೇ ಸ್ಥಾನದಲ್ಲಿದೆ. ಕಾಂಗ್ರೆಸ್ ಸೋಲಿಸಲು ಮುಸ್ಲಿಂ ಅಭ್ಯರ್ಥಿ ಹಾಕಿದ್ದಾರೆ ಎಂದು ಹೇಳುವವರು, ಅಭ್ಯರ್ಥಿ ಹಾಕಲು ಯೋಗ್ಯತೆ ಇಲ್ಲದೆ ಜೆಡಿಎಸ್‌ನಿಂದ ಅಶೋಕ್‌ ಮನಗೂಳಿ ಅವರನ್ನು ಹೈಜಾಕ್ ಮಾಡಿಕೊಂಡು …

Read More »

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: SBI ನ 2000 ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೇಶದಲ್ಲೇ ಅತಿದೊಡ್ಡ ಬ್ಯಾಂಕ್‌ ಎಂಬ ಹೆಗ್ಗಳಿಕೆಯ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ)ನಲ್ಲಿ 2,056 ಪ್ರೊಬೆಷನರಿ ಅಧಿಕಾರಿಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪೈಕಿ ಸಾಮಾನ್ಯ ವರ್ಗಕ್ಕೆ 810, ಆರ್ಥಿಕವಾಗಿ ಹಿಂದುಳಿದವರಿಗೆ 200, ಒಬಿಸಿಗೆ 560, ಎಸ್‌.ಸಿ.ಗೆ 324, ಎಸ್‌ಟಿ ಅಭ್ಯರ್ಥಿಗಳಿಗೆ 162 ಹುದ್ದೆಗಳು ಖಾಲಿ ಇವೆ. ಅ. 25ರವರೆಗೆ https://sbi.co.in/ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ. ಅರ್ಜಿಗಳ ಮಾರ್ಪಾಡಿಗೂ ಸಮಯ ನೀಡಲಾಗಿದೆ. ಮೊದಲು ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ನೋಂದಣಿ ಮಾಡಿಕೊಳ್ಳುವುದು …

Read More »

ಡ್ರೀಮ್ ಇಲೆವೆನ್ ಸೇರಿ ಎಲ್ಲಾ ಆನ್ಲೈನ್ ಗೇಮ್ ಗಳು ರಾಜ್ಯದಲ್ಲಿ ಬ್ಯಾನ್

ಬೆಂಗಳೂರು: ಇಂಟರ್ನೆಟ್‌ ಮೂಲಕ ಕ್ರೀಡೆ ಅಥವಾ ಕ್ಯಾಸಿನೋಗಳ ಮೇಲೆ ಬೆಟ್ಟಿಂಗ್‌ ಮಾಡುವ ಆನ್‌ ಲೈನ್‌ ಜೂಜನ್ನು (ಇ-ಗ್ಯಾಂಬ್ಲಿಂಗ್‌) ನಿಷೇಧಿಸಿ ರಾಜ್ಯ ಸರಕಾರ ಭಾನುವಾರ ಅಧ್ಯಾದೇಶ ಜಾರಿ ಮಾಡಿದೆ. ಸರಕಾರದ ನಿರ್ಧಾರದಿಂದ ಡ್ರೀಮ್ ಇಲೆವೆನ್ , ಪೇಟಿಎಂ ಫಸ್ಟ್ ಗೇಮ್ ಸೇರಿ ಎಲ್ಲಾ ಪ್ರಮುಖ ಆನ್‌ ಲೈನ್‌ ಗೇಮ್ ಗಳಿಗೆ ಅಂಕುಶ ಬಿದ್ದಂತಾಗಿದೆ. ರಾಜ್ಯದಲ್ಲಿ ಆನ್‌ಲೈನ್‌ ಜೂಜು ಅಥವಾ ಬೆಟ್ಟಿಂಗ್‌ಗೆ ನಿಷೇಧ ಹೇರಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿತ್ತು. ಕರ್ನಾಟಕ ಪೊಲೀಸ್‌ …

Read More »